ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ (Lakshadweep) ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ಗೆ ಭಾರತವು ಭಾರಿ ಪೆಟ್ಟು (India Maldives Row) ನೀಡುತ್ತಿದೆ. ಲಕ್ಷದ್ವೀಪವನ್ನು ಮಾಲ್ಡೀವ್ಸ್‌ಗೆ ಪರ್ಯಾಯ ಪ್ರವಾಸೋದ್ಯಮ ತಾಣವನ್ನಾಗಿ ಬದಲಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಲಕ್ಷದ್ವೀಪದ ಅಭಿವೃದ್ಧಿಗೆ ಈಗ 4,500 ರೂ. ಮಂಜೂರು ಮಾಡಿದೆ. ಆ ಮೂಲಕ ಉದ್ಧಟತನ ಮಾಡಿದ ಮಾಲ್ಡೀವ್ಸ್‌ಗೆ ಪೆಟ್ಟು ನೀಡಲು ತೀರ್ಮಾನಿಸಿದೆ.
ಅಗಟ್ಟಿ ವಿಮಾನ ನಿಲ್ದಾಣದ ರನ್‌ವೇಯನ್ನು 2,800 ಮೀಟರ್‌ಗೆ ವಿಸ್ತರಣೆ ಮಾಡಲು ಎಲ್&ಟಿ (L&T) ಕಂಪನಿಗೆ ಕೇಂದ್ರ ಸರ್ಕಾರವು 4,500 ಕೋಟಿ ರೂ. ಮೊತ್ತದ ಗುತ್ತಿಗೆ ನೀಡಿದೆ. ಇದರಿಂದಾಗಿ ಅಗಟ್ಟಿ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆ ಹೆಚ್ಚಲಿದ್ದು, ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ ಎಂಬುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಅಗಟ್ಟಿ ದ್ವೀಪಕ್ಕೆ ವಿಮಾನ ಸೇವೆಗಳನ್ನು ಆರಂಭಿಸಲು ಈಗಾಗಲೇ ಫ್ಲೈ19 ಹಾಗೂ ಸ್ಪೈಸ್‌ಜೆಟ್ ವಿಮಾನಯಾನ ಸಂಸ್ಥೆಗಳು ಉತ್ಸಾಹ ತೋರಿವೆ. ಮಿನಿಕಾಯ್ ಹಾಗೂ ಅಗಟ್ಟಿ ದ್ವೀಪದಲ್ಲಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತಿವೆ.
Next Gen Bharat Ep 06: After PM Modi’s pitch, is Lakshadweep the next tourist hotspot in South Asia?#PMModi #Lakshadweep #SouthAsia #TouristHotspot
— ANI (@ANI) February 8, 2024
(Source: DD’s NextGen Bharat Show) pic.twitter.com/rM9Hd7rDMj
ಬಜೆಟ್‌ನಲ್ಲೂ ಘೋಷಣೆ
ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದಾಗಿ ಫೆಬ್ರವರಿ 1ರಂದು ಮಂಡಿಸಿದ ಬಜೆಟ್‌ನಲ್ಲೂ ಘೋಷಿಸಲಾಗಿದೆ. “ದೇಶದ ಪ್ರವಾಸೋದ್ಯಮಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಬಂದರು ಸಂಪರ್ಕ, ಪ್ರವಾಸೋದ್ಯಮ ಮೂಲ ಸೌಕರ್ಯಗಳ ಅಭಿವೃದ್ಧಿ, ಲಕ್ಷದ್ವೀಪ ಸೇರಿ ದೇಶದ ಎಲ್ಲ ದ್ವೀಪಗಳನ್ನು ಅಭಿವೃದ್ಧಿಗೊಳಿಸಲಾಗುವುದು” ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಭಾರತದ ಆಂತರಿಕ ವಿಚಾರದಲ್ಲಿ ಸುಖಾಸುಮ್ಮನೆ ಮೂಗು ತೂರಿಸಿದ್ದ ಮಾಲ್ಡೀವ್ಸ್‌ಗೆ ಇದರಿಂದ ಭಾರಿ ಹಿನ್ನಡೆಯಾಗಲಿದೆ. ಈಗಾಗಲೇ ಭಾರತದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಆರಂಭವಾದ ಬಳಿಕ ಮಾಲ್ಡೀವ್ಸ್‌ಗೆ ಭೇಟಿ ನೀಡುವ ಭಾರತೀಯರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಇದರಿಂದಾಗಿ ಮಾಲ್ಡೀವ್ಸ್ ಪ್ರವಾಸೋದ್ಯಮಕ್ಕೆ ಕೊಡುಗೆ ನೀಡುವ ಅಗ್ರ ರಾಷ್ಟ್ರಗಳಲ್ಲಿ ಭಾರತವು ಅಗ್ರ ಸ್ಥಾನದಿಂದ 5ನೇ ಸ್ಥಾನಕ್ಕೆ ಕುಸಿದಿದೆ. ಇದರಿಂದ ಮಾಲ್ಡೀವ್ಸ್ ಪ್ರವಾಸೋದ್ಯಮಕ್ಕೆ ಭಾರಿ ಪೆಟ್ಟು ಬಿದ್ದಿದೆ ಎಂದೇ ಹೇಳಲಾಗುತ್ತಿದೆ.
ಇದನ್ನೂ ಓದಿ: Budget 2024: ಲಕ್ಷದ್ವೀಪದಲ್ಲಿ ಹೂಡಿಕೆಯ ಮದ್ದು, ತಗಾದೆ ತೆಗೆದ ಮಾಲ್ಡೀವ್ಸ್‌ಗೆ ಗುದ್ದು
ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್ ಟ್ರಿಪ್ ಕ್ಯಾನ್ಸಲ್ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್ ಎದುರಿಸುತ್ತಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ