ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಜೂ. 8ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ಸಭೆಯ ಬಳಿಕ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ. ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ದೆಹಲಿಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಎನ್‌ಡಿಎ ಒಕ್ಕೂಟ 292 ಸೀಟುಗಳು ಹಾಗೂ ಇಂಡಿಯಾ ಬಣ 234 ಸ್ಥಾನಗಳನ್ನು ತನ್ನದಾಗಿಸಿಕೊಂಡಿವೆ. ಎರಡೂ ಬಣಗಳು ಸರ್ಕಾರ ರಚನೆಯ ಕಡೆಗೆ ಗಮನ ಹರಿಸಿವೆ. ಬುಧವಾರ ರಾಷ್ಟ್ರ ರಾಜಧಾನಿ ಡೆಲ್ಲಿಯಲ್ಲಿ ಎರಡೂ ಬಣಗಳ ಮಹತ್ವದ ಸಭೆ ನಡೆಯಲಿದೆ. ಮಿತ್ರಪಕ್ಷಗಳು ಒಟ್ಟಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿ ಸರ್ಕಾರ ರಚನೆಗೆ ತಂತ್ರ- ಪ್ರತಿ ತಂತ್ರ ಹೂಡಲಿವೆ.
ಸಮೀಕ್ಷೆ ಹಾಗೂ ಚುನಾವಣಾ ಪೂರ್ವದ ಸ್ಥಿತಿಗತಿಗಳನ್ನು ಗಮನಿಸಿದರೆ ಇದು ಅಚ್ಚರಿಯ ಫಲಿತಾಂಶವಾಗಿದೆ. ಪ್ರಮುಖವಾಗಿ ಬಲಿಷ್ಠ ಎನಿಸಿಕೊಂಡಿದ್ದ ಬಿಜೆಪಿಗೆ 32 ಸೀಟ್ಗಳ ಕೊರತೆ ಎದುರಿಸಿದೆ. ಆದಾಗ್ಯೂ ತಮ್ಮನ್ನು ಮತ್ತೊಂದು ಬಾರಿ ಅಧಿಕಾರಕ್ಕೆ ಏರಿಸಿದ ಮತದಾರರಿಗೆ ಮೋದಿ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್ ಏರಿಕೆ
ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರಿಗೆ ಮುನ್ನಡೆ ದೊರೆಯುತ್ತಿದೆ. ಡಿ.ಕೆ ಸುರೇಶ್ ಅವರನ್ನು ಹಿಂದಿಕ್ಕಿದ ಅವರು ಗೆಲುವಿನ ಕಡೆಗೆ ಗುರಿಯಿಟ್ಟಿದ್ದಾರೆ.
ಎನ್‌ಡಿಎ- 300
ಇಂಡಿ- 161
ಇತರ- 14
ಉತ್ತರ ಪ್ರದೇಶದ 50 ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ
ಕರ್ನಾಟದದಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ 20 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿ. ಕಾಂಗ್ರೆಸ್ಗೆ ಕೇವಲ 4 ಸ್ಥಾನಗಳ ಮುನ್ನಡೆ, ಜೆಡಿಎಸ್ಗೆ 3 ಸ್ಥಾನಗಳು.
288 ಸ್ಥಾನಗಳಲ್ಲಿ ಮುನ್ನಡೆ ಪಡೆಯುವ ಮೂಲಕ ಭರ್ಜರಿ ಗೆಲುವಿನ ಕಡೆಗೆ ಸಾಗುತ್ತಿರುವ ಎನ್‌ಡಿಎ ಒಕ್ಕೂಟ