Site icon Vistara News

Petrol Price Cut: ಎಲ್‌ಪಿಜಿ ದರ ಇಳಿಯಿತು, ಕೆಲವೇ ದಿನದಲ್ಲಿ ಪೆಟ್ರೋಲ್‌ ಬೆಲೆಯೂ ಇಳಿಕೆ? ಮೋದಿ ಪ್ಲಾನ್‌ ಏನು?

Narendra Modi

LPG Price Slashed Now, Next Petrol Price Cut? What Is Centre's Plan For Lok Sabha Election 2024

ನವದೆಹಲಿ: 2024ರ ಲೋಕಸಭೆ ಚುನಾವಣೆ ಹಾಗೂ ವರ್ಷಾಂತ್ಯದಲ್ಲಿ ಹಲವು ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಕಲ ರೀತಿಯಲ್ಲಿ ಸಜ್ಜಾಗುತ್ತಿದ್ದಾರೆ. ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 200 ರೂ. ಇಳಿಸಿದೆ. ಆ ಮೂಲಕ ಬಡವರು ಹಾಗೂ ಮಧ್ಯಮ ವರ್ಗದವರ ಹೊರೆಯನ್ನು ಕಡಿಮೆ ಮಾಡಿದೆ. ಇಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಪೆಟ್ರೋಲ್‌ (Petrol Price Cut) ಸೇರಿ ಹಲವು ಉತ್ಪನ್ನಗಳ ಬೆಲೆಯನ್ನು ಇಳಿಕೆ ಮಾಡುವುದು ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ತಿಳಿದುಬಂದಿದೆ.

ದೇಶದಲ್ಲಿ ಎಲ್ಲಿಯೇ ಚುನಾವಣೆ ನಡೆದರೂ ಬೆಲೆಯೇರಿಕೆಯು ಪ್ರತಿಪಕ್ಷಗಳ ಅಸ್ತ್ರವಾಗಿದೆ. ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆಯನ್ನು ಕೇಂದ್ರ ಸರ್ಕಾರ ಏರಿಸಿದ್ದು ಇದಕ್ಕೆ ಕಾರಣವಾಗಿದೆ. ಹಾಗಾಗಿ, ಪ್ರತಿಪಕ್ಷಗಳ ಅಸ್ತ್ರದಿಂದ ತಪ್ಪಿಸಿಕೊಳ್ಳುವುದು ಹಾಗೂ ಜನರ ಹೊರೆ ಕಡಿಮೆ ಮಾಡುವ ಮೂಲಕ ಅವರ ವಿಶ್ವಾಸ ಗಳಿಸುವುದು ಕೇಂದ್ರದ ಉದ್ದೇಶ ಎನ್ನಲಾಗುತ್ತಿದೆ. ಹಾಗಾಗಿ, ಕೆಲವೇ ದಿನಗಳಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನೂ ಇಳಿಕೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಎಲ್‌ಪಿಜಿ ಬೆಲೆ ಇಳಿಕೆ ಘೋಷಣೆ

ಕಿಸಾನ್‌ ಸಮ್ಮಾನ್‌ ನಿಧಿ ಹೆಚ್ಚಳ ಸಾಧ್ಯತೆ

ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಅಡಿಯಲ್ಲಿ ದೇಶದ ಕೋಟ್ಯಂತರ ರೈತರಿಗೆ ವಾರ್ಷಿಕವಾಗಿ ನೀಡುವ 6 ಸಾವಿರ ರೂ. ಸಹಾಯಧನದ ಮೊತ್ತವನ್ನು ಹೆಚ್ಚಿಸುವುದು ಕೂಡ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಮುಂದಿನ ಬಜೆಟ್‌ನಲ್ಲಿ ಕಿಸಾನ್‌ ಸಮ್ಮಾನ್‌ ನಿಧಿಯನ್ನು ಹೆಚ್ಚಿಸುವ ಮೂಲಕ ಕೋಟ್ಯಂತರ ರೈತರ ಬೆಂಬಲ ಗಳಿಸುವುದು ಸರ್ಕಾರದ ತಂತ್ರವಾಗಿದೆ. ಹಾಗೆಯೇ, ಬಜೆಟ್‌ನಲ್ಲಿ ಕೆಲ ಅಚ್ಚರಿಯ ಘೋಷಣೆಗಳನ್ನೂ ಕೇಂದ್ರ ಸರ್ಕಾರ ಮಾಡುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: LPG Price Cut: ದೇಶದ ಹೆಣ್ಣುಮಕ್ಕಳಿಗೆ ಮೋದಿ ಭರ್ಜರಿ ಗಿಫ್ಟ್;‌ ಎಲ್‌ಪಿಜಿ ಸಿಲಿಂಡರ್ ದರ 200 ರೂ. ಇಳಿಕೆ

ಹಣದುಬ್ಬರ ತಡೆಗೆ ಯೋಜನೆ

ವಿತ್ತಿಯ ಕೊರತೆಯ ಗುರಿಗೆ ಧಕ್ಕೆಯಾಗದಂತೆ ಆಹಾರ ಮತ್ತು ಇಂಧನಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ವಿವಿಧ ಸಚಿವಾಲಯಗಳ ಬಜೆಟ್​​ಗಳಿಂದ 1 ಲಕ್ಷ ಕೋಟಿ ರೂಪಾಯಿಗಳನ್ನು (12 ಬಿಲಿಯನ್ ಡಾಲರ್) ಮರುಹಂಚಿಕೆ ಮಾಡಲು ಕೇಂದ್ರ ಸರಕಾರ ಮುಂದಾಗಿದೆ ಎಂಬುದಾಗಿ ವರದಿಯಾಗಿದೆ. ಮುಂಬರುವ ಲೋಕಸಭಾ ಚುನಾವಣೆ ವೇಳೆ ಬೆಲೆ ಏರಿಕೆಯೇ ವಿರೋಧ ಪಕ್ಷಗಳಿಗೆ ಪ್ರಧಾನ ಅಸ್ತ್ರವಾಗಬಹುದು ಎಂಬ ಅಂಶವನ್ನು ಆಧರಿಸಿ ಹಣದುಬ್ಬರ ತಡೆಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೊಸ ಮಾಸ್ಟರ್​ ಪ್ಲ್ಯಾನ್​ ರೂಪಿಸಿದೆ.

ತೈಲಗಳ ಮಾರಾಟದ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದು ಮತ್ತು ಅಡುಗೆ ಎಣ್ಣೆ ಮತ್ತು ಗೋಧಿಯ ಮೇಲಿನ ಆಮದು ಸುಂಕವನ್ನು ಸರಾಗಗೊಳಿಸುವುದು ಸೇರಿದಂತೆ ಹಲವಾರು ಘೋಷಣೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮುಂಬರುವ ದಿನಗಳಲ್ಲಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Exit mobile version