Site icon Vistara News

ಪರೀಕ್ಷಾ ಅಕ್ರಮಕ್ಕೆ 10 ವರ್ಷ ಜೈಲು, ಕೋಟಿ ರೂ. ದಂಡ; ಮಹತ್ವದ ವಿಧೇಯಕ ಪಾಸ್

Exam

Lok Sabha Passes Public Examination Bill To Prevent Paper Leaks, Cheating

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಕಲು, ಅಕ್ರಮ ತಡೆಗಾಗಿ ಕೇಂದ್ರ ಸರ್ಕಾರವು (Central Government) ಲೋಕಸಭೆಯಲ್ಲಿ ಮಂಡಿಸಿದ ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ವಿಧೇಯಕಕ್ಕೆ (Public Examinations (Prevention of Unfair Means) Bill-2024) ಅಂಗೀಕಾರ ದೊರೆತಿದೆ. ವಿಧೇಯಕಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದ್ದು, ಬಳಿಕ ರಾಜ್ಯಸಭೆಯಲ್ಲಿ (Rajya Sabha) ಮಂಡಿಸಲಾಗುತ್ತದೆ. ರಾಜ್ಯಸಭೆಯಲ್ಲೂ ಅಂಗೀಕಾರ ದೊರೆತ ನಂತರ ರಾಷ್ಟ್ರಪತಿ ಸಹಿಗೆ ಕಳುಹಿಸಲಾಗುತ್ತದೆ. ರಾಷ್ಟ್ರಪತಿ ಅಂಗೀಕಾರದ ಬಳಿಕ ವಿಧೇಯಕವು ಕಾಯ್ದೆಯಾಗಿ ಜಾರಿಗೆ ಬರಲಿದೆ.

ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ವೇಳೆ ನಕಲು ಮಾಡಿದವರು, ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರು ಸೇರಿ ಹಲವು ರೀತಿಯ ಅಕ್ರಮ ಎಸಗಿದವರಿಗೆ ಕಠಿಣ ಶಿಕ್ಷೆ ವಿಧಿಸುವ ದಿಸೆಯಲ್ಲಿ ವಿಧೇಯಕ ಮಂಡಿಸಲಾಗಿದೆ. ಕರ್ನಾಟಕದಲ್ಲಿ ಭುಗಿಲೆದ್ದ ಪಿಎಸ್‌ಐ ನೇಮಕಾತಿ ಹಗರಣವು ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಹೊಸ ವಿಧೇಯಕ ಮಂಡಿಸಿರುವುದು ಮಹತ್ವ ಪಡೆದಿದೆ. ಹಾಗಾದರೆ, ವಿಧೇಯಕದಲ್ಲಿ ಏನೇನಿದೆ? ಯಾವ ಪ್ರಮಾಣದಲ್ಲಿ ಶಿಕ್ಷೆ, ದಂಡ ವಿಧಿಸಲಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ.

ವಿಧೇಯಕದಲ್ಲಿರುವ ಪ್ರಮುಖ ಅಂಶಗಳು

ಇದನ್ನೂ ಓದಿ: Uniform Civil Code: ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ವಿಧೇಯಕ ಮಂಡನೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version