Site icon Vistara News

Lok Sabha Election: ಆಂಧ್ರದಲ್ಲಿ ಬಿಜೆಪಿ, ಟಿಡಿಪಿ, ಜನಸೇನಾ ಮೈತ್ರಿ ಫೈನಲ್;‌ ಸೀಟು ಹಂಚಿಕೆ ಹೇಗೆ?

BJP TDP Alliance

Lok Sabha Election: BJP-Chandrababu Naidu-Pawan Kalyan alliance finalised, say sources

ನವದೆಹಲಿ: ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿಯು ಮಹತ್ವದ ಹೆಜ್ಜೆ ಇರಿಸಿದೆ. ಬಿಜೆಪಿ, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (TDP) ಹಾಗೂ ಪವನ್‌ ಕಲ್ಯಾಣ್‌ (Pawan Kalyan) ನೇತೃತ್ವದ ಜನಸೇನಾ (Jana Sena) ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿವೆ. ಇದರಿಂದ ಎರಡೂ ಪ್ರಾದೇಶಿಕ ಪಕ್ಷಗಳಿಗೆ ಬಲ ಬಂದಂತಾದರೆ, ಬಿಜೆಪಿಯ 400ಕ್ಕೂ ಅಧಿಕ ಸೀಟುಗಳ ಗಡಿ ದಾಟಲು ಮೈತ್ರಿಕೂಟವು ನೆರವಾಗಲಿದೆ ಎಂದು ಹೇಳಲಾಗುತ್ತಿದೆ.

ಆಂಧ್ರಪ್ರದೇಶದಲ್ಲಿ ಒಟ್ಟು ಲೋಕಸಭೆ ಕ್ಷೇತ್ರಗಳಿದ್ದು, ಎನ್‌ಡಿಎ ಮೈತ್ರಿಕೂಟವು ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲಲು ಗಮನ ಹರಿಸುತ್ತಿದೆ. ಚಂದ್ರಬಾಬು ನಾಯ್ಡು ಅವರು ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿ ಖಚಿತಪಡಿಸಿಕೊಂಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆಲ್ಲುವ ದಿಸೆಯಲ್ಲಿ ಟಿಡಿಪಿಯು ಬಿಜೆಪಿ ಹಾಗೂ ಜನಸೇನಾ ಜತೆ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಿದೆ” ಎಂದು ಟಿಡಿಪಿ ಸಂಸದ ಕೆ. ರವೀಂದ್ರ ಕುಮಾರ್‌ ಅವರು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಆಂಧ್ರಪ್ರದೇಶ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿದಂತಾಗಿದೆ.

ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ 400 ಸೀಟುಗಳ ಗುರಿ ನೀಡಿದ್ದಾರೆ. ಎನ್‌ಡಿಎ ಮೈತ್ರಿಕೂಟವು 400 ಹಾಗೂ ಬಿಜೆಪಿಯೊಂದೇ 370 ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂಬುದಾಗಿ ಮೋದಿ ಟಾರ್ಗೆಟ್‌ ನೀಡಿದ್ದಾರೆ. ಇದರ ದಿಸೆಯಲ್ಲಿ ಆಂಧ್ರಪ್ರದೇಶದಲ್ಲಿ ಮೂರು ಪಕ್ಷಗಳು ಮೈತ್ರಿ ಒಗ್ಗೂಡಿರುವುದು ಪ್ರಾಮುಖ್ಯತೆ ಪಡೆದಿದೆ. ಅಷ್ಟೇ ಅಲ್ಲ, 2018ರಲ್ಲಿ ಎನ್‌ಡಿಎ ಮೈತ್ರಿಕೂಟ ತೊರೆದಿದ್ದ ಚಂದ್ರಬಾಬು ನಾಯ್ಡು ಅವರು ಈಗ ಮತ್ತೆ ಮೈತ್ರಿಕೂಟ ಸೇರಿರುವುದು ಕೂಡ ಪ್ರಮುಖವಾಗಿದೆ.

ಇದನ್ನೂ ಓದಿ: ಚುನಾವಣೆ ಮೊದಲೇ ಕಾಂಗ್ರೆಸ್‌ಗೆ ಶಾಕ್;‌ ಬಿಜೆಪಿ ಸೇರಿದ ಮಾಜಿ ಸಿಎಂ ಕರುಣಾಕರನ್‌ ಪುತ್ರಿ

ಇದಿಷ್ಟೇ ಅಲ್ಲ, ಬಿಜೆಪಿ, ಟಿಡಿಪಿ ಹಾಗೂ ಜನಸೇನಾ ಪಕ್ಷಗಳ ಮೈತ್ರಿಯು ಲೋಕಸಭೆ ಚುನಾವಣೆಗೆ ಮಾತ್ರವಲ್ಲ, ಇದೇ ವರ್ಷದ ಅಂತ್ಯದಲ್ಲಿ ನಡೆಯುವ ವಿಧಾನಸಭೆಗೂ ಮುಂದುವರಿದಿದೆ. ಎರಡೂ ಚುನಾವಣೆಗಳಲ್ಲಿ ಮೈತ್ರಿಕೂಟದ ಅನ್ವಯವೇ ಸ್ಪರ್ಧಿಸಲು ತೀರ್ಮಾನಿಸಿವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಲೋಕಸಭೆ ಚುನಾವಣೆಯಲ್ಲಿ 6-8, ವಿಧಾನಸಭೆ ಚುನಾವಣೆಯಲ್ಲಿ 10-12 ಕ್ಷೇತ್ರ, ಜನಸೇನಾ ಪಕ್ಷವು 3 ಲೋಕಸಭೆ ಕ್ಷೇತ್ರ, ವಿಧಾನಸಭೆ ಚುನಾವಣೆಯಲ್ಲಿ 24 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version