Site icon Vistara News

Rahul Gandhi: ಅಮೆರಿಕದಲ್ಲಿ ರಾಹುಲ್‌ ಗಾಂಧಿ ಭಾಷಣದ ವೇಳೆ ಖಲಿಸ್ತಾನ್‌ ಜಿಂದಾಬಾದ್‌ ಘೋಷಣೆ; ವಿಡಿಯೊ ವೈರಲ್

Rahul Gandhi

When Will Congress Leader Rahul Gandhi Return To Parliament? All Eyes On Speaker Now

ಸ್ಯಾನ್‌ ಫ್ರಾನ್ಸಿಸ್ಕೋ: ‌ಅಮೆರಿಕದ ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ಆಯೋಜಿಸಿದ್ದ ʼಮೊಹಬ್ಬತ್‌ ಕಿ ದುಕಾನ್ʼ‌ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಮಾತನಾಡಿದ್ದಾರೆ. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ, ನರೇಂದ್ರ ಮೋದಿ ಅವರ ಆಡಳಿತ ವೈಖರಿ ಕುರಿತು ಟೀಕೆ, ತನಿಖಾ ಸಂಸ್ಥೆಗಳ ದುರ್ಬಳಕೆ ಸೇರಿ ಹಲವು ವಿಷಯಗಳನ್ನು ಮಾತನಾಡಿದ್ದಾರೆ. ಆದರೆ, ರಾಹುಲ್‌ ಗಾಂಧಿ ಅವರು ಭಾಷಣ ಮಾಡುವ ಮಧ್ಯೆಯೇ, ಒಂದಷ್ಟು ಜನ ಖಲಿಸ್ತಾನ್‌ ಪ್ರತ್ಯೇಕ ರಾಷ್ಟ್ರದ ಪರ ಘೋಷಣೆ ಕೂಗಿದ್ದಾರೆ.

ರಾಹುಲ್‌ ಗಾಂಧಿ ಅವರು ಭಾಷಣ ಮಾಡುವ ಮಧ್ಯೆ ಖಲಿಸ್ತಾನ ಪರವಾಗಿ ಒಂದಷ್ಟು ಜನ ಘೋಷಣೆ ಕೂಗಿದ್ದಾರೆ. ಅಲ್ಲದೆ, ಖಲಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆಯನ್ನೂ ಅವರು ಕೂಗಿದ್ದಾರೆ. ಇದೇ ವೇಳೆ, ರಾಹುಲ್‌ ಗಾಂಧಿ ಅವರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲಾಗಿದೆ ಎಂದರೂ ಕೇಳದೆ ಖಲಿಸ್ತಾನ್‌ ಪರ ಘೋಷಣೆ ಕೂಗಲಾಗಿದೆ. ಈ ವಿಡಿಯೊ ವೈರಲ್‌ ಆಗಿದ್ದು, ಭಾರಿ ಟೀಕೆ ವ್ಯಕ್ತವಾಗಿವೆ.

ಇಲ್ಲಿದೆ ನೋಡಿ ವಿಡಿಯೊ

ರಾಷ್ಟ್ರಗೀತೆಗೆ ಅಗೌರವ

ರಾಹುಲ್‌ ಗಾಂಧಿ ಭಾಷಣಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಹಾಡಲಾಯಿತು. ರಾಷ್ಟ್ರಗೀತೆ ಮೊಳಗುತ್ತಿದ್ದರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೂರಾರು ಜನ ಎದ್ದು ನಿಂತು ಗೌರವ ಸೂಚಿಸದಿರುವ ಕುರಿತು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತ ವಿಡಿಯೊ ಕೂಡ ಈಗ ವೈರಲ್‌ ಆಗಿದೆ.

ಭಾಷಣದ ವೇಳೆ ರಾಹುಲ್‌ ಗಾಂಧಿ ಹಲವು ವಿಚಾರ ಪ್ರಸ್ತಾಪಿಸಿದರು. ಅಲ್ಪಸಂಖ್ಯಾತರ ಬಗ್ಗೆ ಮಾತನಾಡುತ್ತ, “1980ರ ದಶಕದಲ್ಲಿ ಉತ್ತರ ಪ್ರದೇಶ ಸೇರಿ ಹಲವೆಡೆ ದಲಿತರ ಮೇಲೆ ದೌರ್ಜನ್ಯ ನಡೆಯಿತು. ಈಗ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಬರೀ ಮುಸ್ಲಿಮರು ಮಾತ್ರವಲ್ಲ, ಸಿಖ್ಖರು, ಕ್ರೈಸ್ತರು, ದಲಿತರು ಹಾಗೂ ಬುಡಕಟ್ಟು ಸಮುದಾಯದವರು ಕೂಡ ಭಾರತದಲ್ಲಿ ಇಂತಹದ್ದೇ ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ. ಆದರೆ, ಯಾವಾಗಲೂ ದ್ವೇಷದಿಂದ ದ್ವೇಷವನ್ನು ತೊಲಗಿಸಲು ಸಾಧ್ಯವಿಲ್ಲ. ಪ್ರೀತಿಯಿಂದ ಮಾತ್ರ ದ್ವೇಷವನ್ನು ನಿರ್ಮೂಲನೆ ಮಾಡಲು ಸಾಧ್ಯ” ಎಂದು ಹೇಳಿದರು.

“ಮುಸ್ಲಿಮರು ಸೇರಿ ಎಲ್ಲ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ನಾವು ಹೋರಾಡಬೇಕಿದೆ. ಆದರೆ, ದ್ವೇಷದಿಂದ ಹೋರಾಟ ಮಾಡುವುದು ಕೂಡದು. ಪ್ರೀತಿಯಿಂದಲೇ ದ್ವೇಷವನ್ನು ಸೋಲಿಸೋಣ. ಇದಕ್ಕೆ ಕಾಂಗ್ರೆಸ್‌ ಕೂಡ ಬದ್ಧವಾಗಿದೆ. ಭಾರತದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಟ್ಟಿಗೊಳಿಸುವುದು ಕಾಂಗ್ರೆಸ್‌ನ ಪ್ರಮುಖ ಧ್ಯೇಯೋದ್ದೇಶವಾಗಿದೆ” ಎಂದು ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡುವಾಗ ತಿಳಿಸಿದರು.

ಇದನ್ನೂ ಓದಿ: Rahul Gandhi: 1980ರಲ್ಲಿ ದಲಿತರಿಗೆ ಆದಂತೆ ಈಗ ಮುಸ್ಲಿಮರ ಮೇಲೆ ದೌರ್ಜನ್ಯ; ಅಮೆರಿಕದಲ್ಲಿ ರಾಹುಲ್‌ ಗಾಂಧಿ ಚಾಟಿ

Exit mobile version