Site icon Vistara News

Lok Sabha Election 2024: ವಿಜಯೋತ್ಸವಕ್ಕೆ ಬಿಜೆಪಿ ಪ್ಲ್ಯಾನ್‌ ಹೇಗಿದೆ? ಈಗಿನಿಂದಲೇ ಶುರು ಭರ್ಜರಿ ತಯಾರಿ

Lok Sabha Election 2024

ನವದೆಹಲಿ: ಲೋಕಸಭಾ ಚುನಾವಣೆ(Lok Sabha Election 2024) ಕೊನೆಗೊಂಡಿದ್ದು, ಇನ್ನೇನಿದ್ದರೂ ನಾಳಿನ ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಈಗಾಗಲೇ ಎಕ್ಸಿಟ್‌ ಪೋಲ್‌ ರಿಸಲ್ಟ್‌(Exit Poll Result) ಕೂಡ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ(NDA) ಸಂಪೂರ್ಣ ಬಹುಮತದೊಂದಿಗೆ ಹ್ಯಾಟ್ರಿಕ್‌ ಬಾರಿಸುವುದು ಪಕ್ಕಾ ಆಗಿದೆ. ಗೆಲುವು ನಿಶ್ಚಿತ ಆಗುತ್ತಿದ್ದಂತೆ ಬಿಜೆಪಿ ಈಗಿನಿಂದಲೇ ವಿಜಯೋತ್ಸವ(Celebration) ಆಚರಣೆಗೆ ಪ್ಲ್ಯಾನ್‌ ಮಾಡಿದೆ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ಕಾರ್ಯಾಲಯದಿಂದ ಟೆಂಡರ್‌ ಕರೆಯಲಾಗಿದೆ.

ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ಅದಕ್ಕೆ ಬೇಕಾದ ಎಲ್ಲಾ ಅಗತ್ಯ ಒಳ ಮತ್ತು ಹೊರಗಿನ ಅಲಂಕಾರ ವಸ್ತುಗಳನ್ನು ಸರಬರಾಜು ಮಾಡಲು ಮೇ 28 ರಂದೇ ಗುತ್ತಿಗೆದಾರರಿಗೆ ಟೆಂಡರ್‌ ಕರೆಯಲಾಗಿದೆ. ಬರೋಬ್ಬರಿ 21.97 ಲಕ್ಷ ರೂ ಮೊತ್ತ ಟೆಂಡರ್‌ ಇಂದಾಗಿದ್ದು, ಇದರ ಆರ್ಡರ್‌ ಅನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಐದು ದಿನಗಳ ಕಾಲಾವಕಾಶ ನೀಡಲಾಗಿದೆ. ಜೂ.3 ಅಂದರೆ ಇಂದಿನಿಂದ ಟೆಂಡರ್‌ ಮುಕ್ತವಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ವಿಜಯೋತ್ಸವಕ್ಕೆ ಬಿಜೆಪಿ ಪ್ಲ್ಯಾನ್‌ ಏನು?

ಪ್ರಧಾನಿ ಮತ್ತು ಸಚಿವರ ಪ್ರಮಾಣ ವಚನದ ದಿನದಂದೇ ಭಾರತ ಮಂಟಪ ಅಥವಾ ಕರ್ತವ್ಯ ಪಥದಲ್ಲಿ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ. ಭಾರತದ ಸಾಂಸ್ಕೃತಿಕ ಪರಂಪರೆಯ ವಸ್ತುಪ್ರದರ್ಶನವಾಗಿ ಈ ಕಾರ್ಯಕ್ರಮವು ಧ್ವನಿ ಮತ್ತು ಬೆಳಕಿನ ಪ್ರದರ್ಶನವನ್ನು ಒಳಗೊಂಡಿರುತ್ತದೆ ಮತ್ತು ವಿದೇಶಿ ಸರ್ಕಾರಗಳ ಪ್ರತಿನಿಧಿಗಳು ಸೇರಿದಂತೆ 8,000-10,000 ಜನರು ಭಾಗವಹಿಸುವ ನಿರೀಕ್ಷೆಯಿದೆ. ಈ ಕಾರ್ಯಕ್ರಮ ಜೂ. 9 ರಂದು ನಡೆಯಬಹುದು ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು IE ಗೆ ತಿಳಿಸಿದ್ದಾರೆ. ಆದರೆ, ಇದು ಇನ್ನೂ ಅಂತಿಮಗೊಂಡಿಲ್ಲ.

ಎಕ್ಸಿಟ್‌ ಪೋಲ್‌ ರಿಸಲ್ಟ್‌ ಏನಿದೆ?

ಇನ್ನು ಶನಿವಾರವಷ್ಟೇ ಎಕ್ಸಿಟ್‌ ಪೋಲ್‌ ಪ್ರಕಟಗೊಂಡಿದೆ. ಇಂಡಿಯಾ ನ್ಯೂಸ್ ಡೈನಾಮಿಕ್ಸ್ ಸಮೀಕ್ಷಾ ವರದಿ ಎನ್‌ಡಿಎ 371,ಇಂಡಿಯಾ ಮೈತ್ರಿ 125 ಇತರರು 47 ಸ್ಥಾನಗಳನ್ನು ಪಡೆದರೆ, ಜನ್ ಕಿ ಬಾತ್ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 377, ಇಂಡಿಯಾ ಒಕ್ಕೂಟ 151, ಇತರರು 15, ಎನ್‌ಡಿಟಿವಿ ಇಂಡಿಯಾ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 365, ಇಂಡಿಯಾ ಒಕ್ಕೂಟ 142, ಇತರರು 36, ನ್ಯೂಸ್ ನೇಷನ್ ಸಮೀಕ್ಷಾ ವರದಿ ಪ್ರಕಾರ, ಎನ್‌ಡಿಎ 342-378, ಇಂಡಿಯಾ ಒಕ್ಕೂಟ 153-169, ಇತರರು 21-23, ರಿಪ್ಲಬಿಕ್ ಭಾರ್ ಮ್ಯಾಟ್ರಿಜ್ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 353-368, ಇಂಡಿಯಾ ಒಕ್ಕೂಟ 118-133, ಇತರರು 43-48 ಸ್ಥಾನಗಳನ್ನು ಗಳಿಸಲಿದೆ. ಇನ್ನು ಪಿಮಾರ್ಕ್ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 359, ಇಂಡಿಯಾ ಒಕ್ಕೂಟ 154, ಇತರರು 30 ಕ್ಷೇತ್ರಗಳಲ್ಲಿ ಗೆಲ್ಲಲಿದೆ.

ಇನ್ನು ನ್ಯೂಸ್ 18 ಮೆಗಾ ಎಕ್ಸಿಟ್ ಪೋಲ್ ಪ್ರಕಾರ, ರಾಜ್ಯದ ಒಟ್ಟು 28 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ 23-26 ಸ್ಥಾನ ಬರಲಿದೆ. ಕಾಂಗ್ರೆಸ್ ಕೇವಲ 3-7 ಸ್ಥಾನಗಳಲ್ಲಿ ಕಾಂಗ್ರೆಸ್ ತನ್ನ ಗೆಲುವು ದಾಖಲಿಸಬಹುದು ಎಂದು ಹೇಳಿದೆ. ರಿಪಬ್ಲಿಕ್ ಟೀವಿ ಸಮೀಕ್ಷೆ ಪ್ರಕಾರ ಬಿಜೆಪಿ ಜೆಡಿಎಸ್ 22, ಕಾಂಗ್ರೆಸ್ 6 ಸ್ಥಾನ ಗೆಲ್ಲಲಿವೆ. ಇಂಡಿಯಾ ಟುಡೇ, ಎಬಿಪಿ ನ್ಯೂಸ್ ಎರಡೂಸಮೀಕ್ಷೆಗಳುಎನ್‌ಡಿಗೆ 23-25,ಕಾಂಗ್ರೆಸ್ ಗೆ 3-5 ಸ್ಥಾನ ನೀಡಿವೆ.

ಇನ್ನು ಮೂರು ಸಮೀಕ್ಷಾ ವರದಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 400 ಟಾರ್ಗೆಟ್‌ ದಾಟಲಿದೆ ಎಂಬುದು ಬಯಲಾಗಿದೆ. ಇಂಡಿಯಾ ಟಿವಿ ನೀಡಿರುವ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 371-401 ಹಾಗೂ ಇಂಡಿಯಾ ಒಕ್ಕೂಟ 109-139 ಸ್ಥಾನಗಳನ್ನು ಗಳಿಸಲಿವೆ. ಆಕ್ಸಿಸ್ ಮೈ ಇಂಡಿಯಾ ನಡೆಸಿರುವ ಸಮೀಕ್ಷೆಯಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಲಿದೆ. ಈ ಸಂಸ್ಥೆಯ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಒಟ್ಟು 543 ಸಂಸದೀಯ ಸ್ಥಾನಗಳಲ್ಲಿ ಎನ್‌ಡಿಎ 361 ರಿಂದ 401 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. ಅಷ್ಟೇ ಅಲ್ಲದೇ ಚಾಣಾಕ್ಯ ವರದಿ ಪ್ರಕಾರವೂ ಎನ್ಡಿಎಗೆ 400ಕ್ಕೂ ಅಧಿಕ ಸ್ಥಾನಗಳು ದೊರೆಯಲಿದೆ.

ಇದನ್ನೂ ಓದಿ:Raveena Tandon: ರವೀನಾ ಟಂಡನ್ ವಿರುದ್ಧ ಸುಳ್ಳು ದೂರು ನೀಡಿದ್ರಾ? ಪೊಲೀಸರು ಹೇಳೋದೇನು?

Exit mobile version