Site icon Vistara News

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Lok Sabha Election Result 2024

Lok Sabha Election Result 2024 Tomorrow: Who Will Be The Next Prime Minister Of India?

ನವದೆಹಲಿ: ದೇಶದ ಭವಿಷ್ಯವನ್ನು ನಿರ್ಧರಿಸುವ ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಇಂದು (ಜೂನ್‌ 1) ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಕೊನೆಗೊಳ್ಳಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲರ ಗಮನವೀಗ ಫಲಿತಾಂಶದ ಕಡೆ ವಾಲಿದೆ. ಶನಿವಾರ 7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ.

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯಲಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಇಂದು ಸಂಜೆ ಎಕ್ಸಿಟ್‌ ಪೋಲ್‌

ಶನಿವಾರ ಸಂಜೆ 6 ಗಂಟೆಗೆ ಮತದಾನ ಮುಗಿಯಲಿದ್ದು, 6.30ರ ಸುಮಾರಿಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಲಿವೆ. ಹಾಗಾಗಿ, ರಾಜಕೀಯ ನಾಯಕರು, ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ ಇದೆ. ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

ಇದನ್ನೂ ಓದಿ: Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Exit mobile version