ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ಹಾಗೂ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಿಸಲು ಶಿಫಾರಸು ಮಾಡುವ ಕೊಲಿಜಿಯಂ (Collegium) ವ್ಯವಸ್ಥೆ ವಿಚಾರದಲ್ಲಿ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಮಧ್ಯೆ ಸಂಘರ್ಷ ಮುಂದುವರಿದಿದೆ. “ಗುಪ್ತಚರ ಸಂಸ್ಥೆಗಳಾದ ರಾ ಹಾಗೂ ಐಬಿ (Intelligence Bureau)ಗಳ ಸೂಕ್ಷ್ಮ ಮಾಹಿತಿಯನ್ನು ಸರ್ವೋಚ್ಚ ನ್ಯಾಯಾಲಯ ಬಹಿರಂಗಗೊಳಿಸಿದೆ” ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ವ್ಯವಸ್ಥೆಯು ರಾ ಹಾಗೂ ಐಬಿ ವರದಿಗಳ ಕೆಲ ಭಾಗಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಬಹಿರಂಗಗೊಳಿಸಿತ್ತು. ಹಾಗಾಗಿ, ಕಿರಣ್ ರಿಜಿಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಗುಪ್ತಚರ ಸಂಸ್ಥೆಗಳ ಅಧಿಕಾರಿಗಳು ಗೌಪ್ಯವಾಗಿ ಕಾರ್ಯನಿರ್ವಹಿಸುತ್ತಾರೆ. ಆದರೆ, ಅವರ ವರದಿಯ ಗೌಪ್ಯ ಮಾಹಿತಿಯನ್ನು ಬಹಿರಂಗಗೊಳಿಸುವುದು ಆತಂಕಕಾರಿಯಾಗಿದೆ. ಇದರ ಕುರಿತು ಸಮಯ ಬಂದಾಗ ಹೆಚ್ಚಿನ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.
ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕ ವಿಚಾರದಲ್ಲಿ ಕೇಂದ್ರ ಸರ್ಕಾರ ಹಾಗೂ ನ್ಯಾಯಾಂಗದ ಮಧ್ಯೆ ಸಂಘರ್ಷ ಏರ್ಪಟ್ಟಿದೆ. ಕೊಲಿಜಿಯಂ ಶಿಪಾರಸು ಮಾಡು ಹೆಸರುಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಸುಪ್ರೀಂ ಕೋರ್ಟ್ ಹಲವು ಬಾರಿ ಅಸಮಾಧಾನ ವ್ಯಕ್ತಪಡಿಸಿದೆ. ನಾವು ವಿಳಂಬ ಧೋರಣೆ ಅನುಸರಿಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಇದನ್ನೂ ಓದಿ: Narendra Modi: ಕೇಂದ್ರ, ನ್ಯಾಯಾಂಗ ಸಂಘರ್ಷದ ಬೆನ್ನಲ್ಲೇ ಸಿಜೆಐಗೆ ಮೋದಿ ಶ್ಲಾಘನೆ, ಏನಿದಕ್ಕೆ ಕಾರಣ?