Site icon Vistara News

BJP Candidates List: ಸುಷ್ಮಾ ಸ್ವರಾಜ್‌ ಪುತ್ರಿಗೆ ಟಿಕೆಟ್; ಯಾರು ಇನ್?‌ ಯಾರು ಔಟ್?‌

Narendra Modi Hema Malini

Lok Sabha Election 2024: Who are in, Who are out In BJP's First Candidates List

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಹ್ಯಾಟ್ರಿಕ್‌ ಗೆಲುವು ಸಾಧಿಸುವ ದಿಸೆಯಲ್ಲಿ ಬಿಜೆಪಿಯು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ (BJP Candidates List) ಮಾಡಿದೆ. ನಿರೀಕ್ಷೆಯಂತೆಯೇ ಬಿಜೆಪಿಯು ಹಲವು ಬದಲಾವಣೆಗಳನ್ನು ಮಾಡಿದೆ. ಮೊದಲ ಪಟ್ಟಿಯಲ್ಲಿ 195 ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ ಮಾಡಿದೆ. ಇನ್ನು ಪಟ್ಟಿಯಲ್ಲಿ ಕೆಲವರಿಗೆ ಕೊಕ್‌ ನೀಡಿದ್ದರೆ, ಇನ್ನೂ ಕೆಲವರಿಗೆ ಮೊದಲ ಬಾರಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಹಾಗಾದರೆ, ಬಿಜೆಪಿ ಪಟ್ಟಿಯಲ್ಲಿ ಯಾರು ಇನ್‌ ಆಗಿದ್ದಾರೆ, ಯಾರು ಔಟ್‌ ಆಗಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

ಕಣಕ್ಕಿಳಿದಿರುವ ಗಣ್ಯರು

ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯಿಂದ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಗುಜರಾತ್‌ನ ಗಾಂಧಿನಗರ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಲಖನೌ, ಸ್ಮೃತಿ ಇರಾನಿ ಅವರು ಅಮೇಥಿಯಿಂದ, ಕಿರಣ್‌ ರಿಜಿಜು ಅರುಣಾಚಲ ಪಶ್ಚಿಮ, ಪೋರ್‌ಬಂದರ್‌ನಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವಿಯ, ಕೇರಳದ ಪಥಣಂತಿಟ್ಟದಿಂದ ಎ.ಕೆ. ಆ್ಯಂಟನಿ ಪುತ್ರ ಅನಿಲ್‌ ಆ್ಯಂಟನಿ, ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ತಿರುವನಂತಪುರಂನಿಂದ ಟಿಕೆಟ್‌ ನೀಡಲಾಗಿದೆ. ಮಧ್ಯಪ್ರದೇಶದ ವಿದಿಶಾದಿಂದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಣಕ್ಕಿಳಿದಿದ್ದಾರೆ.

ಉತ್ತರ ಪ್ರದೇಶದ ಮಥುರಾದಿಂದ ಹೇಮಾಮಾಲಿನಿ, ಉನ್ನಾವೋದಿಂದ ಸಾಕ್ಷಿ ಮಹಾರಾಜ್‌, ತೆಲಂಗಾಣದ ಕರೀಂ ನಗರದಿಂದ ಬಂಡಿ ಸಂಜೀವ್‌ ಕುಮಾರ್‌, ಸಿಕಂದರಾಬಾದ್‌ ಜಿ. ಕಿಶನ್‌ ರೆಡ್ಡಿ ಅವರಿಗೂ ಬಿಜೆಪಿ ಹೈಕಮಾಂಡ್‌ ಮಣೆ ಹಾಕಿದೆ.

ಸುಷ್ಮಾ ಸ್ವರಾಜ್‌ ಪುತ್ರಿಗೆ ಟಿಕೆಟ್‌, ಯಾರಿಗೆಲ್ಲ ಕೊಕ್?‌

ಬಿಜೆಪಿಯು ಈ ಬಾರಿ ಹಲವು ಬದಲಾವಣೆ ಮಾಡಿದೆ. ಅದರಲ್ಲೂ, ನವದೆಹಲಿ ಕ್ಷೇತ್ರದ ಸಂಸದೆ, ಸಚಿವೆಯೂ ಆಗಿರುವ ಮೀನಾಕ್ಷಿ ಲೇಖಿ ಅವರನ್ನು ಕೈಬಿಡಲಾಗಿದೆ. ನವದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಮಾಜಿ ಸಚಿವೆ ಸುಷ್ಮಾ ಸ್ವರಾಜ್‌ ಪುತ್ರಿ ಬನ್ಸೂರಿ ಸ್ವರಾಜ್‌ ಅವರಿಗೆ ಸ್ಪರ್ಧಿಸಲಿದ್ದಾರೆ. ಇನ್ನು ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರನ್ನು ಕೈಬಿಡಲಾಗಿದ್ದು, ಅಲೋಕ್‌ ಶರ್ಮಾ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ವಿದಿಶಾದಿಂದ ಟಿಕೆಟ್‌ ನೀಡಲಾಗಿದೆ. ಇನ್ನುಳಿದಂತೆ ದೆಹಲಿ ಉತ್ತರ ಮನೋಜ್‌ ತಿವಾರಿ ಅವರು ಕಣಕ್ಕಿಳಿದಿದ್ದಾರೆ. ಉತ್ತರ ಗೋವಾದಿಂದ ಶ್ರೀಪಾದ್‌ ನಾಯಕ್‌ ಅವರು ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಬಿಜೆಪಿ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರಿಲ್ಲ; ರಾಜೀವ್‌ ಚಂದ್ರಶೇಖರ್‌ಗೆ ತಿರುವನಂತಪುರ ಟಿಕೆಟ್‌

16 ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದಾರೆ. ಯುವಕರು, ಸುಲಭವಾಗಿ ಗೆಲ್ಲುವ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. ಮೊದಲ ಪಟ್ಟಿಯಲ್ಲಿ ಉತ್ತರ ಪ್ರದೇಶದ 51 ಕ್ಷೇತ್ರಗಳಿಗೆ, ಪಶ್ಚಿಮ ಬಂಗಾಳ 20, ಮಧ್ಯಪ್ರದೇಶ 24, ಗುಜರಾತ್‌ 15, ರಾಜಸ್ಥಾನ 15, ಕೇರಳ 12, ತೆಲಂಗಾಣ 9, ಅಸ್ಸಾಂ 11, ಜಾರ್ಖಂಡ್‌ 11, ಛತ್ತೀಸ್‌ಗಢ 11, ದೆಹಲಿ 5, ಜಮ್ಮು-ಕಾಶ್ಮೀರ 2, ಉತ್ತರಾಖಂಡ 3, ಅರುಣಾಚಲ ಪ್ರದೇಶ 2, ಗೋವಾ 1, ತ್ರಿಪುರ 1, ಅಂಡಮಾನ್‌ ನಿಕೋಬಾರ್‌ 1 ಹಾಗೂ ದಿಯು ಮತ್ತು ದಮನ್‌ನ 1 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version