ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಜೂ. 8ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್ಡಿಎ ಸಭೆಯ ಬಳಿಕ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ. ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ದೆಹಲಿಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಎನ್ಡಿಎ ಒಕ್ಕೂಟ 292 ಸೀಟುಗಳು ಹಾಗೂ ಇಂಡಿಯಾ ಬಣ 234 ಸ್ಥಾನಗಳನ್ನು ತನ್ನದಾಗಿಸಿಕೊಂಡಿವೆ. ಎರಡೂ ಬಣಗಳು ಸರ್ಕಾರ ರಚನೆಯ ಕಡೆಗೆ ಗಮನ ಹರಿಸಿವೆ. ಬುಧವಾರ ರಾಷ್ಟ್ರ ರಾಜಧಾನಿ ಡೆಲ್ಲಿಯಲ್ಲಿ ಎರಡೂ ಬಣಗಳ ಮಹತ್ವದ ಸಭೆ ನಡೆಯಲಿದೆ. ಮಿತ್ರಪಕ್ಷಗಳು ಒಟ್ಟಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿ ಸರ್ಕಾರ ರಚನೆಗೆ ತಂತ್ರ- ಪ್ರತಿ ತಂತ್ರ ಹೂಡಲಿವೆ.
ಸಮೀಕ್ಷೆ ಹಾಗೂ ಚುನಾವಣಾ ಪೂರ್ವದ ಸ್ಥಿತಿಗತಿಗಳನ್ನು ಗಮನಿಸಿದರೆ ಇದು ಅಚ್ಚರಿಯ ಫಲಿತಾಂಶವಾಗಿದೆ. ಪ್ರಮುಖವಾಗಿ ಬಲಿಷ್ಠ ಎನಿಸಿಕೊಂಡಿದ್ದ ಬಿಜೆಪಿಗೆ 32 ಸೀಟ್ಗಳ ಕೊರತೆ ಎದುರಿಸಿದೆ. ಆದಾಗ್ಯೂ ತಮ್ಮನ್ನು ಮತ್ತೊಂದು ಬಾರಿ ಅಧಿಕಾರಕ್ಕೆ ಏರಿಸಿದ ಮತದಾರರಿಗೆ ಮೋದಿ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್ ಏರಿಕೆ
ಸ್ಪೀಕರ್ ಸ್ಥಾನದ ಮೇಲೆ ಕಣ್ಣಿಟ್ಟಿರುವ ಟಿಡಿಪಿ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು..
ಮೋದಿಯನ್ನು ಜನ ತಿರಸ್ಕರಿಸಿದ್ದಾರೆ ಎಂದ ರಾಹುಲ್ ಗಾಂಧಿ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಸ್ಪಷ್ಟ ಬಹುಮತ ಸಾಧಿಸದ ಕಾರಣ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ದೇಶದ ಜನ ಪ್ರಧಾನಿ ನರೇಂದ್ರ ಮೋದಿ ಅವರನ್ನು ತಿರಸ್ಕರಿಸಿದ್ದಾರೆ ಎಂಬುದಕ್ಕೆ ಚುನಾವಣೆ ಫಲಿತಾಂಶಕ್ಕೆ ಕನ್ನಡಿಯಾಗಿದೆ. ಇಂಡಿಯಾ ಒಕ್ಕೂಟದ ಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸಿದ್ದು, ಈ ಮುನ್ನಡೆಯು ಹೊಸ ದೃಷ್ಟಿ ಕೋನ ನೀಡಿದೆ” ಎಂದು ಹೇಳಿದ್ದಾರೆ.
ಮೋದಿಗೆ 1.52 ಲಕ್ಷ ಮತಗಳ ಅಂತರದಲ್ಲಿ ಗೆಲುವು
ಉತ್ತರ ಪ್ರದೇಶದ ವಾರಾಣಸಿಯಲ್ಲಿ ನರೇಂದ್ರ ಮೋದಿ ಅವರು ಕಾಂಗ್ರೆಸ್ನ ಅಜಯ್ ರಾಯ್ ಅವರ ವಿರುದ್ಧ 1.52 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ವಾರಾಣಸಿಯಲ್ಲಿ ನರೇಂದ್ರ ಮೋದಿ ಗೆಲುವು
ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ನ ಅಜಯ್ ರಾಯ್ ವಿರುದ್ಧ ಸುಮಾರು ಒಂದೂವರೆ ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆರಂಭದಲ್ಲಿ ಮೋದಿ ಅವರು ಹಿನ್ನಡೆ ಅನುಭವಿಸಿದ್ದರು. ಇದಾದ ನಂತರ ಅವರು ಮುನ್ನಡೆ ಕಾಯ್ದುಕೊಂಡು, ಕೊನೆಗೆ ಗೆಲುವು ಸಾಧಿಸಿದ್ದಾರೆ.
ಕುತೂಹಲ ಘಟ್ಟದತ್ತ ಲೋಕಸಭೆ ಚುನಾವಣೆ ಫಲಿತಾಂಶ
ಲೋಕಸಭೆ ಚುನಾವಣೆ ಫಲಿತಾಂಶವು ಅಂತಿಮ ಘಟ್ಟ ತಲುಪಿದೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವು 295 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೂ ಬಿಜೆಪಿಗೆ ಏಕಾಂಗಿಯಾಗಿ ಸರ್ಕಾರ ರಚಿಸುವ ಸಾಮರ್ಥ್ಯ ಇಲ್ಲದಿರುವುದು ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ನಾಯಕರಿಗೆ ತಲೆನೋವು ತಂದಿದೆ. ಅತ್ತ, ಇಂಡಿಯಾ ಒಕ್ಕೂಟವು 233 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರ ಬೆಂಬಲ ಸೆಳೆಯಲು ಕಸರತ್ತು ನಡೆಸುತ್ತಿದೆ. ಬಿಜೆಪಿಯೂ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರನ್ನು ಹಿಡಿದಿಟ್ಟುಕೊಳ್ಳಲು ಯತ್ನಿಸುತ್ತಿದೆ. ಇದು ಈಗ ಚುನಾವಣೆಯನ್ನು ಇನ್ನಷ್ಟು ಕುತೂಹಲ ಘಟ್ಟಕ್ಕೆ ಕೊಂಡೊಯ್ದಿದೆ.