Site icon Vistara News

Ram Mandir: ರಾಮ ಮಂದಿರ ಉದ್ಘಾಟನೆಗೆ ಆಡ್ವಾಣಿ, ಜೋಶಿ ಹೋಗುವುದಿಲ್ಲ!

LK Advani, MM Joshi will not attend Ram Mandir inauguration event

ಅಯೋಧ್ಯೆ: ಜನವರಿ 22ರಂದು ನಡೆಯಲಿರುವ ರಾಮ ಮಂದಿರ (Ram Mandir) ಪ್ರಾಣ ಪ್ರತಿಷ್ಠೆ (Pran Pratishte) ಕಾರ್ಯಕ್ರಮಕ್ಕೆ ರಾಮ ಮಂದಿರ ನಿರ್ಮಾಣ ಚಳವಳಿಯ ಮುಂಚೂಣಿಯ ನಾಯಕರಾದ, ಬಿಜೆಪಿ ಪಕ್ಷದ ನಾಯಕರಾದ ಎಲ್ ಕೆ ಆಡ್ವಾಣಿ (LK Advani) ಮತ್ತು ಮರಳಿ ಮನೋಹರ ಜೋಶಿ (MM Joshi) ಆಗಮಿಸುತ್ತಿಲ್ಲ. ಹೌದು, ಇದು ನಿಜ. ಇಬ್ಬರು ನಾಯಕರ ಅವರ ಆರೋಗ್ಯ ಮತ್ತು ವಯಸ್ಸಿನ ಕಾರಣ ಮುಂದಿನ ತಿಂಗಳು ನಡೆಯುವ ಕಾರ್ಯಕ್ರಮದಲ್ಲಿ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆಯಿಲ್ಲ ಎಂದು ದೇವಾಲಯದ ಟ್ರಸ್ಟ್ ಸೋಮವಾರ ತಿಳಿಸಿದೆ. ಅಡ್ವಾಣಿ ಅವರಿಗೆ 96 ಮತ್ತು ಜೋಶಿ ಅವರಿಗೆ 90 ವರ್ಷಗಳಾಗಿವೆ. ಎರಡು ದಿನದ ಹಿಂದೆ, 90 ವರ್ಷದ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ (HD Deve Gowda) ಅವರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ.

ಇಬ್ಬರೂ ಕುಟುಂಬದ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಯಿತು. ನಮ್ಮ ಈ ಸಲಹೆಗೆ ಇಬ್ಬರೂ ನಾಯಕರು ಒಪ್ಪಿಕೊಂಡಿದದಾರೆ ಎಂದು ರಾಮ ಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸುದ್ದಿಗಾರರಿಗೆ ತಿಳಿಸಿದರು. ಜನವರಿ 22 ರಂದು ನಡೆಯಲಿರುವ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ರಾಯ್ ಅವರು ತಿಳಿಸಿದರು.

ಜನವರಿ 15 ರೊಳಗೆ ಸಿದ್ಧತೆಗಳು ಪೂರ್ಣಗೊಳ್ಳಲಿವೆ ಮತ್ತು ‘ಪ್ರಾಣ ಪ್ರತಿಷ್ಠೆ’ಯ ಪೂಜೆಯು ಜನವರಿ 16 ರಿಂದ ಪ್ರಾರಂಭವಾಗಲಿದೆ ಮತ್ತು ಜನವರಿ 22 ರವರೆಗೆ ನಡೆಯಲಿದೆ ಎಂದು ಅವರು ಹೇಳಿದರು. ಆಹ್ವಾನಿತರ ಬಗ್ಗೆ ಮಾಹಿತಿ ನೀಡಿದ ರಾಯ್ ಅವರು, ಆರೋಗ್ಯ ಮತ್ತು ವಯಸ್ಸಿಗೆ ಸಂಬಂಧಿಸಿದ ಕಾರಣಗಳಿಂದ ಅಡ್ವಾಣಿ ಮತ್ತು ಜೋಶಿ ಅವರು ಪವಿತ್ರ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದರು. ಅಡ್ವಾಣಿ ಅವರಿಗೆ 96 ಮತ್ತು ಜೋಶಿ ಅವರಿಗೆ 90 ವರ್ಷಗಳಾಗಿವೆ.

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡಗೆ ಆಹ್ವಾನ

ಅಯೋಧ್ಯೆಯಲ್ಲಿ (Ayodhya Ram Mandir) ನಿರ್ಮಾಣ ಮಾಡಲಾಗುತ್ತಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ (Pran Pratishte) ಭರದ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಸೇರಿದಂತೆ ಅತಿ ಗಣ್ಯರಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಮಂತ್ರಣ ನೀಡಲಾಗುತ್ತಿದೆ. ಅದರಂತೆ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ನಾಯಕ ಎಚ್ ಡಿ ದೇವೇಗೌಡ(Former PM H D Deve Gowda) ಅವರಿಗೂ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ (Sri Ram Janmabhoomi Tirath Kshetra Trust) ಆಮಂತ್ರಣ ನೀಡಿದೆ. ಈ ವಿಷಯವನ್ನು ಸ್ವತಃ ದೇವೇಗೌಡ ಅವರು ಎಕ್ಸ್‌ ವೇದಿಕೆಯಲ್ಲಿ ಮಾಹಿತಿಯನ್ನು ಷೇರ್ ಮಾಡಿಕೊಳ್ಳುವ ಮೂಲಕ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಗೆ ಆಹ್ವಾನ ಬಂದಿರುವುದು ನನಗೆ ಖುಷಿ ತಂದಿದೆ. ರಾಮಮಂದಿರ ಸಂಕೀರ್ಣ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ, ಹಿರಿಯ ಆರೆಸ್ಸೆಸ್ ನಾಯಕ ರಾಮ್ ಲಾಲ್ ಮತ್ತು ಹಿರಿಯ ವಿಎಚ್‌ಪಿ ನಾಯಕ ಅಲೋಕ್ ಕುಮಾರ್ ಅವರು ನನ್ನನ್ನು ನವದೆಹಲಿಯ ನಿವಾಸದಲ್ಲಿ ಭೇಟಿ ಮಾಡಿ, ಆಹ್ವಾನ ನೀಡಿದರು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಎಕ್ಸ್ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ: Ram Mandir: ರಾಮ ಮಂದಿರ ಪ್ರಾಣ ಪ್ರತಿಷ್ಠೆ; ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ

Exit mobile version