Site icon Vistara News

Lok Sabha Election: ನಾಲ್ಕನೇ ಹಂತದಲ್ಲಿ ಶೇ.62.31ರಷ್ಟು ಮತದಾನ; ಬಂಗಾಳದಲ್ಲಿ ಹೆಚ್ಚು

Lok Sabha Election

Lok Sabha Election 2024: Phase 5 polls see 57% turnout till 5 pm

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದಲ್ಲಿ ಶೇ.62.31ರಷ್ಟು ಮತದಾನ (Voter Turnout) ದಾಖಲಾಗಿದೆ. 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಮತದಾನ ಆರಂಭವಾಗಿದ್ದು, ಬಿಸಿಲನ್ನೂ ಲೆಕ್ಕಿಸದೆ ಜನ ಮತದಾನ ಮಾಡಿದರು. ಕೆಲವು ಕಡೆ ಹೊರತುಪಡಿಸಿ ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ನಡೆಯಿತು.

ಯಾವ ರಾಜ್ಯದಲ್ಲಿ ಎಷ್ಟು ಮತದಾನ?

ಸಂಜೆ 5 ಗಂಟೆ ಸುಮಾರಿಗೆ ಆಂಧ್ರಪ್ರದೇಶದಲ್ಲಿ ಶೇ.68.04, ಬಿಹಾರ ಶೇ.54.14, ಜಮ್ಮು ಮತ್ತು ಕಾಶ್ಮೀರ ಶೇ.35.75, ಜಾರ್ಖಂಡ್ ಶೇ.63.14, ಮಧ್ಯಪ್ರದೇಶ ಶೇ.68.01, ಮಹಾರಾಷ್ಟ್ರ ಶೇ.52.49, ಒಡಿಶಾ ಶೇ.62.96, ತೆಲಂಗಾಣ ಶೇ.61.16, ಉತ್ತರ ಪ್ರದೇಶ ಶೇ.56.35, ಪಶ್ಚಿಮ ಬಂಗಾಳದಲ್ಲಿ ಶೇ.75.66ರಷ್ಟು ಮತದಾನ ದಾಖಲಾಗಿದೆ. ದೇಶದ ಹಲವೆಡೆ ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು.

ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಐದನೇ ಹಂತದ ಮತದಾನವು ಮೇ 20ರಂದು ನಡೆಯಲಿದೆ. ಜೂನ್‌ 1ರಂದು ಕೊನೆಯ ಅಥವಾ ಏಳನೇ ಹಂತದ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇಂದು ದೇಶಾದ್ಯಂತ ಒಟ್ಟು 96 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, ಎನ್‌ಡಿಎ ಒಟ್ಟು 97 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಆಂತರಿಕ ಬಿಕ್ಕಟ್ಟು ಎದುರಿಸುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದ ಒಂದೊಂದು ಕ್ಷೇತ್ರಗಳಲ್ಲಿ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ(ಅಠಾವಳೆ) ಪಕ್ಷ ಮಿತ್ರ ಪಕ್ಷ ತೆಲುಗು ದೇಶಂ ಪಾರ್ಟಿ ಮತ್ತು ಬಿಜೆಪಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಮೈತ್ರಿಕೂಟಕ್ಕೆ ಸವಾಲೊಡ್ಡಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಎನ್‌ಡಿಎ ಮೈತ್ರಿಕೂಟ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಇನ್ನು ಈ ಹಂತದಲ್ಲಿ ಮತ್ತೊಂದು ಆಸಕ್ತಿಕರ ವಿಚಾರವೇನೆಂದರೆ ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಅತಿ ದೊಡ್ಡ ಪಾಲುದಾರ ಪಕ್ಷವಾಗಿದ್ದು, ಕಳೆದ ಹಂತಗಳಿಗೆ ಹೋಲಿಸಿದರೆ ಈ ಬಾರಿ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಆಂಧ್ರಪ್ರದೇಶದಲ್ಲಿ ಬಿಜೆಪಿ ಒಟ್ಟು 25ಕ್ಷೇತ್ರಗಳಲ್ಲಿ 17 ಕ್ಷೇತ್ರಗಳನ್ನು ಮಿತ್ರ ಪಕ್ಷ ಟಿಡಿಪಿಗೆ ಬಿಟ್ಟುಕೊಟ್ಟಿದೆ. ಇನ್ನು ಎನ್‌ಡಿಎ ಯ ಇತರೆ ಸದಸ್ಯ ಪಕ್ಷಗಳು ಈ ಹಂತದಲ್ಲಿ ಮೂರು ಅಥವಾ ಅದಕ್ಕಿಂತಲೂ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಇದೇ ರೀತಿಯ ಸೀಟು ಹಂಚಿಕೆಯನ್ನು ಐದನೇ ಮತ್ತು ಏಳನೇ ಹಂತದಲ್ಲಿ ಚುನಾವಣೆ ಎದುರಿಸುತ್ತಿರುವ ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: Madhavi Latha: ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಬುರ್ಖಾ ತೆಗೆಸಿ ಐಡಿ ಕಾರ್ಡ್‌ ಚೆಕ್‌ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ!

Exit mobile version