ಕೋಲ್ಕೊತಾ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಈಗಾಗಲೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಹಲವು ಉಚಿತ ಘೋಷಣೆಗಳನ್ನು ಮಾಡಿವೆ. ಇದರ ಬೆನ್ನಲ್ಲೇ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (TMC) ಕೂಡ ಪ್ರಣಾಳಿಕೆ ಬಿಡುಗಡೆ ಮಾಡಿದೆ. “ಇಂಡಿಯಾ ಒಕ್ಕೂಟವು (India Bloc) ಅಧಿಕಾರಕ್ಕೆ ಬಂದರೆ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ರದ್ದುಗೊಳಿಲಾಗುವುದು” ಎಂಬುದಾಗಿ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ. “ದೀದಿಯ ಶಪಥಗಳು” (Didir Shopoth) ಎಂಬ ಹೆಸರಿನ ಪ್ರಣಾಳಿಕೆಯನ್ನು ಟಿಎಂಸಿ ನಾಯಕರು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯ ಪ್ರಮುಖ ಅಂಶಗಳು ಇಲ್ಲಿವೆ.
ಟಿಎಂಸಿ ಪ್ರಣಾಳಿಕೆಯ ಪ್ರಮುಖ ಅಂಶಗಳು
- ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ ರದ್ದು
- ಏಕರೂಪ ನಾಗರಿಕ ಸಂಹಿತೆ (UCC), ಎನ್ಆರ್ಸಿಯನ್ನು ರದ್ದುಗೊಳಿಸಲಾಗುವುದು
- ಬಡವರಿಗೆ ವರ್ಷಕ್ಕೆ 10 ಅಡುಗೆ ಅನಿಲ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲಾಗುವುದು
- ಎಲ್ಲ ಬಡವರಿಗೂ ಉಚಿತವಾಗಿ ಮನೆ ನಿರ್ಮಿಸಿ ಕೊಡಲಾಗುವುದು
- ಕಾರ್ಮಿಕರು, ದಿನಗೂಲಿ ನೌಕರರ ಕೂಲಿಯನ್ನು 400 ರೂ.ಗೆ ಏರಿಕೆ ಮಾಡಲಾಗುವುದು
- ರೇಷನ್ ಕಾರ್ಡ್ ಹೊಂದಿದವರಿಗೆ ಮನೆ ಬಾಗಿಲಿಗೆ ಉಚಿತವಾಗಿ ಪಡಿತರ ಪೂರೈಸಲಾಗುವುದು
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹೆಚ್ಚಿನ ಹಣಕಾಸು ನೆರವು
- ರೈತರಿಗಾಗಿ ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವುದು
#WATCH | West Bengal: TMC releases its manifesto for the upcoming Lok Sabha elections, in Kolkata. pic.twitter.com/GqslvtrJyf
— ANI (@ANI) April 17, 2024
ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಜತೆಗೂಡಿ ಬಿಜೆಪಿಯನ್ನು ಸೋಲಿಸುವ ದೃಷ್ಟಿಯಿಂದ ಇಂಡಿಯಾ ಒಕ್ಕೂಟ ರಚಿಸಿವೆ. ಆದರೆ, ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಜತೆ ಮುನಿಸಿಕೊಂಡ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯು ಪಶ್ಚಿಮ ಬಂಗಾಳದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದೆ.
ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಘೋಷಿಸಿದ ಕೊಡುಗೆಗಳು
- ಸಂವಿಧಾನದ 15, 16, 25, 26, 28, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಿಗೆ ಖಾತರಿಪಡಿಸಿದ ಹಕ್ಕುಗಳು ಹಾಗೂ ನಂಬಿಕೆಯನ್ನು ಆಚರಿಸುವ ಮೂಲಭೂತ ಹಕ್ಕನ್ನು ನೀಡುತ್ತೇವೆ
- ಶಿಕ್ಷಣ, ಉದ್ಯೋಗ, ವ್ಯಾಪಾರ, ಸೇವೆಗಳು, ಕ್ರೀಡೆ, ಕಲೆ ಮತ್ತು ಇತರ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಅವಕಾಶಗಳ ಸಂಪೂರ್ಣ ಪ್ರಯೋಜನವನ್ನು ಪಡೆಯಲು ಅಲ್ಪಸಂಖ್ಯಾತರಿಗೆ ಸೇರಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಸಹಾಯ ಮಾಡುತ್ತೇವೆ
- ನಾವು ವಿದೇಶದಲ್ಲಿ ಅಧ್ಯಯನಕ್ಕಾಗಿ ಮೌಲಾನಾ ಆಜಾದ್ ವಿದ್ಯಾರ್ಥಿ ವೇತನವನ್ನು ಮರು ಸ್ಥಾಪಿಸುತ್ತೇವೆ ಮತ್ತು ವಿದ್ಯಾರ್ಥಿವೇತನದ ಸಂಖ್ಯೆಯನ್ನು ಹೆಚ್ಚಿಸುತ್ತೇವೆ
- ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ
- ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಬ್ಯಾಂಕುಗಳು ಸಾಂಸ್ಥಿಕ ಸಾಲವನ್ನು ಒದಗಿಸುವುದನ್ನು ಖಚಿತಪಡಿಸುತ್ತೇವೆ
- ಅಲ್ಪಸಂಖ್ಯಾತರು ಶಿಕ್ಷಣ, ಆರೋಗ್ಯ, ಸಾರ್ವಜನಿಕ ಉದ್ಯೋಗ, ಲೋಕೋಪಯೋಗಿ ಗುತ್ತಿಗೆಗಳು, ಕೌಶಲ್ಯ ಅಭಿವೃದ್ಧಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಾರತಮ್ಯವಿಲ್ಲದೆ ಅವರ ನ್ಯಾಯಯುತ ಪಾಲನ್ನು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ
- ಪ್ರತಿಯೊಬ್ಬ ನಾಗರಿಕರಂತೆ ಅಲ್ಪಸಂಖ್ಯಾತರಿಗೂ ಉಡುಗೆ, ಆಹಾರ, ಭಾಷೆ ಮತ್ತು ವೈಯಕ್ತಿಕ ಕಾನೂನುಗಳ ಆಯ್ಕೆಯ ಸ್ವಾತಂತ್ರ್ಯವಿದೆ ಎಂದು ಕಾಂಗ್ರೆಸ್ ಖಚಿತಪಡಿಸುತ್ತದೆ
- ನಾವು ವೈಯಕ್ತಿಕ ಕಾನೂನುಗಳ ಸುಧಾರಣೆಯನ್ನು ಪ್ರೋತ್ಸಾಹಿಸುತ್ತೇವೆ ಅಂತಹ ಸುಧಾರಣೆಯನ್ನು ಸಂಬಂಧಿಸಿದ ಸಮುದಾಯಗಳ ಭಾಗವಹಿಸುವಿಕೆ ಮತ್ತು ಒಪ್ಪಿಗೆಯೊಂದಿಗೆ ಕೈಗೊಳ್ಳಬೇಕು
- ಸಂವಿಧಾನದ ಎಂಟನೇ ಶೆಡ್ಯೂಲ್ನಲ್ಲಿ ಹೆಚ್ಚಿನ ಭಾಷೆಗಳನ್ನು ಸೇರಿಸಲು ದೀರ್ಘಕಾಲದ ಬೇಡಿಕೆಗಳನ್ನು ಪೂರೈಸಲು ಕಾಂಗ್ರೆಸ್ ಭರವಸೆ ನೀಡುತ್ತದೆ
ಇದನ್ನೂ ಓದಿ: ಲೋಕಸಭೆ ಚುನಾವಣೆ; 4,650 ಕೋಟಿ ರೂ. ದಾಖಲೆಯ ಜಪ್ತಿ, ಸ್ವಾತಂತ್ರ್ಯಾ ನಂತರದಲ್ಲೇ ಹೆಚ್ಚು!