Site icon Vistara News

Lok Sabha Election: 6ನೇ ಹಂತದಲ್ಲಿ 59% ಮತದಾನ ; ಬಂಗಾಳದಲ್ಲಿ ವೋಟಿಂಗ್‌ ಹೆಚ್ಚು, ಹಿಂಸೆಯ ಕಿಚ್ಚು

Lok Sabha Election

Lok Sabha Election Phase 6 Voting: 57.7% voter turnout till 5 pm, clashes in Bengal

ನವದೆಹಲಿ: ಲೋಕಸಭೆ ಚುನಾವಣೆಯು (Lok Sabha Election 2024) ಅಂತಿಮ ಹಂತಕ್ಕೆ ಬಂದಿದೆ. ಶನಿವಾರ ಆರನೇ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆದಿದ್ದು, ಸಂಜೆ 5 ಗಂಟೆ ಸುಮಾರಿಗೆ ಶೇ.59.05ರಷ್ಟು ಮತದಾನ (Voter Turnout) ನಡೆದಿದೆ. ದೆಹಲಿಯಲ್ಲಿ ಶೇ.54.48ರಷ್ಟು ಮತದಾನ ದಾಖಲಾದರೆ, ಪಶ್ಚಿಮ ಬಂಗಾಳದಲ್ಲಿ (West Bengal) 78.19ರಷ್ಟು ಮತದಾನ ದಾಖಲಾಗಿದೆ. ಆ ಮೂಲಕ ಆರನೇ ಹಂತದಲ್ಲಿ ಅತಿಹೆಚ್ಚು ಮತದಾನ ದಾಖಲಾದ ರಾಜ್ಯ ಎಂಬ ಖ್ಯಾತಿ ಪಶ್ಚಿಮ ಬಂಗಾಳದ್ದಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌, ಕ್ರಿಕೆಟಿಗ ಗೌತಮ್‌ ಗಂಭೀರ್‌, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ನಾಯಕ ರಾಹುಲ್‌ ಗಾಂಧಿ ಸೇರಿ ಹಲವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದರು. ಇದರೊಂದಿಗೆ ಆರನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದೆ. ಜೂನ್‌ 4ರಂದು ಸಾರ್ವತ್ರಿಕ ಚುನಾವಣೆ ಹಾಗೂ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

ಯಾವ ರಾಜ್ಯದಲ್ಲಿ ಎಷ್ಟು ಮತದಾನ?

ರಾಜ್ಯಮತದಾನ ಪ್ರಮಾಣ
ಬಿಹಾರ53.30%
ಹರಿಯಾಣ58.37%
ಜಮ್ಮು-ಕಾಶ್ಮೀರ52.28%
ಜಾರ್ಖಂಡ್62.74%
ದೆಹಲಿ54.48%
ಒಡಿಶಾ60.07%
ಉತ್ತರ ಪ್ರದೇಶ54.03%
ಪಶ್ಚಿಮ ಬಂಗಾಳ78.19%

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದರು. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್‌ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ವೋಟಿಂಗ್‌ ನಡೆದಿದೆ. ಒಟ್ಟು 889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಇದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ

ಪಶ್ಚಿಮ ಬಂಗಾಳದಲ್ಲಿ ಎಂದಿನಂತೆ ಕೆಲವೆಡೆ ಹಿಂಸಾಚಾರ ನಡೆದಿದೆ. ಅದರಲ್ಲೂ ಝಾರ್‌ಗ್ರಾಮ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಣತ್‌ ತುಡು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳಪೋಟಾ ಗ್ರಾಮದಲ್ಲಿ ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿಯು ಅವರಿಗೆ ಭದ್ರತೆ ಒದಗಿಸಿದರೂ, ಕೆಲ ದುಷ್ಕರ್ಮಿಗಳು ಅವರನ್ನು ಬೆನ್ನತ್ತಿ, ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಪ್ರಣತ್‌ ತುಡು, ಭದ್ರತಾ ಸಿಬ್ಬಂದಿ ಹಾಗೂ ಪತ್ರಕರ್ತರು ಓಡಿ ಹೋಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: Narendra Modi: 10 ವರ್ಷ ಬಲಿಷ್ಠ ಪ್ರತಿಪಕ್ಷ ಇರಲಿಲ್ಲ ಎಂಬುದೇ ನೋವು ತಂದಿದೆ; ಮೋದಿ ಬೇಸರ

Exit mobile version