Site icon Vistara News

Indira Gandhi | ಇಂದಿರಾ ಜನ್ಮದಿನಕ್ಕೆ ಅವರ ಕೊಡುಗೆ ಕೊಂಡಾಡಿದ ನಾಯಕರು

Raja Marga column Indira Gandhi

Raja Marga column Indira Gandhi

ನವದೆಹಲಿ: ಭಾರತದ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ (Indira Gandhi) ಅವರ 105ನೇ ಜಯಂತಿಯನ್ನು (birth anniversary) ನವೆಂಬರ್ 19, ಶನಿವಾರ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸೇರಿದಂತೆ ಪ್ರಮುಖ ನಾಯಕರು ನಮನ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದಂದು ಅವರಿಗೆ ನಮನಗಳು ಎಂದು ಸ್ಮರಿಸಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಮತ್ತು ಸೋನಿಯಾ ಗಾಂಧಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರು ದಿಲ್ಲಿಯ ಶಕ್ತಿ ಸ್ಥಳದಲ್ಲಿರುವ ಇಂದಿರಾ ಸ್ಮಾರಕಕ್ಕೆ ತೆರಳಿ, ಪುಷ್ಪ ನಮನ ಸಲ್ಲಿಸಿದರು. ಇನ್ನು ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಅವರು ತಮ್ಮ ಅಜ್ಜಿ ಇಂದಿರಾ ಅವರ ಕೊಡುಗೆಯನ್ನು ಸ್ಮರಿಸಿದರು.

ಇಂದಿರಾ ಗಾಂಧಿ ಅವರು ಭಾರತದ ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿದ್ದರು. ಭಾರತ ಕಂಡ ಏಕೈಕ ಮಹಿಳಾ ಪ್ರಧಾನಿಯಾಗಿರುವ ಇಂದಿರಾ ಅವರು 1966ರಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿ ಹುದ್ದೆಗೇರಿದರು. 1977 ಮತ್ತು 1980ರಲ್ಲಿ ಮತ್ತೆ ಪ್ರಧಾನಿಯಾಗಿ ಆಯ್ಕೆಯಾದರು. 1984ರಲ್ಲಿ ಅವರ ಅಂಗರಕ್ಷಕರಿಂದಲೇ ಹತ್ಯೆಯಾದರು.

ತಮ್ಮ ಅಧಿಕಾರವಧಿಯಲ್ಲಿ ಬಡಪರ ಕಾರ್ಯಕ್ರಮಗಳ ಮೂಲಕ ಮನೆಮತಾಗಿದ್ದರು. ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡುವಂಥ ಧೈರ್ಯದ ನಿರ್ಧಾರಗಳನ್ನು ಕೈಗೊಳ್ಳುವುದರಲ್ಲಿ ಅವರು ಹೆಸರುವಾಸಿಯಾಗಿದ್ದರು. ಪಾಕಿಸ್ತಾನವನ್ನು ಇಬ್ಭಾಗ ಮಾಡಿ, ಹೊಸ ದೇಶ ಬಾಂಗ್ಲಾದೇಶ ಉದಯಕ್ಕೆ ಕಾರಣರಾದರು. ಇಂದಿರಾ ಅವಧಿಯಲ್ಲಿಕಾಂಗ್ರೆಸ್ ಉಚ್ಚ್ರಾಯ ಸ್ಥಿತಿಯಲ್ಲಿತ್ತು. ಭಾರತದ ರಾಜಕಾರಣದ ಕೇಂದ್ರ ಬಿಂದುವಾಗಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರಭಾವನ್ನು ಹೆಚ್ಚಿಸುವಲ್ಲಿ ಇಂದಿರಾ ಅವರ ಕೊಡುಗೆಯೂ ಗಮನಾರ್ಹವಾಗಿದೆ. ಇಷ್ಟಾಗಿಯೂ ಅವರು, ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ತಮ್ಮ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದರು. ಇದರಿಂದ ಸೋಲು ಕೂಡ ಅನುಭವಿಸಬೇಕಾಯಿತು.

ಇದನ್ನೂ ಓದಿ | ‘ನನ್ನ ಅಜ್ಜಿ, ನನ್ನ ಅಮ್ಮನ ಬಗ್ಗೆ ಆಡಿದ್ದ ಮಾತು ಸತ್ಯ‘; ಇಂದಿರಾ ಗಾಂಧಿಯವರ ಆ ಮಾತು ನೆನಪಿಸಿಕೊಂಡ ರಾಹುಲ್​ ಗಾಂಧಿ

Exit mobile version