ಬೆಂಗಳೂರು: ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿʼʼ ಎಂದು ಉಲ್ಲೇಖಿಸಿದ್ದಾರೆ. ʻʻಸಲ್ಮಾನ್ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂಬುದಾಗಿ ಹೇಳಿದ್ದಾರೆ.
“ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಅವರು ಬಿಕಾನೇರ್‌ನಲ್ಲಿರುವ ನಮ್ಮ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಸಲ್ಮಾನ್ ಖಾನ್ ಅವರ ಭದ್ರತೆಯನ್ನು ತೆಗೆದುಹಾಕಿದರೆ ನಾನು ಅವರನ್ನು ಕೊಲ್ಲುತ್ತೇನೆʼʼ ಎಂದು ಬಿಷ್ಣೋಯ್ ಹೇಳಿದ್ದಾರೆ.
ʻʻಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ, ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ, ಗಾಯಕ ಮೂಸೆವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ” ಹೇಳಿದ್ದಾರೆ. ಇದಾದ ಕೆಲವೇ ದಿನಗಳಲ್ಲಿ, ಕೃಷ್ಣಮೃಗವನ್ನು ಕೊಂದ ಆರೋಪದ ಮೂಲಕ ಸಲ್ಮಾನ್ ತನ್ನ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಲಾರೆನ್ಸ್ ಬಿಷ್ಣೋಯ್ ಹೇಳಿದ್ದಾರೆ.
“ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲ. ಇದರ ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಿರಬೇಕು. ನಾನು ಬೇರೆಯವರನ್ನು ಅವಲಂಬಿಸುವುದಿಲ್ಲ,’’ ಎಂದು ಎಬಿಪಿ ಸುದ್ದಿವಾಹಿನಿಗೆ ತಿಳಿಸಿದರು.
ಇದನ್ನೂ ಓದಿ: Sidhu moose wala murder: ಆರೋಪಿ ಬಿಷ್ಣೋಯ್‌ಗೆ 2 ಬುಲೆಟ್ ಪ್ರೂಫ್ ಕಾರು, 100 ಪೊಲೀಸರ ಸೆಕ್ಯುರಿಟಿ
2018 ರಲ್ಲಿ, ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಅವರಿಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್ನ ಬಿಷ್ಣೋಯ್ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಇದನ್ನು ಜಾಂಬಾಜಿ ಎಂದೂ ಕರೆಯುತ್ತಾರೆ.
ಸಲ್ಮಾನ್ ಖಾನ್ ಮುಂದಿನ ಟೈಗರ್ 3 ನಲ್ಲಿ ಕತ್ರಿನಾ ಕೈಫ್ ಜತೆಗೆ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ, ಸಲ್ಮಾನ್ ಅವರ ನೋ ಎಂಟ್ರಿ 2 ಕೂಡ ಶೀಘ್ರದಲ್ಲೇ ಸೆಟ್ಟೇರಲು ಸಜ್ಜಾಗಿದೆ.