ಕೋಲ್ಕತ್ತಾ: ಪಶ್ಚಿಮ ಬಂಗಾಳ(West Bengal)ದ ರಾಜಧಾನಿ ಕೋಲ್ಕತಾ(Kolkata)ದಲ್ಲಿ ದೇಶವೇ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, 31 ವರ್ಷದ ಮಹಿಳಾ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ(Kolkata Doctor Murder Case) ಪ್ರಕರಣ ಖಂಡಿಸಿ ಇಂದು ದೆಹಲಿ ಏಮ್ಸ್(AIIMS) ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್(FORDA) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.
#WATCH | RG Kar Medical College & Hospital incident | Delhi: Doctors and medical students gathered to protest over the Kolkata medical student death incident.
— ANI (@ANI) August 12, 2024
The members of FORDA call for a nationwide strike and demand justice for the tragic death of a second-year PG resident… pic.twitter.com/b1LlXuV26t
ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಕಿರಿಯ ವೈದ್ಯರು, ಇಂಟರ್ನ್‌ಗಳು ಮತ್ತು ಸ್ನಾತಕೋತ್ತರ ಪ್ರಶಿಕ್ಷಣಾರ್ಥಿಗಳು ಸತತ ನಾಲ್ಕನೇ ದಿನವೂ ಮುಷ್ಕರ ಮುಂದುವರಿಸಿದ್ದರಿಂದ ಪಶ್ಚಿಮ ಬಂಗಾಳದಾದ್ಯಂತ ಆಸ್ಪತ್ರೆ ಸೇವೆಗಳು ಸೋಮವಾರ ಅಸ್ತವ್ಯಸ್ತಗೊಂಡವು.
#WATCH | Rape-murder of a PG trainee woman doctor in Kolkata | Principal of RG Kar Medical College & Hospital, Prof. (Dr.) Sandip Ghosh resigns from his post.
— ANI (@ANI) August 12, 2024
He says, "…I am getting defamed on social media…The deceased doctor was like my daughter. As a parent, I resign…I… pic.twitter.com/YnkSqR6f1d
ಏತನ್ಮಧ್ಯೆ, ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಘೋಷ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ಸಾಮಾಜಿಕ ಮಾಧ್ಯಮದಲ್ಲಿ ನನ್ನ ಮಾನಹಾನಿಯಾಗುತ್ತಿದೆ.ಮೃತ ವೈದ್ಯೆ ನನ್ನ ಮಗಳಿದ್ದಂತೆ. ಒಬ್ಬ ಪೋಷಕರಾಗಿ, ನಾನು ರಾಜೀನಾಮೆ ನೀಡುತ್ತೇನೆ…ಭವಿಷ್ಯದಲ್ಲಿ ಇಂತಹ ದುರ್ಘಟನೆಗಳು ನಡೆಯಬಾರದು” ಎಂದು ಹೇಳಿದ್ದಾರೆ.
#WATCH | Delhi: Rape-murder of a PG trainee woman doctor at RG Kar Medical College and Hospital in Kolkata | After meeting Secretary MoHFW, Apurva Chandra, FORDA General Secretary Dr Sarvesh Pandey, says "We met the Health Secretary. We released a press release yesterday… pic.twitter.com/nUYsZPWE2q
— ANI (@ANI) August 12, 2024
ಏನಿದು ಘಟನೆ?
ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.
ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Trainee Doctor: ವೈದ್ಯೆಯ ಕೊಂದ ಆರೋಪಿಯನ್ನು ಹಿಡಿದುಕೊಟ್ಟ ಬ್ಲ್ಯೂಟೂತ್ ಹೆಡ್‌ಫೋನ್; ಹೇಗಂತೀರಾ?