Site icon Vistara News

Opposition Meet: ಪಾಟ್ನಾದಲ್ಲಿ ನಾಳೆ ಪ್ರತಿಪಕ್ಷಗಳ ಸಭೆ; ಮೋದಿ ವಿರುದ್ಧ ತೊಡೆ ತಟ್ಟಿದ ನಾಯಕರು!

Opposition Party Leaders To Meet In Bengaluru

Opposition Key Meet In Bengaluru, NDA Meet Comes On The Same Day

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಪ್ರಬಲ ಪ್ರತಿಪಕ್ಷ ಕೂಟವನ್ನು (Opposition Meet) ರಚಿಸುವ ತೆರೆಮರೆಯ ಪ್ರಯತ್ನಗಳು ಜೂ.23, ಶುಕ್ರವಾರ ಬಹಿರಂಗವಾಗಲಿವೆ. ಕಳೆದ ಕೆಲವು ತಿಂಗಳಿಂದ ಬಿಹಾರ ಸಿಎಂ ನಿತೀಶ್ ಕುಮಾರ್ (CM Nitish Kumar) ಅವರು ಪ್ರತಿಪಕ್ಷಗಳನ್ನು ಒಂದೇ ವೇದಿಕೆಗೆ ತರುವ ಪ್ರಯತ್ನವನ್ನು ಆರಂಭಿಸಿದ್ದರು. ಹೀಗಾಗಿ ಶುಕ್ರವಾರ ಈ ಸಂಬಂಧ ಪಾಟ್ನಾದಲ್ಲಿ (Patna) ಪ್ರತಿಪಕ್ಷಗಳ ಸಭೆ ನಡೆಯಲಿದೆ. ನಾಳೆ ನಡೆಯಲಿರುವ ಸಭೆಯಲ್ಲಿ ಸುಮಾರು 20 ಪಕ್ಷಗಳು ಪಾಲ್ಗೊಳ್ಳುತ್ತಿವೆ. ಆದರೆ, ಉತ್ತರ ಪ್ರದೇಶದ ಬಹುಜನ ಸಮಾಜ ಪಾರ್ಟಿಯ ನಾಯಕಿ ಮಾಯಾವತಿ ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ.

ಈ ಸಭೆಯಲ್ಲಿ ಕಾಂಗ್ರೆಸ್‌ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮತ್ತು ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ನಾಯಕ ಎಂಕೆ ಸ್ಟಾಲಿನ್, ಎನ್‌ಸಿಪಿ ನಾಯಕ ಶರದ್ ಪವಾರ್, ದಿಲ್ಲಿ ಸಿಎಂ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್, ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹಾಗೂ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಪಾರ್ಟಿ ನಾಯಕಿ ಮೆಹಬೂಬ ಮುಫ್ತಿ ಶುಕ್ರವಾರದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಸಭೆಯ ವೇಳೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಸಂಜೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಶುಕ್ರವಾರದ ಸಭೆಗೆ ಸಕಲ ಸಿದ್ಧತೆ

ಈ ಸುದ್ದಿಯನ್ನೂ ಓದಿ: New Parliament : ಹೊಸ ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸಿದ 19 ಪ್ರತಿಪಕ್ಷಗಳು, ಜಂಟಿ ಹೇಳಿಕೆ ಬಿಡುಗಡೆ

ಶುಕ್ರವಾರ ನಡೆಯಲಿರುವ ಪ್ರತಿಪಕ್ಷಗಳು ಸಭೆಯ ಸಿದ್ಧತೆಯ ಕುರಿತು ಮಾಹಿತಿ ನೀಡಿರುವ ಬಿಹಾರದ ವಿತ್ತ ಸಚಿವ ವಿಜಯಕುಮಾರ್ ಚೌಧರಿ ಅವರು, ಗುರುವಾರದಿಂದಲೇ ಪ್ರತಿಪಕ್ಷಗಳ ನಾಯಕರು ಪಾಟ್ನಾಗೆ ಆಗಮಿಸುತ್ತಿದ್ದಾರೆ. ಸಭೆಯ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿಪಕ್ಷಗಳ ನಾಯಕರು ಸ್ಟೇಟ್ ಗೌಸ್ಟ್ ಹೌಸ್‌ನಲ್ಲಿ ಉಳಿಯಲಿದ್ದಾರೆ ಮತ್ತು ಅದಕ್ಕೆ ಬೇಕಾಗಿರುವ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪ್ರತಿಪಕ್ಷಗಳ ನಾಯಕರ ಸಭೆಯು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರ ನಿವಾಸದಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version