ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಜೂ. 8ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ಸಭೆಯ ಬಳಿಕ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ. ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ದೆಹಲಿಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಎನ್‌ಡಿಎ ಒಕ್ಕೂಟ 292 ಸೀಟುಗಳು ಹಾಗೂ ಇಂಡಿಯಾ ಬಣ 234 ಸ್ಥಾನಗಳನ್ನು ತನ್ನದಾಗಿಸಿಕೊಂಡಿವೆ. ಎರಡೂ ಬಣಗಳು ಸರ್ಕಾರ ರಚನೆಯ ಕಡೆಗೆ ಗಮನ ಹರಿಸಿವೆ. ಬುಧವಾರ ರಾಷ್ಟ್ರ ರಾಜಧಾನಿ ಡೆಲ್ಲಿಯಲ್ಲಿ ಎರಡೂ ಬಣಗಳ ಮಹತ್ವದ ಸಭೆ ನಡೆಯಲಿದೆ. ಮಿತ್ರಪಕ್ಷಗಳು ಒಟ್ಟಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿ ಸರ್ಕಾರ ರಚನೆಗೆ ತಂತ್ರ- ಪ್ರತಿ ತಂತ್ರ ಹೂಡಲಿವೆ.
ಸಮೀಕ್ಷೆ ಹಾಗೂ ಚುನಾವಣಾ ಪೂರ್ವದ ಸ್ಥಿತಿಗತಿಗಳನ್ನು ಗಮನಿಸಿದರೆ ಇದು ಅಚ್ಚರಿಯ ಫಲಿತಾಂಶವಾಗಿದೆ. ಪ್ರಮುಖವಾಗಿ ಬಲಿಷ್ಠ ಎನಿಸಿಕೊಂಡಿದ್ದ ಬಿಜೆಪಿಗೆ 32 ಸೀಟ್ಗಳ ಕೊರತೆ ಎದುರಿಸಿದೆ. ಆದಾಗ್ಯೂ ತಮ್ಮನ್ನು ಮತ್ತೊಂದು ಬಾರಿ ಅಧಿಕಾರಕ್ಕೆ ಏರಿಸಿದ ಮತದಾರರಿಗೆ ಮೋದಿ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್ ಏರಿಕೆ
5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ ಅಮಿತ್ ಶಾ..
ಮೈಸೂರು-ಕೊಡಗು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ
ಬಿಜೆಪಿ ಅಭ್ಯರ್ಥಿ ಯದುವೀರ್ ಮತಗಳು 4,16,716
ಕಾಂಗ್ರೆಸ್ ನ ಲಕ್ಷ್ಮಣ್ 3,27,579 ಮತಗಳು
ಯದುವೀರ್ 89,137 ಮತಗಳ ಮುನ್ನಡೆ
ಉತ್ತರಕನ್ನಡದಲ್ಲಿ 1,75,341 ಮತಗಳಿಂದ ಬಿಜೆಪಿ ಮುನ್ನಡೆ
8ನೇ ಸುತ್ತಿನ ಮತ ಎಣಿಕೆ ಪ್ರಗತಿ
ವಿಶ್ವೇಶ್ವರ ಹೆಗಡೆ ಕಾಗೇರಿ 3,86,193
ಡಾ.ಅಂಜಲಿ ನಿಂಬಾಳ್ಕರ್ 2,10,852
ಇದುವರೆಗೆ 6,14,289 ಮತಗಳ ಎಣಿಕೆ ಮುಕ್ತಾಯ
5060 ಮತಗಳು ನೋಟಾ
20 ಸಾವಿರ ಮತಗಳ ಹಿನ್ನಡೆಯಲ್ಲಿ ಪ್ರಜ್ವಲ್ ರೇವಣ್ಣ.
ಪ್ರಮುಖ ಕ್ಷೇತ್ರಗಳಲ್ಲಿ ಯಾರಿಗೆ ಮುನ್ನಡೆ? ಯಾರಿಗೆ ಹಿನ್ನಡೆ?
* ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಂಗ್ರೆಸ್‌ನ ಅಜಯ್ ರಾಯ್ ವಿರುದ್ಧ ನರೇಂದ್ರ ಮೋದಿಗೆ ಲೀಡ್
* ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾಗೆ ಮುನ್ನಡೆ
* ಗಾಂಧಿನಗರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮುನ್ನಡೆ
* ಕೇರಳದ ವಯನಾಡಿಯಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿಗೆ ಭಾರಿ ಮುನ್ನಡೆ
* ಹಿಮಾಚಲ ಪ್ರದೇಶದ ಮಂಡಿಯಲ್ಲಿ ಕಂಗನಾ ರಣಾವತ್‌ಗೆ ಮುನ್ನಡೆ, ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್‌ಗೆ ಹಿನ್ನಡೆ