ನವದೆಹಲಿ: ರಾಮ ಮಂದಿರ (Ram Mandir) ನಿರ್ಮಾಣ ಚಳವಳಿಯ ಮುಂಚೂಣಿಯ ನಾಯಕರಾದ, ಮಾಜಿ ಕೇಂದ್ರ ಗೃಹ ಸಚಿವ ಎಲ್ ಕೆ ಆಡ್ವಾಣಿ (LK Advani) ಹಾಗೂ ಮುರಳಿ ಮನೋಹರ ಜೋಶಿ (MM Joshi) ಅವರಿಗೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಿದರುವುದು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು(Ram Mandir inaguaration). ಇದರ ಬೆನ್ನಲ್ಲೇ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ (Alok Kumar) ಅವರು ಎಲ್ ಕೆ ಆಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ಆಹ್ವಾನ ನೀಡಿದ್ದಾರೆ. ಈ ಇಬ್ಬರು ನಾಯಕರೂ ರಾಮ ಮಂದಿರ ಉದ್ಘಾಟನೆಗೆ ಆಗಮಿಸುವ ಭರವಸೆಯನ್ನು ನೀಡಿದ್ದಾರೆ. ಆದರೆ, ಮತ್ತೊಂದೆಡೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾತ್ರ ಈ ಇಬ್ಬರು ಹಿರಿಯ ನಾಯಕರು ರಾಮ ಮಂದಿರ ಕಾರ್ಯಕ್ರಮ ಭಾಗವಹಿಸುವುದಿಲ್ಲ ಎಂದು ಹೇಳಿದೆ.
”ನಾವು ರಾಮ ಮಂದಿರ ಚಳವಳಿಯ ಬಗ್ಗೆ ಚರ್ಚಿಸಿದೆವು. ಇಬ್ಬರು ನಾಯಕರು ರಾಮ ಮಂದಿರ ಉದ್ಘಾಟನೆಗೆ ಬರುವ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆಂದು” ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಅವರು ಹೇಳಿದ್ದಾರೆ.
ಚಂಪತ್ ರಾಯ್ ಹೇಳಿದ್ದೇನು?
ಎಲ್ ಕೆ ಆಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರ ಆರೋಗ್ಯ ಮತ್ತು ವಯಸ್ಸಿನ ಕಾರಣ ಮುಂದಿನ ತಿಂಗಳು ನಡೆಯುವ ರಾಮ ಮಂದಿರ ಉದ್ಘಾಟನೆಯ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆಯಿಲ್ಲ ಎಂದು ದೇವಾಲಯದ ಟ್ರಸ್ಟ್ ಸೋಮವಾರ ತಿಳಿಸಿದೆ. ಆಡ್ವಾಣಿ ಅವರಿಗೆ 96 ಮತ್ತು ಜೋಶಿ ಅವರಿಗೆ 90 ವರ್ಷಗಳಾಗಿವೆ. ಎರಡು ದಿನದ ಹಿಂದೆ, 90 ವರ್ಷದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ.
ಇಬ್ಬರೂ ಕುಟುಂಬದ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಯಿತು. ನಮ್ಮ ಈ ಸಲಹೆಗೆ ಇಬ್ಬರೂ ನಾಯಕರು ಒಪ್ಪಿಕೊಂಡಿದದಾರೆ ಎಂದು ರಾಮ ಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸುದ್ದಿಗಾರರಿಗೆ ತಿಳಿಸಿದರು. ಜನವರಿ 22 ರಂದು ನಡೆಯಲಿರುವ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ರಾಯ್ ಅವರು ತಿಳಿಸಿದರು.
ಜನವರಿ 15 ರೊಳಗೆ ಸಿದ್ಧತೆಗಳು ಪೂರ್ಣಗೊಳ್ಳಲಿವೆ ಮತ್ತು ‘ಪ್ರಾಣ ಪ್ರತಿಷ್ಠಾಪನೆ’ಯ ಪೂಜೆಯು ಜನವರಿ 16 ರಿಂದ ಪ್ರಾರಂಭವಾಗಲಿದೆ ಮತ್ತು ಜನವರಿ 22 ರವರೆಗೆ ನಡೆಯಲಿದೆ ಎಂದು ಅವರು ಹೇಳಿದರು. ಆಹ್ವಾನಿತರ ಬಗ್ಗೆ ಮಾಹಿತಿ ನೀಡಿದ ರಾಯ್ ಅವರು, ಆರೋಗ್ಯ ಮತ್ತು ವಯಸ್ಸಿಗೆ ಸಂಬಂಧಿಸಿದ ಕಾರಣಗಳಿಂದ ಅಡ್ವಾಣಿ ಮತ್ತು ಜೋಶಿ ಅವರು ಪವಿತ್ರ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ: Ram Mandir: ರಾಮ ಮಂದಿರ ಪ್ರಾಣ ಪ್ರತಿಷ್ಠೆ; ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ