ಹೊಸದಿಲ್ಲಿ: ವಾಣಿಜ್ಯ ಗ್ಯಾಸ್ (commercial LPG) ಸಿಲಿಂಡರ್ ದರಗಳನ್ನು (LPG Price cut) ಇಳಿಕೆ ಮಾಡಲಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ₹99.75 ಇಳಿಕೆಯಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಮಂಗಳವಾರ ಇಳಿಸಿವೆ. ಮನೆಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ (domestic LPG) ಬೆಲೆಗಳು ಬದಲಾಗಿಲ್ಲ. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ₹ 1,860.00 ಹಾಗೂ ಮನೆ ಬಳಕೆ ಸಿಲಿಂಡರ್ ಬೆಲೆ ₹ 1,105.50 ಇದೆ.
19 KG ವಾಣಿಜ್ಯ LPG ಸಿಲಿಂಡರ್ ದರವನ್ನು ಜುಲೈನಲ್ಲಿ ಕೊನೆಯದಾಗಿ ಪರಿಷ್ಕರಿಸಲಾಗಿತ್ತು. ತೆರಿಗೆಗಳನ್ನು ಅವಲಂಬಿಸಿ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಇಂದಿನಿಂದ ದೆಹಲಿಯಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ₹1,680 ಆಗಲಿದೆ. ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಲ್ಲಿ ಕ್ರಮವಾಗಿ ₹1,802, ₹1,640 ಮತ್ತು ₹1,852.50 ಇರುತ್ತದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆಗಳು ದೇಶೀಯ ಮಾರುಕಟ್ಟೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳ ಮೇಲೆ ಪರಿಣಾಮ ಬೀರುತ್ತವೆ. ಈ ವರ್ಷ ಮಾರ್ಚ್ 1ರಿಂದ 14.2 KG LPG ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸಲಾಗಿಲ್ಲ. ಸಬ್ಸಿಡಿ ರಹಿತ ಮನೆಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಕ್ರಮವಾಗಿ ದೆಹಲಿ, ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಲ್ಲಿ ₹1,103, ₹1,129, ₹1,102.50 ಮತ್ತು ₹1,118.50 ಇವೆ.
ಇದನ್ನೂ ಓದಿ: LPG Price Cut: 19ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ; ಈಗೆಷ್ಟಿದೆ ದರ?