Kolkata Doctor murder case: 36 ಗಂಟೆಗಳ ಶಿಫ್ಟ್‌ನಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸುವುದು ಅಮಾನವೀಯ- ಸುಪ್ರೀಂ ಅಭಿಪ್ರಾಯ - Vistara News

ದೇಶ

Kolkata Doctor murder case: 36 ಗಂಟೆಗಳ ಶಿಫ್ಟ್‌ನಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸುವುದು ಅಮಾನವೀಯ- ಸುಪ್ರೀಂ ಅಭಿಪ್ರಾಯ

Kolkata Doctor murder case: ದೇಶಾದ್ಯಂತ ಇರುವ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ನಾವು ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ. ಕೆಲವು ವೈದ್ಯರು 36 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುತ್ತಾರೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. ನೇಮಕಗೊಂಡ 10ಮಂದಿ ಸದಸ್ಯರ ಕಾರ್ಯಪಡೆ ಈ ಬಗ್ಗೆ ತನಿಖೆ ನಡೆಸಿ ಎಲ್ಲಾ ವೈದ್ಯರ ಕರ್ತವ್ಯದ ಸಮಯವನ್ನು ಸುವ್ಯವಸ್ಥಿತಗೊಳಿಸಲು ಪರಿಶೀಲಿಸಬೇಕು ಎಂದು ಹೇಳಿದ್ದಾರೆ.

VISTARANEWS.COM


on

Kolkata Doctor murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ವೈದ್ಯರನ್ನು 36 ಗಂಟೆಗಳ ಕಾಲ ನಿರಂತರವಾಗಿ ದುಡಿಸಿಕೊಳ್ಳುವುದು ಅಮಾನವೀಯ. ಈ ಬಗ್ಗೆ ಕ್ರಮ ಕೈಗೆತ್ತಿಕೊಳ್ಳುವಂತೆ ಕಾರ್ಯಪಡೆ(Task Force) ಎಂದು ಸುಪ್ರೀಂಕೋರ್ಟ್‌(Supreme Court) ಆದೇಶಿಸಿದೆ. ಕೋಲ್ಕತಾ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ(Kolkata Doctor murder case)ದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ದೇಶಾದ್ಯಂತ ಇರುವ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ನಾವು ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ. ಕೆಲವು ವೈದ್ಯರು 36 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುತ್ತಾರೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. ನೇಮಕಗೊಂಡ 10ಮಂದಿ ಸದಸ್ಯರ ಕಾರ್ಯಪಡೆ ಈ ಬಗ್ಗೆ ತನಿಖೆ ನಡೆಸಿ ಎಲ್ಲಾ ವೈದ್ಯರ ಕರ್ತವ್ಯದ ಸಮಯವನ್ನು ಸುವ್ಯವಸ್ಥಿತಗೊಳಿಸಲು ಪರಿಶೀಲಿಸಬೇಕು ಎಂದು ಹೇಳಿದ್ದಾರೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಕೋಲ್ಕತ್ತಾ ಪೊಲೀಸರ ತನಿಖೆಯಲ್ಲಿನ ವಿಳಂಬ ಮತ್ತು ಸ್ಪಷ್ಟ ಅಕ್ರಮಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು. ಅಸ್ವಾಭಾವಿಕ ಸಾವು ಎಂದು ಪ್ರಕರಣವನ್ನು ದಾಖಲಿಸಲು ಪೊಲೀಸರು ವಿಳಂಬ ಮಾಡಿರುವುದು “ಅತ್ಯಂತ ಗೊಂದಲದ ಸಂಗತಿ” ಎಂದು ನ್ಯಾಯಾಲಯ ಹೇಳಿದೆ.

ಏನಿದು ಘಟನೆ?

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್‌ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್‌ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ

ಇನ್ನು ವೈದ್ಯೆ ಕೊಲೆ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್‌ ರಾಷ್ಟ್ರೀಯ ಕಾರ್ಯಪಡೆಯನ್ನು ನೇಮಕ ಮಾಡಿದೆ. ಈ ಕಾರ್ಯಪಡೆಯಲ್ಲಿ ಸರ್ಜನ್‌ ವೈಸ್‌ ಅಡ್ಮಿರಲ್‌ ಆರ್‌.ಕೆ. ಸರಿನ್‌, ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನ್ಯಾಷನಲ್ ಗ್ಯಾಸ್ಟ್ರೋಲಜಿ ವ್ಯವಸ್ಥಾಪಕ ನಿರ್ದೇಶಕ ಡಾ. ನಾಗೇಶ್ವರ ರೆಡ್ಡಿ ಇದ್ದಾರೆ.

ಇದನ್ನೂ ಓದಿ: Kolkata Doctor murder case: ಕೋಲ್ಕತ್ತಾ ಟ್ರೈನಿ ವೈದ್ಯೆಯ ಕೊಲೆ ಪ್ರಕರಣ- ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kolkata Doctor Murder Case: ಟ್ರೈನಿ ವೈದ್ಯೆ ಕೊಲೆ ಪ್ರಕರಣ- ಪ್ರಧಾನಿ ಮೋದಿಗೆ ದಿಢೀರ್‌ ಪತ್ರ ಬರೆದ ಮಮತಾ ಬ್ಯಾನರ್ಜಿ

Kolkata Doctor Murder Case: ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಬ್ಯಾನರ್ಜಿ, ಈ ದಿನ ನಾನು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದೇನೆ ಎಂದು ಪೋಸ್ಟ್‌ ಮಾಡಿದ್ದಾರೆ. ದಿನೇ ದಿನೇ ದೇಶಾದ್ಯಂತ ಹೆಚ್ಚಾಗುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆ ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದರೆ ಕಟ್ಟುನಿಟ್ಟಿನ ಕಾನೂನು ಜಾರಿಯಾದರೆ ಮಾತ್ರ ಸಾಧ್ಯ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

VISTARANEWS.COM


on

kolkata Doctor murder case
Koo

ಕೋಲ್ಕತ್ತಾ: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ(Kolkata Doctor Murder Case)ಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ(West Bengal CM) ಮಮತಾ ಬ್ಯಾನರ್ಜಿ(Mamata Banerjee) ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರಿಗೆ ಪತ್ರ ಬರೆದಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕೋರಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಬ್ಯಾನರ್ಜಿ, ಈ ದಿನ ನಾನು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದೇನೆ ಎಂದು ಪೋಸ್ಟ್‌ ಮಾಡಿದ್ದಾರೆ. ದಿನೇ ದಿನೇ ದೇಶಾದ್ಯಂತ ಹೆಚ್ಚಾಗುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆ ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದರೆ ಕಟ್ಟುನಿಟ್ಟಿನ ಕಾನೂನು ಜಾರಿಯಾದರೆ ಮಾತ್ರ ಸಾಧ್ಯ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಮುಖ್ಯ ಸಲಹೆಗಾರ ಅಲಾಪನ್ ಬಂಡೋಪಾಧ್ಯಾಯ, “ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ದೇಶಾದ್ಯಂತ ನಿಯಮಿತವಾಗಿ ಮತ್ತು ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ ಮತ್ತು ಲಭ್ಯವಿರುವ ದತ್ತಾಂಶಗಳ ಪ್ರಕಾರ ಅನೇಕ ಪ್ರಕರಣಗಳಲ್ಲಿ ಕೊಲೆಯೊಂದಿಗೆ ಅತ್ಯಾಚಾರಗಳು ನಡೆಯುತ್ತಿವೆ. ಪ್ರತಿನಿತ್ಯ ಸುಮಾರು 90 ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆಯುತ್ತಿವೆ. ಇದರಿಂದ ಕಾನೂನಿನ ಮೇಲೆ ಸಮಾಜ ಮತ್ತು ದೇಶದ ಜನರಿಗಿರುವ ನಂಬಿಕೆ ದಿನೇ ಕುಸಿಯುತ್ತಿದೆ. ಮಹಿಳೆಯರು ಸಮಾಜದಲ್ಲಿ ತಾವು ಸುರಕ್ಷಿತರು ಎಂಬುದನ್ನು ಭಾವಿಸಬೇಕೆಂದರೆ ಇಂತಹ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಲೇಬೇಕಿದೆ ಎಂದು ಬರೆದಿರುವ ಬಗ್ಗೆ ತಿಳಿಸಿದ್ದಾರೆ.

ಏನಿದು ಘಟನೆ?

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್‌ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್‌ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಇನ್ನು ವೈದ್ಯೆ ಕೊಲೆ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್‌ ರಾಷ್ಟ್ರೀಯ ಕಾರ್ಯಪಡೆಯನ್ನು ನೇಮಕ ಮಾಡಿದೆ. ಈ ಕಾರ್ಯಪಡೆಯಲ್ಲಿ ಸರ್ಜನ್‌ ವೈಸ್‌ ಅಡ್ಮಿರಲ್‌ ಆರ್‌.ಕೆ. ಸರಿನ್‌, ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನ್ಯಾಷನಲ್ ಗ್ಯಾಸ್ಟ್ರೋಲಜಿ ವ್ಯವಸ್ಥಾಪಕ ನಿರ್ದೇಶಕ ಡಾ. ನಾಗೇಶ್ವರ ರೆಡ್ಡಿ ಇದ್ದಾರೆ.

ಇದನ್ನೂ ಓದಿ: Kolkata Doctor murder case: 36 ಗಂಟೆಗಳ ಶಿಫ್ಟ್‌ನಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸುವುದು ಅಮಾನವೀಯ- ಸುಪ್ರೀಂ ಅಭಿಪ್ರಾಯ

Continue Reading

ಉದ್ಯೋಗ

Job market: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ; ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಮುಂದಾದ ಶೇ. 72ರಷ್ಟು ಕಂಪನಿಗಳು!

ಭಾರತೀಯ ಉದ್ಯೋಗ ಮಾರುಕಟ್ಟೆಯಲ್ಲಿ (Job market) ಬೆಳವಣಿಗೆಯಾಗುತ್ತಿದ್ದು, ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಶೇ. 72ರಷ್ಟು ಉದ್ಯೋಗದಾತರು ಮುಂದಾಗಿರುವುದಾಗಿ ವರದಿಯೊಂದು ಹೇಳಿದೆ. ಶೇ. 72ರಷ್ಟು ನೇಮಕಾತಿ ಉದ್ದೇಶವು ಈ ವರ್ಷದ ಪ್ರಾರಂಭದಲ್ಲೇ ಕಾಣಿಸಿಕೊಂಡಿತ್ತು. ಕಳೆದ ಸಾಲಿಗೆ ಹೋಲಿಸಿದರೆ ವರ್ಷದ ಮೊದಲಾರ್ಧದಿಂದ ನೇಮಕಾತಿಯಲ್ಲಿ ಶೇ. 4ರಷ್ಟು ಹೆಚ್ಚಳವಾಗಿದೆ.

VISTARANEWS.COM


on

By

Job market
Koo

ಕೋವಿಡ್ ಸಾಂಕ್ರಾಮಿಕದ ಬಳಿಕ ಇದೀಗ ಭಾರತೀಯ ಉದ್ಯೋಗ ಮಾರುಕಟ್ಟೆಯಲ್ಲಿ (Job market) ಬೆಳವಣಿಗೆಯಾಗುತ್ತಿರುವ ಲಕ್ಷಣಗಳು ಕಂಡು ಬರುತ್ತಿವೆ. ಈ ವರ್ಷಾಂತ್ಯದೊಳಗೆ ಶೇ. 72ರಷ್ಟು ಉದ್ಯೋಗದಾತರು (Indian Employers) ಸಂದರ್ಶನ ನಡೆಸಿ ಹೊಸಬರನ್ನು (freshers interview) ನೇಮಿಸಿಕೊಳ್ಳಲು ಉದ್ದೇಶಿಸಿದ್ದಾರೆ. ಈ ನೇಮಕಾತಿ ಪ್ರಕ್ರಿಯೆಯು ಡಿಸೆಂಬರ್‌ನೊಳಗೆ ನಡೆಯಲಿದೆ ಎನ್ನಲಾಗಿದೆ.

ಶೇ. 72ರಷ್ಟು ನೇಮಕಾತಿ ಉದ್ದೇಶವು ಈ ವರ್ಷದ ಪ್ರಾರಂಭದಲ್ಲೇ ಕಾಣಿಸಿಕೊಂಡಿತ್ತು. ವರ್ಷದ ಮೊದಲಾರ್ಧದಿಂದ ನೇಮಕಾತಿಯಲ್ಲಿ ಶೇ. 4ರಷ್ಟು ಹೆಚ್ಚಳವಾಗಿದೆ. 2023ರ ದ್ವಿತೀಯಾರ್ಧಕ್ಕೆ ಹೋಲಿಸಿದರೆ ಶೇ. 7 ಏರಿಕೆಯಾಗಿದೆ. ಇದು ಹೊಸ ಪ್ರತಿಭೆಗಳಿಗೆ ಉದ್ಯೋಗ ಮಾರುಕಟ್ಟೆಯಲ್ಲಿ ಭರವಸೆಯನ್ನು ಮೂಡಿಸಿದೆ. ಟೀಮ್ ಲೀಸ್ ಇಡಿ ಟೆಕ್‌ನ ‘ಕೆರಿಯರ್ ಔಟ್‌ಲುಕ್ʼ ಈ ಕುರಿತು ವರದಿ ಬಿಡುಗಡೆ ಮಾಡಿದ್ದು, ಇದು ಏಪ್ರಿಲ್ ಮತ್ತು ಜೂನ್ 2024ರ ಅವಧಿಯಲ್ಲಿನ ನೇಮಕಾತಿಗೆ ಸಂಬಂಧಿಸಿ ಭಾರತದಾದ್ಯಂತ 603ಕ್ಕೂ ಹೆಚ್ಚು ಕಂಪನಿಗಳ ಸಮೀಕ್ಷೆಯನ್ನು ಆಧರಿಸಿದೆ.

ಫ್ರೆಷರ್‌ಗಳಿಗೆ ನೇಮಕಾತಿ ಉದ್ದೇಶದ ಹೆಚ್ಚಳವು ಉತ್ತೇಜಕ ಸಂಕೇತವಾಗಿದೆ. ಇದು ಉದ್ಯೋಗದಾತರಲ್ಲಿ ಹೆಚ್ಚುತ್ತಿರುವ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಉದ್ಯೋಗಿಗಳಿಗೆ ಪ್ರವೇಶಿಸುವ ಹೊಸ ಪ್ರತಿಭೆಗಳಿಗೆ ಅಮೂಲ್ಯವಾದ ಅವಕಾಶಗಳನ್ನು ಒದಗಿಸುತ್ತದೆ ಎಂದು ಟೀಮ್ ಲೀಸ್ ಇಡಿ ಟೆಕ್‌ನ ಸಂಸ್ಥಾಪಕ ಮತ್ತು ಸಿಇಒ ಶಾಂತನು ರೂಜ್ ತಿಳಿಸಿದ್ದಾರೆ.

ಇ-ಕಾಮರ್ಸ್ ಮತ್ತು ತಂತ್ರಜ್ಞಾನದ ಸ್ಟಾರ್ಟ್-ಅಪ್‌ಗಳು, ಎಂಜಿನಿಯರಿಂಗ್ ಮತ್ತು ಮೂಲಸೌಕರ್ಯ ಮತ್ತು ಚಿಲ್ಲರೆ ವ್ಯಾಪಾರವು ಈ ವರ್ಷದ ದ್ವಿತೀಯಾರ್ಧದಲ್ಲಿ ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಉದ್ದೇಶವನ್ನು ತೋರಿಸುವ ಪ್ರಮುಖ ಮೂರು ಉದ್ಯಮಗಳಾಗಿವೆ ಎಂದು ವರದಿ ತಿಳಿಸಿದೆ.


ಭೌಗೋಳಿಕವಾಗಿ ವಿಶ್ಲೇಷಿರುವ ವರದಿಯು, ಬೆಂಗಳೂರಿನ ಶೇ. 74ರಷ್ಟು ಉದ್ಯೋಗದಾತರು ಫ್ರೆಶರ್‌ಗಳನ್ನು ನೇಮಿಸಿಕೊಳ್ಳಲು ಉದ್ದೇಶಿಸಿದ್ದಾರೆ. ಇದು ಮುಂಬಯಿನಲ್ಲಿ ಶೇ. 60 ಮತ್ತು ಚೆನ್ನೈನಲ್ಲಿ ಶೇ. 54 ರಷ್ಟಿದೆ ಎಂದು ಹೇಳಿದೆ.

ಪೂರ್ಣ ಸ್ಟಾಕ್ ಡೆವಲಪರ್, ಸರ್ಚ್ ಎಂಜಿನ್ ಆಪ್ಟಿಮೈಸೇಶನ್ ಎಕ್ಸಿಕ್ಯೂಟಿವ್, ಡಿಜಿಟಲ್ ಸೇಲ್ಸ್ ಅಸೋಸಿಯೇಟ್ ಮತ್ತು ಯೂಸರ್ ಇಂಟರ್ಫೇಸ್/ಯೂಸರ್ ಎಕ್ಸ್‌ಪೀರಿಯೆನ್ಸ್ ಡಿಸೈನರ್ ಫ್ರೆಶರ್‌ಗಳಿಗೆ ಹೆಚ್ಚು ಬೇಡಿಕೆ ಇದೆ ಎಂದು ವರದಿ ತಿಳಿಸಿದೆ.

ಉದ್ಯೋಗದಾತರು ವಿಶೇಷವಾಗಿ ಸೈಬರ್ ಸೆಕ್ಯುರಿಟಿ, ಕ್ಲೌಡ್ ಕಂಪ್ಯೂಟಿಂಗ್, ಡೇಟಾ ಅನಾಲಿಟಿಕ್ಸ್ ಮತ್ತು ಸರ್ಚ್ ಎಂಜಿನ್ ಆಪ್ಟಿಮೈಸೇಶನ್‌ನಲ್ಲಿ ಕೌಶಲ ಹೊಂದಿರುವ ಅಭ್ಯರ್ಥಿಗಳನ್ನು ಹುಡುಕುತ್ತಿದ್ದಾರೆ ಎಂದು ಅದು ಹೇಳಿದೆ.
ಶೇ. 70ರಷ್ಟು ಉದ್ಯೋಗದಾತರು ಪ್ರಾಯೋಗಿಕ ಕಲಿಕೆಯೊಂದಿಗೆ ಪಠ್ಯಕ್ರಮವನ್ನು ವರ್ಧಿಸಲು ಸಲಹೆ ನೀಡಿದ್ದಾರೆ. ಆದರೆ ಶೇ. 62ರಷ್ಟು ಉದ್ಯಮದ ಅಗತ್ಯತೆಗಳೊಂದಿಗೆ ಶೈಕ್ಷಣಿಕ ತರಬೇತಿಯನ್ನು ಉತ್ತಮವಾಗಿ ಜೋಡಿಸಲು ಉದ್ಯಮ-ಅಕಾಡೆಮಿಯ ಪಾಲುದಾರಿಕೆಯನ್ನು ಪ್ರತಿಪಾದಿಸುತ್ತಾರೆ.

ಉತ್ಪಾದನೆ ವಲಯದಲ್ಲಿ ಶೇ. 25 ಉದ್ಯೋಗದಾತರು ಪದವಿ ಅಪ್ರೆಂಟಿಸ್‌ಗಳನ್ನು ನೇಮಿಸಿಕೊಳ್ಳಲು ಯೋಜಿಸುತ್ತಿದೆ. ಅನಂತರ ಎಂಜಿನಿಯರಿಂಗ್ ಮತ್ತು ಮೂಲಸೌಕರ್ಯವು ಶೇ. 19 ಮತ್ತು ನಿರ್ಮಾಣ ಮತ್ತು ರಿಯಲ್ ಎಸ್ಟೇಟ್ ಶೇ. 11ರಷ್ಟು ಎಂದು ಅದು ಹೇಳಿದೆ.

ಇದನ್ನೂ ಓದಿ: What is Lateral Entry?: ಏನಿದು ಲ್ಯಾಟರಲ್ ಎಂಟ್ರಿ ವಿವಾದ? ಕಾಂಗ್ರೆಸ್‌ ಆರೋಪವೇನು? ಬಿಜೆಪಿಯ ವಾದವೇನು?

ಉದ್ಯಮ ಅಗತ್ಯತೆಗಳೊಂದಿಗೆ ಶೈಕ್ಷಣಿಕ ಕಾರ್ಯಕ್ರಮಗಳನ್ನು ಜೋಡಿಸುವುದು ನಿರ್ಣಾಯಕವಾಗಿದೆ. ಉದ್ಯೋಗ ಮಾರುಕಟ್ಟೆಯು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ತಂತ್ರಜ್ಞಾನ ಮತ್ತು ಡಿಜಿಟಲ್ ಕೌಶಲಗಳು ಪ್ರಮುಖ ವಿಷಯಗಳಾಗುತ್ತಿವೆ ಎಂದು ರೂಜ್ ತಿಳಿಸಿದ್ದಾರೆ.

Continue Reading

ದೇಶ

Jammu-Kashmir Election: ರಂಗೇರಿದ ಚುನಾವಣೆ- ಫಾರೂಖ್‌ ಭೇಟಿಯಾದ ರಾಹುಲ್‌, ಖರ್ಗೆ; ಕಾಂಗ್ರೆಸ್‌-NC ಮೈತ್ರಿ ಕನ್ಫರ್ಮ್‌

Jammu-Kashmir Election: ಗುಪ್ಕಾರ್‌ ರಸ್ತೆಯಲ್ಲಿರುವ ಫಾರೂಖ್‌ ಅಬ್ದುಲ್ಲಾ ಅವರ ನಿವಾಸದಲ್ಲಿ ಈ ಸಭೆ ನಡೆದಿದ್ದು, ಎನ್‌ಸಿ ಪಕ್ಷದ ಉಪಾಧ್ಯಕ್ಷ ಓಮರ್‌ ಅಬ್ದುಲ್ಲಾ ಮತ್ತು ಸಿಪಿಐ(ಎಂ) (ಎಂವೈ) ತಾರಿಗಾಮಿ ಕೂಡ ಭಾಗಿಯಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಫಾರೂಖ್‌ ಅಬ್ದುಲ್ಲಾ, ಸಭೆ ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು. ಮೈತ್ರಿಯು ಹಾದಿಯಲ್ಲಿದ್ದೇವೆ. ಮತ್ತು ಅದು ದೇವರ ದಯೆಯಿಂದ ಉತ್ತಮವಾಗಿ ಮುಂದುವರಿಯುತ್ತದೆ. ಇಂದು ಸಂಜೆಯೊಳಗೆ ಎಲ್ಲಾ ಅಂತಿಮಗೊಳ್ಳಲಿದ್ದು, ಎಲ್ಲಾ 90 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ರಾಜ್ಯದ ಜನ ನಮ್ಮ ಜೊತೆ ಇರುತ್ತಾರೆ ಎಂಬ ನಂಬಿಕೆ ನಮಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Jammu-Kashmir Election
Koo

ಶ್ರೀನಗರ: ಬರೋಬ್ಬರಿ ಹತ್ತು ವರ್ಷಗಳ ನಂತರ ಚುನಾವಣೆ ಘೋಷಣೆಯಾಗಿರುವ ಜಮ್ಮು ಮತ್ತು ಕಾಶ್ಮೀರ(Jammu-Kashmir Election)ದಲ್ಲಿ ಚುನಾವಣೆ ಕಾವು ಶುರುವಾಗಿದೆ. ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಮತ್ತು ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಶ್ರೀನಗರಕ್ಕೆ ಬಂದಿಳಿದ ಉಭಯ ನಾಯಕರು ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷ(NC) ಅಧ್ಯಕ್ಷ ಫಾರೂಖ್‌ ಅಬ್ದುಲ್ಲಾ ಅವರನ್ನು ಭೇಟಿ ಮಾಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ರಚನೆ ಬಗ್ಗೆ ಚರ್ಚೆ ನಡೆಸಿದ್ದಾರೆ.

ಗುಪ್ಕಾರ್‌ ರಸ್ತೆಯಲ್ಲಿರುವ ಫಾರೂಖ್‌ ಅಬ್ದುಲ್ಲಾ ಅವರ ನಿವಾಸದಲ್ಲಿ ಈ ಸಭೆ ನಡೆದಿದ್ದು, ಎನ್‌ಸಿ ಪಕ್ಷದ ಉಪಾಧ್ಯಕ್ಷ ಓಮರ್‌ ಅಬ್ದುಲ್ಲಾ ಮತ್ತು ಸಿಪಿಐ(ಎಂ) (ಎಂವೈ) ತಾರಿಗಾಮಿ ಕೂಡ ಭಾಗಿಯಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಫಾರೂಖ್‌ ಅಬ್ದುಲ್ಲಾ, ಸಭೆ ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು. ಮೈತ್ರಿಯು ಹಾದಿಯಲ್ಲಿದ್ದೇವೆ. ಮತ್ತು ಅದು ದೇವರ ದಯೆಯಿಂದ ಉತ್ತಮವಾಗಿ ಮುಂದುವರಿಯುತ್ತದೆ. ಇಂದು ಸಂಜೆಯೊಳಗೆ ಎಲ್ಲಾ ಅಂತಿಮಗೊಳ್ಳಲಿದ್ದು, ಎಲ್ಲಾ 90 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ರಾಜ್ಯದ ಜನ ನಮ್ಮ ಜೊತೆ ಇರುತ್ತಾರೆ ಎಂಬ ನಂಬಿಕೆ ನಮಗಿದೆ ಎಂದು ಹೇಳಿದ್ದಾರೆ.

ಖರ್ಗೆ ಅವರು ಎಕ್ಸ್‌ನಲ್ಲಿ ಸಭೆಯ ಫೊಟೋಗಳನ್ನು ಹಂಚಿಕೊಂಡಿದ್ದಾರೆ. ನಾವು ರಾಹುಲ್ ಗಾಂಧಿಯವರೊಂದಿಗೆ ಇಂದು ಶ್ರೀನಗರದಲ್ಲಿ ಶ್ರೀ ಫಾರೂಕ್ ಅಬ್ದುಲ್ಲಾ ಮತ್ತು ಜೆಕೆಎನ್‌ಸಿ ಉಪಾಧ್ಯಕ್ಷ ಶ್ರೀ ಒಮರ್ ಅಬ್ದುಲ್ಲಾ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿ ಮೈತ್ರಿ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಆರ್ಟಿಕಲ್‌ 370 ರದ್ದುಗೊಳಿಸಿದ ಬಳಿಕ ಅಂದರೆ ಬರೋಬ್ಬರಿ ಹತ್ತು ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಜಮ್ಮು-ಕಾಶ್ಮೀರ ಮೂರು ಹಂತಗಳಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಸೆ. 18, ಸೆ.15 ಮತ್ತು ಅಕ್ಟೋಬರ್‌ 1 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್‌ 4 ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: Assembly Election Date: ಆರ್ಟಿಕಲ್‌ 370 ರದ್ಧತಿ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಚುನಾವಣೆಗೆ ಮುಹೂರ್ತ ಫಿಕ್ಸ್‌; ದಿನಾಂಕ ಘೋಷಿಸಿದ EC

Continue Reading

ದೇಶ

Badlapur Horror: ಶಾಲೆಗಳೇ ಸುರಕ್ಷಿತ ಸ್ಥಳವಲ್ಲದಿದ್ದ ಮೇಲೆ ಶಿಕ್ಷಣದ ಹಕ್ಕಿಗೆ ಅರ್ಥವೇನಿದೆ? ಬಾಂಬೆ ಹೈಕೋರ್ಟ್‌ ಗರಂ

Badlapur Horror: ನ್ಯಾಯಮೂರ್ತಿಗಳಾದ ರೇವತಿ ಮೊಹಿತೆ ಡೆರೆ ಮತ್ತು ಪೃಥ್ವಿರಾಜ್‌ ಚೌಹಾಣ್‌ ಇದ್ದ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ವಿಳಂಬಗೊಂಡಿರುವ ಬಗ್ಗೆ ಪೊಲೀಸರು ಮತ್ತು ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ. ಇದೇ ವೇಳೆ ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸುವಲ್ಲಿ ನಡೆದ ವಿಳಂಬ ಬಗ್ಗೆ ಕೋರ್ಟ್‌ ಪ್ರಸ್ತಾಪಿಸಿದೆ.

VISTARANEWS.COM


on

sexual abuse
Koo

ಮುಂಬೈ: ಮಹಾರಾಷ್ಟ್ರದ ಬದ್ಲಾಪುರದ ಶಾಲೆಯೊಂದರಲ್ಲಿ ಕಳೆದ ವಾರ ಇಬ್ಬರು ನರ್ಸರಿ ಮಕ್ಕಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ(Badlapur Horror) ಪ್ರಕರಣ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಬಾಂಬೆ ಹೈಕೋರ್ಟ್(Bombay High court) ಗುರುವಾರ ತೀವ್ರ ಅವಲೋಕನ ನಡೆಸಿದೆ. ಶಾಲೆಗಳೇ ಸುರಕ್ಷಿತ ಸ್ಥಳವಲ್ಲದಿದ್ದರೆ ಶಿಕ್ಷಣದ ಹಕ್ಕು ಬಗ್ಗೆ ಮಾತನಾಡುವುದರಲ್ಲಿ ಅರ್ಥವೇನಿದೆ?” ಎಂದು ಪ್ರಶ್ನಿಸಿದೆ.

ನ್ಯಾಯಮೂರ್ತಿಗಳಾದ ರೇವತಿ ಮೊಹಿತೆ ಡೆರೆ ಮತ್ತು ಪೃಥ್ವಿರಾಜ್‌ ಚೌಹಾಣ್‌ ಇದ್ದ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ವಿಳಂಬಗೊಂಡಿರುವ ಬಗ್ಗೆ ಪೊಲೀಸರು ಮತ್ತು ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ. ಇದೇ ವೇಳೆ ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸುವಲ್ಲಿ ನಡೆದ ವಿಳಂಬ ಬಗ್ಗೆ ಕೋರ್ಟ್‌ ಪ್ರಸ್ತಾಪಿಸಿದೆ.

“ಇದು ಎಂತಹ ದುಸ್ಥಿತಿ? ಇದು ನಿಜಕ್ಕೂ ಅತ್ಯಂತ ಆಘಾತಕಾರಿಯಾಗಿದೆ ಎಂದು ನ್ಯಾಯಮೂರ್ತಿ ರೇವತಿ ಮೋಹಿತೆ ಡೆರೆ ಮತ್ತು ನ್ಯಾಯಮೂರ್ತಿ ಪೃಥಿವರಾಜ್ ಚವಾಣ್ ಅವರ ಪೀಠವು ಹೇಳಿದೆ. ಇದೇ ಪೊಲೀಸರು ಮತ್ತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್‌, ಸಂತ್ರಸ್ತ ಮಕ್ಕಳು ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆಯೇ? ಅಲ್ಲದೇ ಮಕ್ಕಳನ್ನು ನಿರ್ಲಕ್ಷಿಸಿರುವ ಶಾಲಾಡಳಿತ ವಿರುದ್ಧ ತನಿಖೆ ಕೈಗೆತ್ತಿಕೊಂಡಿದ್ದೀರೆ ಎಂದು ಪ್ರಶ್ನಿಸಿದೆ.

ಎಸ್‌ಐಟಿ ರಚನೆಯಾಗಿದೆ… ಶಾಲಾಡಳಿತದ ವಿರುದ್ಧ ತನಿಖೆ ನಡೆಯಲಿದೆ ಎಂದು ರಾಜ್ಯದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಬೀರೇಂದ್ರ ಸರಾಫ್ ಪ್ರತಿಕ್ರಿಯಿಸಿದರು. ಆದರೆ ಇದನ್ನು ಒಪ್ಪದ ನ್ಯಾಯಾಲಯವು ಶಾಲೆಯ ವಿರುದ್ಧ ಪ್ರಕರಣವನ್ನು ಇಷ್ಟು ಹೊತ್ತಿಗೆ ದಾಖಲಿಸಬೇಕಾಗಿತ್ತು. ಎಫ್‌ಐಆರ್‌ ದಾಖಲಿಸಲಾಗಿದ್ದು, ನೀವು ಶಾಲೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕಿತ್ತು ಎಂದು ಹೇಳಿದೆ.

“ಇದೊಂದು ಗಂಭೀರ ಅಪರಾಧ. ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ… ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಹೇಗೆ? ಶಾಲಾ ವಿದ್ಯಾರ್ಥಿನಿಯರ ಸುರಕ್ಷತೆಗೆ ನೀವು ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೀರಿ ಎಂದು ನಾವು ತಿಳಿಯಬೇಕಾಗಿದೆ. ಹೆಣ್ಣುಮಕ್ಕಳ ಸುರಕ್ಷತೆ ಮತ್ತು ಭದ್ರತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ.

ಈ ಘಟನೆಯು ಆಗಸ್ಟ್ 12-13, 2024 ರಂದು ನಡೆದಿದ್ದು, ಬದ್ಲಾಪುರದ ಶಾಲೆಯ ನರ್ಸರಿ ತರಗತಿಗಳಲ್ಲಿ ಓದುತ್ತಿರುವ ಇಬ್ಬರು ನಾಲ್ಕು ವರ್ಷದ ಬಾಲಕಿಯರ ಮೇಲೆ 23 ವರ್ಷದ ಸ್ವಚ್ಛತಾ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಹುಡುಗಿಯರ ಶೌಚಾಲಯದ ಒಳಗೆ ತೆರಳಿದಾಗ ಕಿಡಿಗೇಡಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಬೆಳಗ್ಗೆ ತರಗತಿಯ ವೇಳೆ ಬಾಲಕಿಯರು ವಾಶ್‌ರೂಮ್‌ಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಆರೋಪಿ, ಅಕ್ಷಯ್ ಶಿಂಧೆಯನ್ನು ಆಗಸ್ಟ್ 1, 2024 ರಂದು ಗುತ್ತಿಗೆ ಆಧಾರದ ಮೇಲೆ ನೇಮಿಸಲಾಗಿತು. ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದಾಗ ಬಾಲಕಿಯರ ಶೌಚಾಲಯವನ್ನು ಸ್ವಚ್ಛಗೊಳಿಸುವ ಹೊಣೆಗಾರಿಕೆಯನ್ನು ಆತನಿಗೆ ನೀಡಲಾಗಿತ್ತು. ಶುಕ್ರವಾರ ರಾತ್ರಿ ಇಬ್ಬರು ಬಾಲಕಿಯರ ಪೋಷಕರು ದೂರು ದಾಖಲಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನು ಖಂಡಿಸಿ ಮಂಗಳವಾರ ಬದ್ಲಾಪುರ ರೈಲು ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾಕಾರರು ಹಳಿಗಳಿಗೆ ಇಳಿದು ಪ್ರತಿಭಟನೆ ನಡೆಸಿದ ಕಾರಣ ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ರೈಲು ಸಂಚಾರ ಸ್ಥಗಿತಗೊಳಿಸಲಾಯಿತು. ಕೊನೆಗೆ ಈ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡು ಉದ್ರಿಕ್ತ ಪ್ರತಿಭಟನಾಕಾರರು ಶಾಲೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಇದನ್ನೂ ಓದಿ: Sexual Abuse: ಕಾಶ್ಮೀರದಲ್ಲಿ ಹಿಂದೂ ಬಾಲಕಿ ಮೇಲೆ ಅತ್ಯಾಚಾರ; ಬೃಹತ್‌ ಪ್ರತಿಭಟನೆ

Continue Reading
Advertisement
Viral Video
Latest8 mins ago

Viral Video: ಸೈಕಲ್‌ ಮೇಲೆ ಶಾಲೆಗೆ ಹೋಗುತ್ತಿದ್ದ ಮಕ್ಕಳಿಬ್ಬರಿಗೆ ವಿದ್ಯುತ್‌ ಶಾಕ್‌; ಕ್ಯಾಮೆರಾದಲ್ಲಿ ಸೆರೆಯಾಯ್ತು ಘೋರ ದೃಶ್ಯ

Viral Video
ಸಿನಿಮಾ18 mins ago

Viral Video: ‘ಶೀಲಾ ಕಿ ಜವಾನಿ’ ಹಾಡಿಗೆ ಸಖತ್ ಆಗಿ ಸೊಂಟ ಬಳುಕಿಸಿದ ಬೆಡಗಿ! ವಿಡಿಯೊ ನೋಡಿ

Kannada New Movie
ಬೆಂಗಳೂರು22 mins ago

Kannada New Movie: ವಿನೋದ್ ಪ್ರಭಾಕರ್ ಅಭಿನಯದ ʼಬಲರಾಮನ ದಿನಗಳುʼ ಚಿತ್ರ ತಂಡದಿಂದ ಬಿಗ್ ಅನೌನ್ಸ್‌ಮೆಂಟ್!

HD Kumaraswamy
ಕರ್ನಾಟಕ24 mins ago

HD Kumaraswamy: ಕಪ್ಪುಚುಕ್ಕೆ ಇಲ್ಲವೆನ್ನುವ ಸಿದ್ದರಾಮಯ್ಯ ವೈಟ್ನರ್ ಉಜ್ಜಿ ʼಕಪ್ಪುಚುಕ್ಕೆʼ ತೆಗೆದಿದ್ದೇಕೆ?; ಕುಮಾರಸ್ವಾಮಿ ಪ್ರಶ್ನೆ

MonkeyPox
ಆರೋಗ್ಯ40 mins ago

MonkeyPox: ತೀವ್ರಗೊಳ್ಳುತ್ತಿದೆ ಮಂಕಿ ಪಾಕ್ಸ್; ಮತ್ತೊಮ್ಮೆ ಲಾಕ್‌ಡೌನ್ ಘೋಷಣೆ?

Monsoon Fashion
ಫ್ಯಾಷನ್42 mins ago

Monsoon Fashion: ಟೀನೇಜ್‌ ಹುಡುಗಿಯರ ಮಾನ್ಸೂನ್‌ ಸ್ಟೈಲಿಂಗ್‌‌‌ಗೆ ಸಾಥ್‌ ನೀಡುತ್ತಿರುವ 3 ಫ್ಯಾಷನ್‌ ವೇರ್ಸ್

Home Remedies For Cough And Cold
ಆರೋಗ್ಯ49 mins ago

Home Remedies: ಮಕ್ಕಳನ್ನು ಕಾಡುವ ಶೀತ-ಕೆಮ್ಮಿಗೆ ಮನೆಯಲ್ಲೇ ಇದೆ ಉಪಶಮನ

kolkata Doctor murder case
ದೇಶ1 hour ago

Kolkata Doctor Murder Case: ಟ್ರೈನಿ ವೈದ್ಯೆ ಕೊಲೆ ಪ್ರಕರಣ- ಪ್ರಧಾನಿ ಮೋದಿಗೆ ದಿಢೀರ್‌ ಪತ್ರ ಬರೆದ ಮಮತಾ ಬ್ಯಾನರ್ಜಿ

rishab shetty
ಸಿನಿಮಾ1 hour ago

Rishab Shetty : ಕಂಬಳ ಬಳಿಕ ಕಾಂತಾರ- 2ನಲ್ಲಿ ಕಳರಿ ಪಯಟ್ಟು ಪ್ರದರ್ಶನಕ್ಕೆ ಸಜ್ಜಾದ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ

Viral Video
Latest1 hour ago

Viral Video: ಶವಾಗಾರದಲ್ಲಿ ಶವಗಳ ಪಕ್ಕದಲ್ಲೇ ಲೈಂಗಿಕ ಕ್ರಿಯೆ! ಸಂಚಲನ ಮೂಡಿಸಿದೆ ಈ ವಿಡಿಯೊ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌