ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆ (Lok Sabha Election 2024) ದಿನಾಂಕವನ್ನು ಚುನಾವಣಾ ಆಯೋಗವು (Election Commission) ಕೆಲವೇ ಕ್ಷಣಗಳಲ್ಲಿ ಪ್ರಕಟಿಸಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣೆ ಆಯೋಗವು ಸುದ್ದಿಗೋಷ್ಠಿ ನಡೆಸಲಿದೆ. ಹಾಗಾಗಿ, ಎಷ್ಟು ಹಂತಗಳಲ್ಲಿ ಮತದಾನ ನಡೆಯಲಿದೆ? ಫಲಿತಾಂಶ ಯಾವಾಗ ಎಂಬುದು ಸೇರಿ ಚುನಾವಣೆ ಆಯೋಗದ ಸುದ್ದಿಗೋಷ್ಠಿಯ ಲೈವ್‌ಅನ್ನು ನೀವು ಇಲ್ಲಿ ವೀಕ್ಷಿಸಬಹುದಾಗಿದೆ.
ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳು ಈಗಾಗಲೇ 543 ಲೋಕಸಭಾ ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಲು ಪ್ರಾರಂಭಿಸಿವೆ. ಲೋಕಸಭಾ ಚುನಾವಣೆಗೆ ಬಿಜೆಪಿ ಇದುವರೆಗೆ 267 ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದರೆ, ಕಾಂಗ್ರೆಸ್ ಎರಡು ಪಟ್ಟಿಗಳಲ್ಲಿ 82 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.
ಏತನ್ಮಧ್ಯೆ, ಚುನಾವಣಾ ಆಯೋಗವು ಮಾರ್ಚ್ 14 ರಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪಡೆದ ಚುನಾವಣಾ ಬಾಂಡ್ಗಳ ಡೇಟಾವನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿದೆ. ಸುಪ್ರೀಂ ಕೋರ್ಟ್ಗೆ ಹಸ್ತಾಂತರಿಸಿದ ಚುನಾವಣಾ ಬಾಂಡ್ಗಳ ದಾಖಲೆಯನ್ನು ಮುಚ್ಚಿದ ಲಕೋಟೆ / ಸೀಲ್ ಮಾಡಿದ ಪೆಟ್ಟಿಗೆಗಳಲ್ಲಿ ಹಿಂದಿರುಗಿಸುವಂತೆ ಕೋರಿದೆ. ಆದಾಗ್ಯೂ ಕೋರ್ಟ್ ಆಯೋಗ ಮಾಹಿತಿಯನ್ನು ಪೂರ್ಣವಾಗಿ ಪ್ರಕಟಿಸಿಲ್ಲ ಎಂದು ಹೇಳಿದೆ.
ಕೇಂದ್ರ ಸರ್ಕಾರವು (Central Government) ಇಬ್ಬರು ಚುನಾವಣಾ ಆಯುಕ್ತರನ್ನು ನೇಮಕ ಮಾಡಿದೆ. ಪಂಜಾಬ್‌ನ ಬಿ. ಸುಖಬೀರ್ ಸಂಧು (Sukhbir Sandhu) ಹಾಗೂ ಕೇರಳದ ಜ್ಞಾನೇಶ್ ಕುಮಾರ್ (Gyanesh Kumar) ಅವರನ್ನು ಚುನಾವಣಾ ಆಯುಕ್ತರನ್ನಾಗಿ (Election Commissioners) ನೇಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿರುವ ಆಯ್ಕೆ ಸಮಿತಿ ಸಭೆಯಲ್ಲಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ: Vistara news polling booth: ಚಿಕ್ಕಬಳ್ಳಾಪುರ ಲೋಕಸಭೆಯಲ್ಲಿ ಬಿಜೆಪಿಗೆ ಜೈ ಎಂದ ಮತದಾರ; 2ನೇ ಸ್ಥಾನದಲ್ಲಿ ಕಾಂಗ್ರೆಸ್!
ಚುನಾವಣಾ ಆಯುಕ್ತರ ನೇಮಕದ ಕುರಿತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಾಹಿತಿ ನೀಡಿದ್ದಾರೆ. ಆಯ್ಕೆ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, “ಸುಖಬೀರ್ ಸಂಧು ಹಾಗೂ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ. ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಿಸಲು 212 ಅಧಿಕಾರಿಗಳ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಇವರಲ್ಲಿ ಇಬ್ಬರನ್ನು ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ