Site icon Vistara News

Lok Sabha Election: ಲೋಕಸಭೆ ಚುನಾವಣೆ ಘೋಷಣೆ; 97 ಕೋಟಿ ಜನ ಮತದಾನಕ್ಕೆ ಸಜ್ಜು

Rajiv Kumar

Lok Sabha Election 2024: Election Commissioner's poetic take on EVM hacking claims

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು (Election Commission Of India) ಲೋಕಸಭೆ ಚುನಾವಣೆ ದಿನಾಂಕ (Lok Sabha Election) ಘೋಷಿಸಿದೆ. ಅದರಲ್ಲೂ. ಈ ಬಾರಿ 97 ಕೋಟಿ ಮತದಾರರು ಹಕ್ಕು ಚಲಾವಣೆ ಮಾಡಲು ಸಜ್ಜಾಗಿದ್ದಾರೆ ಎಂದು ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‌ ಕುಮಾರ್‌ ಮಾಹಿತಿ ನೀಡಿದರು. ಸಮರ್ಪಕ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ಆಯೋಗವು ಸಜ್ಜಾಗಿದೆ ಎಂದು ತಿಳಿಸಿದರು.

ಈಗಿನಿಂದಲೇ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಯಾರು ಕೂಡ ನಿಯಮಗಳನ್ನು ಮೀರಬಾರದು. ಮಾದರಿ ನೀತಿ ಸಂಹಿತೆ ಜಾರಿ ವೇಳೆ ಹಿಂಸಾಚಾರ ಎಸಗಿದವರ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸಲಾಗುತ್ತದೆ. ಹಣ, ತೋಳ್ಬಲ, ತಪ್ಪು ಮಾಹಿತಿ ರವಾನೆಯನ್ನು ತಡೆಯಲು ಆಯೋಗವು ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಇನ್ನು, ರಾಜಕೀಯ ವ್ಯಕ್ತಿಗಳು ಕೂಡ ವಿಷಯಗಳ ಆಧಾರಿತವಾಗಿ ಪ್ರಚಾರ ಮಾಡಬೇಕೇ ಹೊರತು, ಗೊಂದಲ, ಗಲಾಟೆಗೆ ಅವಕಾಶ ಮಾಡಿಕೊಡಬಾರದು ಎಂದು ಸೂಚಿಸಿದರು.

ಇದನ್ನೂ ಓದಿ: Lok Sabha Election 2024: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಬಹುಮತ; ಯಾವ ಸಮೀಕ್ಷೆ, ಎಷ್ಟು ಸೀಟು?

97 ಕೋಟಿ ನೋಂದಾಯಿತ ಮತದಾರರು

97 ಕೋಟಿ ಮತದಾರರು ಈ ನೋಂದಣಿ ಮಾಡಿಕೊಂಡಿದ್ದಾರೆ. 10.5 ಲಕ್ಷ ಮತಗಟ್ಟೆಗಳನ್ನು ರಚಿಸಲಾಗುತ್ತದೆ. 55 ಲಕ್ಷ ಮತಯಂತ್ರಗಳನ್ನು ಚುನಾವಣೆಗಾಗಿ ಬಳಸಿಕೊಳ್ಳುತ್ತೇವೆ. ಇದುವರೆಗೆ 100 ಅಧಿಕ ವಿಧಾನಸಭೆ ಚುನಾವಣೆಗಳನ್ನು ಯಶಸ್ವಿಯಾಗಿ ಆಯೋಜಿಸಿದ ಕೀರ್ತಿ ಚುನಾವಣಾ ಆಯೋಗದ್ದಾಗಿದೆ. ಈ ಬಾರಿ 18-19 ವರ್ಷದ 1.89 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 85 ವರ್ಷ ದಾಟಿದವರು ಮನೆಯಿಂದಲೇ ಮತದಾನ ಮಾಡಲಿದ್ದಾರೆ. ವಿಶೇಷ ಚೇತನರಿಗೂ ಕೂಡ ಮನೆಯಿಂದಲೇ ಮತದಾನ ಮಾಡಬಹುದಾಗಿದೆ ಎಂದು ರಾಜೀವ್‌ ಕುಮಾರ್‌ ಮಾಹಿತಿ ನೀಡಿದರು.

ಚುನಾವಣೆ ಆಯೋಗವು ಪಾರದರ್ಶಕವಾಗಿ, ಸುಸಜ್ಜಿತವಾಗಿ ನಡೆಸಲು ಚುನಾವಣೆ ಆಯೋಗವು ಬದ್ಧವಾಗಿದೆ. ಇದಕ್ಕಾಗಿ, ದೇಶಾದ್ಯಂತ ಚುನಾವಣಾ ಆಯೋಗದ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಸೇರಿ ಪ್ರಮುಖರೊಂದಿಗೆ ಮಾತುಕತೆ ನಡೆಸಿದ್ದಾರೆ. ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆಯನ್ನು ನಡೆಸುತ್ತೇವೆ ಎಂದು ರಾಜೀವ್‌ ಕುಮಾರ್‌ ಮಾಹಿತಿ ನೀಡಿದರು.

2014ರ ಲೋಕಸಭೆ ಚುನಾವಣೆಯು 9 ಹಂತಗಳಲ್ಲಿ ನಡೆದಿತ್ತು. ಮೇ 16ರಂದು ಚುನಾವಣೆ ಫಲಿತಾಂಶ ಪ್ರಕಟವಾಗಿತ್ತು. ಮಾರ್ಚ್‌ 5ರಂದು ಚುನಾವಣೆ ಆಯೋಗವು ಚುನಾವಣೆ ದಿನಾಂಕ ಘೋಷಣೆ ಮಾಡಿತ್ತು. ಇನ್ನು, 2019ರಲ್ಲಿ 7 ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆದಿತ್ತು. ಏಪ್ರಿಲ್‌ 11ರಿಂದ ಮೇ 19ರ ಅವಧಿಯಲ್ಲಿ ಮತದಾನ ನಡೆದಿತ್ತು. ಮೇ 23ರಂದು ಫಲಿತಾಂಶ ಪ್ರಕಟವಾಗಿತ್ತ. ಚುನಾವಣೆ ಆಯೋಗವು ಮಾರ್ಚ್‌ 10ರಂದು ಚುನಾವಣೆ ದಿನಾಂಕ ಘೋಷಣೆ ಮಾಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version