Rahul Gandhi: ಅಮೆರಿಕದಲ್ಲಿ ರಾಹುಲ್‌ ಗಾಂಧಿ ಭಾಷಣದ ವೇಳೆ ಖಲಿಸ್ತಾನ್‌ ಜಿಂದಾಬಾದ್‌ ಘೋಷಣೆ; ವಿಡಿಯೊ ವೈರಲ್ - Vistara News

ದೇಶ

Rahul Gandhi: ಅಮೆರಿಕದಲ್ಲಿ ರಾಹುಲ್‌ ಗಾಂಧಿ ಭಾಷಣದ ವೇಳೆ ಖಲಿಸ್ತಾನ್‌ ಜಿಂದಾಬಾದ್‌ ಘೋಷಣೆ; ವಿಡಿಯೊ ವೈರಲ್

Rahul Gandhi: ಅಮೆರಿಕದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರು ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಇದೇ ವೇಳೆ ಒಂದಷ್ಟು ಜನ ಖಲಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಈ ವಿಡಿಯೊ ಈಗ ವೈರಲ್‌ ಆಗಿದೆ.

VISTARANEWS.COM


on

Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸ್ಯಾನ್‌ ಫ್ರಾನ್ಸಿಸ್ಕೋ: ‌ಅಮೆರಿಕದ ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ಆಯೋಜಿಸಿದ್ದ ʼಮೊಹಬ್ಬತ್‌ ಕಿ ದುಕಾನ್ʼ‌ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಮಾತನಾಡಿದ್ದಾರೆ. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ, ನರೇಂದ್ರ ಮೋದಿ ಅವರ ಆಡಳಿತ ವೈಖರಿ ಕುರಿತು ಟೀಕೆ, ತನಿಖಾ ಸಂಸ್ಥೆಗಳ ದುರ್ಬಳಕೆ ಸೇರಿ ಹಲವು ವಿಷಯಗಳನ್ನು ಮಾತನಾಡಿದ್ದಾರೆ. ಆದರೆ, ರಾಹುಲ್‌ ಗಾಂಧಿ ಅವರು ಭಾಷಣ ಮಾಡುವ ಮಧ್ಯೆಯೇ, ಒಂದಷ್ಟು ಜನ ಖಲಿಸ್ತಾನ್‌ ಪ್ರತ್ಯೇಕ ರಾಷ್ಟ್ರದ ಪರ ಘೋಷಣೆ ಕೂಗಿದ್ದಾರೆ.

ರಾಹುಲ್‌ ಗಾಂಧಿ ಅವರು ಭಾಷಣ ಮಾಡುವ ಮಧ್ಯೆ ಖಲಿಸ್ತಾನ ಪರವಾಗಿ ಒಂದಷ್ಟು ಜನ ಘೋಷಣೆ ಕೂಗಿದ್ದಾರೆ. ಅಲ್ಲದೆ, ಖಲಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆಯನ್ನೂ ಅವರು ಕೂಗಿದ್ದಾರೆ. ಇದೇ ವೇಳೆ, ರಾಹುಲ್‌ ಗಾಂಧಿ ಅವರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲಾಗಿದೆ ಎಂದರೂ ಕೇಳದೆ ಖಲಿಸ್ತಾನ್‌ ಪರ ಘೋಷಣೆ ಕೂಗಲಾಗಿದೆ. ಈ ವಿಡಿಯೊ ವೈರಲ್‌ ಆಗಿದ್ದು, ಭಾರಿ ಟೀಕೆ ವ್ಯಕ್ತವಾಗಿವೆ.

ಇಲ್ಲಿದೆ ನೋಡಿ ವಿಡಿಯೊ

ರಾಷ್ಟ್ರಗೀತೆಗೆ ಅಗೌರವ

ರಾಹುಲ್‌ ಗಾಂಧಿ ಭಾಷಣಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಹಾಡಲಾಯಿತು. ರಾಷ್ಟ್ರಗೀತೆ ಮೊಳಗುತ್ತಿದ್ದರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೂರಾರು ಜನ ಎದ್ದು ನಿಂತು ಗೌರವ ಸೂಚಿಸದಿರುವ ಕುರಿತು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತ ವಿಡಿಯೊ ಕೂಡ ಈಗ ವೈರಲ್‌ ಆಗಿದೆ.

ಭಾಷಣದ ವೇಳೆ ರಾಹುಲ್‌ ಗಾಂಧಿ ಹಲವು ವಿಚಾರ ಪ್ರಸ್ತಾಪಿಸಿದರು. ಅಲ್ಪಸಂಖ್ಯಾತರ ಬಗ್ಗೆ ಮಾತನಾಡುತ್ತ, “1980ರ ದಶಕದಲ್ಲಿ ಉತ್ತರ ಪ್ರದೇಶ ಸೇರಿ ಹಲವೆಡೆ ದಲಿತರ ಮೇಲೆ ದೌರ್ಜನ್ಯ ನಡೆಯಿತು. ಈಗ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಬರೀ ಮುಸ್ಲಿಮರು ಮಾತ್ರವಲ್ಲ, ಸಿಖ್ಖರು, ಕ್ರೈಸ್ತರು, ದಲಿತರು ಹಾಗೂ ಬುಡಕಟ್ಟು ಸಮುದಾಯದವರು ಕೂಡ ಭಾರತದಲ್ಲಿ ಇಂತಹದ್ದೇ ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ. ಆದರೆ, ಯಾವಾಗಲೂ ದ್ವೇಷದಿಂದ ದ್ವೇಷವನ್ನು ತೊಲಗಿಸಲು ಸಾಧ್ಯವಿಲ್ಲ. ಪ್ರೀತಿಯಿಂದ ಮಾತ್ರ ದ್ವೇಷವನ್ನು ನಿರ್ಮೂಲನೆ ಮಾಡಲು ಸಾಧ್ಯ” ಎಂದು ಹೇಳಿದರು.

“ಮುಸ್ಲಿಮರು ಸೇರಿ ಎಲ್ಲ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ನಾವು ಹೋರಾಡಬೇಕಿದೆ. ಆದರೆ, ದ್ವೇಷದಿಂದ ಹೋರಾಟ ಮಾಡುವುದು ಕೂಡದು. ಪ್ರೀತಿಯಿಂದಲೇ ದ್ವೇಷವನ್ನು ಸೋಲಿಸೋಣ. ಇದಕ್ಕೆ ಕಾಂಗ್ರೆಸ್‌ ಕೂಡ ಬದ್ಧವಾಗಿದೆ. ಭಾರತದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಟ್ಟಿಗೊಳಿಸುವುದು ಕಾಂಗ್ರೆಸ್‌ನ ಪ್ರಮುಖ ಧ್ಯೇಯೋದ್ದೇಶವಾಗಿದೆ” ಎಂದು ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡುವಾಗ ತಿಳಿಸಿದರು.

ಇದನ್ನೂ ಓದಿ: Rahul Gandhi: 1980ರಲ್ಲಿ ದಲಿತರಿಗೆ ಆದಂತೆ ಈಗ ಮುಸ್ಲಿಮರ ಮೇಲೆ ದೌರ್ಜನ್ಯ; ಅಮೆರಿಕದಲ್ಲಿ ರಾಹುಲ್‌ ಗಾಂಧಿ ಚಾಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Farmers Protest: ರೈತರ ಪ್ರತಿಭಟನೆ; ಅಂಬಾಲಾ-ಅಮೃತಸರ ಮಾರ್ಗದ 54 ರೈಲು ಸಂಚಾರ ರದ್ದು

Farmers Protest: ಪಂಜಾಬ್‌ನ ಪಟಿಯಾಲ ಜಿಲ್ಲೆಯ ಶಂಭು ರೈಲ್ವೆ ನಿಲ್ದಾಣದಲ್ಲಿ ಹಳಿಗಳ ಮೇಲೆ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅಂಬಾಲಾ-ಅಮೃತಸರ ಮಾರ್ಗದ ಒಟ್ಟು 54 ರೈಲು ಸಂಚಾರವನ್ನು ಶನಿವಾರ ರದ್ದುಗೊಳಿಸಲಾಗಿದೆ. ಹರಿಯಾಣ ಪೊಲೀಸರು ಬಂಧಿಸಿರುವ ಮೂವರು ರೈತರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಈ ಹೋರಾಟ ಕೈಗೊಂಡಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿಈ ಹೋರಾಟ ನಡೆಯುತ್ತಿದೆ.

VISTARANEWS.COM


on

Farmers Protest
Koo

ಚಂಡಿಗಢ: ನಿರಂತರ 4 ದಿನಗಳಿಂದ ಪಂಜಾಬ್‌ನ ಪಟಿಯಾಲ ಜಿಲ್ಲೆಯ ಶಂಭು ರೈಲ್ವೆ ನಿಲ್ದಾಣ (Shambhu railway station)ದಲ್ಲಿ ಹಳಿಗಳ ಮೇಲೆ ರೈತರು ಪ್ರತಿಭಟನೆ (Farmers Protest) ನಡೆಸುತ್ತಿರುವ ಹಿನ್ನೆಲೆಯಲ್ಲಿ ಅಂಬಾಲಾ-ಅಮೃತಸರ (Ambala-Amritsar) ಮಾರ್ಗದ ಒಟ್ಟು 54 ರೈಲು ಸಂಚಾರವನ್ನು ಶನಿವಾರ ರದ್ದುಗೊಳಿಸಲಾಗಿದೆ. ಹರಿಯಾಣ ಪೊಲೀಸರು ಬಂಧಿಸಿರುವ ಮೂವರು ರೈತರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಈ ಹೋರಾಟ ಕೈಗೊಂಡಿದ್ದಾರೆ. ನವದೆಹಲಿ-ಅಮೃತಸರ, ಹೃಷಿಕೇಶ- ಶ್ರೀ ಗಂಗಾನಗರ ಮತ್ತು ಲುಧಿಯಾನ-ಅಂಬಾಲಾ ಕಂಟೋನ್ಮೆಂಟ್ ರೈಲು ಸೇರಿದಂತೆ ಹಲವು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಟಿಯಾಲಾದ ಶಂಭುವಿನಲ್ಲಿ ರೈತರು ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಬಗ್ಗೆ ಮಾತನಾಡಿದ ರೈತ ಮುಖಂಡ ಸರ್ವನ್ ಸಿಂಗ್ ಪಂಧೇರ್, ʼʼಮೂವರು ರೈತರನ್ನು ಬಿಡುಗಡೆ ಮಾಡುವವರೆಗೂ ಪ್ರತಿಭಟನೆ ಮುಂದುವರಿಯುತ್ತದೆʼʼ ಎಂದು ಘೋಷಿಸಿದ್ದಾರೆ.

ಯಾವುದೇ ರಾಜಕೀಯ ಪಕ್ಷಕ್ಕೆ ಬಹಿರಂಗ ಬೆಂಬಲ ನೀಡಲು ನಿರಾಕರಿಸಿದ ರೈತ ನಾಯಕ ರಾಕೇಶ್ ಟಿಕಾಯತ್ ಮಾತನಾಡಿ, ʼʼಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾರಿಗೆ ಮತ ಚಲಾಯಿಸಬೇಕು ಎಂದು ಯಾರಿಗೂ ಹೇಳುವುದಿಲ್ಲ. ಈಗಾಗಲೇ ರೈತರು ಯಾವ ಪಕ್ಷ ಅಥವಾ ಅಭ್ಯರ್ಥಿ ಉತ್ತಮ ಎನ್ನುವುದನ್ನು ಕಂಡುಕೊಂಡಿದ್ದಾರೆʼʼ ಎಂದು ಹೇಳಿದ್ದಾರೆ.

ʼʼಈ ಪ್ರತಿಭಟನೆ ಕಾರಣದಿಂದ ಮೂರು ದಿನಗಳಿಂದ ಸುಮಾರು 380 ರೈಲುಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ನೂರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆಬ್ರವರಿ 13ರಂದು ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖನೌರಿ ಗಡಿಗಳಲ್ಲಿ ಭದ್ರತಾ ಪಡೆಗಳು ರೈತರ ಮೆರವಣಿಗೆಯನ್ನು ನಿಲ್ಲಿಸಿದಾಗಿನಿಂದ ಅವರು ಅಲ್ಲಿಯೇ ಉಳಿದಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ನವದೀಪ್ ಜಲ್ಬೆರಾ, ಗುರ್ಕಿರತ್ ಶಹಪುರ್ ಮತ್ತು ಅನೀಶ್ ಖಟ್ಕರ್ ಎಂಬ ಮೂವರು ರೈತರನ್ನು ಭದ್ರತಾ ಪಡೆಗಳು ಬಂಧಿಸಿವೆ. ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಫೆಬ್ರವರಿ 13ರಂದು ದಾಖಲಾದ ಕೊಲೆ ಯತ್ನ ಪ್ರಕರಣದಲ್ಲಿ ನವದೀಪ್ ಮತ್ತು ಗುರ್ಕೀರತ್ ಅವರನ್ನು ಫೆಬ್ರವರಿ 28ರಂದು ಮೊಹಾಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಬಂಧಿಸಲಾಗಿದ್ದರೆ, ಅನೀಶ್ ಖಟ್ಕರ್ ಅವರನ್ನು ಮಾರ್ಚ್ 19ರಂದು ಹರಿಯಾಣ ಪೊಲೀಸರು ಬಂಧಿಸಿದ್ದರು. ಅನೀಶ್ ಖಟ್ಕರ್ ಬಂಧನವಾದಾಗಿನಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ ಮತ್ತು ಅವರ ಆರೋಗ್ಯವು ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ರೈತ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Farmers protest: ಪ್ರತಿಭಟನಾನಿರತ ರೈತ ಶುಭ್ ಕರಣ್ ಸಿಂಗ್ ಮರಣೋತ್ತರ ಪರೀಕ್ಷಾ ವರದಿ ಬಹಿರಂಗ; ಸಾವಿಗೆ ಕಾರಣವಾಗಿದ್ದೇನು?

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸಂಘಟನೆ ʼದೆಹಲಿ ಚಲೋ’ ಮೆರವಣಿಗೆಯನ್ನು ನಡೆಸುತ್ತಿದೆ. ಪಂಜಾಬ್- ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ ವೇಳೆ ಈ ವರ್ಷದ ಫೆಬ್ರವರಿಯಲ್ಲಿ 22 ವರ್ಷದ ರೈತ ಶುಭಕರನ್ ಸಿಂಗ್ ಮೃತಪಟ್ಟಿದ್ದರು.

Continue Reading

ದೇಶ

Dalit Student: ದೇಶ, ರಾಮನ ವಿರೋಧ; ದಲಿತ ಪಿಎಚ್‌.ಡಿ ವಿದ್ಯಾರ್ಥಿಯ ಅಮಾನತು!

Dalit Student: ಮುಂಬೈನಲ್ಲಿರುವ ಟಾಟಾ ಇನ್‌ಸ್ಟಿಟ್ಯೂಟ್‌ ಆಫ್‌ ಸೋಷಿಯಲ್‌ ಸೈನ್ಸಸ್‌ ಸಂಸ್ಥೆಯಲ್ಲಿ ಪಿಎಚ್‌.ಡಿ ಅಧ್ಯಯನ ಮಾಡುತ್ತಿದ್ದ ದಲಿತ ವಿದ್ಯಾರ್ಥಿಯನ್ನು ಆಡಳಿತ ಮಂಡಳಿಯು ಎರಡು ವರ್ಷಗಳವರೆಗೆ ಅಮಾನತು ಮಾಡಿದೆ. ಈತನನ್ನು ಸಂಸ್ಥೆಯ ಹೆಸರಿನಲ್ಲಿ ಪ್ರತಿಭಟನೆ ನಡೆಸಿದ್ದು ಸೇರಿ ಹಲವು ಕಾರಣಗಳಿಂದಾಗಿ ಅಮಾನತುಗೊಳಿಸಲಾಗಿದೆ. ಎರಡು ವರ್ಷಗಳವರೆಗೆ ಈತನು ಕ್ಯಾಂಪಸ್‌ನೊಳಗೆ ಪ್ರವೇಶಕ್ಕೂ ನಿರ್ಬಂಧಿಸಲಾಗಿದೆ.

VISTARANEWS.COM


on

Dalit Student
Koo

ಮುಂಬೈ: ಟಾಟಾ ಇನ್‌ಸ್ಟಿಟ್ಯೂಟ್‌ ಆಫ್‌ ಸೋಷಿಯಲ್‌ ಸೈನ್ಸಸ್‌ (TISS) ಸಂಸ್ಥೆಯು ಪಿಎಚ್‌.ಡಿ ಅಧ್ಯಯನ ಮಾಡುತ್ತಿರುವ ದಲಿತ ವಿದ್ಯಾರ್ಥಿಯೊಬ್ಬನನ್ನು (Dalit Student) ಎರಡು ವರ್ಷಗಳವರೆಗೆ ಅಮಾನತು ಮಾಡಿದೆ. ದೇಶ ಹಾಗೂ ಭಗವಾನ್‌ ಶ್ರೀರಾಮನ ವಿರುದ್ಧದ ಕೃತ್ಯಗಳಿಂದಾಗಿ ರಾಮದಾಸ್‌ ಪ್ರಿನಿ ಶಿವನದನ್‌ (Ramadas Prini Sivanadan) ಎಂಬ ವಿದ್ಯಾರ್ಥಿಯನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈಗ ಟಿಐಎಸ್‌ಎಸ್‌ ಕ್ರಮದ ಕುರಿತು ಪರ-ವಿರೋಧ ಚರ್ಚೆಯಾಗುತ್ತಿವೆ. ಕೆಲ ವಿದ್ಯಾರ್ಥಿ ಸಂಘಟನೆಗಳು ಟಿಐಎಸ್‌ಎಸ್‌ ಕ್ರಮವನ್ನು ಖಂಡಿಸಿವೆ.

ಕೇರಳದ ವಯನಾಡು ಮೂಲದ ರಾಮದಾಸ್‌ ಪ್ರಿನಿ ಶಿವನದನ್‌ ಎಂಬಾತನನ್ನು ಎರಡು ವರ್ಷಗಳವರೆಗೆ ಅಮಾನತುಗೊಳಿಸಿ ಸಂಸ್ಥೆಯ ಆಡಳಿತ ಮಂಡಳಿಯು ಆದೇಶ ಹೊರಡಿಸಿದೆ. ಮುಂಬೈನಲ್ಲಿರುವ ಟಿಐಎಸ್‌ಎಸ್‌ ಕ್ಯಾಂಪಸ್‌ನಲ್ಲಿ ಈತನು ಡೆವಲಪ್‌ಮೆಂಟ್‌ ಸ್ಟಡೀಸ್‌ ವಿಭಾಗದಲ್ಲಿ ಪಿಎಚ್‌.ಡಿ ಅಧ್ಯಯನ ಮಾಡುತ್ತಿದ್ದ. ಈತನ ಅಮಾನತು ಮಾತ್ರವಲ್ಲ, ಕ್ಯಾಂಪಸ್‌ ಪ್ರವೇಶಕ್ಕೂ ಆಡಳಿತ ಮಂಡಳಿಯು ನಿರ್ಬಂಧ ವಿಧಿಸಿದೆ.

ಟಿಐಎಸ್‌ಎಸ್‌ ಹೇಳುವುದೇನು?

ಟಿಐಎಸ್‌ಎಸ್‌ ಕ್ಯಾಂಪಸ್‌ನಲ್ಲಿ ಒಬ್ಬ ವಿದ್ಯಾರ್ಥಿಯ ವರ್ತನೆ ಹೇಗಿರಬೇಕು ಎಂಬ ನಿಯಮಗಳ ವಿರುದ್ಧ ರಾಮದಾಸ್‌ ಪ್ರಿನಿ ಶಿವನದನ್‌ ನಡೆದುಕೊಂಡಿದ್ದಾರೆ. ಇದೇ ಕಾರಣಕ್ಕಾಗಿ, ಕಳೆದ ಮಾರ್ಚ್‌ 7ರಂದು ರಾಮದಾಸ್‌ ಪ್ರಿನಿ ಶಿವನದನ್‌ಗೆ ಸಂಸ್ಥೆಯು ಶೋಕಾಸ್‌ ನೋಟಿಸ್ ಹೊರಡಿಸಿತ್ತು. ಇದಾದ ಬಳಿಕ ಅಂದರೆ, ಏಪ್ರಿಲ್‌ 18ರಂದು ರಾಮದಾಸ್‌ ಪ್ರಿನಿ ಶಿವನದನ್‌ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಸಂಸ್ಥೆಯ ನಿಯಮಗಳ ವಿರುದ್ಧವಾಗಿ ನಡೆದುಕೊಂಡಿರುವುದು, ಅಶಿಸ್ತು ಸೇರಿ ಹಲವು ಕಾರಣಗಳಿಂದಾಗಿ ಅಮಾನತುಗೊಳಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ರಾಮದಾಸ್‌ ಪ್ರಿನಿ ಶಿವನದನ್‌ ಹಿನ್ನೆಲೆ ಏನು?

ಎಡಪಂಥೀಯ ಸಿದ್ಧಾಂತಗಳಿಂದ ಪ್ರೇರೇಪಿತವಾಗಿ ಕಟ್ಟಿರುವ ಪ್ರೊಗ್ರೆಸ್ಸಿವ್‌ ಸ್ಟುಡೆಂಟ್ಸ್‌ ಫೋರಂ (PSF) ಸಂಘಟನೆಗೆ ರಾಮದಾಸ್‌ ಪ್ರಿನಿ ಶಿವನದನ್‌ ಪ್ರಧಾನ ಕಾರ್ಯದರ್ಶಿಯಾಗಿದ್ದಾನೆ. ಕಳೆದ ಜನವರಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆಯಲ್ಲಿ ಟಿಐಎಸ್‌ಎಸ್‌ ಸಂಸ್ಥೆಯಲ್ಲಿ ಹೆಸರಿನಲ್ಲಿ ಸಂಸತ್ತಿನ ಎದುರು ಈತನ ನೇತೃತ್ವದಲ್ಲಿಯೇ ಪ್ರತಿಭಟನೆ ನಡೆಸಲಾಗಿದೆ. ಅಲ್ಲದೆ, ಶ್ರೀರಾಮನ ಕುರಿತು ಬಿಬಿಸಿಯು ಕೆಟ್ಟದಾಗಿ ಚಿತ್ರಿಸಿರುವ ಡಾಕ್ಯುಮೆಂಟರಿಯೊಂದನ್ನು ಕೂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಕೂಡ ಚರ್ಚೆಗೆ ಗ್ರಾಸವಾಗಿತ್ತು. ಆದರೆ, ಈತನ ವಿರುದ್ಧ ದೇಶವಿರೋಧದ ಆರೋಪ ಏಕೆ ಬಂದಿದೆ ಎಂಬುದಕ್ಕೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿ (NEP) ಜಾರಿ ಖಂಡಿಸಿಯೂ ಈತ ಪ್ರತಿಭಟನೆ ನಡೆಸಿದ್ದ ಎನ್ನಲಾಗಿದೆ.

ಇದನ್ನೂ ಓದಿ: ನಾಟಕದಲ್ಲಿ ಸೀತೆ ಧೂಮಪಾನ ಮಾಡುವ ದೃಶ್ಯ; ಪ್ರೊಫೆಸರ್‌ ಸೇರಿ 6 ವಿದ್ಯಾರ್ಥಿಗಳ ಬಂಧನ

Continue Reading

ದೇಶ

Lok Sabha Election: ನಿನ್ನೆ ಈ ಗ್ರಾಮದ ಒಬ್ಬರೂ ಮತ ಹಾಕಲಿಲ್ಲ; ಇದ್ದಿದ್ದು ಯಾರ ಭಯ?

Lok Sabha Election: ಛತ್ತೀಸ್‌ಗಢದ ಪುವರ್ತಿ ಗ್ರಾಮದಲ್ಲಿ 352 ಮತದಾರರಿದ್ದಾರೆ. ಗ್ರಾಮಕ್ಕೆ ತೆರಳಿದ ಚುನಾವಣೆ ಅಧಿಕಾರಿಗಳು ಮತದಾನಕ್ಕಾಗಿ ಎಲ್ಲ ವ್ಯವಸ್ಥೆ ಮಾಡಿದ್ದರು. ಮತಗಟ್ಟೆ ಬಳಿ ಭದ್ರತಾ ಸಿಬ್ಬಂದಿಯು ಸಕಲ ರೀತಿಯಲ್ಲಿ ಭದ್ರತೆ ಒದಗಿಸಿದ್ದರು. ಇಷ್ಟಾದರೂ ಗ್ರಾಮದ ಒಬ್ಬನೇ ಒಬ್ಬ ಮತದಾರ ಹಕ್ಕು ಚಲಾಯಿಸಿಲ್ಲ ಎಂದು ಚುನಾವಣೆ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಮಾವೋವಾದಿ ನಾಯಕನ ಭಯದಿಂದಾಗಿ ಜನ ಮತದಾನ ಮಾಡಿಲ್ಲ ಎಂದು ತಿಳಿದುಬಂದಿದೆ.

VISTARANEWS.COM


on

Lok Sabha Election
Koo

ರಾಯ್‌ಪುರ: ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಶುಕ್ರವಾರ (ಏಪ್ರಿಲ್‌ 19) ಮುಕ್ತಾಯಗೊಂಡಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, ಶೇ.60ರಷ್ಟು ಮತದಾನ ದಾಖಲಾಗಿದೆ. ಕೆಲವು ಪ್ರದೇಶಗಳು ಹೊರತುಪಡಿಸಿ ಎಲ್ಲೆಡೆ ಶಾಂತಿಯುತವಾಗಿಯೇ ಮತದಾನ ನಡೆದಿದೆ. ಆದರೆ, ಛತ್ತೀಸ್‌ಗಢದ ಬಸ್ತಾರ್‌ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಪುವರ್ತಿ ಎಂಬ ಗ್ರಾಮದಲ್ಲಿ (Puvarti Village) ಮಾತ್ರ ಶುಕ್ರವಾರ ಒಬ್ಬರೇ ಒಬ್ಬರು ಮತದಾನ ಮಾಡಿಲ್ಲ. ಇದು ಮಾವೋವಾದಿಯೊಬ್ಬನ ಊರಾಗಿದ್ದು, ಆತನ ಭಯದಿಂದಾಗಿಒಬ್ಬರೂ ಮತದಾನ ಮಾಡಲ್ಲ ಎಂದು ತಿಳಿದುಬಂದಿದೆ.

ಹೌದು, ಪುವರ್ತಿ ಗ್ರಾಮವು ನಕ್ಸಲ್‌ ನಾಯಕ ಹಿದ್ಮಾ ಎಂಬಾತನ ಹುಟ್ಟೂರಾಗಿದೆ. ಇಡೀ ಬಸ್ತಾರ್‌ ವ್ಯಾಪ್ತಿಯಲ್ಲಿ ಹಿದ್ಮಾನ ಪ್ರಭಾವ ಇದೆ. ಈತನ ಭಯವು ಜನರಲ್ಲಿ ಹೆಚ್ಚು ಕಾಡುತ್ತಿದೆ.‌ ಬಸ್ತಾರ್‌ ಪ್ರದೇಶದಲ್ಲಿಯೇ ಎಲ್ಲಿಯೇ ಮಾವೋವಾದಿಗಳ ದಾಳಿಯಾಗಲಿ, ಭದ್ರತಾ ಸಿಬ್ಬಂದಿ ಸೇರಿ ಸಾರ್ವಜನಿಕರ ಹತ್ಯೆಯಾಗಲಿ, ಆಗೆಲ್ಲ ಹಿದ್ಮಾನ ಹೆಸರೇ ಮುನ್ನೆಲೆಗೆ ಬರುತ್ತದೆ. ಈತನೇ ದಾಳಿಯ ರೂವಾರಿ ಎಂಬುದು ಜನರ ದೃಢ ನಂಬಿಕೆಯಾಗಿರುತ್ತದೆ. ಇದೇ ಕಾರಣಕ್ಕಾಗಿ, ಪುವರ್ತಿ ಗ್ರಾಮದಲ್ಲಿ ಶುಕ್ರವಾರ ಮತದಾನಕ್ಕೆ ಸಕಲ ವ್ಯವಸ್ಥೆ ಮಾಡಿದರೂ, ಭದ್ರತಾ ಸಿಬ್ಬಂದಿಯು ಹೆಚ್ಚು ಭದ್ರತೆ ಒದಗಿಸಿದರೂ ಯಾರೊಬ್ಬರೂ ಮತದಾನ ಮಾಡದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ದೊಡ್ಡ ಅಣಕವಾಗಿದೆ.

ಕೆಲವೆಡೆ ಇವಿಎಂ ದೋಷ

ತಮಿಳುನಾಡು, ಅರುಣಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಸ್ಸಾಂನ ಕೆಲವು ಬೂತ್ ಗಳಲ್ಲಿ ಸಣ್ಣ ಪ್ರಮಾಣದ ಇವಿಎಂ ದೋಷಗಳು ವರದಿಯಾಗಿವೆ. ಪಶ್ಚಿಮ ಬಂಗಾಳದಲ್ಲಿ ಸಂಜೆ 5 ಗಂಟೆಯವರೆಗೆ ಶೇಕಡಾ 77.57, ಅಸ್ಸಾಂನಲ್ಲಿ ಶೇಕಡಾ 70.77 ಮತ್ತು ಮೇಘಾಲಯದಲ್ಲಿ ಶೇಕಡಾ 69.91 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

Lok sabha election-2024

ಪಶ್ಚಿಮ ಬಂಗಾಳದಲ್ಲಿ ಹಿಂಸಾಸಾರ

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಕ್ಷೇತ್ರದಲ್ಲಿ ಹಿಂಸಾಚಾರ ನಡೆದಿದೆ. ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘರ್ಷಣೆ ನಡೆಸಿದ್ದು, ಮತದಾನ ಹಿಂಸಾಚಾರ, ಮತದಾರರ ಬೆದರಿಕೆ ಮತ್ತು ಚುನಾವಣಾ ಏಜೆಂಟರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಕ್ರಮವಾಗಿ 80 ಮತ್ತು 39 ದೂರುಗಳನ್ನು ದಾಖಲಾಗಿವೆ. ಸಂಘರ್ಷ ಪೀಡಿತ ಮಣಿಪುರದಲ್ಲಿ ಸಂಜೆ 5 ಗಂಟೆಯವರೆಗೆ ಶೇ.67.46ರಷ್ಟು ಮತದಾನವಾಗಿದೆ.

ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಥೊಂಗ್ಜು ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯರು ಮತ್ತು ಅಪರಿಚಿತ ವ್ಯಕ್ತಿಗಳ ನಡುವೆ ವಾಗ್ವಾದ ನಡೆದಿದೆ. ಛತ್ತೀಸ್​ಗಢದ ನಕ್ಸಲ್ ಪೀಡಿತ ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 63.41 ರಷ್ಟು ಮತದಾರರು ಮತ ಚಲಾಯಿಸಿದ್ದಾರೆ. ಅಲ್ಲಿ ಗ್ರೆನೇಡ್ ಆಕಸ್ಮಿಕವಾಗಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಿಆರ್​ಪಿಎಫ್​ ಜವಾನ ಗಾಯಗೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಐಇಡಿ ಸ್ಫೋಟ ಸಂಭವಿಸಿದೆ.

ಇದನ್ನೂ ಓದಿ: Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Continue Reading

ಪ್ರಮುಖ ಸುದ್ದಿ

Trust Of The Nation 2024 : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತ; ಡೈಲಿಹಂಟ್ ಸಮೀಕ್ಷೆ

Trust Of The Nation 2024: ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 61% ಜನರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಗ್ಗೆ ತುಂಬಾ ಸಂತೋಷವಾಗಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಅಭಿಪ್ರಾಯಗಳನ್ನು ಭಾರತದಾದ್ಯಂತ ವಿವಿಧ ಜನ ಸಮುದಾಯ ಮತ್ತು ವೃತ್ತಿಪರ ಗುಂಪುಗಳಿಂದ ಸಂಗ್ರಹಿಸಲಾಗಿದೆ. ಹೀಗಾಗಿ ಅಭಿಪ್ರಾಯಗಳು ಬಹುತೇಕ ಜನರ ಇಂಗಿತದ ಪ್ರತಿಫಲನವಾಗಿದೆ.

VISTARANEWS.COM


on

Trust Of The Nation 2024
Koo

ನವದೆಹಲಿ: 2024 ರ ಲೋಕಸಭಾ ಚುನಾವಣೆಯ (Lok Sabha Election) ಮೊದಲ ಹಂತ ಏಪ್ರಿಲ್​ 19ರಂದು ನಡೆದಿದೆ. ಇನ್ನೂ ಆರು ಹಂತಗಳ ಮತದಾನ ಪ್ರಕ್ರಿಯೆ ಬಾಕಿ ಉಳಿದಿದೆ. ಮತದಾನ ಜಾತ್ರೆಯ ಹಿನ್ನೆಲೆಯಲ್ಲಿ ಸ್ಥಳೀಯ ಭಾಷೆಗಳ ಕಂಟೆಂಟ್​ ಡಿಸ್ಕವರಿ ಫ್ಲ್ಯಾಟ್​ಫಾರ್ಮ್​ “ಡೈಲಿಹಂಟ್’ (Trust Of The Nation 2024) ನಡೆಸಿದ “ಟ್ರಸ್ಟ್ ಆಫ್ ದಿ ನೇಷನ್” ಸಮೀಕ್ಷೆಯು ಭಾರತದ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬುದನ್ನು ಬಹಿರಂಗ ಮಾಡಿದೆ. 77 ಲಕ್ಷಕ್ಕೂ ಹೆಚ್ಚು ಮತದಾರರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು ಭಾರತದ ಉತ್ತಮ ನಾಯಕತ್ವ, ಸಮರ್ಥ ಆರ್ಥಿಕ ನಿರ್ವಹಣೆ ಮತ್ತು ಪ್ರಸ್ತುತ ಸರ್ಕಾರದ ಒಟ್ಟಾರೆ ಕಾರ್ಯಕ್ಷಮತೆಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯಗಳ ಇಲ್ಲ ವ್ಯಕ್ತಗೊಂಡಿವೆ. ಈ ಸಮೀಕ್ಷೆಯ ಸಮಗ್ರ ವಿವರ ಈ ಕೆಳಗೆ ನೀಡಲಾಗಿದೆ.

ಸರ್ಕಾರ ಮತ್ತು ಪ್ರಧಾನಿ ಮೋದಿ ನಾಯಕತ್ವಕ್ಕೆ ಜನರ ಮೆಚ್ಚುಗೆ

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 61% ಜನರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಗ್ಗೆ ತುಂಬ ಸಂತೋಷವಾಗಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಅಭಿಪ್ರಾಯಗಳನ್ನು ಭಾರತದಾದ್ಯಂತ ವಿವಿಧ ಜನ ಸಮುದಾಯ ಮತ್ತು ವೃತ್ತಿಪರ ಗುಂಪುಗಳಿಂದ ಸಂಗ್ರಹಿಸಲಾಗಿದೆ. ಹೀಗಾಗಿ ಅಭಿಪ್ರಾಯಗಳು ಬಹುತೇಕ ಜನರ ಇಂಗಿತದ ಪ್ರತಿಫಲನವಾಗಿದೆ. ಕೆಲವು ಪ್ರದೇಶಗಳಲ್ಲಿ ಗೃಹಿಣಿಯರು ಮತ್ತು ಉದ್ಯಮಿಗಳ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತಗೊಂಡಿವೆ.

ಈ ಬಾರಿಯ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ?

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಶೇ.63ರಷ್ಟು ಮಂದಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ವಿವರವಾದ ಅಂಕಿ ಅಂಶಗಳು ಪಿಎಂ ಮೋದಿಯವರನ್ನು ಭಾರತದ ಬಹುತೇಕ ರಾಜ್ಯಗಳ ಜನರು ತಮ್ಮ ನೆಚ್ಚಿನ ನಾಯಕ ಎಂದು ಒಪ್ಪಿಕೊಂಡಿದ್ದಾರೆ. ಈ ವಿಚಾರದಲ್ಲಿ ತಮಿಳುನಾಡು ಮತ್ತು ಕೇರಳದಲ್ಲಿ ವ್ಯತಿರಿಕ್ತ ಅಭಿಪ್ರಾಯಗಳು ಮೂಡಿ ಬಂದಿವೆ.

ಪ್ರಧಾನಿ ಮೋದಿಯ ಆರ್ಥಿಕ ಪ್ರಗತಿ ಯೋಜನೆಗೆ ಜನರ ಮೆಚ್ಚುಗೆ

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸರ್ಕಾರವು ಆರ್ಥಿಕತೆಯನ್ನು ನಿರ್ವಹಿಸಿದ ರೀತಿಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ, 60% ರಷ್ಟು ಜನರು ದೇಶದ ಆರ್ಥಿಕ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆಯು ನಡೆದ ಬಹುತೇಕ ಸ್ಥಳಗಳಲ್ಲಿ ಈ ಅಭಿಪ್ರಾಯವೇ ದೊರಕಿದೆ. ಆದರೂ ದಕ್ಷಿಣದ ಕೆಲವು ರಾಜ್ಯಗಳು ಅದೇ ಉತ್ಸಾಹವನ್ನು ತೋರಿಸಿಲ್ಲ. ಇದು ಪ್ರಾದೇಶಿಕ ಆರ್ಥಿಕ ಅಸಮಾನತೆಯ ಕೂಗು ವ್ಯಕ್ತಗೊಂಡಿದೆ.

‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’: ಮತ್ತೆ ಬೇಕು ಮೋದಿ

ಶೇ.64ರಷ್ಟು ಮಂದಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಿ ಮುಂದುವರಿಯಬೇಕು ಎಂದು ಬಯಸಿದ್ದಾರೆ. ಯುವ ಮತದಾರರಿಂದ ಹಿಡಿದು ನಿವೃತ್ತರ ತನಕ ಪ್ರಧಾನಿ ಮೋದಿಯವರ ವಿಶಾಲ ಆಕರ್ಷಣೆಯನ್ನು ಪ್ರದರ್ಶಿಸಿದೆ. ಇದು ರಾಷ್ಟ್ರೀಯ ನಾಯಕರಾಗಿ ಅವರ ಶಕ್ತಿಯನ್ನು ಹೇಳಿದೆ.

ವಿದೇಶಾಂಗ ನೀತಿ ನಿರ್ಧಾರಗಳಿಗೆ ರಾಷ್ಟ್ರದ ಒಮ್ಮತ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪಾಲಿಸುತ್ತಿರುವ ವಿದೇಶಾಂಗ ನೀತಿಗೆ ಸಮೀಕ್ಷೆಯಲ್ಲಿ ಗಣನೀಯ ಬೆಂಬಲ ದೊರೆತಿದೆ. ಅಂತಾರಾಷ್ಟ್ರೀಯ ವ್ಯವಹಾರಗಳನ್ನು ನಿರ್ವಹಿಸುವಲ್ಲಿ ಸರ್ಕಾರದ ಕಾರ್ಯಕ್ಷಮತೆ ಉತ್ತಮವಾಗಿದೆ ಎಂದು 64% ಜನರು ರೇಟಿಂಗ್ ನೀಡಿದ್ದಾರೆ. ಇದು ಸರ್ಕಾರದ ರಾಜತಾಂತ್ರಿಕ ಕಾರ್ಯತಂತ್ರಗಳು ಮತ್ತು ಅಂತಾರಾಷ್ಟ್ರೀಯ ಸಂಬಂಧಗಳಿಗೆ ವ್ಯಾಪಕ ಬೆಂಬಲ ದೊರಕಿದೆ

ರಾಷ್ಟ್ರೀಯ ಬಿಕ್ಕಟ್ಟುಗಳ ಸ್ಪಂದನೆಗೂ ಶಹಬ್ಬಾಸ್​

ರಾಷ್ಟ್ರೀಯ ಬಿಕ್ಕಟ್ಟಿನ ಸಮಯದಲ್ಲಿ ಪ್ರಧಾನಿ ಮೋದಿಯವರ ನಾಯಕತ್ವವನ್ನು ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಹೆಚ್ಚಿನವರು ಶ್ಲಾಘಿಸಿದ್ದಾರೆ. 63.6% ಜನರು ತುಂಬಾ ಸಂತೋಷವಾಗಿದ್ದಾರೆ. ಪ್ರಕ್ಷುಬ್ಧ ಸಮಯದಲ್ಲಿ ಪಿಎಂ ಮೋದಿಯವರ ಆಡಳಿತದ ಚಾತುರ್ಯವನ್ನು ಸಮೀಕ್ಷೆಯಲ್ಲಿ ಪಾಲ್ಗೊಂಡವರು ಶಹಬ್ಬಾಸ್ ಎಂದಿದ್ದಾರೆ.

ಸರ್ಕಾರದ ಕಲ್ಯಾಣ ಯೋಜನೆಗಳಿಗೆ ಆಭಾರಿ

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಅರ್ಧಕ್ಕಿಂತ ಹೆಚ್ಚು, ಅಂದರೆ 53.9% ಕ್ಕಿಂತ ಹೆಚ್ಚು, ಸರ್ಕಾರ ಕೈಗೊಂಡ ಕಲ್ಯಾಣ ಯೋಜನೆಗಳು ಮತ್ತು ಜನಪರ ಚಟುವಟಿಕೆಗಳಿಂದ ಸಂತೋಷವಾಗಿದ್ದಾರೆ. ನಿವೃತ್ತ ವ್ಯಕ್ತಿಗಳು ಮತ್ತು ವಿದ್ಯಾರ್ಥಿಗಳು ನೀಡಿರುವ ಬೆಂಬಲ ಗಮನಾರ್ಹವಾಗಿ ಹೆಚ್ಚಾಗಿದೆ, ಎರಡೂ ಗುಂಪುಗಳು ಸುಮಾರು 59% ತೃಪ್ತಿ ಮಟ್ಟವನ್ನು ತೋರಿಸಿವೆ. ಈ ಗುಂಪುಗಳಿಗೆ ನೇರವಾಗಿ ಪ್ರಯೋಜನವಾಗುವ ನಿರ್ದಿಷ್ಟ ಕಾರ್ಯಕ್ರಮಗಳ ಪರಿಣಾಮ ಇದು. ಉದಾಹರಣೆಗೆ; ವಯಸ್ಸಾದವರಿಗೆ ಪಿಂಚಣಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಬ್ಸಿಡಿಗಳು.

ಮೋದಿಯ ಭ್ರಷ್ಟಾಚಾರ ವಿರೋಧಿ ಕ್ರಮ

ಮೋದಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸರ್ಕಾರದ ಕ್ರಮಕ್ಕೆ ಶೇ.63.5ರಷ್ಟು ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಜನಸಂಖ್ಯಾ ದೃಷ್ಟಿಕೋನದಿಂದ, ವಿದ್ಯಾರ್ಥಿಗಳು (59%) ಮತ್ತು ನಿವೃತ್ತ (59%) ವ್ಯಕ್ತಿಗಳು ಉದ್ಯಮಿಗಳು ಹೆಚ್ಚು ಸಂತೋಷ ವ್ಯಕ್ತಪಡಿಸಿದ್ದಾರೆ.

ಕಠಿಣ ಪರಿಶ್ರಮಿ ಮತ್ತು ಪ್ರಾಮಾಣಿಕ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರ ಗುಣ ಲಕ್ಷಣಗಳ ಬಗ್ಗೆಯೂ ಪ್ರಶ್ನೆ ಕೇಳಲಾಗಿತ್ತು. ಪ್ರಮುಖವಾಗಿ ಅವರ ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮಕ್ಕೆ ಬೆಂಬಲ ದೊರಕಿದೆ. ಶೇ.41ರಷ್ಟು ಮಂದಿ ಅವರ ಈ ಗುಣವನ್ನು ಮೆಚ್ಚಿದ್ದಾರೆ. ನಿವೃತ್ತರು ಮತ್ತು ವಿದ್ಯಾರ್ಥಿಗಳಲ್ಲಿ ಈ ಮೆಚ್ಚುಗೆ ವಿಶೇಷವಾಗಿ ವ್ಯಕ್ತಗೊಂಡಿದೆ. ಕ್ರಮವಾಗಿ 47% ಮತ್ತು 43% ಜನರು ಪ್ರಧಾನಿ ಮೋದಿಯವರ ಸಮಗ್ರತೆ ಮತ್ತು ಶ್ರದ್ಧೆಯನ್ನು ಶ್ಲಾಘಿಸಿದ್ದಾರೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವ ಮತದಾರರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟವರು ಪ್ರಧಾನಿಯ ಈ ವ್ಯಕ್ತಿತ್ವದ ಬಗ್ಗೆ ಹೆಚ್ಚಿನ ಮೆಚ್ಚುಗೆ ತೋರಿದ್ದಾರೆ. ಅವರ ಪಾರದರ್ಶಕ ಮನಸ್ಸು ಮತ್ತು ಶ್ರಮದ ನೀತಿಯನ್ನು ಎತ್ತಿಹಿಡಿದಿದ್ದಾರೆ.

ಸಮೀಕ್ಷೆಯ ಅಂತಿಮ ಹೇಳಿಕೆ ಹೀಗಿದೆ

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ, ವಿಶೇಷವಾಗಿ ಆರ್ಥಿಕ ನಿರ್ವಹಣೆ, ವಿದೇಶಾಂಗ ನೀತಿ ಮತ್ತು ಬಿಕ್ಕಟ್ಟು ನಿರ್ವಹಣೆ ಬಗ್ಗೆ ಅತಿ ಹೆಚ್ಚು ಮೆಚ್ಚುಗೆ ಶುರುವಾಗಿದೆ. ಮೋದಿಯ ಆಡಳಿತದ ಬಗ್ಗೆ ತುಂಬಾ ಆಶಾವಾದಿಯಾಗಿರುವವರ ಪ್ರಮಾಣವೇ ಹೆಚ್ಚಿದೆ. ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮಿ ಎಂದು ಪರಿಗಣಿಸಲ್ಪಟ್ಟ ನಾಯಕನಾಗಿ ಪ್ರಧಾನಿ ಮೋದಿಯವರು ಭಾರತೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೋದಿ ನೇತೃತ್ವದಲ್ಲಿ ಭಾರತವು ಸಂಕೀರ್ಣ ದೇಶೀಯ ಮತ್ತು ಅಂತಾರರಾಷ್ಟ್ರೀಯ ಸಮಸ್ಯೆಗಳನ್ನು ನಿರ್ವಹಣೆ ಮಾಡಿರುವುದು ಕೂಡ ಜನ ಮೆಚ್ಚುಗೆ ಗಳಿಸಿದೆ.

Continue Reading
Advertisement
Modi in Karnataka Bomb blasts and Neha murder case Modi attacks Congress government
Lok Sabha Election 202425 mins ago

Modi in Karnataka: ಬಾಂಬ್ ಸ್ಫೋಟ, ನೇಹಾ ಹತ್ಯೆ ಪ್ರಕರಣ; ಕಾಂಗ್ರೆಸ್ ಸರ್ಕಾರದ ವಿರುದ್ಧ ಮೋದಿ ವಾಗ್ದಾಳಿ

Farmers Protest
ದೇಶ29 mins ago

Farmers Protest: ರೈತರ ಪ್ರತಿಭಟನೆ; ಅಂಬಾಲಾ-ಅಮೃತಸರ ಮಾರ್ಗದ 54 ರೈಲು ಸಂಚಾರ ರದ್ದು

Vinesh Phogat
ಕ್ರೀಡೆ40 mins ago

Vinesh Phogat: ಖೇಲ್ ರತ್ನ ಪ್ರಶಸ್ತಿಯನ್ನು ಪಾದಚಾರಿ ಮಾರ್ಗದಲ್ಲಿ ತೊರೆದಿದ್ದ ವಿನೇಶ್ ಫೋಗಟ್​ಗೆ ಒಲಿದ ಒಲಿಂಪಿಕ್ಸ್​ ಟಿಕೆಟ್​

Dalit Student
ದೇಶ41 mins ago

Dalit Student: ದೇಶ, ರಾಮನ ವಿರೋಧ; ದಲಿತ ಪಿಎಚ್‌.ಡಿ ವಿದ್ಯಾರ್ಥಿಯ ಅಮಾನತು!

Apricot Benefits
ಆರೋಗ್ಯ55 mins ago

Apricot Benefits: ನಿಮಗೆ ಇಂತಹ ಸಮಸ್ಯೆಗಳಿವೆಯೇ?: ಹಾಗಾದರೆ ನಿತ್ಯವೂ ಆಪ್ರಿಕಾಟ್‌ ತಿನ್ನಿ!

Family health insurance
ಮನಿ ಗೈಡ್55 mins ago

Money Guide: ಕುಟುಂಬಕ್ಕಾಗಿ ಆರೋಗ್ಯ ವಿಮೆ; ಖರೀದಿ ಮುನ್ನ ತಿಳಿದಿರಲಿ ಕೆಲವು ವಿಚಾರ

Modi in Karnataka
ಪ್ರಮುಖ ಸುದ್ದಿ60 mins ago

Modi in Karnataka: ಪ್ರಧಾನಿ ಮೋದಿ ತೆರಳುವಾಗ ಚೆಂಬು ಪ್ರದರ್ಶನ; ನಲಪಾಡ್‌ ಸೇರಿ ಹಲವರು ವಶಕ್ಕೆ

Modi in Karnataka Govt turns tax city Bengaluru into tanker city and attacks girls too PM Narendra Modi
ಕರ್ನಾಟಕ2 hours ago

Modi in Karnataka: ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ

Kalki 2898 AD
ಸಿನಿಮಾ2 hours ago

Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼ ಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

Lok Sabha Election
ದೇಶ2 hours ago

Lok Sabha Election: ನಿನ್ನೆ ಈ ಗ್ರಾಮದ ಒಬ್ಬರೂ ಮತ ಹಾಕಲಿಲ್ಲ; ಇದ್ದಿದ್ದು ಯಾರ ಭಯ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 hours ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20246 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ7 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ8 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌