ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಜೂ. 8ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ಸಭೆಯ ಬಳಿಕ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ. ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ದೆಹಲಿಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಎನ್‌ಡಿಎ ಒಕ್ಕೂಟ 292 ಸೀಟುಗಳು ಹಾಗೂ ಇಂಡಿಯಾ ಬಣ 234 ಸ್ಥಾನಗಳನ್ನು ತನ್ನದಾಗಿಸಿಕೊಂಡಿವೆ. ಎರಡೂ ಬಣಗಳು ಸರ್ಕಾರ ರಚನೆಯ ಕಡೆಗೆ ಗಮನ ಹರಿಸಿವೆ. ಬುಧವಾರ ರಾಷ್ಟ್ರ ರಾಜಧಾನಿ ಡೆಲ್ಲಿಯಲ್ಲಿ ಎರಡೂ ಬಣಗಳ ಮಹತ್ವದ ಸಭೆ ನಡೆಯಲಿದೆ. ಮಿತ್ರಪಕ್ಷಗಳು ಒಟ್ಟಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿ ಸರ್ಕಾರ ರಚನೆಗೆ ತಂತ್ರ- ಪ್ರತಿ ತಂತ್ರ ಹೂಡಲಿವೆ.
ಸಮೀಕ್ಷೆ ಹಾಗೂ ಚುನಾವಣಾ ಪೂರ್ವದ ಸ್ಥಿತಿಗತಿಗಳನ್ನು ಗಮನಿಸಿದರೆ ಇದು ಅಚ್ಚರಿಯ ಫಲಿತಾಂಶವಾಗಿದೆ. ಪ್ರಮುಖವಾಗಿ ಬಲಿಷ್ಠ ಎನಿಸಿಕೊಂಡಿದ್ದ ಬಿಜೆಪಿಗೆ 32 ಸೀಟ್ಗಳ ಕೊರತೆ ಎದುರಿಸಿದೆ. ಆದಾಗ್ಯೂ ತಮ್ಮನ್ನು ಮತ್ತೊಂದು ಬಾರಿ ಅಧಿಕಾರಕ್ಕೆ ಏರಿಸಿದ ಮತದಾರರಿಗೆ ಮೋದಿ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್ ಏರಿಕೆ
ತುಮಕೂರಿನಲ್ಲಿ ಸೋಮಣ್ಣಗೆ ಮತ್ತೆ ಮುನ್ನಡೆ
ಒಟ್ಟು 2,694 ಮತಗಳಿಂದ ಸೋಮಣ್ಣ ಮುನ್ನಡೆ
ಸೋಮಣ್ಣ- 24,270 ಮತಗಳು
ಮುದ್ದಹನುಮೇಗೌಡ- 21,576 ಮತಗಳು
ಬೆಂಗಳೂರು ಕೇಂದ್ರ
ಕಾಂಗ್ರೆಸ್ – 25,010
ಬಿಜೆಪಿ – 27,993
ಮುನ್ನಡೆ- 2,983 ಬಿಜೆಪಿ
ಸ್ಪರ್ಧಿಸಿರುವ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಕಾಪಾಡಿಕೊಂಡಿರುವ ಜೆಡಿಎಸ್.
ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಮುನ್ನಡೆ
ಬಿಜೆಪಿಯ ಬಾಲರಾಜು – 95,856
ಕಾಂಗ್ರೆಸ್‌ನ ಸುನಿಲ್ ಬೋಸ್ – 1,20,389
25 ಸಾವಿರಕ್ಕೂ ಹೆಚ್ಚಿನ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಮುನ್ನಡೆ
ಷೇರು ಮಾರುಕಟ್ಟೆಯಲ್ಲಿ ಆರಂಭಿಕ ಕುಸಿತ
ಸೆನ್ಸೆಕ್ಸ್ 1,600 ಪಾಯಿಂಟ್ಸ್ ಕುಸಿತ
ನಿಫ್ಟಿ 500 ಪಾಯಿಂಟ್ಸ್ ಕುಸಿತ