Kedarnath Landslide: ಕೇದಾರನಾಥದಲ್ಲಿ ಭೀಕರ ಭೂಕುಸಿತ; ಮೂವರು ಯಾತ್ರಿಕರು ದುರ್ಮರಣ - Vistara News

ದೇಶ

Kedarnath Landslide: ಕೇದಾರನಾಥದಲ್ಲಿ ಭೀಕರ ಭೂಕುಸಿತ; ಮೂವರು ಯಾತ್ರಿಕರು ದುರ್ಮರಣ

Kedarnath Landslide: ರಾಜ್ಯ ವಿಪತ್ತು ನಿರ್ವಹಣಾ ಪಡೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯಾತ್ರಿಕರು ಇಂದು ಬೆಳಗ್ಗೆ ಗೌರಿಕುಂಡಾದಿಂದ ತಮ್ಮ ಪ್ರಯಾಣವನ್ನು ಆರಂಭಿಸಿದ್ದರು. ಚಿರ್‌ಬಾಸಾ ಪ್ರದೇಶದ ಸಮೀಪ ಭಾರೀ ಭೂ ಕುಸಿತ ಸಂಭವಿಸಿದ್ದು, ಮೂವರು ಯಾತ್ರಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

VISTARANEWS.COM


on

Kedarnath Landslide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉತ್ತರಾಖಂಡ: ಭಾರೀ ಮಳೆಗೆ ಕೇದಾರನಾಥ(Kedarnath Landslide)ದಲ್ಲಿ ಭೀಕರ ಭೂಕುಸಿತ(Landslide) ಸಂಭವಿಸಿದ್ದು, ಮೂವರು ಯಾತ್ರಿಕರು ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಕೆಲವು ಯಾತ್ರಿಕರಿಗೆ ಗಂಭೀರ ಗಾಯಗಳಾಗಿವೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯಾತ್ರಿಕರು ಇಂದು ಬೆಳಗ್ಗೆ ಗೌರಿಕುಂಡಾದಿಂದ ತಮ್ಮ ಪ್ರಯಾಣವನ್ನು ಆರಂಭಿಸಿದ್ದರು. ಚಿರ್‌ಬಾಸಾ ಪ್ರದೇಶದ ಸಮೀಪ ಭಾರೀ ಭೂ ಕುಸಿತ ಸಂಭವಿಸಿದ್ದು, ಮೂವರು ಯಾತ್ರಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಯಾತ್ರಿಕರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗುತ್ತಿದೆ ಎಂದಿದ್ದಾರೆ. ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಮೃತರಲ್ಲಿ ಇಬ್ಬರು ಮಹಾರಾಷ್ಟ್ರ ಮೂಲದವರರಾಗಿದ್ದು, ಅರುಣ್‌ ಪರಾಠೆ ಮತ್ತು ಸುನಿಲ್‌ ಮಹಾದೇವ್‌ ಕಾಲೆ ಎಂದು ಗುರುತಿಸಲಾಗಿದೆ. ಮತ್ತೊರ್ವನನ್ನು ರುದ್ರಪ್ರಯಾಗ್‌ ಮೂಲದ ಅನುರಾಗ್‌ ಬಿಶ್ತ್‌ ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Karnataka HC: ನ್ಯಾಯಮೂರ್ತಿಗಳು ಕೂಡ ಮನುಷ್ಯರೇ; ಮಕ್ಕಳ ಅಶ್ಲೀಲ ದೃಶ್ಯ ವೀಕ್ಷಣೆ ಅಪರಾಧವಲ್ಲ ಆದೇಶ ಹಿಂಪಡೆದ ಹೈಕೋರ್ಟ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Pakistan Army: ಭಾರತದ ಗಡಿಯಲ್ಲಿ ಉಗ್ರರಿಗೆ ಪಾಕ್ ಸೇನೆಯಿಂದಲೇ ತರಬೇತಿ, ಮಾರ್ಗದರ್ಶನ; ಮತ್ತೊಂದು ಕಳ್ಳಾಟ ಬಯಲು

Pakistan Army: ಪಾಕಿಸ್ತಾನದ ಸೇನಾ ನೆಲೆಗಳಲ್ಲಿ, ಬಂಕರ್‌ಗಳಲ್ಲಿಯೇ ಉಗ್ರರಿಗೆ ಸೈನಿಕರು ಆಶ್ರಯ ನೀಡಿದ್ದಾರೆ. ಅವರನ್ನು ಗಡಿಯ ತನಕ ಕರೆದುಕೊಂಡು ಬಂದು, ಭಾರತದೊಳಗೆ ನುಸುಳಲು ಯಾವ ಮಾರ್ಗದ ಮೂಲಕ ತೆರಳಬೇಕು ಎಂಬುದಾಗಿ ಮಾರ್ಗದರ್ಶನ ನೀಡಿದ್ದಾರೆ. ಈ ಫೋಟೊಗಳು ಈಗ ಪಾಕಿಸ್ತಾನದ ಬಣ್ಣವನ್ನು ಬಯಲು ಮಾಡಿವೆ.

VISTARANEWS.COM


on

Pakistan Army
Koo

ಇಸ್ಲಾಮಾಬಾದ್:‌ ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ದಾಳಿಗಳು ಜಾಸ್ತಿಯಾಗಿವೆ. ಅದರಲ್ಲೂ, ನಾಗರಿಕರು ಹಾಗೂ ಸೈನಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ಉಗ್ರರಿಗೆ ನೆರವು ನೀಡುವ ಪಾಕಿಸ್ತಾನದ ಕುತಂತ್ರ ಬುದ್ಧಿಯ ಅನಾವರಣ ಆಗಿದೆ. ಹೌದು, ಜಮ್ಮು-ಕಾಶ್ಮೀರ (Jammu Kashmir) ಗಡಿ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರಿಗೆ (Pakistan Terrorists) ಪಾಕಿಸ್ತಾನದ ಸೇನೆಯೇ (Pakistan Army) ತರಬೇತಿ ನೀಡುತ್ತಿದೆ. ಹಾಗೆಯೇ, ಯಾವ ಮಾರ್ಗದ ಮೂಲಕ ಭಾರತವನ್ನು ಪ್ರವೇಶಿಸಬಹುದು ಎಂಬುದರ ಬಗ್ಗೆ ಮಾರ್ಗದರ್ಶನ ನೀಡುತ್ತಿದೆ ಎಂದು ತಿಳಿದುಬಂದಿದೆ. ಹಾಗೆಯೇ, ಉಗ್ರರಿಗೆ ಪಾಕಿಸ್ತಾನದ ಸೈನಿಕರು ಮಾರ್ಗದರ್ಶನ ನೀಡುತ್ತಿರುವ ಫೋಟೊಗಳು ಕೂಡ ಲಭ್ಯವಾಗಿವೆ. ಈ ಕುರಿತು ಇಂಡಿಯಾ ಟಿವಿ ವರದಿ ಮಾಡಿದೆ.

ಹೌದು, ಪಾಕ್‌ ಆಕ್ರಮಿತ ಕಾಶ್ಮೀರದ ಗಡಿಯ ಕೊಟ್ಲಿ ಸೇರಿ ಹಲವು ಪ್ರದೇಶಗಳಲ್ಲಿ ಪಠಾಣಿ ಉಡುಪುಗಳನ್ನು ಧರಿಸಿರುವ ಉಗ್ರರಿಗೆ ಪಾಕಿಸ್ತಾನದ ಸೈನಿಕರು ತರಬೇತಿ ನೀಡುತ್ತಿರುವ, ಅವರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸುತ್ತಿರುವ ಹಾಗೂ ಭಾರತದ ಕಡೆಗೂ ನುಗ್ಗಿಸುತ್ತಿರುವ ಫೋಟೊಗಳು ಲಭ್ಯವಾಗಿವೆ. ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರಿಗೆ ಪಾಕ್‌ ಸೈನಿಕರು ತರಬೇತಿ ನೀಡುತ್ತಿರುವ ಫೋಟೊಗಳು ಲಭ್ಯವಾದ ಬೆನ್ನಲ್ಲೇ, ಅವರಿಗೆ ಮಾರ್ಗದರ್ಶನ ನೀಡುವ ಫೋಟೊಗಳು ಕೂಡ ಲಭ್ಯವಾಗಿವೆ.

“ಪಾಕಿಸ್ತಾನದ ಸೇನಾ ನೆಲೆಗಳಲ್ಲಿ, ಬಂಕರ್‌ಗಳಲ್ಲಿಯೇ ಉಗ್ರರಿಗೆ ಸೈನಿಕರು ಆಶ್ರಯ ನೀಡಿದ್ದಾರೆ. ಅವರನ್ನು ಗಡಿಯ ತನಕ ಕರೆದುಕೊಂಡು ಬಂದು, ಭಾರತದೊಳಗೆ ನುಸುಳಲು ಯಾವ ಮಾರ್ಗದ ಮೂಲಕ ತೆರಳಬೇಕು ಎಂಬುದಾಗಿ ಮಾರ್ಗದರ್ಶನ ನೀಡಿದ್ದಾರೆ” ಎಂದು ಮೂಲಗಳು ತಿಳಿಸಿವೆ. ಇನ್ನು, ಪಾಕಿಸ್ತಾನದ ಎಸ್‌ಎಸ್‌ಜಿ ಕಮಾಂಡೋಗಳೇ ಉಗ್ರರಿಗೆ ದಾರಿ ತೋರಿಸುತ್ತಿರುವ ಫೋಟೊಗಳು ಕೂಡ ಬಹಿರಂಗವಾಗಿವೆ.

ಉಗ್ರರ ಬೇಟೆಗೆ ಭಾರತದ ಸೇನೆ ಸಜ್ಜು

ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ಸದೆಬಡಿಯಲು ಭಾರತೀಯ ಸೇನೆ ಸಂಪೂರ್ಣವಾಗಿ ಸಜ್ಜಾಗಿದೆ. ಉಗ್ರರನ್ನು ಮಟ್ಟ ಹಾಕುವ ಪಣ ತೊಟ್ಟಿರುವ ಭಾರತೀಯ ಸೇನೆ 500ಕ್ಕೂ ಹೆಚ್ಚು ಪ್ಯಾರಾ ಕಮಾಂಡೋಗಳನ್ನು ಜಮ್ಮುವಿನಲ್ಲಿ ನಿಯೋಜಿಸಿದೆ. ಈ ಪ್ಯಾರಾ ಕಮಾಂಡೋಗಳು ಪಾಕಿಸ್ತಾನ ಮೂಲದ ಉಗ್ರರ ಬೇಟೆಯಲ್ಲಿ ತೊಡಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಗಡಿ ಪ್ರದೇಶದಲ್ಲಿ ಕೆಲವು ದಿನಗಳಿಂದ ಉಗ್ರರ ಉಪಟಳ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದರ ಹಿಂದೆ ಒಂದರಂತೆ ನಿರಂತರ ದಾಳಿಗಳು ನಡೆಯುತ್ತಲೇ ಇವೆ. ಈ ಪ್ರದೇಶದಲ್ಲಿ 50-55 ಉಗ್ರರು ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ಸೇನೆ ಭದ್ರತೆಯನ್ನು ಹೆಚ್ಚಿಸಿದೆ. ಇನ್ನು ಕಳೆದ ವಾರದಿಂದ ನಡೆಯುತ್ತಿರುವ ಉಗ್ರರ ದಾಳಿ ಹಿಂದೆ ಪಾಕಿಸ್ತಾನ ನಿವೃತ ಸೈನಿಕರು ಅಥವಾ ಸೇನಾ ತರಬೇತಿ ಇರುವ ಉಗ್ರರ ಕೈವಾಡ ಇರುವ ಬಗ್ಗೆ ಭಾರತೀಯ ಗುಪ್ತಚರ ಇಲಾಖೆ ಶಂಕೆ ವ್ಯಕ್ತಪಡಿಸಿದೆ.

ಇದನ್ನೂ ಓದಿ: Pakistan Crisis: ಲೀಟರ್‌ ಪೆಟ್ರೋಲ್‌ಗೆ 275 ರೂ., ಸಾಲ 79 ಲಕ್ಷ ಕೋಟಿ ರೂ.; ಪಾಕ್‌ ಸಂಪೂರ್ಣ ದಿವಾಳಿ

Continue Reading

ದೇಶ

Central Budget 2024: ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಹಣಕಾಸು ಸಚಿವರು ಇವರೇ ನೋಡಿ

Central Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸತತ ಏಳನೇ ಬಾರಿ ಬಜೆಟ್‌ ಮಂಡಿಸಲಿದ್ದಾರೆ. ಹಾಗಿದ್ದರೆ ಇದುವರೆಗೆ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಹಣಕಾಸು ಸಚಿವರು ಯಾರು ಎಂಬ ಪಟ್ಟು ಇಲ್ಲಿದೆ ನೋಡಿ.

VISTARANEWS.COM


on

Central budget 2024
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi) ನೇತೃತ್ವದ ಎನ್‌ಡಿಎ ಸರ್ಕಾರ(NDA Government) ಮೂರನೇ ಬಾರಿ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಜೆಟ್‌(Central Budget 2024) ಅನ್ನು ಮಂಗಳವಾರ ಮಂಡಿಸಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌(Nirmala Sitharaman) ಸತತ ಏಳನೇ ಬಾರಿ ಬಜೆಟ್‌ ಮಂಡಿಸಲಿದ್ದಾರೆ. ಹಾಗಿದ್ದರೆ ಇದುವರೆಗೆ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಹಣಕಾಸು ಸಚಿವರು ಯಾರು ಎಂಬ ಪಟ್ಟು ಇಲ್ಲಿದೆ ನೋಡಿ.

ಮೊರಾರ್ಜಿ ದೇಸಾಯಿ

ಮೊರಾರ್ಜಿ ದೇಸಾಯಿ ಅವರು ಸತತವಾಗಿ ಆರು ಬಜೆಟ್‌ಗಳನ್ನು ಮಂಡಿಸಿದ್ದಾರೆ ಮತ್ತು ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕೇಂದ್ರ ಬಜೆಟ್‌ಗಳನ್ನು ಮಂಡಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಹತ್ತು ಬಜೆಟ್ ಮಂಡಿಸಿದ್ದರು. ಅವರು ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಮತ್ತು ನಂತರ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಅಡಿಯಲ್ಲಿ ಸೇವೆ ಸಲ್ಲಿಸಿದರು, ದೇಸಾಯಿ ಅವರು ಆರ್ಥಿಕ ಶಿಸ್ತು, ವ್ಯಾಪಾರ ನೀತಿಗಳ ಉದಾರೀಕರಣ ಮತ್ತು ಸ್ವಾವಲಂಬನೆಯನ್ನು ಉತ್ತೇಜಿಸುವ ಪ್ರಯತ್ನಗಳಿಗೆ ಒತ್ತು ನೀಡಿದರು.

ಪಿ ಚಿದಂಬರಂ

ಪಟ್ಟಿಯಲ್ಲಿ ಮುಂದಿನ ಅನುಭವಿ ರಾಜಕಾರಣಿ ಮತ್ತು ಅರ್ಥಶಾಸ್ತ್ರಜ್ಞ ಪಿ ಚಿದಂಬರಂ. ಅವರು ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಒಂಬತ್ತು ಕೇಂದ್ರ ಬಜೆಟ್‌ಗಳನ್ನು ಮಂಡಿಸಿದರು. ಅವರು ಆರ್ಥಿಕ ನೀತಿ ನಿರೂಪಣೆಗೆ ಪ್ರಾಯೋಗಿಕ ವಿಧಾನಕ್ಕೆ ಹೆಸರುವಾಸಿಯಾಗಿದ್ದರು. ಚಿದಂಬರಂ ಅವರು ಮನಮೋಹನ್ ಸಿಂಗ್ ಮತ್ತು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರಗಳಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಹಣಕಾಸಿನ ಬಲವರ್ಧನೆ, ಹಣಕಾಸು ವಲಯದ ಸುಧಾರಣೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದರು.

ಪ್ರಣಬ್‌ ಮುಖರ್ಜಿ

ಪ್ರಣಬ್‌ ಮುಖರ್ಜಿಯವರು ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಎಂಟು ಕೇಂದ್ರ ಬಜೆಟ್‌ಗಳನ್ನು ಮಂಡಿಸಿದರು. ಮುಖರ್ಜಿಯವರು ತಮ್ಮ ಚುರುಕಾದ ರಾಜಕೀಯ ಕುಶಾಗ್ರಮತಿ ಮತ್ತು ಆರ್ಥಿಕ ವಿಷಯಗಳ ಆಳವಾದ ತಿಳುವಳಿಕೆಗೆ ಹೆಸರುವಾಸಿಯಾಗಿದ್ದರು. 2008 ರ ಜಾಗತಿಕ ಆರ್ಥಿಕ ಬಿಕ್ಕಟ್ಟು ಸೇರಿದಂತೆ ಪ್ರಕ್ಷುಬ್ಧ ಸಮಯದಲ್ಲಿ ಭಾರತೀಯ ಆರ್ಥಿಕತೆಯನ್ನು ಮುನ್ನಡೆಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು. ಅವರ ಬಜೆಟ್‌ಗಳು ಅಂತರ್ಗತ ಬೆಳವಣಿಗೆಯನ್ನು ಉತ್ತೇಜಿಸಲು, ಹಣಕಾಸಿನ ನಿರ್ವಹಣೆಯನ್ನು ಬಲಪಡಿಸಲು ಮತ್ತು ವಿದೇಶಿ ಹೂಡಿಕೆಯನ್ನು ಆಕರ್ಷಿಸಲು ಕೇಂದ್ರೀಕರಿಸಿದವು.

ಮನಮೋಹನ್‌ ಸಿಂಗ್‌

ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸುವ ಮೊದಲು, ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿ ದೇಶದ ಆರ್ಥಿಕ ನೀತಿ ರಚನೆಗೆ ಮಹತ್ವದ ಕೊಡುಗೆಗಳನ್ನು ನೀಡಿದರು, ಅವರ ಅಧಿಕಾರಾವಧಿಯಲ್ಲಿ ಐದು ಕೇಂದ್ರ ಬಜೆಟ್‌ಗಳನ್ನು ಮಂಡಿಸಿದರು. 1990 ರ ದಶಕದ ಆರಂಭದಲ್ಲಿ ಭಾರತದ ಆರ್ಥಿಕ ಉದಾರೀಕರಣದ ವಾಸ್ತುಶಿಲ್ಪಿ ಎಂದು ಕರೆಯಲ್ಪಡುವ ಮನಮೋಹನ್‌ ಸಿಂಗ್ ಅವರ ಬಜೆಟ್‌ಗಳು ಆರ್ಥಿಕತೆಯನ್ನು ಉದಾರೀಕರಣಗೊಳಿಸುವ, ಖಾಸಗೀಕರಣವನ್ನು ಉತ್ತೇಜಿಸುವ ಮತ್ತು ವಿದೇಶಿ ಹೂಡಿಕೆಯನ್ನು ಆಕರ್ಷಿಸುವ ಗುರಿಯನ್ನು ಪರಿವರ್ತಕ ಸುಧಾರಣೆಗಳಿಗೆ ಅಡಿಪಾಯ ಹಾಕಿದವು.

ಯಶ್ವಂತ್‌ ಸಿನ್ಹಾ

ಯಶ್ವಂತ್‌ ಸಿನ್ಹಾ ಅವರು ಅನುಭವಿ ರಾಜಕಾರಣಿಯಾಗಿದ್ದರು ಮತ್ತು ಅವರ ಅಧಿಕಾರಾವಧಿಯಲ್ಲಿ ಐದು ಕೇಂದ್ರ ಬಜೆಟ್‌ಗಳನ್ನು ಮಂಡಿಸಿದರು. ಶ್ರೀ ಸಿನ್ಹಾ ಅವರ ದೃಢ ಸಂಕಲ್ಪ ಮತ್ತು ಆರ್ಥಿಕ ನೀತಿ ನಿರೂಪಣೆಗೆ ಪ್ರಾಯೋಗಿಕ ವಿಧಾನಕ್ಕೆ ಹೆಸರುವಾಸಿಯಾಗಿದ್ದರು. ಅವರ ಬಜೆಟ್‌ಗಳು ಹಣಕಾಸಿನ ಬಲವರ್ಧನೆ, ತೆರಿಗೆ ಸುಧಾರಣೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದವು. ಅವರ ಅಧಿಕಾರಾವಧಿಯು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸುವ ಕ್ರಮಗಳ ಪರಿಚಯ ಸೇರಿದಂತೆ ಮಹತ್ವದ ಆರ್ಥಿಕ ಸುಧಾರಣೆಗಳಿಗೆ ಸಾಕ್ಷಿಯಾಯಿತು.

ಇದನ್ನೂ ಓದಿ: Union Budget 2024: ಸ್ಟಾಂಡರ್ಡ್‌ ಡಿಡಕ್ಷನ್‌, 80 ಸಿ ಮೊತ್ತ ಹೆಚ್ಚಳ; ಬಜೆಟ್‌ನಲ್ಲಿ ಏನೆಲ್ಲ ತೆರಿಗೆ ರಿಲೀಫ್?

Continue Reading

ದೇಶ

Nipah Virus: ಕೇರಳದಲ್ಲಿ ನಿಫಾ ವೈರಸ್‌ ತಗುಲಿದ್ದ ಬಾಲಕ ಸಾವು

Nipah Virus: ಎನ್‌ಐವಿ-ಪುಣೆ ಶನಿವಾರ ಬಾಲಕನಿಗೆ ನಿಪಾ ವೈರಸ್ ಇರುವುದು ದೃಢಪಡಿಸಿದ ನಂತರ, ಖಾಸಗಿ ಆಸ್ಪತ್ರೆಯಿಂದ ಕೋಝಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆತನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಇಂದು ಬೆಳಗ್ಗೆ ಮೂತ್ರದ ಪ್ರಮಾಣ ಕಡಿಮೆಯಾಗಿದ್ದು, ಭಾರೀ ಹೃದಯಾಘಾತದಿಂದಾಗಿ ಆತನ ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.

VISTARANEWS.COM


on

nipah virus
Koo

ತಿರುವನಂತಪುರಂ: ಕೇರಳದಲ್ಲಿ ನಿಫಾ ಸೋಂಕು(Nipah Virus) ತಗುಲಿದ್ದ 14ವರ್ಷದ ಬಾಲಕ ಹೃದಯಾಘಾತ(Cardiac Arrest)ದಿಂದ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಮಾಹಿತಿ ನೀಡಿದ್ದು, ನಿಫಾ ಸೋಂಕು ತಗುಲಿದ್ದ ಪಾಲಕ್ಕಾಡು ಮಲಪ್ಪುರಂ ಜಿಲ್ಲೆಯ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಇಂದು ಬೆಳಗ್ಗೆ 10:50 ಚಿಕಿತ್ಸೆ ಫಲಕಾರಿಗದೇ ಕೊನೆಯುಸಿರೆಳೆದಿದ್ದಾನೆ ಎಂದಿದ್ದಾರೆ.

ಎನ್‌ಐವಿ-ಪುಣೆ ಶನಿವಾರ ಬಾಲಕನಿಗೆ ನಿಪಾ ವೈರಸ್ ಇರುವುದು ದೃಢಪಡಿಸಿದ ನಂತರ, ಖಾಸಗಿ ಆಸ್ಪತ್ರೆಯಿಂದ ಕೋಝಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆತನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಇಂದು ಬೆಳಗ್ಗೆ ಮೂತ್ರದ ಪ್ರಮಾಣ ಕಡಿಮೆಯಾಗಿದ್ದು, ಭಾರೀ ಹೃದಯಾಘಾತದಿಂದಾಗಿ ಆತನ ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.

ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ನಂತರವೇ ಅಂತ್ಯಕ್ರಿಯೆಯ ಕುರಿತು ಹೆಚ್ಚಿನ ನಿರ್ಧರಿಸಲಾಗುತ್ತದೆ ಎಂದು ಜಾರ್ಜ್ ಹೇಳಿದರು. ಇನ್ನು ಬಾಲಕನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪ್ರಸ್ತುತ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಐಸೋಲೇಶನ್‌ನಲ್ಲಿಡಲಾಗಿದೆ.

ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಸಚಿವೆ ವೀಣಾ ಜಾರ್ಜ್ ಅವರು ಮಲಪ್ಪುರಂಗೆ ತೆರಳಿದ್ದಾರೆ. ವೈರಸ್ ನಿಯಂತ್ರಣಕ್ಕಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಸರ್ಕಾರವು ಸಮಿತಿಗಳನ್ನು ರಚಿಸಿದೆ.

ಬಾಲಕನ ಮಾದರಿಗಳನ್ನು ಪುಣೆ ಎನ್‌ಐವಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇದೀಗ ವರದಿ ಬಂದಿದ್ದು, ನಿಫಾ ವೈರಸ್ ದೃಢಪಟ್ಟಿದೆ. ನಿಫಾ ವೈರಸ್ ಖಚಿತವಾಗುತ್ತಿದ್ದಂತ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬಾಲಕನನ್ನು ಇದೀಗ ಕೋಝಿಕೋಡ್ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದೀಗ ಬಾಲಕನ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಪೋಷಕರು ಸೇರಿದಂತೆ ಮೊದಲ ಸಂಪರ್ಕಿತರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದೆ. ಇವರ ಮಾದರಿಗಳನ್ನು ಸಂಗ್ರಹಿಸಿ ಪುಣೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌ಡಿಕೆ ಭೇಟಿ; ಮಳೆಯಿಂದ ಹಾನಿಯಾದ ಪ್ರದೇಶಗಳ ಪರಿಶೀಲನೆ

Continue Reading

ದೇಶ

Kanwar Yatra: ಮುಸ್ಲಿಮರ ವಿರುದ್ಧ ಬಿಜೆಪಿಯ ದ್ವೇಷದ ರಾಜಕೀಯ ಎಂದ ಓವೈಸಿ; ಜಿನ್ನಾರಂತೆ ವರ್ತನೆ ಎಂದು ಬಿಜೆಪಿ ಟಾಂಗ್‌

Kanwar Yatra: ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಓವೈಸಿ, ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷ ಯಾವ ಮಟ್ಟದಲ್ಲಿದೆ ಎಂಬುದಕ್ಕೆ ಇದೇ ಸಾಕ್ಷಿ. ಇದರ ಬಹುದೊಡ್ಡ ಕ್ರೆಡಿಟ್‌ ಜಾತ್ಯಾತೀತ ಪಕ್ಷ ಎಂದು ಕರೆಸಿಕೊಳ್ಳುವ ಬಿಜೆಪಿ ಮತ್ತು ಹಿಂದೂತ್ವದ ನಾಯಕರಿಗೆ ಸಲ್ಲುತ್ತದೆ ಎಂದು ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Kanwar Yatra
Koo

ಹೊಸದಿಲ್ಲಿ: ಹಿಂದೂಗಳ ಪವಿತ್ರ ಯಾತ್ರೆಯಾಗಿರುವ ಕನ್ವರ್ ಯಾತ್ರೆ (Kanwar Yatra) ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶುಕ್ರವಾರ ಆದೇಶ ಹೊರಡಿಸಿರುವ ಬಗ್ಗೆ ಎಐಎಂಐಎಂ(AIMIM) ಅಧ್ಯಕ್ಷ ಅಸಾದುದ್ದೀನ್‌ ಓವೈಸಿ(Asaduddin Owaisi) ಕಿಡಿ ಕಾರಿದ್ದಾರೆ. ಇದು ಮುಸ್ಲಿಂ ಸಮುದಾಯದ ವಿರುದ್ಧ ಬಿಜೆಪಿ ಸರ್ಕಾರದ ದ್ವೇಷವನ್ನು ತೋರಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಓವೈಸಿ, ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷ ಯಾವ ಮಟ್ಟದಲ್ಲಿದೆ ಎಂಬುದಕ್ಕೆ ಇದೇ ಸಾಕ್ಷಿ. ಇದರ ಬಹುದೊಡ್ಡ ಕ್ರೆಡಿಟ್‌ ಜಾತ್ಯಾತೀತ ಪಕ್ಷ ಎಂದು ಕರೆಸಿಕೊಳ್ಳುವ ಬಿಜೆಪಿ ಮತ್ತು ಹಿಂದೂತ್ವದ ನಾಯಕರಿಗೆ ಸಲ್ಲುತ್ತದೆ ಎಂದು ಪೋಸ್ಟ್‌ ಮಾಡಿದ್ದಾರೆ.

ಓವೈಸಿಯನ್ನು ಜಿನ್ನಾಗೆ ಹೋಲಿಕೆ

ಓವೈಸಿ ಟ್ವೀಟ್‌ ಬೆನ್ನಲ್ಲೇ ಬಿಜೆಪಿ ಮುಖಂಡ ಸುಖಾಂತಾ ಮಜುಮ್ದಾರ್‌ ಓವೈಸಿ ವಿರುದ್ಧ ಕಿಡಿ ಕಾರಿದ್ದಾರೆ. ಪ್ರತಿಪಕ್ಷಗಳು ಜನರನ್ನು ದಾರಿ ತಪ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಇಂತಹದ್ದೇ ಪ್ರಕಟಣೆಯನ್ನು ಸಮಾಜವಾದಿ ಪಕ್ಷ ಅಧಿಕಾರದಲ್ಲಿರುವಾಗಲೂ ಹೊರಡಿಸಲಾಗಿತ್ತು. ಓವೈಸಿ ಪಾಕಿಸ್ತಾನ ಸ್ಥಾಪಕ ಮೊಹಮ್ಮದ್‌ ಅಲಿ ಜಿನ್ಹಾರಂತೆ ವರ್ತಿಸುತ್ತಿದ್ದಾರೆ ಎಂದಿದ್ದಾರೆ.

ಕನ್ವರ್ ಯಾತ್ರೆ ಶ್ರಾವಣ ಮಾಸದಲ್ಲಿ ನಡೆಯುತ್ತದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22ರಂದು ಪ್ರಾರಂಭವಾಗಿ ಆಗಸ್ಟ್ 2ರವರೆಗೆ ನಡೆಯಲಿದೆ.ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಗುರುವಾರ ತಿಳಿಸಿದ್ದರು. ಅದಾಗ್ಯೂ ಪ್ರತಿಪಕ್ಷಗಳು ಈ ನಡೆಯನ್ನು ಖಂಡಿಸಿದ್ದವು. ಇದೀಗ ಸ್ವತಃ ಮುಖ್ಯಮಂತ್ರಿಯೇ ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ʼʼಧಾರ್ಮಿಕ ಯಾತ್ರಾರ್ಥಿಗಳ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದ ಹಿನ್ನೆಲೆಯಲ್ಲಿ ಮುಜಾಫರ್‌ನಗರ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಸಿಎಂ ಯೋಗಿ ಆದಿತ್ಯನಾಥ್‌ ಗಮನಿಸಿದರು. ಹೀಗಾಗಿ ಅವರು ರೆಸ್ಟೋರೆಂಟ್, ಹೋಟೆಲ್‌, ರಸ್ತೆಬದಿಯ ಢಾಬಾ ಅಥವಾ ಆಹಾರದ ಗಾಡಿ ಸೇರಿದಂತೆ ಪ್ರತಿಯೊಂದು ಕಡೆ ಮಾಲೀಕರ ಹೆಸರು ಮತ್ತು ವಿವರಗಳನ್ನು ಪ್ರದರ್ಶಿಸುವಂತೆ ಸೂಚಿಸಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಉತ್ತರ ಪ್ರದೇಶದ ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಮಾತನಾಡಿ, ಮುಸ್ಲಿಂ ಮಾರಾಟಗಾರರು ಹಿಂದುಗಳಂತೆ ನಟಿಸಿ ಯಾತ್ರಾರ್ಥಿಗಳಿಗೆ ಮಾಂಸಾಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. “ಅವರು ವೈಷ್ಣೋ ಡಾಬಾ ಭಂಡಾರ್, ಶಕುಂಭರಿ ದೇವಿ ಹೋಟೆಲ್‌ ಮತ್ತು ಶುದ್ಧ ಸಸ್ಯಾಹಾರಿ ಎಂದು ಬೋರ್ಡ್‌ ಸ್ಥಾಪಿಸಿ ಮಾಂಸಾಹಾರ ಮಾರಾಟ ಮಾಡುತ್ತಾರೆ” ಎಂದು ಅವರು ತಿಳಿಸಿದ್ದರು.

ಮುಜಾಫರ್‌ನಗರ ಪೊಲೀಸರ ಆದೇಶಕ್ಕೆ ಕಿಡಿ ಕಾರಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಹೊಟೇಲ್‌ಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಪ್ರದರ್ಶಿಸಬೇಕೆಂಬ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂತಹ ಆದೇಶಗಳನ್ನು ತಹೊರಡಿಲಾಗುತ್ತಿದೆʼʼ ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ:Karnataka HC: ನ್ಯಾಯಮೂರ್ತಿಗಳು ಕೂಡ ಮನುಷ್ಯರೇ; ಮಕ್ಕಳ ಅಶ್ಲೀಲ ದೃಶ್ಯ ವೀಕ್ಷಣೆ ಅಪರಾಧವಲ್ಲ ಆದೇಶ ಹಿಂಪಡೆದ ಹೈಕೋರ್ಟ್

Continue Reading
Advertisement
Tharun Sudhir marriage updates reveal on 21st July
ಸ್ಯಾಂಡಲ್ ವುಡ್3 mins ago

Tharun Sudhir: ಡೈರೆಕ್ಟರ್​ ತರುಣ್ ಸುಧೀರ್ ರಿಯಲ್ ಲೈಫ್ ಹೀರೋಯಿನ್ ರಿವೀಲ್‌ಗೆ ಡೇಟ್ ಫಿಕ್ಸ್..!

Pakistan Army
ವಿದೇಶ5 mins ago

Pakistan Army: ಭಾರತದ ಗಡಿಯಲ್ಲಿ ಉಗ್ರರಿಗೆ ಪಾಕ್ ಸೇನೆಯಿಂದಲೇ ತರಬೇತಿ, ಮಾರ್ಗದರ್ಶನ; ಮತ್ತೊಂದು ಕಳ್ಳಾಟ ಬಯಲು

Guru Purnima 2024 mahotsava celebrated in different parts of the country
ಬೆಂಗಳೂರು ಗ್ರಾಮಾಂತರ17 mins ago

Guru Purnima 2024 : ವಿವಿಧೆಡೆ ಅದ್ಧೂರಿಯಾಗಿ ನೆರವೇರಿದ ಗುರುಪೂರ್ಣಿಮಾ ಮಹೋತ್ಸವ

Paris Olympics 2024
ಪ್ರಮುಖ ಸುದ್ದಿ29 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಅತಿ ಹೆಚ್ಚು ಪದಕಗಳನ್ನು ಪಡೆದ ಅಥ್ಲೀಟ್​ ಯಾರು? ಇಲ್ಲಿದೆ ಈ ಶ್ರೇಷ್ಠ ಕ್ರೀಡಾಪಟುವಿನ ವಿವರ

Viral Video
ವಿದೇಶ30 mins ago

Viral Video: ಎರಡು ವಾರಗಳ ಹಿಂದೆಯಷ್ಟೇ ಮದುವೆಯಾಗಿದ್ದ ಭಾರತೀಯ ಯುವಕ ಅಮೆರಿಕದಲ್ಲಿ ಗುಂಡೇಟಿಗೆ ಬಲಿ; ವಿಡಿಯೋ ಫುಲ್‌ ವೈರಲ್‌

Jasmine Bhasin says her corneas got damaged
ಸಿನಿಮಾ31 mins ago

Jasmin Bhasin: ಲೆನ್ಸ್‌ ಧರಿಸಿ ಎಡವಟ್ಟು; ಕಣ್ಣು ಕಳೆದುಕೊಂಡ್ರಾ ಖ್ಯಾತ ನಟಿ?

Women's T20 World Cup
ಕ್ರೀಡೆ38 mins ago

Women’s T20 World Cup: ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ; ಮಹಿಳಾ ಟಿ20 ವಿಶ್ವಕಪ್ ​ಸ್ಥಳಾಂತರ ಸಾಧ್ಯತೆ!

karnataka rain
ಮಳೆ50 mins ago

Karnataka Rain : ಭಾರಿ ಮಳೆ ಎಫೆಕ್ಟ್‌; ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

Actor Naresh Shares Emotional Video About His Baby And Taged Director Nag Ashwin
ಟಾಲಿವುಡ್1 hour ago

Actor Naresh: ನನ್ನ ಬೇಬಿಯನ್ನು ದಯವಿಟ್ಟು ಹುಡುಕಿಕೊಡಿ ಎಂದು ಗಳಗಳನೇ ಅತ್ತ ನಟ ನರೇಶ್‌!

Viral Video
ಕ್ರೀಡೆ1 hour ago

Viral Video: ವಿಂಡೀಸ್​ ವೇಗಿಯ ಸಿಕ್ಸರ್​ ಹೊಡೆತಕ್ಕೆ ಸ್ಟೇಡಿಯಂನ ಮೇಲ್ಛಾವಣಿಯ ಹೆಂಚುಗಳು ಪುಡಿಪುಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌