ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಶತಾಯ ಗತಾಯ ಗೆದ್ದು, ಹ್ಯಾಟ್ರಿಕ್ ಸಾಧಿಸುವ ಹುಮ್ಮಸ್ಸಿನಲ್ಲಿರುವ ಬಿಜೆಪಿಯು ಅಳೆದು-ತೂಗಿ 195 ಅಭ್ಯರ್ಥಿಗಳ ಮೊದಲ ಪಟ್ಟಿ (BJP Candidates List) ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯಿಂದಲೇ ಮೂರನೇ ಬಾರಿ ಸ್ಪರ್ಧಿಸಲಿದ್ದು, ಹಲವು ಗಣ್ಯರಿಗೆ ಟಿಕೆಟ್ ನೀಡಲಾಗಿದೆ. ಇನ್ನು, ಯುವಕರು, ಹೊಸಬರಿಗೆ ಆದ್ಯತೆ ನೀಡುವ ಜತೆಗೆ ಬಿಜೆಪಿಯು ಜಾತಿ ಲೆಕ್ಕಾಚಾರದಲ್ಲೂ ಹಲವು ರಣತಂತ್ರ ರೂಪಿಸಿದೆ.
ಬಿಜೆಪಿ ಕೇಂದ್ರೀಯ ಚುನಾವಣೆ ಸಮಿತಿ ಸಭೆಯಲ್ಲಿ ನಿರ್ಧರಿಸಿದಂತೆ ಪ್ರಕಟಿಸಲಾದ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಒಬಿಸಿಯ 57 ಅಭ್ಯರ್ಥಿಗಳಿಗೆ, ಎಸ್‌ಸಿ 27, ಎಸ್‌ಟಿಯ 18 ಅಭ್ಯರ್ಥಿಗಳಿಗೆ ಬಿಜೆಪಿಯು ಟಿಕೆಟ್ ನೀಡಿದೆ. ಇನ್ನು 195 ಅಭ್ಯರ್ಥಿಗಳಲ್ಲಿ 28 ಮಹಿಳೆಯರು ಹಾಗೂ 47 ಯುವಕರಿಗೆ ಬಿಜೆಪಿಯು ಮಣೆ ಹಾಕಿದೆ. 34 ಕೇಂದ್ರ ಸಚಿವರಿಗೂ ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿದೆ. ರಾಜ್ಯಸಭೆಯಿಂದ ಆಯ್ಕೆಯಾಗಿ, ಮಂತ್ರಿಯಾಗಿದ್ದ ರಾಜೀವ್ ಚಂದ್ರಶೇಖರ್ ಅವರಿಗೆ ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
The first list of BJP includes 28 women, 47 youth, 27 SC, 18 ST and 57 OBC.
— All India Radio News (@airnewsalerts) March 2, 2024
BJP CEC Meeting held on 29 February decides 195 candidates from 16 States and two UTs: BJP General Secretary Vinod Tawde#LokSabhaElections2024 | #PollsWithAIR | #GeneralElection2024 pic.twitter.com/7IF3SEkHAx
16 ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದಾರೆ. ಮೊದಲ ಪಟ್ಟಿಯಲ್ಲಿ ಉತ್ತರ ಪ್ರದೇಶದ 51 ಕ್ಷೇತ್ರಗಳಿಗೆ, ಪಶ್ಚಿಮ ಬಂಗಾಳ 20, ಮಧ್ಯಪ್ರದೇಶ 24, ಗುಜರಾತ್ 15, ರಾಜಸ್ಥಾನ 15, ಕೇರಳ 12, ತೆಲಂಗಾಣ 9, ಅಸ್ಸಾಂ 11, ಜಾರ್ಖಂಡ್ 11, ಛತ್ತೀಸ್‌ಗಢ 11, ದೆಹಲಿ 5, ಜಮ್ಮು-ಕಾಶ್ಮೀರ 2, ಉತ್ತರಾಖಂಡ 3, ಅರುಣಾಚಲ ಪ್ರದೇಶ 2, ಗೋವಾ 1, ತ್ರಿಪುರ 1, ಅಂಡಮಾನ್ ನಿಕೋಬಾರ್ 1 ಹಾಗೂ ದಿಯು ಮತ್ತು ದಮನ್‌ನ 1 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.
BJP releases first list of 195 candidates for Lok Sabha elections pic.twitter.com/ms1zTtzLfL
— ANI (@ANI) March 2, 2024
ಇದನ್ನೂ ಓದಿ: BJP Candidates List: ಲೋಕಸಭೆಗೆ ಬಿಜೆಪಿಯ 195 ಅಭ್ಯರ್ಥಿಗಳ ಪಟ್ಟಿ ರಿಲೀಸ್; ಇವರೇ ಕ್ಯಾಂಡಿಡೇಟ್ಸ್
ಬಿಜೆಪಿಯು ಈ ಬಾರಿ ಹಲವು ಬದಲಾವಣೆ ಮಾಡಿದೆ. ಅದರಲ್ಲೂ, ನವದೆಹಲಿ ಕ್ಷೇತ್ರದ ಸಂಸದೆ, ಸಚಿವೆಯೂ ಆಗಿರುವ ಮೀನಾಕ್ಷಿ ಲೇಖಿ ಅವರನ್ನು ಕೈಬಿಡಲಾಗಿದೆ. ನವದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಪುತ್ರಿ ಬನ್ಸೂರಿ ಸ್ವರಾಜ್ ಅವರಿಗೆ ಸ್ಪರ್ಧಿಸಲಿದ್ದಾರೆ. ಇನ್ನು ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಕೈಬಿಡಲಾಗಿದ್ದು, ಅಲೋಕ್ ಶರ್ಮಾ ಅವರಿಗೆ ಟಿಕೆಟ್ ಘೋಷಿಸಲಾಗಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ವಿದಿಶಾದಿಂದ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ ದೆಹಲಿ ಉತ್ತರ ಮನೋಜ್ ತಿವಾರಿ ಅವರು ಕಣಕ್ಕಿಳಿದಿದ್ದಾರೆ. ಉತ್ತರ ಗೋವಾದಿಂದ ಶ್ರೀಪಾದ್ ನಾಯಕ್ ಅವರು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ