ಮಧ್ಯಪ್ರದೇಶದಲ್ಲಿ ತೀರ್ಥಯಾತ್ರೆಗೆ ಹೋಗುವ ಹಿರಿಯರಿಗೆ ಉಚಿತ ವಿಮಾನ ಸೌಲಭ್ಯ, ಸಿಎಂ ಚೌಹಾಣ್‌ ಚಾಲನೆ - Vistara News

ದೇಶ

ಮಧ್ಯಪ್ರದೇಶದಲ್ಲಿ ತೀರ್ಥಯಾತ್ರೆಗೆ ಹೋಗುವ ಹಿರಿಯರಿಗೆ ಉಚಿತ ವಿಮಾನ ಸೌಲಭ್ಯ, ಸಿಎಂ ಚೌಹಾಣ್‌ ಚಾಲನೆ

ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ತೀರ್ಥ ದರ್ಶನ ಯೋಜನೆ ಅಡಿಯಲ್ಲಿ ಹಿರಿಯ ನಾಗರಿಕರು ಮೇ 21ರಿಂದ ಜುಲೈವರೆಗೆ ವಿಶೇಷ ವಿಮಾನಗಳಲ್ಲಿ ಉಚಿತವಾಗಿ ಸಂಚರಿಸಬಹುದಾಗಿದೆ. ಹಿರಿಯ ನಾಗರಿಕರು ಭೋಪಾಲ್‌ನಿಂದ ಪ್ರಯಾಗರಾಜ್‌ವರೆಗೆ ವಿಮಾನದಲ್ಲಿ ಉಚಿತವಾಗಿ ಪ್ರಯಾಣಿಸಲು ವ್ಯವಸ್ಥೆ ಮಾಡಲಾಗಿದೆ. ಬೇರೆ ಕ್ಷೇತ್ರಗಳಿಗೂ ವಿಮಾನದ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

Shivraj Singh Chouhan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭೋಪಾಲ್‌: ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಲೇ ಐದು ಗ್ಯಾರಂಟಿಗಳನ್ನು ಜಾರಿಗೆ ಮುಂದಾಗಿರುವ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಸರ್ಕಾರವು ಪ್ರಯಾಗರಾಜ್‌ ತೀರ್ಥಯಾತ್ರೆ ಕೈಗೊಳ್ಳುವ ಹಿರಿಯ ನಾಗರಿಕರಿಗೆ ಉಚಿತವಾಗಿ ವಿಮಾನದಲ್ಲಿ ಸಂಚರಿಸುವ ‘ಭಾಗ್ಯ’ ನೀಡಿದೆ. ಭಾನುವಾರ 32 ಹಿರಿಯ ನಾಗರಿಕರು ಭೋಪಾಲ್‌ನಿಂದ ಪ್ರಯಾಗರಾಜ್‌ಗೆ ಉಚಿತವಾಗಿ ಹಾರಾಟ ನಡೆಸಿದ್ದು, ವಿಮಾನದ ಒಳಗೆ ಹೋಗಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಶುಭ ಕೋರಿದ್ದಾರೆ.

ಮಧ್ಯಪ್ರದೇಶದಲ್ಲಿ ಜಾರಿಗೊಳಿಸಲಾಗಿರುವ ಮುಖ್ಯಮಂತ್ರಿ ತೀರ್ಥ ದರ್ಶನ ಯೋಜನೆ ಅನ್ವಯ ಇದೇ ಮೊದಲ ಬಾರಿಗೆ ಹಿರಿಯ ನಾಗರಿಕರು ವಿಮಾನದಲ್ಲಿ ಸಂಚರಿಸಿದ್ದಾರೆ. ಭೋಪಾಲ್‌ನ ರಾಜಾ ಭೋಜ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು 24 ಪುರುಷರು ಹಾಗೂ 8 ಮಹಿಳೆಯರು ಸೇರಿ 32 ಜನರಿಗೆ ಶುಭ ಕೋರಿ, ವಿಮಾನ ಪ್ರಯಾಣಕ್ಕೆ ಚಾಲನೆ ನೀಡಿದರು.

ಯಾತ್ರಿಕರಿಗೆ ಶುಭಕೋರಿದ ಚೌಹಾಣ್

ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರವು 2012ರಲ್ಲಿಯೇ ತೀರ್ಥಯಾತ್ರೆ ಕೈಗೊಳ್ಳುವವರಿಗೆ ರೈಲುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಯೋಜನೆ ಜಾರಿಗೊಳಿಸಲಾಗಿತ್ತು. ಈಗ ಅದೇ ಬಿಜೆಪಿ ಸರ್ಕಾರವು ವಿಮಾನಯಾನಕ್ಕೂ ಉಚಿತ ಯೋಜನೆ ಕಲ್ಪಿಸಿದೆ. ವಿಶೇಷ ರೈಲುಗಳಲ್ಲಿ ಮಧ್ಯಪ್ರದೇಶದಲ್ಲಿ ಇದುವರೆಗೆ 7.82 ಲಕ್ಷ ಪ್ರಯಾಣಿಕರು ತೀರ್ಥಯಾತ್ರೆ ಕೈಗೊಂಡಿದ್ದಾರೆ. ಇದಕ್ಕಾಗಿ, 782 ವಿಶೇಷ ರೈಲುಗಳು ಸಂಚರಿಸಿವೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕಾಂಗ್ರೆಸ್‌ನ ಉಚಿತ ಕೊಡುಗೆಗಳು ಜನರಿಗೆ ನಿರಾಸೆ ಮಾಡದಿರಲಿ

ಮುಖ್ಯಮಂತ್ರಿ ತೀರ್ಥ ದರ್ಶನ ಯೋಜನೆ ಅಡಿಯಲ್ಲಿ ಮೇ 21ರಿಂದ ಜುಲೈವರೆಗೆ ಹಿರಿಯ ನಾಗರಿಕರು ಭೋಪಾಲ್‌ನಿಂದ ಪ್ರಯಾಗರಾಜ್‌ಗೆ ಉಚಿತವಾಗಿ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಇದಕ್ಕೆ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕ್ರಿಯಾಯೋಜನೆ ರೂಪಿಸಿ, ವಿಶೇಷ ಆಸಕ್ತಿ ತೋರಿದ್ದಾರೆ.

ಬೇರೆ ತೀರ್ಥಕ್ಷೇತ್ರಗಳಿಗೂ ವಿಮಾನ ಸೌಲಭ್ಯ

ಭೋಪಾಲ್‌ನಿಂದ ಪ್ರಯಾಗರಾಜ್‌ಗೆ ಮಾತ್ರವಲ್ಲ ಮೇ 23ರಂದು ಅಗರ್‌-ಮಾಲ್ವಾ ಜಿಲ್ಲೆಯ ನಾಗರಿಕರು ಇಂದೋಋ ವಿಮಾನ ನಿಲ್ದಾಣದಿಂದ ಶಿರಡಿಗೆ, ಬೆತುಲ್‌ ಜಿಲ್ಲೆಯ ನಾಗರಿಕರು ಮೇ 26ರಂದು ಭೋಪಾಲ್‌ ವಿಮಾನ ನಿಲ್ದಾಣದಿಂದ ಮಥುರಾ, ಮೇ 26ರಂದು ದೇವಾಸ್‌ ಯಾತ್ರಿಕರು ಇಂದೋರ್‌ನಿಂದ ಶಿರಡಿಗೆ ಉಚಿತವಾಗಿ ವಿಮಾನದಲ್ಲಿ ಸಂಚಾರ ನಡೆಸಲಿದ್ದಾರೆ. ಜೂನ್‌ 3ರಂದು ಖಂಡ್ವಾ ನಾಗರಿಕರು ಇಂದೋರ್‌ನಿಂದ ಕೋಲ್ಕೊತಾ ಮಾರ್ಗವಾಗಿ ಗಂಗಾಸಾಗರ್‌ಗೆ ತೆರಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಬಿಜೆಪಿ ಪಟ್ಟಿ ಪ್ರಕಟ: ತಿರುವನಂತಪುರಂನಲ್ಲಿ ರಾಜೀವ್‌ ಚಂದ್ರಶೇಖರ್‌ Vs ಶಶಿ ತರೂರ್?‌

ತಿರುವನಂತಪುರಂ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಅವರನ್ನು ಕಣಕ್ಕಿಳಿಸಿದೆ. ಈ ಕ್ಷೇತ್ರದ ಸಂಸದ ಶಶಿ ತರೂರ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದರೆ ಜಿದ್ದಾಜಿದ್ದಿನ ಕದನ ಏರ್ಪಡಲಿದೆ.

VISTARANEWS.COM


on

Shashi Tharoor And Rajeev Chandrasekhar
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2023) ಹಿನ್ನೆಲೆಯಲ್ಲಿ ಬಿಜೆಪಿಯು ಅಭ್ಯರ್ಥಿಗಳ ಪಟ್ಟಿ (BJP Candidates List) ಬಿಡುಗಡೆ ಮಾಡಿದೆ. 195 ಅಭ್ಯರ್ಥಿಗಳಲ್ಲಿ ಹೊಸ ಮುಖಗಳಿಗೆ, ಯುವಕರಿಗೆ, ಮಹಿಳೆಯರಿಗೆ ಆದ್ಯತೆ ನೀಡಿದೆ. ಅದರಲ್ಲೂ, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ (Rajeev Chandrashekhar) ಅವರನ್ನು ತಿರುವನಂತಪುರಂನಿಂದ ಬಿಜೆಪಿ ಕಣಕ್ಕಿಳಿಸಿದ್ದು, ಈ ಕ್ಷೇತ್ರದ ಸಂಸದರಾಗಿರುವ ಶಶಿ ತರೂರ್‌ (Shashi Tharoor) ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದರೆ ಭಾರಿ ಕದನ ನಡೆಯಲಿದೆ.

ತಿರುವನಂತಪುರಂ ಕ್ಷೇತ್ರದ ಹಾಲಿ ಸಂಸದರಾಗಿರುವ ಶಶಿ ತರೂರ್‌ ಅವರು ಕ್ಷೇತ್ರದಲ್ಲಿ 2009ರಿಂದಲೂ ಸಂಸದರಾಗಿದ್ದಾರೆ. ಇವರು ಸತತವಾಗಿ ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ಹಾಗಾಗಿ, ಈ ಬಾರಿಯೂ ಕಾಂಗ್ರೆಸ್‌ ಶಶಿ ತರೂರ್‌ ಅವರಿಗೇ ಟಿಕೆಟ್‌ ನೀಡುವ ಸಾಧ್ಯತೆ ಇದೆ. ಹಾಗೊಂದು ವೇಳೆ, ಶಶಿ ತರೂರ್‌ ಅವರಿಗೆ ಟಿಕೆಟ್‌ ನೀಡಿದರೆ, ಕ್ಷೇತ್ರದಲ್ಲಿ ರಾಜೀವ್‌ ಚಂದ್ರಶೇಖರ್‌ ಅವರು ಶಶಿ ತರೂರ್‌ ಅವರಿಗೆ ಸವಾಲೊಡ್ಡಲಿದ್ದಾರೆ. ಇಬ್ಬರೂ ಕೇರಳ ಮೂಲದವರಾಗಿದ್ದು, ಜಿದ್ದಾಜಿದ್ದಿನ ಕದನ ಏರ್ಪಡಲಿದೆ.

ಕಣಕ್ಕಿಳಿದಿರುವ ಗಣ್ಯರು

ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯಿಂದ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಗುಜರಾತ್‌ನ ಗಾಂಧಿನಗರ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಲಖನೌ, ಸ್ಮೃತಿ ಇರಾನಿ ಅವರು ಅಮೇಥಿಯಿಂದ, ಕಿರಣ್‌ ರಿಜಿಜು ಅರುಣಾಚಲ ಪಶ್ಚಿಮ, ಪೋರ್‌ಬಂದರ್‌ನಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವಿಯ, ಕೇರಳದ ಪಥಣಂತಿಟ್ಟದಿಂದ ಎ.ಕೆ. ಆ್ಯಂಟನಿ ಪುತ್ರ ಅನಿಲ್‌ ಆ್ಯಂಟನಿ, ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ತಿರುವನಂತಪುರಂನಿಂದ ಟಿಕೆಟ್‌ ನೀಡಲಾಗಿದೆ. ಮಧ್ಯಪ್ರದೇಶದ ವಿದಿಶಾದಿಂದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಣಕ್ಕಿಳಿದಿದ್ದಾರೆ.

ಉತ್ತರ ಪ್ರದೇಶದ ಮಥುರಾದಿಂದ ಹೇಮಾಮಾಲಿನಿ, ಉನ್ನಾವೋದಿಂದ ಸಾಕ್ಷಿ ಮಹಾರಾಜ್‌, ತೆಲಂಗಾಣದ ಕರೀಂ ನಗರದಿಂದ ಬಂಡಿ ಸಂಜೀವ್‌ ಕುಮಾರ್‌, ಸಿಕಂದರಾಬಾದ್‌ ಜಿ. ಕಿಶನ್‌ ರೆಡ್ಡಿ ಅವರಿಗೂ ಬಿಜೆಪಿ ಹೈಕಮಾಂಡ್‌ ಮಣೆ ಹಾಕಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ವಿದಿಶಾದಿಂದ ಟಿಕೆಟ್‌ ನೀಡಲಾಗಿದೆ. ಇನ್ನುಳಿದಂತೆ ದೆಹಲಿ ಉತ್ತರ ಮನೋಜ್‌ ತಿವಾರಿ ಅವರು ಕಣಕ್ಕಿಳಿದಿದ್ದಾರೆ. ಉತ್ತರ ಗೋವಾದಿಂದ ಶ್ರೀಪಾದ್‌ ನಾಯಕ್‌ ಅವರು ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ.

ಸುಷ್ಮಾ ಸ್ವರಾಜ್‌ ಪುತ್ರಿಗೆ ಟಿಕೆಟ್‌

ಬಿಜೆಪಿಯು ಈ ಬಾರಿ ಹಲವು ಬದಲಾವಣೆ ಮಾಡಿದೆ. ಅದರಲ್ಲೂ, ನವದೆಹಲಿ ಕ್ಷೇತ್ರದ ಸಂಸದೆ, ಸಚಿವೆಯೂ ಆಗಿರುವ ಮೀನಾಕ್ಷಿ ಲೇಖಿ ಅವರನ್ನು ಕೈಬಿಡಲಾಗಿದೆ. ನವದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಮಾಜಿ ಸಚಿವೆ ಸುಷ್ಮಾ ಸ್ವರಾಜ್‌ ಪುತ್ರಿ ಬನ್ಸೂರಿ ಸ್ವರಾಜ್‌ ಅವರಿಗೆ ಸ್ಪರ್ಧಿಸಲಿದ್ದಾರೆ. ಇನ್ನು ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರನ್ನು ಕೈಬಿಡಲಾಗಿದ್ದು, ಅಲೋಕ್‌ ಶರ್ಮಾ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.

ಇದನ್ನೂ ಓದಿ: BJP Candidates List: ಲೋಕಸಭೆಗೆ ಬಿಜೆಪಿಯ 195 ಅಭ್ಯರ್ಥಿಗಳ ಪಟ್ಟಿ ರಿಲೀಸ್; ಇವರೇ ಕ್ಯಾಂಡಿಡೇಟ್ಸ್

Continue Reading

ದೇಶ

Narendra Modi: ಬಿಜೆಪಿ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆಗೆ ಮೋದಿ ಸಂದೇಶ; ಏನದು?

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಯುವಕರು, ಮಹಿಳೆಯರಿಗೆ ಪಟ್ಟಿಯಲ್ಲಿ ಆದ್ಯತೆ ನೀಡಲಾಗಿದೆ. ಅಭ್ಯರ್ಥಿಗಳ ಪಟ್ಟಿ ಪ್ರಕಟವಾದ ಬಳಿಕ ನರೇಂದ್ರ ಮೋದಿ ಅವರು ಸಂದೇಶ ರವಾನಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಬಿಜೆಪಿಯು 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (BJP Candidates List) ಬಿಡುಗಡೆ ಮಾಡುವ ಮೂಲಕ ಲೋಕಸಭೆ ಚುನಾವಣೆಗೆ (Lok Sabha Election 2024) ಅಧಿಕೃತವಾಗಿ ರಣಕಹಳೆ ಊದಿದೆ. ಜಾತಿ, ಪ್ರಭಾವ, ಯುವಕರು, ಮಹಿಳೆಯರು ಸೇರಿ ಹಲವು ಲೆಕ್ಕಾಚಾರಗಳ ಬಳಿಕ ಬಿಜೆಪಿಯು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜನರಿಗೆ, ಪಕ್ಷದ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ. ಹಾಗೆಯೇ, ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಬಿಜೆಪಿಯು ಕೆಲ ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಮುಂದಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ. ಬಿಜೆಪಿ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಎಲ್ಲರಿಗೂ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ, ಬಡವರಿಗೆ ಸಕಲ ಸೌಲಭ್ಯಗಳನ್ನು ನೀಡುವುದು ಸೇರಿ ಹಲವು ದಿಸೆಯಲ್ಲಿ ನೀವು ಈಗಿನಿಂದಲೇ ಸಜ್ಜಾಗಬೇಕು. ದೇಶದ 140 ಕೋಟಿ ಜನರ ಆಶೀರ್ವಾದವು ನಿಮ್ಮ ಮೇಲೆ ಇರುತ್ತದೆ ಎಂಬ ವಿಶ್ವಾಸವಿದೆ. ವಿಕಸಿತ ಭಾರತ ನಿರ್ಮಾಣಕ್ಕಾಗಿ ನೀವು ಈಗಿನಿಂದಲೇ ಕೆಲಸ ಆರಂಭಿಸಿ” ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಹಾಗೆಯೇ, ವಾರಾಣಸಿಯಿಂದಲೇ ಮೂರನೇ ಬಾರಿ ಸ್ಪರ್ಧಿಸುತ್ತಿರುವ ಕುರಿತು ಕೂಡ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಕೇಂದ್ರೀಯ ಚುನಾವಣೆ ಸಮಿತಿ ಸಭೆಯಲ್ಲಿ ನಿರ್ಧರಿಸಿದಂತೆ ಪ್ರಕಟಿಸಲಾದ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಒಬಿಸಿಯ 57 ಅಭ್ಯರ್ಥಿಗಳಿಗೆ, ಎಸ್‌ಸಿ 27, ಎಸ್‌ಟಿಯ 18 ಅಭ್ಯರ್ಥಿಗಳಿಗೆ ಬಿಜೆಪಿಯು ಟಿಕೆಟ್‌ ನೀಡಿದೆ. ಇನ್ನು 195 ಅಭ್ಯರ್ಥಿಗಳಲ್ಲಿ 28 ಮಹಿಳೆಯರು ಹಾಗೂ 47 ಯುವಕರಿಗೆ ಬಿಜೆಪಿಯು ಮಣೆ ಹಾಕಿದೆ. 34 ಕೇಂದ್ರ ಸಚಿವರಿಗೂ ಪಕ್ಷದ ಹೈಕಮಾಂಡ್‌ ಟಿಕೆಟ್‌ ನೀಡಿದೆ. ರಾಜ್ಯಸಭೆಯಿಂದ ಆಯ್ಕೆಯಾಗಿ, ಮಂತ್ರಿಯಾಗಿದ್ದ ರಾಜೀವ್‌ ಚಂದ್ರಶೇಖರ್‌ ಅವರಿಗೆ ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ.

ಇದನ್ನೂ ಓದಿ: BJP Candidates List: ಸುಷ್ಮಾ ಸ್ವರಾಜ್‌ ಪುತ್ರಿಗೆ ಟಿಕೆಟ್; ಯಾರು ಇನ್?‌ ಯಾರು ಔಟ್?‌

16 ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದಾರೆ. ಮೊದಲ ಪಟ್ಟಿಯಲ್ಲಿ ಉತ್ತರ ಪ್ರದೇಶದ 51 ಕ್ಷೇತ್ರಗಳಿಗೆ, ಪಶ್ಚಿಮ ಬಂಗಾಳ 20, ಮಧ್ಯಪ್ರದೇಶ 24, ಗುಜರಾತ್‌ 15, ರಾಜಸ್ಥಾನ 15, ಕೇರಳ 12, ತೆಲಂಗಾಣ 9, ಅಸ್ಸಾಂ 11, ಜಾರ್ಖಂಡ್‌ 11, ಛತ್ತೀಸ್‌ಗಢ 11, ದೆಹಲಿ 5, ಜಮ್ಮು-ಕಾಶ್ಮೀರ 2, ಉತ್ತರಾಖಂಡ 3, ಅರುಣಾಚಲ ಪ್ರದೇಶ 2, ಗೋವಾ 1, ತ್ರಿಪುರ 1, ಅಂಡಮಾನ್‌ ನಿಕೋಬಾರ್‌ 1 ಹಾಗೂ ದಿಯು ಮತ್ತು ದಮನ್‌ನ 1 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

ಮದುವೆ ಪೂರ್ವ ಸಂಭ್ರಮದಲ್ಲಿ ಮಗನ ದುಃಖ ಕೇಳಿ ಗಳಗಳನೆ ಅತ್ತ ಮುಕೇಶ್‌ ಅಂಬಾನಿ!

ಜಾಮ್‌ನಗರದಲ್ಲಿ ನಡೆಯುತ್ತಿರುವ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರ ವಿವಾಹ ಕಾರ್ಯಕ್ರಮವು ಸಂಭ್ರಮದ ಜತೆಗೆ ಭಾವನಾತ್ಮಕ ಕ್ಷಣಗಳಿಗೂ ಸಾಕ್ಷಿಯಾಗಿದೆ.

VISTARANEWS.COM


on

Mukesh Ambani Cries
Koo

ಗಾಂಧಿನಗರ: ಗುಜರಾತ್‌ನ ಜಾಮ್‌ನಗರದಲ್ಲಿ (Jamnagar) ಸ್ವರ್ಗವೇ ಧರೆಗಿಳಿದಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ (Mukesh Ambani) ಪುತ್ರ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರ ವಿವಾಹಪೂರ್ವ ಕಾರ್ಯಕ್ರಮಕ್ಕೆ (Anant Ambani-Radhika Merchant Pre-Wedding) ದೇಶ-ವಿದೇಶಗಳ ಸಾವಿರಾರು ಗಣ್ಯರು ಆಗಮಿಸಿದ್ದಾರೆ. ಜಾಮ್‌ನಗರದಲ್ಲಿ ಸಂಭ್ರಮ ಮನೆ ಮಾಡಿರುವ ಮಧ್ಯೆಯೇ ಮುಕೇಶ್‌ ಅಂಬಾನಿ ಅವರು ಕಣ್ಣೀರು ಹಾಕಿದ್ದಾರೆ.

ಅನಂತ್‌ ಅಂಬಾನಿ ಅವರು ವೇದಿಕೆ ಮೇಲೆ ಮಾತನಾಡುವಾಗ ಭಾವುಕರಾದರು. “ನೀವೆಲ್ಲರೂ ಎಂದುಕೊಂಡಂತೆ ನನ್ನ ಜೀವನವು ಹೂವಿನ ಹಾದಿಯಾಗಿರಲಿಲ್ಲ. ನಾನು ಕೂಡ ಜೀವನದಲ್ಲಿ ಹಲವು ನೋವುಗಳನ್ನು ಅನುಭವಿಸಿದ್ದೇನೆ. ಬಾಲ್ಯದಲ್ಲಿ ನನ್ನ ಆರೋಗ್ಯವು ಪದೇಪದೆ ಕೈಕೊಡುತ್ತಿತ್ತು. ಆಗೆಲ್ಲ, ನನ್ನ ತಂದೆ-ತಾಯಿಯು ಬೆನ್ನೆಲುಬಾಗಿ ನಿಂತರು. ನಾನು ಕಷ್ಟ ಅನುಭವಿಸುತ್ತಿದ್ದೇನೆ ಎಂಬ ಭಾವನೆ ಬರದಂತೆ ನೋಡಿಕೊಂಡರು. ಅವರಿಂದಾಗಿಯೇ ನಾನು ಸುಧಾರಣೆ ಕಂಡೆ” ಎಂದು ಅನಂತ್‌ ಅಂಬಾನಿ ಅವರು ಭಾವನಾತ್ಮಕವಾಗಿ ಮಾತನಾಡಿದರು. ಇದನ್ನು ಕೇಳಿದ ಮುಕೇಶ್‌ ಅಂಬಾನಿ ಅವರ ಕಣ್ಣಾಲಿಗಳು ಒದ್ದೆಯಾದವು.

ಮದುವೆ ಪೂರ್ವ ಸಮಾರಂಭದಲ್ಲಿ ಮಾತನಾಡುವ ವೇಳೆ ಅನಂತ್‌ ಅಂಬಾನಿ ಅವರು ತಾಯಿ ನೀತಾ ಅಂಬಾನಿಗೆ ವಿಶೇಷ ಧನ್ಯವಾದ ತಿಳಿಸಿದರು. “ನಾನು ಇಂದು ಏನಾಗಿದ್ದೇನೋ ಅದಕ್ಕೆಲ್ಲ ನನ್ನ ತಾಯಿಯೇ ಕಾರಣ. ನನ್ನ ಸೃಷ್ಟಿಕರ್ತಳೂ ಆಕೆಯೇ, ನನ್ನ ಜೀವನದ ಸುಧಾರಕಿಯೂ ಆಕೆಯೇ. ನನ್ನ ಮದುವೆ ಪೂರ್ವ ಕಾರ್ಯಕ್ರಮಕ್ಕೆ ತಾಯಿಯು ಕಳೆದ ಮೂರ್ನಾಲ್ಕು ತಿಂಗಳಿಂದ ಕಷ್ಟಪಡುತ್ತಿದ್ದಾರೆ. ನಿತ್ಯ ಅವರು 18-19 ತಾಸು ಕೆಲಸ ಮಾಡಿದ್ದಾರೆ. ಹಾಗಾಗಿ, ಅವರಿಗೆ ವಿಶೇಷ ಧನ್ಯವಾದಗಳು. ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಅನಂತ್‌ ಅಂಬಾನಿ ಹೇಳಿದರು.

ಇದನ್ನೂ ಓದಿ: Ambani Wedding Fashion: ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ಪ್ರಿ ವೆಡ್ಡಿಂಗ್‌ನಲ್ಲಿ ಸೆಲೆಬ್ರೆಟಿಗಳ ಹೈ ಫ್ಯಾಷನ್‌ ಹೀಗಿತ್ತು!

ರಾಧಿಕಾ ಮರ್ಚಂಟ್‌ ಅವರ ಕುರಿತು ಕೂಡ ಅನಂತ್‌ ಅಂಬಾನಿ ಮಾತನಾಡಿದರು. “ರಾಧಿಕಾ ಮರ್ಚಂಟ್‌ ಅವಳನ್ನು ನನ್ನ ಜೀವನದ ಸಂಗಾತಿಯನ್ನಾಗಿ ಪಡೆಯುತ್ತಿರುವುದಕ್ಕೆ ನಾನು ತುಂಬ ಅದೃಷ್ಟವಂತನಾಗಿದ್ದೇನೆ. ನಾನು ಹಾಗೂ ರಾಧಿಕಾ ಮರ್ಚಂಟ್‌ ಭೇಟಿಯಾಗಿ ಏಳು ವರ್ಷಗಳೇ ಕಳೆದವು. ಆದರೆ, ನಿನ್ನೆ ಮೊನ್ನೆಯಷ್ಟೇ ನಾವು ಭೇಟಿಯಾಗಿದ್ದೇವೆ ಎಂದು ಅನಿಸುತ್ತದೆ. ಅಷ್ಟರಮಟ್ಟಿಗೆ, ನನ್ನ ಮನಸ್ಸು, ಹೃದಯವನ್ನು ರಾಧಿಕಾ ಮರ್ಚಂಟ್‌ ಅಷ್ಟು ಬೆಚ್ಚಗೆ ಇರಿಸಿದ್ದಾಳೆ. ಆಕೆಗೂ ನಾನು ಆಭಾರಿ. ನನ್ನನ್ನು ಕುಟುಂಬದ ಸದಸ್ಯನನ್ನಾಗಿ ಸ್ವೀಕರಿಸಿದ ಆಕೆಯ ಕುಟುಂಬಸ್ಥರಿಗೂ ಆಭಾರಿ” ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

ಬಿಜೆಪಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿಗೆ ಆದ್ಯತೆ; ಹೀಗಿದೆ ಮೋದಿ-ಶಾ ಜಾತಿ ಲೆಕ್ಕಾಚಾರ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಹಲವು ಪ್ರಯೋಗಗಳಿಗೂ ಕೈ ಹಾಕಿದೆ. ಜಾತಿ ಲೆಕ್ಕಾಚಾರದಲ್ಲೂ ಮೋದಿ-ಶಾ ಜೋಡಿ ಮುಂದಿದೆ.

VISTARANEWS.COM


on

Amit Shah Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಶತಾಯ ಗತಾಯ ಗೆದ್ದು, ಹ್ಯಾಟ್ರಿಕ್‌ ಸಾಧಿಸುವ ಹುಮ್ಮಸ್ಸಿನಲ್ಲಿರುವ ಬಿಜೆಪಿಯು ಅಳೆದು-ತೂಗಿ 195 ಅಭ್ಯರ್ಥಿಗಳ ಮೊದಲ ಪಟ್ಟಿ (BJP Candidates List) ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯಿಂದಲೇ ಮೂರನೇ ಬಾರಿ ಸ್ಪರ್ಧಿಸಲಿದ್ದು, ಹಲವು ಗಣ್ಯರಿಗೆ ಟಿಕೆಟ್‌ ನೀಡಲಾಗಿದೆ. ಇನ್ನು, ಯುವಕರು, ಹೊಸಬರಿಗೆ ಆದ್ಯತೆ ನೀಡುವ ಜತೆಗೆ ಬಿಜೆಪಿಯು ಜಾತಿ ಲೆಕ್ಕಾಚಾರದಲ್ಲೂ ಹಲವು ರಣತಂತ್ರ ರೂಪಿಸಿದೆ.

ಬಿಜೆಪಿ ಕೇಂದ್ರೀಯ ಚುನಾವಣೆ ಸಮಿತಿ ಸಭೆಯಲ್ಲಿ ನಿರ್ಧರಿಸಿದಂತೆ ಪ್ರಕಟಿಸಲಾದ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಒಬಿಸಿಯ 57 ಅಭ್ಯರ್ಥಿಗಳಿಗೆ, ಎಸ್‌ಸಿ 27, ಎಸ್‌ಟಿಯ 18 ಅಭ್ಯರ್ಥಿಗಳಿಗೆ ಬಿಜೆಪಿಯು ಟಿಕೆಟ್‌ ನೀಡಿದೆ. ಇನ್ನು 195 ಅಭ್ಯರ್ಥಿಗಳಲ್ಲಿ 28 ಮಹಿಳೆಯರು ಹಾಗೂ 47 ಯುವಕರಿಗೆ ಬಿಜೆಪಿಯು ಮಣೆ ಹಾಕಿದೆ. 34 ಕೇಂದ್ರ ಸಚಿವರಿಗೂ ಪಕ್ಷದ ಹೈಕಮಾಂಡ್‌ ಟಿಕೆಟ್‌ ನೀಡಿದೆ. ರಾಜ್ಯಸಭೆಯಿಂದ ಆಯ್ಕೆಯಾಗಿ, ಮಂತ್ರಿಯಾಗಿದ್ದ ರಾಜೀವ್‌ ಚಂದ್ರಶೇಖರ್‌ ಅವರಿಗೆ ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ.

16 ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದಾರೆ. ಮೊದಲ ಪಟ್ಟಿಯಲ್ಲಿ ಉತ್ತರ ಪ್ರದೇಶದ 51 ಕ್ಷೇತ್ರಗಳಿಗೆ, ಪಶ್ಚಿಮ ಬಂಗಾಳ 20, ಮಧ್ಯಪ್ರದೇಶ 24, ಗುಜರಾತ್‌ 15, ರಾಜಸ್ಥಾನ 15, ಕೇರಳ 12, ತೆಲಂಗಾಣ 9, ಅಸ್ಸಾಂ 11, ಜಾರ್ಖಂಡ್‌ 11, ಛತ್ತೀಸ್‌ಗಢ 11, ದೆಹಲಿ 5, ಜಮ್ಮು-ಕಾಶ್ಮೀರ 2, ಉತ್ತರಾಖಂಡ 3, ಅರುಣಾಚಲ ಪ್ರದೇಶ 2, ಗೋವಾ 1, ತ್ರಿಪುರ 1, ಅಂಡಮಾನ್‌ ನಿಕೋಬಾರ್‌ 1 ಹಾಗೂ ದಿಯು ಮತ್ತು ದಮನ್‌ನ 1 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: BJP Candidates List: ಲೋಕಸಭೆಗೆ ಬಿಜೆಪಿಯ 195 ಅಭ್ಯರ್ಥಿಗಳ ಪಟ್ಟಿ ರಿಲೀಸ್; ಇವರೇ ಕ್ಯಾಂಡಿಡೇಟ್ಸ್

ಬಿಜೆಪಿಯು ಈ ಬಾರಿ ಹಲವು ಬದಲಾವಣೆ ಮಾಡಿದೆ. ಅದರಲ್ಲೂ, ನವದೆಹಲಿ ಕ್ಷೇತ್ರದ ಸಂಸದೆ, ಸಚಿವೆಯೂ ಆಗಿರುವ ಮೀನಾಕ್ಷಿ ಲೇಖಿ ಅವರನ್ನು ಕೈಬಿಡಲಾಗಿದೆ. ನವದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಮಾಜಿ ಸಚಿವೆ ಸುಷ್ಮಾ ಸ್ವರಾಜ್‌ ಪುತ್ರಿ ಬನ್ಸೂರಿ ಸ್ವರಾಜ್‌ ಅವರಿಗೆ ಸ್ಪರ್ಧಿಸಲಿದ್ದಾರೆ. ಇನ್ನು ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರನ್ನು ಕೈಬಿಡಲಾಗಿದ್ದು, ಅಲೋಕ್‌ ಶರ್ಮಾ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ವಿದಿಶಾದಿಂದ ಟಿಕೆಟ್‌ ನೀಡಲಾಗಿದೆ. ಇನ್ನುಳಿದಂತೆ ದೆಹಲಿ ಉತ್ತರ ಮನೋಜ್‌ ತಿವಾರಿ ಅವರು ಕಣಕ್ಕಿಳಿದಿದ್ದಾರೆ. ಉತ್ತರ ಗೋವಾದಿಂದ ಶ್ರೀಪಾದ್‌ ನಾಯಕ್‌ ಅವರು ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
read your daily horoscope predictions for march 3rd 2024
ಭವಿಷ್ಯ28 mins ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Yuva Movie song
ಕರ್ನಾಟಕ5 hours ago

Yuva Rajkumar: ಅಭಿಮಾನಿಗಳಿಂದ ʼಯುವʼ ಚಿತ್ರದ ಮೊದಲ ಸಾಂಗ್‌ ರಿಲೀಸ್‌; ಮಾಸ್ ಲುಕ್‌ನಲ್ಲಿ ಯುವ ರಾಜಕುಮಾರ್

Shashi Tharoor And Rajeev Chandrasekhar
ದೇಶ5 hours ago

ಬಿಜೆಪಿ ಪಟ್ಟಿ ಪ್ರಕಟ: ತಿರುವನಂತಪುರಂನಲ್ಲಿ ರಾಜೀವ್‌ ಚಂದ್ರಶೇಖರ್‌ Vs ಶಶಿ ತರೂರ್?‌

HIGH dose injection
ಕರ್ನಾಟಕ6 hours ago

ಕೃತಕ ಗರ್ಭಧಾರಣೆಗೆ ಹೈ ಡೋಸ್ ಇಂಜೆಕ್ಷನ್‌; ಖಾಸಗಿ ಆಸ್ಪತ್ರೆ ಎಡವಟ್ಟಿಗೆ ಕಣ್ಣು‌ ಕಳೆದುಕೊಂಡ ಮಹಿಳೆ!

Narendra Modi
ದೇಶ6 hours ago

Narendra Modi: ಬಿಜೆಪಿ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆಗೆ ಮೋದಿ ಸಂದೇಶ; ಏನದು?

Sophie Devine and Smriti Mandhana warm up ahead of their fourth game
ಕ್ರಿಕೆಟ್6 hours ago

WPL Points Table: ಹೀನಾಯ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಕುಸಿತ ಕಂಡ ಆರ್​ಸಿಬಿ

Pralhad Joshi
ಕರ್ನಾಟಕ6 hours ago

ಕುರುಬರಿಗೆ ಎಸ್‌ಟಿ ಮೀಸಲಾತಿ ಕೊಡಿಸಲು ಪ್ರಾಮಾಣಿಕ ಪ್ರಯತ್ನ: ಪ್ರಲ್ಹಾದ್‌ ಜೋಶಿ ಭರವಸೆ

Nat Sciver-Brunt celebrates the dismissal of S Meghana
ಕ್ರೀಡೆ7 hours ago

WPL 2024: ಸತತ 2ನೇ ಸೋಲಿಗೆ ತುತ್ತಾದ ಆರ್​ಸಿಬಿ; ಮುಂಬೈಗೆ 7 ವಿಕೆಟ್​ ಗೆಲುವು

Banavasi Kadambotsava Minister Mankala Vaidya inspected the preparations
ಉತ್ತರ ಕನ್ನಡ7 hours ago

Uttara Kannada News: ಬನವಾಸಿ ಕದಂಬೋತ್ಸವ; ಪೂರ್ವ ಸಿದ್ಧತೆ ಪರಿಶೀಲಿಸಿದ ಸಚಿವ ಮಂಕಾಳ ವೈದ್ಯ

police 1
ಕರ್ನಾಟಕ8 hours ago

ಐಪಿಎಸ್ ಅಧಿಕಾರಿಯಾದ ಕ್ಯಾನ್ಸರ್‌ ಪೀಡಿತ ಬಾಲಕ; ಕನಸು ಈಡೇರಿಸಿ ಮಾನವೀಯತೆ ಮೆರೆದ ಪೊಲೀಸರು

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

read your daily horoscope predictions for march 3rd 2024
ಭವಿಷ್ಯ28 mins ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು12 hours ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು16 hours ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು1 day ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು2 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ2 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

dina bhavishya read your daily horoscope predictions for February 28 2024
ಭವಿಷ್ಯ3 days ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ4 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

ಟ್ರೆಂಡಿಂಗ್‌