ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಜೂ. 8ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ಸಭೆಯ ಬಳಿಕ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ. ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ದೆಹಲಿಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಎನ್‌ಡಿಎ ಒಕ್ಕೂಟ 292 ಸೀಟುಗಳು ಹಾಗೂ ಇಂಡಿಯಾ ಬಣ 234 ಸ್ಥಾನಗಳನ್ನು ತನ್ನದಾಗಿಸಿಕೊಂಡಿವೆ. ಎರಡೂ ಬಣಗಳು ಸರ್ಕಾರ ರಚನೆಯ ಕಡೆಗೆ ಗಮನ ಹರಿಸಿವೆ. ಬುಧವಾರ ರಾಷ್ಟ್ರ ರಾಜಧಾನಿ ಡೆಲ್ಲಿಯಲ್ಲಿ ಎರಡೂ ಬಣಗಳ ಮಹತ್ವದ ಸಭೆ ನಡೆಯಲಿದೆ. ಮಿತ್ರಪಕ್ಷಗಳು ಒಟ್ಟಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿ ಸರ್ಕಾರ ರಚನೆಗೆ ತಂತ್ರ- ಪ್ರತಿ ತಂತ್ರ ಹೂಡಲಿವೆ.
ಸಮೀಕ್ಷೆ ಹಾಗೂ ಚುನಾವಣಾ ಪೂರ್ವದ ಸ್ಥಿತಿಗತಿಗಳನ್ನು ಗಮನಿಸಿದರೆ ಇದು ಅಚ್ಚರಿಯ ಫಲಿತಾಂಶವಾಗಿದೆ. ಪ್ರಮುಖವಾಗಿ ಬಲಿಷ್ಠ ಎನಿಸಿಕೊಂಡಿದ್ದ ಬಿಜೆಪಿಗೆ 32 ಸೀಟ್ಗಳ ಕೊರತೆ ಎದುರಿಸಿದೆ. ಆದಾಗ್ಯೂ ತಮ್ಮನ್ನು ಮತ್ತೊಂದು ಬಾರಿ ಅಧಿಕಾರಕ್ಕೆ ಏರಿಸಿದ ಮತದಾರರಿಗೆ ಮೋದಿ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್ ಏರಿಕೆ
ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ಗೆಲುವು, ಅಭಿನಂದನೆ ತಿಳಿಸಿದ ಪ್ರಿಯಾಂಕಾ ವಾದ್ರಾ.
ಅಮಿತ್ ಶಾ ಭರ್ಜರಿ ಗೆಲುವು
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್‌ನ ಗಾಂಧಿನಗರ ಲೋಕಸಭೆ ಕ್ಷೇತ್ರದಲ್ಲಿ 7.49 ಲಕ್ಷ ಮತಗಳ ಅಂತರದಿಂದ ಪ್ರಚಂಡ ಗೆಲುವು ಸಾಧಿಸಿದ್ದಾರೆ.
ಈಗಿನ ಟ್ರೆಂಡ್ ಹೇಗಿದೆ?
ಎನ್‌ಡಿಎ: 295
ಇಂಡಿಯಾ ಒಕ್ಕೂಟ: 233
ಇತರೆ: 17
ಹಾಸನದಲ್ಲಿ ಶ್ರೇಯಸ್ ಪಟೇಲ್ ವಿರುದ್ಧ ಸೋತ ಪ್ರಜ್ವಲ್ ರೇವಣ್ಣ. 25 ವರ್ಷಗಳ ಬಳಿಕ ಹಾಸನ ಕ್ಷೇತ್ರ ಕಾಂಗ್ರೆಸ್ ವಶಕ್ಕೆ. ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣಗೆ ಗೆಲುವಿನ ಸವಿಯೂ ಇಲ್ಲ.
ಕೇರಳದ 1 ಕಡೆ ಬಿಜೆಪಿ ಮುನ್ನಡೆಯಲ್ಲಿದೆ.
ಕೇರಳದ ಒಟ್ಟು 20 ಸೀಟುಗಳ ಪೈಕಿ ಯುಡಿಎಫ್ 17, ಎಲ್‌ಡಿಎಫ್ 2 ಮತ್ತು ಬಿಜೆಪಿ 1 ಕಡೆ ಮುನ್ನಡೆ ಸಾಧಿಸಿದೆ.