ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ರಣರಂಗಕ್ಕೆ ಸಕಲ ಸಿದ್ಧತೆ ನಡೆಸುತ್ತಿರುವ ಬಿಜೆಪಿಯು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಾಲ್ಕನೇ ಪಟ್ಟಿಯಲ್ಲಿ 15 ಅಭ್ಯರ್ಥಿಗಳಿಗೆ (BJP Candidates) ಬಿಜೆಪಿ ಟಿಕೆಟ್ ನೀಡಿದೆ. ಅದರಲ್ಲೂ, ಬಹುಭಾಷಾ ನಟಿ, ನಟ ಶರತ್‌ಕುಮಾರ್ ಅವರ ಪತ್ನಿ ರಾಧಿಕಾ ಶರತ್ ಕುಮಾರ್ (Radhika Sarathkumar) ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ರಾಧಿಕಾ ಶರತ್ ಕುಮಾರ್ ಅವರು ತಮಿಳುನಾಡಿನ ವಿರುಧುನಗರ (Virudhunagar) ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಪುದುಚೇರಿಯ ಹಾಗೂ ತಮಿಳುನಾಡಿನ 14 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿಯು ಬಿಡುಗಡೆ ಮಾಡಿದೆ. ತಮಿಳುನಾಡಿನಲ್ಲಿ ಬಿಜೆಪಿ ಬಿಡುಗಡೆ ಮಾಡುತ್ತಿರುವ ಎರಡನೇ ಪಟ್ಟಿ ಇದಾಗಿದೆ. ಪುದುಚೇರಿಯಿಂದ ಎ. ನಮಶ್ಶಿವಾಯಂ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ತಮಿಳುನಾಡಿನಲ್ಲಿ ಬಿಜೆಪಿ ಘೋಷಿಸಿದ ಮೊದಲ ಪಟ್ಟಿಯಲ್ಲಿ ಕೊಯಮತ್ತೂರಿನಿಂದ ಕೆ.ಅಣ್ಣಾಮಲೈ, ಚೆನ್ನೈ ದಕ್ಷಿಣದಿಂದ ತಮಿಳಿಸೈ ಸೌಂದರರಾಜನ್ ಮತ್ತು ನೀಲಗಿರಿಯಿಂದ ಎಲ್.ಮುರುಗನ್ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ತಿಳಿಸಿತ್ತು.
BJP releases the 4th list of the Lok Sabha Candidates from Puducherry and Tamil Nadu. pic.twitter.com/RGSctUWX7A
— ANI (@ANI) March 22, 2024
ತೆಲಂಗಾಣ ರಾಜ್ಯಪಾಲ ಹುದ್ದೆಯಿಂದ ರಾಜೀನಾಮೆ ನೀಡಿದ್ದ ತಮಿಳಿಸಾಯಿ ಸುಂದರರಾಜನ್ ಚೆನ್ನೈ ದಕ್ಷಿಣದಿಂದ ಬಿಜೆಪಿ ಪರ ಕಣಕ್ಕೆ ಇಳಿದಿದ್ದಾರೆ. ವಿನೋಜ್ ಪಿ ಸೆಲ್ವನ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚೆನ್ನೈ ಸೆಂಟ್ರಲ್ ನಿಂದ ಸ್ಪರ್ಧಿಸಲಿದ್ದಾರೆ. ಕನ್ಯಾಕುಮಾರಿಯಿಂದ ಪೊನ್ನು ರಾಧಾಕೃಷ್ಣನ್ ಸ್ಪರ್ಧೆ ಮಾಡಲಿದ್ದಾರೆ. ವೆಲ್ಲೂರಿನಿಂದ ಎ ಸಿ ಷಣ್ಮುಗಂ, ಕೃಷ್ಣಗಿರಿಯಿಂದ ಸಿ ನರಸಿಂಹನ್, ಪೆರಂಬಲೂರಿನಿಂದ ಟಿ. ಆರ್ ಪಾರಿವೆಂದಾರ್, ತೂತುಕುಡಿಯಿಂದ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿದೆ.
ಲೋಕಸಭಾ ಚುನಾವಣೆ (Lok Sabha Election 2024)ಗೆ ದಿನಾಂಕ ಘೋಷಣೆಯಾಗಿದೆ. ಜತೆಗೆ ಮಾದರಿ ನೀತಿ ಸಂಹಿತೆಯೂ ಜಾರಿಯಾಗಿದೆ. ಈ ಮಧ್ಯೆ ವ್ಯಾಟ್ಸ್ ಆ್ಯಪ್‌ಗೆ ವಿಕಸಿತ ಭಾರತ ಅಭಿಯಾನ (Viksit Bharat Abhiyan)ದ ಸಂದೇಶ ಕಳುಹಿಸುವುದನ್ನು ನಿಲ್ಲಿಸಲು ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ (Election Commission of India) ಸೂಚನೆ ನೀಡಿದೆ. ಕೆಲವು ದಿನಗಳಿಂದ ದೇಶಾದ್ಯಂತದ ಜನರಿಗೆ ವ್ಯಾಟ್ಸ್ ಆ್ಯಪ್‌ನಲ್ಲಿ ವಿಕಸಿತ ಭಾರತಕ್ಕೆ ಸಂಬಂಧಿಸಿದ ಸಂದೇಶ ರವಾನೆಯಾಗುತ್ತಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ