Site icon Vistara News

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Lok Sabha Speaker

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಆಗಿ ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇದೀಗ ಎರಡನೇ ಬಾರಿ ಲೋಕಸಭೆ ಸ್ಪೀಕರ್‌ ಆಗಿ ಆಯ್ಕೆ ಆಗಿರುವ ಓಂ ಬಿರ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಎಲ್ಲಾ ಸಂಸತ್‌ ಸದಸ್ಯರು ಪಕ್ಷಾತೀತ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಅಮೃತ ಕಾಲದ ಸಮಯದಲ್ಲಿ ನೀವು ಎರಡನೇ ಬಾರಿಗೆ ಈ ಜವಾಬ್ದಾರಿಯುತ ಹುದ್ದೆ ಅಲಂಕರಿಸಿರುವುದು ಬಹಳ ಸಂತಸ ತಂದಿದೆ. ನಿಮ್ಮ ಅನುಭವದೊಂದಿಗೆ, ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ. ನಿಮ್ಮ ಮುಖದ ಮೇಲಿನ ಸಿಹಿಯಾದ ನಗು ಇಡೀ ಸದನವನ್ನು ಸಂತೋಷವನ್ನಾಗಿರಿಸುತ್ತದೆ ಎಂದು ಹೇಳಿದರು.

ಸ್ವಾತಂತ್ರ್ಯದ 70 ವರ್ಷಗಳಲ್ಲಿ ನಡೆಯದ ಕೆಲಸಗಳು ನಿಮ್ಮ ಅಧ್ಯಕ್ಷತೆಯಲ್ಲಿ ಈ ಸದನದಲ್ಲಿ ಸಾಧ್ಯವಾಗಿವೆ. ಹಲವು ಮೈಲಿಗಲ್ಲುಗಳಿಗೆ ಈ ಸದನ ಸಾಕ್ಷಿಯಾಗಿತ್ತು. 17 ನೇ ಲೋಕಸಭೆಯ ಸಾಧನೆಗಳ ಬಗ್ಗೆ ದೇಶವು ಹೆಮ್ಮೆಪಡುತ್ತದೆ ಎಂದು ಹೇಳಿದರು.

ಇದು ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, “ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡಿ ಭಾರತದ ಜನರನ್ನು ಪ್ರತಿನಿಧಿಸಲು ಅವಕಾಶ ನೀಡುವ ಮೂಲಕ, ನೀವು ಭಾರತದ ಸಂವಿಧಾನವನ್ನು ರಕ್ಷಿಸುವ ನಿಮ್ಮ ಕರ್ತವ್ಯವನ್ನು ನೀವು ಸರಿಯಾಗಿ ನಿರ್ವಹಿಸುತ್ತೀರಿ ಎಂಬ ಬಗ್ಗೆ ನಮಗೆ ವಿಶ್ವಾಸವಿದೆ. ನಾನು ಮತ್ತೊಮ್ಮೆ ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ ಎಂದರು.

ಇದನ್ನೂ ಓದಿ: Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Exit mobile version