ನವದೆಹಲಿ: ಕೋಲ್ಕತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ(RG Kar Medical college) ನಡೆದಿರುವ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ (Kolkata Doctor murder case) ಪ್ರಕರಣದ ವಿಚಾರಣೆ ಇಂದು ಸುಪ್ರೀಂಕೋರ್ಟ್((Supreme Court)ನಲ್ಲಿ ನಡೆಯಲಿದೆ.
ಸಂತ್ರಸ್ತೆ ಸಾವಿಗೆ ನ್ಯಾಯ ಸಿಗಬೇಕೆಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿರುವ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಧ್ಯಪ್ರದೇಶ ಮಾಡಲು ನಿರ್ಧರಿಸಿ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 10:30ಕ್ಕೆ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಇರುವ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಲಿದೆ.
Supreme Court has taken suo motu cognizance of the rape and murder of a doctor in RG Kar Hospital in Kolkata. A bench of Chief Justice of India DY Chandrachud and Justices JB Pardiwala and Manoj Misra will hear the case on August 20. pic.twitter.com/XWwMUd9FSc
— ANI (@ANI) August 18, 2024
ಏನಿದು ಘಟನೆ?
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ
ಇದನ್ನೂ ಓದಿ: Kolkata Doctor Murder case: ಮಮತಾ ಬ್ಯಾನರ್ಜಿ ಹತ್ಯೆಗೆ ಪ್ರಚೋದಿಸಿ ಪೋಸ್ಟ್- ವಿದ್ಯಾರ್ಥಿನಿ ಅರೆಸ್ಟ್
ಇನ್ನು ಪ್ರಕರಣದಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಶಾಮೀಲಾಗಿರುವ ಬಗ್ಗೆ ಪರಿಶೀಲಿಸಲು ಪಶ್ಚಿಮ ಬಂಗಾಳ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ನಾಲ್ಕು ಬಾರಿ ಸಿಬಿಐ ವಿಚಾರಣೆಗೆ ಒಳಗಾದ ಘೋಷ್, ಹತ್ಯೆಗೀಡಾದ ಟ್ರೈನಿ ವೈದ್ಯ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಟೀಕೆಗಳನ್ನು ಮಾಡಿದ ನಂತರ ವೈದ್ಯರ ಆಕ್ರೋಶ ಹೆಚ್ಚಾಗಿದೆ. ಅವರ ಕರೆ ವಿವರಗಳು ಮತ್ತು ಚಾಟ್ ದಾಖಲೆಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ.