Site icon Vistara News

LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

LPG Price Cut

ನವದೆಹಲಿ: ಮೇ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 19 ರೂ. ಕಡಿಮೆ ಮಾಡಿವೆ (LPG Price Cut). ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 19 ರೂ. ಕಡಿತಗೊಂಡು 1,825.50 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,745.50 ರೂ. ಆಗಿದೆ. ಹಿಂದೆ 1,764.50 ರೂ. ಆಗಿತ್ತು. ಮುಂಬೈಯಲ್ಲಿಯೂ 19 ರೂ. ಇಳಿಕೆಯಾಗಿದ್ದು ಹೊಸ ಬೆಲೆಯನ್ನು 1,698.50 ರೂ.ಗೆ ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ 1,911 ರೂ., ಕೋಲ್ಕತ್ತಾದಲ್ಲಿ 20 ರೂ.ಗಳ ಕಡಿತದ ನಂತರ 1,859 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತದೆ.

ಜಾಗತಿಕ ತೈಲ ಬೆಲೆಗಳು ಇತ್ತೀಚೆಗೆ ಕುಸಿದ ಹಿನ್ನೆಲೆಯಲ್ಲಿ ದರ ಇಳಿಕೆಯಾಗಿದೆ. ಅಮೆರಿಕದಲ್ಲಿ ಕಚ್ಚಾ ದಾಸ್ತಾನುಗಳ ಏರಿಕೆ ಮತ್ತು ಅಸ್ಥಿರ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಸಂಭಾವ್ಯ ಕದನ ವಿರಾಮ ಒಪ್ಪಂದದ ಸುತ್ತ ಹೆಚ್ಚುತ್ತಿರುವ ಆಶಾವಾದದ ಕಾರಣದಿಂದ ಜಾಗತಿಕ ತೈಲ ಬೆಲೆಗಳು ಕುಸಿಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ವಾಣಿಜ್ಯ ಎಲ್‌ಪಿಜಿ ಬೆಲೆಗಳ ಕಡಿತವು ಈ ಸಿಲಿಂಡರ್‌ಗಳನ್ನೇ ಅವಲಂಬಿಸಿರುವ ವ್ಯವಹಾರಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯ ಪ್ರವೃತ್ತಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ದೇಶಾದ್ಯಂತದ ಗ್ರಾಹಕರಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಹೊಂದಾಣಿಕೆಗಳನ್ನು ಮಾಡುವುದಾಗಿ ಒಎಂಸಿಗಳು ಭರವಸೆ ನೀಡಿವೆ.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ.

ಇದನ್ನೂ ಓದಿ: LPG Aadhaar Link: ಎಲ್‌ಪಿಜಿ ಕನೆಕ್ಷನ್‌ಗೆ ಆಧಾರ್ ಲಿಂಕ್ ಮಾಡಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

ತೈಲ ಮಾರುಕಟ್ಟೆ ಕಂಪನಿಗಳು ಹಿಂದಿನ ಘೋಷಣೆಯನ್ನು ಮಾರ್ಚ್ 1ರಂದು ಮಾಡಿದ್ದು, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, OMCಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ₹25ರಷ್ಟು ಹೆಚ್ಚಿಸಿದ್ದವು.

Exit mobile version