Site icon Vistara News

MP Election Results: ಮಧ್ಯಪ್ರದೇಶದಲ್ಲಿ ಪೈಪೋಟಿ ಮಧ್ಯೆಯೂ ಬಿಜೆಪಿಗೆ ಮುನ್ನಡೆ; ಟ್ರೆಂಡ್‌ ಹೀಗಿದೆ

shivaraj singh chouhan

Madhya Pradesh Assembly Election Results 2023: BJP Leads, Will Cross Majority Mark?

ಭೋಪಾಲ್‌: ಮಧ್ಯಪ್ರದೇಶದಲ್ಲಿ ಮತ ಎಣಿಕೆ ಕಾರ್ಯವು (MP Election Results) ಭರದಿಂದ ಸಾಗುತ್ತಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿದ್ದು, ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ಗುರಿಯತ್ತ ಸಾಗುತ್ತಿದೆ. ಆದಾಗ್ಯೂ, ರಾಜ್ಯದಲ್ಲಿ ಕಾಂಗ್ರೆಸ್‌ ತೀವ್ರ ಪೈಪೋಟಿ ನೀಡುತ್ತಿದ್ದು, ಇನ್ನೂ ಒಂದೆರಡು ಗಂಟೆಗಳಲ್ಲಿ ವಿಧಾನಸಭೆ ಚುನಾವಣೆ (Madhya Pradesh Assembly Election 2023) ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಲಾಗುತ್ತಿದೆ.

ಯಾವ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಮುನ್ನಡೆ?

ಬಿಜೆಪಿ 118
ಕಾಂಗ್ರೆಸ್‌ 93
ಇತರೆ 4

ಮಧ್ಯಪ್ರದೇಶದಲ್ಲಿ ಒಟ್ಟು 230 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, ಮ್ಯಾಜಿಕ್‌ ನಂಬರ್‌ 116 ಆಗಿದೆ. ಈಗಾಗಲೇ ಬಿಜೆಪಿಯು 118 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಆರಂಭಿಕ ಹಂತದ ಟ್ರೆಂಡ್‌ ಆಗಿರುವುದರಿಂದ ಮುಂದಿನ ಒಂದೆರಡು ಗಂಟೆಗಳವರೆಗೆ ಸ್ಪಷ್ಟವಾಗಿ ಏನೂ ಹೇಳಲು ಆಗುವುದಿಲ್ಲ ಎಂದು ರಾಜಕೀಯ ತಜ್ಞರು ವಿಶ್ಲೇಷಣೆ ನಡೆಸಿದ್ದಾರೆ.

ಗೆಲುವಿನ ವಿಶ್ವಾಸದಲ್ಲಿ ಬಿಜೆಪಿ ನಾಯಕರು

ಇದನ್ನೂ ಓದಿ: Election Results 2023: ವಿಧಾನಸಭೆ ಚುನಾವಣೆಗಳು ಲೋಕಸಭೆಯ ಸೆಮಿಫೈನಲ್‌ ಏಕೆ?

ಮಧ್ಯಪ್ರದೇಶದ 230 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ ಇದೆ. ಅದರಲ್ಲೂ, ಕಳೆದ ಬಾರಿ ಬಿಜೆಪಿಗಿಂತ ಹೆಚ್ಚಿನ ಸ್ಥಾನ ಪಡೆದಿದ್ದ ಕಾಂಗ್ರೆಸ್‌ಅನ್ನು ಬಿಜೆಪಿ ಓವರ್‌ಟೇಕ್‌ ಮಾಡಿ ಅಧಿಕಾರ ಹಿಡಿದಿದೆ. ಈಗ ಮತ್ತೆ ಬಹುಮತ ಸಾಧಿಸಿ ಅಧಿಕಾರದ ಗದ್ದುಗೆಯೇರಲು ಕಾಂಗ್ರೆಸ್‌ ಇನ್ನಿಲ್ಲದ ರಣತಂತ್ರ ರೂಪಿಸಿದೆ. ಮತ್ತೊಂದೆಡೆ, ಕಳೆದ ಬಾರಿ ಸಾಧಿಸದ ಬಹುಮತವನ್ನು ಈ ಬಾರಿ ಸಾಧಿಸುವ ಮೂಲಕ ಮತ್ತೆ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ಹಾಗಾಗಿ, ಈ ಬಾರಿಯ ಚುನಾವಣೆಯು ತೀವ್ರ ಹಣಾಹಣಿಯಿಂದ ಕೂಡಿದೆ.

ಛತ್ತೀಸ್‌ಗಢ 11, ಮಧ್ಯಪ್ರದೇಶ 29, ಮಿಜೋರಾಂ 1, ರಾಜಸ್ಥಾನ 25 ಹಾಗೂ ತೆಲಂಗಾಣದ 17 ಲೋಕಸಭೆ ಕ್ಷೇತ್ರ ಸೇರಿ ಐದೂ ರಾಜ್ಯಗಳಲ್ಲಿ ಒಟ್ಟು 83 ಲೋಕಸಭೆ ಕ್ಷೇತ್ರಗಳಿವೆ. ಈ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ, ಆ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರ ಗೆಲ್ಲಲು ಸಾಧ್ಯವಾಗಲಿದೆ. ಹಾಗೆಯೇ, ಜನರ ಒಲವು ಯಾವ ಪಕ್ಷದ ಕಡೆ ಇದೆ ಎಂಬುದರ ಮುನ್ಸೂಚನೆಯು ವಿಧಾನಸಭೆ ಚುನಾವಣೆಯಲ್ಲಿಯೇ ತಿಳಿಯಲಿದೆ. ಲೋಕಸಭೆ ಚುನಾವಣೆಯ ಪ್ರಚಾರಕ್ಕೂ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮುನ್ನುಡಿ ಬರೆಯಲಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ: https://vistaranews.com/tag/assembly-election-2023

Exit mobile version