Site icon Vistara News

Lok Sabha Election: ಮಾರ್ಚ್ 13ರ ಬಳಿಕ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ

Lok Sabha Election on April 19 and Result on May 22

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ (2024 Lok Sabha Election) ದಿನಗಣನೆ ಶುರುವಾಗಿದ್ದು, ಮಾರ್ಚ್ 13ರ ಅಥವಾ ಅದರ ನಂತರ ಕೇಂದ್ರ ಚುನಾವಣಾ ಆಯೋಗವು (Election Commission of India) ಎಲೆಕ್ಷನ್ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕೇಂದ್ರ ಚುನಾವಣಾ ಸಮಿತಿಯ ಅಧಿಕಾರಿಗಳು ಪ್ರಸ್ತುತ ಚುನಾವಣಾ ಸಿದ್ಧತೆಯನ್ನು ಪರಿಶೀಲಿಸಲು ವಿವಿಧ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ. ಪ್ರಸ್ತುತ ಅವರು ತಮಿಳುನಾಡಿನಲ್ಲಿದ್ದು(Tamil Nadu), ನಂತರ ಅವರು ಉತ್ತರ ಪ್ರದೇಶ (Uttar Pradesh) ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ಭೇಟಿ ನೀಡಲಿದ್ದಾರೆ.

ವಿವಿಧ ರಾಜ್ಯಗಳ ಭೇಟಿಯನ್ನು ಮಾರ್ಚ್ 13ರೊಳಗೇ ಮುಗಿಸಲು ಚುನಾವಣಾ ಆಯೋಗವು ನಿರ್ಧರಿಸಿದೆ. ಹೀಗಾಗಿ, ಆಯೋಗವು ಚುನಾವಣೆ ದಿನಾಂಕಗಳನ್ನು ಮಾರ್ಚ್ 13 ಅಥವಾ ಆ ನಂತರ ಪ್ರಕಟಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹೇಳಲಾಗುತ್ತಿದೆ.

2019ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗವು ಮಾರ್ಚ್ 10ರಂದು ವೇಳಾಪಟ್ಟಿಯನ್ನು ಘೋಷಿಸಿತ್ತು. 543 ಸ್ಥಾನಗಳ ಲೋಕಸಭೆಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಮತದಾನವು ಏಪ್ರಿಲ್ 11 ಮತ್ತು ಮೇ 19 ರ ನಡುವೆ ಏಳು ಹಂತಗಳಲ್ಲಿ ನಡೆದಿತ್ತು. ಮೇ 23 ರಂದು ಮತ ಎಣಿಕೆ ನಡೆದಿತ್ತು.

ಹೆಚ್ಚುವರಿಯಾಗಿ 2019ರಲ್ಲಿ ಸುಮಾರು 91.2 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದರು, ಅವರಲ್ಲಿ 67% ಕ್ಕಿಂತ ಹೆಚ್ಚು ಜನರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಚುನಾವಣಾ ಆಯೋಗದ ದತ್ತಾಂಶಗಳ ಪ್ರಕಾರ, ಈ ವರ್ಷ ಸುಮಾರು 97 ಕೋಟಿ ಜನರು ಮತದಾನಕ್ಕೆ ಅರ್ಹರರಾಗಿದ್ದಾರೆ.

ಸಾರ್ವತ್ರಿಕ ಚುನಾವಣೆ ಜತೆಗೆ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ, ಸಿಕ್ಕಿಮ್ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈಗ ಬಹುತೇಕ ರಾಜಕೀಯ ಪಕ್ಷಗಳು ಚುನಾವಣಾ ದಿನಾಂಕ ಪ್ರಕಟಣೆಯನ್ನು ಎದುರು ನೋಡುತ್ತಿವೆ.

ಈ ಸುದ್ದಿಯನ್ನೂ ಓದಿ: ಲೋಕಸಭೆ ಎಲೆಕ್ಷನ್‌ನಲ್ಲಿ ಹೆಚ್ಚು ಸೀಟ್ ಗೆಲ್ಲಿ, ಇಲ್ಲದಿದ್ದರೆ ಬಿಜೆಪಿಯಿಂದ ಸರ್ಕಾರಕ್ಕೆ ಕಂಟಕ; ಖರ್ಗೆ ಎಚ್ಚರಿಕೆ

Exit mobile version