Site icon Vistara News

Kolkata Doctor murder case: ಟ್ರೈನಿ ವೈದ್ಯೆ ಕೊಲೆ ಪ್ರಕರಣ; ಸ್ವಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌

Kolkata Doctor Murder Case

ನವದೆಹಲಿ: ಕೋಲ್ಕತಾದ ಆರ್‌ ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ (Kolkata Doctor murder case) ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಕೆಲವೊಂದು ಕಡೆ ಇದು ರಾಜಕೀಯ ಆಯಾಮವನ್ನೂ ಪಡೆದುಕೊಂಡಿದೆ. ಸಂತ್ರಸ್ತೆ ಸಾವಿಗೆ ನ್ಯಾಯ ಸಿಗಬೇಕೆಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿರುವ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌(Supreme Court) ಮಧ್ಯಪ್ರದೇಶ ಮಾಡಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಸ್ವಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಇರುವ ನ್ಯಾಯಪೀಠ ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ.

ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ (Kolkata Doctor Murder Case) ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದು, ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ. ಈ ಮಧ್ಯೆ ನಿರ್ಭಯಾ ಅವರ ತಾಯಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಕಿಡಿ ಕಾರಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಸಮರ್ಥರಾದ ಕಾರಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ನಿರ್ಭಯಾ 2012ರಲ್ಲಿ ನವದೆಹಲಿಯಲ್ಲಿ ಚಲಿಸುವ ಬಸ್‌ನಲ್ಲೇ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಕ್ರೂರವಾಗಿ ಕೊಲೆಯಾಗಿದ್ದರು.

ʼʼಪಶ್ವಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಡೆಸುವ ಮೂಲಕ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಯತ್ನಿಸುತ್ತಿದ್ದಾರೆʼʼ ಎಂದು ನಿರ್ಭಯಾ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮಮತಾ ಬ್ಯಾನರ್ಜಿ ತಮ್ಮ ಬೆಂಬಲಿಗರೊಂದಿಗೆ ಟ್ರೈನಿ ವೈದ್ಯೆಯ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ʼʼತಮ್ಮ ಅಧಿಕಾರ ಬಳಸಿ ಅಪರಾಧಿಯ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಮಮತಾ ಬ್ಯಾನರ್ಜಿ ಪ್ರತಿಭಟನೆಯ ಹೆಸರಿನಲ್ಲಿ ಜನರ ಗಮನ ಬೇರೆಡೆ ತಿರುಗಿಸಲು ಯತ್ನಿಸುತ್ತಿದ್ದಾರೆʼʼ ಎಂದು ನಿರ್ಭಯಾ ತಾಯಿ ಟೀಕಿಸಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಜನರಲ್ಲಿ ಗೊಂದಲ ಮೂಡಿಸುವ ಮಮತಾ ಬ್ಯಾನರ್ಜಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಲಿ; ನಿರ್ಭಯಾ ತಾಯಿ

Exit mobile version