Khalistani Terrorist: ಕೆನಡಾದಲ್ಲಿ ಭಾರತದ ಮೋಸ್ಟ್‌ ವಾಂಟೆಡ್‌ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಫಿನಿಶ್ - Vistara News

ದೇಶ

Khalistani Terrorist: ಕೆನಡಾದಲ್ಲಿ ಭಾರತದ ಮೋಸ್ಟ್‌ ವಾಂಟೆಡ್‌ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಫಿನಿಶ್

Khalistani Terrorist: ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನನ್ನು ಕೆನಡಾದಲ್ಲಿ ಹತ್ಯೆ ಮಾಡಲಾಗಿದೆ. ಈತನ ವಿರುದ್ಧ ನಾಲ್ಕು ಪ್ರಕರಣಗಳಲ್ಲಿ ಎನ್‌ಐಎ ತನಿಖೆ ನಡೆಸುತ್ತಿತ್ತು.

VISTARANEWS.COM


on

Khalistani terrorist Hardeep Singh Nijjar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಒಟ್ಟಾವ: ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರ ಹತ್ಯೆಯನ್ನು ಕೆನಡಾದಲ್ಲಿರುವ ಖಲಿಸ್ತಾನಿಗಳು ಸಂಭ್ರಮಾಚರಣೆ ಮಾಡಿದ ಕೆಲವೇ ದಿನಗಳಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನನ್ನು (Khalistani Terrorist) ಕೆನಡಾದ ಸುರ‍್ರೆ ನಗರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದು, ಎನ್‌ಐಎ ಈತನ ವಿರುದ್ಧ ತನಿಖೆ ನಡೆಸುತ್ತಿತ್ತು.

ಪಂಜಾಬಿಗಳೇ ಹೆಚ್ಚಿರುವ ಸುರ‍್ರೆ ನಗರದ ಗುರುನಾನಕ್‌ ಸಿಖ್‌ ಗುರುದ್ವಾರದ ಬಳಿಕ ಖಲಿಸ್ತಾನಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ಪಂಜಾಬ್‌ನಲ್ಲಿ ಅರ್ಚಕರೊಬ್ಬರ ಕೊಲೆಗೆ ಪಿತೂರಿ ನಡೆಸಿರುವುದು, ಮೂಲಭೂತವಾದದ ಪ್ರಸರಣ ಸೇರಿ ನಾಲ್ಕು ಪ್ರಕರಣಗಳಲ್ಲಿ ಎನ್‌ಐಎ ಉಗ್ರನ ವಿರುದ್ಧ ತನಿಖೆ ನಡೆಸುತ್ತಿದೆ. ಅಲ್ಲದೆ, ಈತನ ಕುರಿತು ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಕೂಡ ಎನ್‌ಐಎ ಘೋಷಿಸಿದೆ.

ಖಲಿಸ್ತಾನ್‌ ಟೈಗರ್‌ ಫೋರ್ಸ್‌ (KTF) ಉಗ್ರ ಸಂಘಟನೆಯ ಮುಖ್ಯಸ್ಥನಾಗಿರುವ ಈತ ಪ್ರತ್ಯೇಕವಾದಿಗಳಿಗೆ ಹೆಚ್ಚಿನ ನೆರವು ಒದಗಿಸುತ್ತಿದ್ದ. ಭಾರತದಲ್ಲಿ ಹಲವು ಉಗ್ರ ಚಟುವಟಿಕೆಗಳ ಹಿಂದೆ ಈತನ ಕೈವಾಡವಿದೆ. ಕೆನಡಾದಲ್ಲೂ ಸಿಖ್‌ ಸಮುದಾಯದವರನ್ನು ಎತ್ತಿಕಟ್ಟುತ್ತಿದ್ದ. ಹಾಗಾಗಿ, ಈತನು ಸೇರಿ ಸುಮಾರು 40 ಉಗ್ರರನ್ನು ಭಾರತವು ಮೋಸ್ಟ್‌ ವಾಂಟೆಡ್‌ ಉಗ್ರರ ಪಟ್ಟಿಗೆ ಸೇರಿಸಿದೆ.

ಇದನ್ನೂ ಓದಿ: Avtar Khanda Dies: ಬ್ರಿಟನ್‌ನಲ್ಲಿ ಭಾರತದ ತಿರಂಗಾ ಕೆಳಗಿಳಿಸಿದ್ದ ಖಲಿಸ್ತಾನ್ ಉಗ್ರ ಅವತಾರ್‌ ಖಂಡಾ ಸಾವು

ಕೆಲ ದಿನಗಳ ಹಿಂದಷ್ಟೇ ಖಲಿಸ್ತಾನಿ ಉಗ್ರ, ಖಲಿಸ್ತಾನ್‌ ನಾಯಕ, ಬಂಧಿತ ಅಮೃತ್‌ಪಾಲ್‌ ಸಿಂಗ್‌ನ ಆಪ್ತ, ಲಂಡನ್‌ನಲ್ಲಿರುವ ಭಾರತದ ಹೈಕಮಿಷನ್‌ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರ ರೂವಾರಿ ಅವತಾರ್‌ ಸಿಂಗ್‌ ಖಂಡಾ ಲಂಡನ್‌ನಲ್ಲಿ ಮೃತಪಟ್ಟಿದ್ದ. ಲಂಡನ್‌ನಲ್ಲಿ ಜೂನ್‌ 15ರಂದು ಆತ ಮೃತಪಟ್ಟಿದ್ದು, ಇದಕ್ಕೆ ಕ್ಯಾನ್ಸರ್‌ ಕಾರಣ ಎಂದು ಹೇಳಲಾಗುತ್ತಿದೆ. ಇದಲ್ಲದೆ, ಅಮೃತ್‌ಪಾಲ್‌ ಸಿಂಗ್‌ ಬಂಧನದ ಬಳಿಕ ಕೆನಡಾದಲ್ಲಿರುವ ಖಲಿಸ್ತಾನಿಗಳು ಇನ್ನಷ್ಟು ತೀವ್ರವಾಗಿ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

VISTARANEWS.COM


on

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

ಪಶ್ಚಿಮ ಬಂಗಾಳದ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ವೇಳೆ ದೊಡ್ಡ ವಿವಾದ ಸೃಷ್ಟಿಯಾಗಿದೆ. ಹಲವಾರು ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರದ (EVM) ಮೇಲಿರುವ ಬಿಜೆಪಿಯ ‘ಕಮಲ’ ಚಿಹ್ನೆಯ ಬಟನ್ ಅನ್ನು ಟೇಪ್‌ನಿಂದ ಮುಚ್ಚಲಾಗಿದೆ ಎಂದು ಬಿಜೆಪಿ ಮುಖಂಡ ಅಮಿತ್ ಮಾಳವೀಯ ವಿಡಿಯೋ ಸಹಿತ ಆರೋಪಿಸಿದ್ದಾರೆ. ಇದರಿಂದ ಮತದಾರರಿಗೆ ತೊಂದರೆಯಾಗಿದ್ದು, ಅಂತಹ ಮತಗಟ್ಟೆಗಳಲ್ಲಿ ಕೂಡಲೇ ಮರುಮತದಾನ ನಡೆಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ಘಟನೆಯ ಬೆನ್ನಲ್ಲೇ ನಿರ್ಲಕ್ಷ್ಯ ತೋರಿದ ಐವರು ಪೊಲೀಸ್ ಅಧಿಕಾರಿಗಳನ್ನು ಆಯೋಗ ಅಮಾನತುಗೊಳಿಸಿದೆ.

ಇದೇ ವೇಳೆ, ಚುನಾವಣಾ ಅಧಿಕಾರಿ ಅಜಯ್ ಪಾಲ್ ಶರ್ಮಾ ಮತ್ತು ಟಿಎಂಸಿ ಅಭ್ಯರ್ಥಿ ಜಹಾಂಗೀರ್ ಖಾನ್ ನಡುವೆ ಭಾರಿ ಮಾತಿನ ಚಕಮಕಿ ನಡೆದಿದೆ. “ಮತದಾರರಿಗೆ ಬೆದರಿಕೆ ಹಾಕಿದರೆ ಅಳಬೇಡಿ, ಕಠಿಣ ಕ್ರಮ ಜರುಗಿಸುತ್ತೇವೆ” ಎಂದು ಅಧಿಕಾರಿ ಎಚ್ಚರಿಕೆ ನೀಡಿದರೆ, “ನೀವು ಸಿಂಗಮ್ ಆದರೆ ನಾನು ಪುಷ್ಪ, ಯಾವುದಕ್ಕೂ ಬಗ್ಗಲ್ಲ” ಎಂದು ಅಭ್ಯರ್ಥಿ ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಬ್ಯಾನರ್ಜಿ ಅವರ ಭದ್ರಕೋಟೆಯಾದ ಈ ಕ್ಷೇತ್ರದಲ್ಲಿ ಇಂತಹ ಅಕ್ರಮದ ಆರೋಪ ಕೇಳಿಬಂದಿರುವುದು ಭಾರಿ ಸಂಚಲನ ಮೂಡಿಸಿದೆ.

Continue Reading

Latest

ಹಣ ಪಡೆಯಲು ಬ್ಯಾಂಕಿಗೆ ಸಹೋದರಿಯ ಅಸ್ಥಿಪಂಜರವನ್ನೇ ತಂದ ವ್ಯಕ್ತಿ!

VISTARANEWS.COM


on

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಮಾನವೀಯತೆ ಮರೆತ ಬ್ಯಾಂಕ್ ಸಿಬ್ಬಂದಿಯ ನಡೆಗೆ ಇಡೀ ದೇಶವೇ ಮರುಗುವಂತಾಗಿದೆ. ಮೃತ ಸಹೋದರಿಯ ಹೆಸರಿನಲ್ಲಿದ್ದ ಠೇವಣಿ ಹಣವನ್ನು ಹಿಂಪಡೆಯಲು ಹೋದ ಜೀತು ಮುಂಡಾ ಎಂಬ ಅನಕ್ಷರಸ್ಥ ಬುಡಕಟ್ಟು ವ್ಯಕ್ತಿಗೆ, ಬ್ಯಾಂಕ್ ಸಿಬ್ಬಂದಿ ಪದೇ ಪದೇ “ಖಾತೆದಾರಳನ್ನು ಕರೆತನ್ನಿ” ಎಂದು ಕಿರುಕುಳ ನೀಡಿದ್ದಾರೆ. ಆಕೆ ನಿಧನಳಾಗಿದ್ದಾಳೆ ಎಂದು ಹೇಳಿದರೂ ಕೇಳದ ಸಿಬ್ಬಂದಿಯ ವರ್ತನೆಯಿಂದ ಹತಾಶರಾದ ಜೀತು, ಸಾವಿನ ಪುರಾವೆ ತೋರಿಸಲು ಸಮಾಧಿಯನ್ನು ಅಗೆದು ಸಹೋದರಿಯ ಅಸ್ಥಿಪಂಜರವನ್ನೇ ಬ್ಯಾಂಕಿಗೆ ಹೊತ್ತು ತಂದಿದ್ದಾರೆ.

ಈ ವಿಚಿತ್ರ ಮತ್ತು ಆಘಾತಕಾರಿ ಘಟನೆಯಿಂದ ಎಚ್ಚೆತ್ತ ಪೊಲೀಸರು ಹಾಗೂ ಸ್ಥಳೀಯ ಆಡಳಿತವು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಜೀತು ಮುಂಡಾ ಅವರ ಸಹೋದರಿಯ ಖಾತೆಯಲ್ಲಿದ್ದ ನಾಮಿನಿ ಕೂಡ ಈಗಾಗಲೇ ಮೃತಪಟ್ಟಿದ್ದು, ಕಾನೂನಿನ ಪ್ರಕಾರ ಜೀತು ಅವರೇ ಈ ಹಣಕ್ಕೆ ಏಕೈಕ ಹಕ್ಕುದಾರರಾಗಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಮೃತ ವ್ಯಕ್ತಿಯ ಖಾತೆಯಿಂದ ಹಣ ಹಿಂಪಡೆಯುವ ಸರಳ ನಿಯಮಗಳನ್ನು ವಿವರಿಸುವಲ್ಲಿ ವಿಫಲರಾಗಿ, ಒಬ್ಬ ಅಮಾಯಕ ವ್ಯಕ್ತಿಯನ್ನು ಇಂತಹ ದಾರುಣ ಸ್ಥಿತಿಗೆ ತಳ್ಳಿದ್ದು ನಿಜಕ್ಕೂ ದುರದೃಷ್ಟಕರ.

ಸದ್ಯ ಪೊಲೀಸರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಮರು ಅಂತ್ಯಕ್ರಿಯೆ ಮಾಡಲಾಗಿದ್ದು, ಜೀತು ಮುಂಡಾ ಅವರಿಗೆ ಬರಬೇಕಾದ ಹಣವನ್ನು ಶೀಘ್ರವಾಗಿ ವಿತರಿಸುವಂತೆ ಜಿಲ್ಲಾಡಳಿತವು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ಘಟನೆಯು ಸರ್ಕಾರಿ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಸಾಮಾನ್ಯ ಜನರಿಗೆ, ಅದರಲ್ಲೂ ವಿಶೇಷವಾಗಿ ಅನಕ್ಷರಸ್ಥರಿಗೆ ಸಿಗಬೇಕಾದ ಕನಿಷ್ಠ ಗೌರವ ಮತ್ತು ಮಾರ್ಗದರ್ಶನದ ಕೊರತೆಯನ್ನು ಎತ್ತಿ ತೋರಿಸಿದೆ.

Continue Reading

Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಅಪಘಾತ: ಟೇಕಾಫ್ ಆಗುವಾಗ ಸ್ವಿಸ್ ಏರ್ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಆರು ಮಂದಿಗೆ ಗಾಯ!

VISTARANEWS.COM


on

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗಿನ ಜಾವ ಭೀಕರ ವಿಮಾನ ಅಪಘಾತವೊಂದು ಸಂಭವಿಸಿದೆ. ಸ್ವಿಟ್ಜರ್‌ಲ್ಯಾಂಡ್‌ನ ಜ್ಯೂರಿಚ್‌ಗೆ ಹಾರಲು ಸಿದ್ಧವಾಗಿದ್ದ ಸ್ವಿಸ್ ಏರ್ ವಿಮಾನ (LX147) ರನ್‌ವೇನಲ್ಲಿ ಟೇಕಾಫ್ ಆಗಲು ವೇಗವಾಗಿ ಚಲಿಸುತ್ತಿದ್ದಾಗ, ಅದರ ಒಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ದಿಢೀರ್ ಬೆಂಕಿ ಹೊತ್ತಿಕೊಂಡಿದೆ. ಬೆಳಗಿನ ಜಾವ 1.08ರ ಸುಮಾರಿಗೆ ಸಂಭವಿಸಿದ ಈ ಘಟನೆಯಿಂದ ವಿಮಾನದಲ್ಲಿದ್ದ 228 ಪ್ರಯಾಣಿಕರು ಮತ್ತು ನಾಲ್ವರು ಶಿಶುಗಳು ಸೇರಿದಂತೆ ಒಟ್ಟು 232 ಮಂದಿ ಕೆಲಕಾಲ ಆತಂಕದ ಸುಳಿಯಲ್ಲಿ ಸಿಲುಕಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪೈಲಟ್ ಸಮಯಪ್ರಜ್ಞೆ ಮೆರೆದು ಟೇಕಾಫ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಮುನ್ನೆಚ್ಚರಿಕೆ ಕ್ರಮವಾಗಿ ತುರ್ತು ನಿರ್ಗಮನ ಸ್ಲೈಡ್‌ಗಳನ್ನು (Emergency Slides) ಬಳಸಿ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಈ ಅವಸರದ ಸ್ಥಳಾಂತರ ಪ್ರಕ್ರಿಯೆಯಲ್ಲಿ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ವಿಮಾನದ ಸಿಬ್ಬಂದಿ ವರ್ಗದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಸ್ಲೈಡ್‌ಗಳನ್ನು ಬಳಸಲು ಸಾಧ್ಯವಾಗದ ಕೆಲವು ಪ್ರಯಾಣಿಕರಿಗೆ ಪರ್ಯಾಯ ಮೆಟ್ಟಿಲುಗಳ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

ಘಟನೆಗೆ ಸಂಬಂಧಿಸಿದಂತೆ ಸ್ವಿಸ್ ಏರ್ ಸಂಸ್ಥೆಯು ಈಗಾಗಲೇ ತನಿಖಾ ಕಾರ್ಯಪಡೆಯನ್ನು ರಚಿಸಿದೆ. ವಿಮಾನಯಾನ ಸಂಸ್ಥೆಯ ತಾಂತ್ರಿಕ ತಜ್ಞರು ದೆಹಲಿಗೆ ಆಗಮಿಸಿ ವಿಮಾನದ ಎಂಜಿನ್ ವಿಫಲವಾಗಲು ನಿಖರ ಕಾರಣವೇನು ಎಂಬುದನ್ನು ಪರಿಶೀಲಿಸಲಿದ್ದಾರೆ. ಸದ್ಯ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಸ್ಥಳೀಯ ತಂಡಗಳು ನೆರವು ನೀಡುತ್ತಿದ್ದು, ಅವರಿಗೆ ಹೋಟೆಲ್ ವಸತಿ ಮತ್ತು ಮರು ಬುಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ ಎಂದು ತಿಳಿಸಿರುವ ಸಂಸ್ಥೆಯು, ಸ್ಥಳೀಯ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿರುವುದಾಗಿ ಸ್ಪಷ್ಟಪಡಿಸಿದೆ.

Continue Reading

Latest

ಅಂಬಾನಿ ಮನೆ ಅಡುಗೆಮನೆ ಮೆನು ಹೇಗಿರುತ್ತೆ ಗೊತ್ತಾ? ಪ್ರತಿದಿನ 4000 ರೊಟ್ಟಿ ತಯಾರಾಗುವುದರ ಹಿಂದಿನ ಅಸಲಿ ಕಾರಣವೇನು?

VISTARANEWS.COM


on

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ನಿವಾಸ ‘ಆಂಟಿಲಿಯಾ’ ಕೇವಲ ಐಷಾರಾಮಿ ಜೀವನಕ್ಕೆ ಮಾತ್ರವಲ್ಲ, ಅಲ್ಲಿನ ಶಿಸ್ತುಬದ್ಧ ಆಹಾರ ಪದ್ಧತಿಗೂ ಹೆಸರುವಾಸಿ. ಅಂಬಾನಿ ಕುಟುಂಬದ ಸದಸ್ಯರು ಅಪ್ಪಟ ಸಸ್ಯಾಹಾರಿಗಳಾಗಿದ್ದು, ಅತ್ಯಂತ ಸಾತ್ವಿಕ ಹಾಗೂ ಪೌಷ್ಟಿಕ ಆಹಾರವನ್ನು ಸೇವಿಸುತ್ತಾರೆ. ಮುಖೇಶ್ ಅಂಬಾನಿ ಅವರ ದಿನಚರಿ ಬೆಳಿಗ್ಗೆ ಪಪ್ಪಾಯಿ ರಸ ಮತ್ತು ಇಡ್ಲಿ-ಸಾಂಬಾರ್‌ನೊಂದಿಗೆ ಆರಂಭವಾದರೆ, ನೀತಾ ಅಂಬಾನಿ ಅವರು ಹಣ್ಣುಗಳು ಹಾಗೂ ಡ್ರೈಫ್ರೂಟ್ಸ್ ಗೆ ಆದ್ಯತೆ ನೀಡುತ್ತಾರೆ. ಮಧ್ಯಾಹ್ನದ ಊಟದಲ್ಲಿ ಗುಜರಾತಿ ಶೈಲಿಯ ದಾಲ್, ಅನ್ನ, ರೊಟ್ಟಿ ಮತ್ತು ಸಲಾಡ್‌ಗಳಿದ್ದರೆ, ರಾತ್ರಿಯ ಭೋಜನದಲ್ಲಿ ಆರೋಗ್ಯಕ್ಕೆ ಪೂರಕವಾದ ರಾಗಿ ರೊಟ್ಟಿ ಮತ್ತು ಹಗುರವಾದ ತರಕಾರಿ ಖಾದ್ಯಗಳಿರುತ್ತವೆ.

ಆಂಟಿಲಿಯಾದಲ್ಲಿ ಪ್ರತಿದಿನ ಬರೋಬ್ಬರಿ 4,000 ರೊಟ್ಟಿಗಳು ತಯಾರಾಗುತ್ತವೆ ಎಂಬ ಸುದ್ದಿ ಕೇಳಲು ಅಚ್ಚರಿಯೆನಿಸಿದರೂ ಇದರ ಹಿಂದೆ ಒಂದು ಅಚ್ಚರಿಯ ಕಾರಣವಿದೆ. ಅಂಬಾನಿ ಕುಟುಂಬದ ಸದಸ್ಯರಿಗಾಗಿ ಮಾತ್ರವಲ್ಲದೆ, ಆ ಭವ್ಯ ಬಂಗಲೆಯಲ್ಲಿ ಹಗಲಿರುಳು ಕೆಲಸ ಮಾಡುವ ಸುಮಾರು 600ಕ್ಕೂ ಹೆಚ್ಚು ಸಿಬ್ಬಂದಿಗಳಿಗಾಗಿ ಈ ರೊಟ್ಟಿಗಳನ್ನು ತಯಾರಿಸಲಾಗುತ್ತದೆ. ಭದ್ರತಾ ಸಿಬ್ಬಂದಿ, ಚಾಲಕರು, ಅಡುಗೆಯವರು ಮತ್ತು ತಂತ್ರಜ್ಞರು ಸೇರಿದಂತೆ ಪ್ರತಿಯೊಬ್ಬರಿಗೂ ಮನೆಯ ಸದಸ್ಯರಂತೆಯೇ ಪೌಷ್ಟಿಕ ಮತ್ತು ರುಚಿಕರವಾದ ಊಟವನ್ನು ಇಲ್ಲಿ ನೀಡಲಾಗುತ್ತದೆ. ನೂರಾರು ರೊಟ್ಟಿಗಳನ್ನು ಕ್ಷಣಾರ್ಧದಲ್ಲಿ ತಯಾರಿಸುವ ಅತ್ಯಾಧುನಿಕ ಯಂತ್ರಗಳು ಅಲ್ಲಿವೆ, ಆದರೆ ರುಚಿ ಮತ್ತು ಗುಣಮಟ್ಟಕ್ಕೆ ಯಾವುದೇ ಕುಂದು ಬಾರದಂತೆ ಎಚ್ಚರಿಕೆ ವಹಿಸಲಾಗುತ್ತದೆ.

ಇನ್ನು ಈ ಬೃಹತ್ ಅಡುಗೆಮನೆಯನ್ನು ನಿರ್ವಹಿಸುವ ಅಡುಗೆಯವರ ಬಗ್ಗೆ ಹೇಳುವುದಾದರೆ, ಅವರ ಆಯ್ಕೆ ಪ್ರಕ್ರಿಯೆಯೇ ಒಂದು ರೋಚಕ ಕಥೆ. ದೇಶದ ಅತ್ಯುತ್ತಮ ಹೊಟೇಲ್‌ಗಳ ನುರಿತ ಅಡುಗೆಯವರನ್ನು ಇಲ್ಲಿ ನೇಮಿಸಿಕೊಳ್ಳಲಾಗುತ್ತಿದ್ದು, ಇವರ ಸಂಬಳ ಕೇಳಿದರೆ ಸಾಮಾನ್ಯರು ಬೆಚ್ಚಿಬೀಳುತ್ತಾರೆ. ವರದಿಗಳ ಪ್ರಕಾರ, ಇಲ್ಲಿನ ಮುಖ್ಯ ಅಡುಗೆಯವರು ತಿಂಗಳಿಗೆ ಲಕ್ಷಾಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಕೇವಲ ಹಣ ಮಾತ್ರವಲ್ಲದೆ, ಅವರಿಗೆ ವಿಮೆ ಮತ್ತು ಅವರ ಮಕ್ಕಳ ಶಿಕ್ಷಣಕ್ಕೂ ನೆರವು ನೀಡಲಾಗುತ್ತದೆ. ಹೀಗೆ ಅಂಬಾನಿ ಮನೆಯ ಅಡುಗೆಮನೆ ಕೇವಲ ಊಟ ತಯಾರಿಸುವ ಸ್ಥಳವಾಗಿರದೆ, ನೂರಾರು ಜನರಿಗೆ ಅನ್ನ ನೀಡುವ ಮತ್ತು ಅತ್ಯುತ್ತಮ ಕೆಲಸಗಾರರಿಗೆ ರಾಜಮರ್ಯಾದೆ ನೀಡುವ ತಾಣವಾಗಿದೆ.

Continue Reading
Advertisement
Latest12 minutes ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest19 minutes ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 hour ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest18 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest19 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest19 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking19 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest21 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest22 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest23 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌