Site icon Vistara News

Kolkata Doctor murder case: ವೈದ್ಯೆ ಕೊಲೆ ಕೇಸ್‌; ಪ್ರತಿಭಟನಾಕಾರರ ಮೇಲೆ ವಾಹನ ಹರಿಸಲು ಪೊಲೀಸ್‌ ಯತ್ನ?

Kolkata Doctor Murder Case

ಕೋಲ್ಕತ್ತಾ: ಕೋಲ್ಕತಾದಲ್ಲಿ ನಡೆದಿರುವ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ (Kolkata Doctor murder case) ವಿರುದ್ಧ ಭುಗಿಲೆದ್ದಿರುವ ವೈದ್ಯರ ಸಮೂಹದ ಆಕ್ರೋಶ, ಇದೀಗ ರಾಜ್ಯ ಸರಕಾರದ ವಿರುದ್ಧ ತಿರುಗಿದೆ. ವೈದ್ಯರ ಪ್ರತಿಭಟನೆಗೆ ಇದೀಗ ಬಿಜೆಪಿ ಮುಖಂಡರು(BJP Leaders) ಮತ್ತು ಕಾರ್ಯಕರ್ತರು ಕೈ ಜೋಡಿಸಿದ್ದು, ಮಮತಾ ಬ್ಯಾನರ್ಜಿ(Mamata Banerjee) ಸರ್ಕಾರ ವಿರುದ್ಧ ಕಿಡಿ ಕಾರಿದ್ದಾರೆ.

ಕೇಂದ್ರ ಸಚಿವ, ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ಸುಖಾಂತ ಮಜುಮ್ದಾರ್‌, ಬಿಜೆಪಿ ನಾಯಕ ಅಗ್ನಿಮಿತ್ರ ಪೌಲ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಗಿದೆ. ಕೊನೆಗೆ ಸುಖಾಂತ ಮಜುಮ್ದಾರ್‌ ಸೇರಿದಂತೆ ಅನೇಕ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಬಿಜೆಪಿ ಪ್ರತಿಭಟನಾಕಾರರ ಮೇಲೆ ಪೊಲೀಸರು ವಾಹನ ಹರಿಸಲು ಯತ್ನಿಸಿದ್ದಾರೆಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಅಲ್ಲದೇ ಅದಕ್ಕೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ.

ಕೇಂದ್ರ ಸಚಿವ ಮತ್ತು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಬಂಧನದ ಕುರಿತು ಬಿಜೆಪಿ ಮುಖಂಡ ಅಗ್ನಿಮಿತ್ರ ಪಾಲ್, “ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ, ಇಂದು ಕೇಂದ್ರ ಸಚಿವರನ್ನು ಹತ್ಯೆ ಮಾಡಿದ ಸಹೋದರಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಕಾರಣಕ್ಕಾಗಿ ಬಂಧಿಸಲಾಗಿದೆ. ಇಂದು ಮುಖ್ಯಮಂತ್ರಿ ನಾಟಕ ಮಾಡುತ್ತಿದ್ದಾರೆ. ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Exit mobile version