Maha politics | ಮುಖ್ಯಮಂತ್ರಿಯಾಗಿ ಶಿಂಧೆ ಆಯ್ಕೆ; ಕುಣಿದು ಕುಪ್ಪಳಿಸಿದ ಬಂಡಾಯ ಶಾಸಕರು! - Vistara News

ದೇಶ

Maha politics | ಮುಖ್ಯಮಂತ್ರಿಯಾಗಿ ಶಿಂಧೆ ಆಯ್ಕೆ; ಕುಣಿದು ಕುಪ್ಪಳಿಸಿದ ಬಂಡಾಯ ಶಾಸಕರು!

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಏಕನಾಥ ಶಿಂಧೆಯವರ ಹೆಸರನ್ನು ಪ್ರಕಟಿಸುತ್ತಿದ್ದಂತೆಯೇ ಗೋವಾದಲ್ಲಿ ಬೀಡು ಬಿಟ್ಟಿರುವ ಶಿವಸೇನೆಯ ಬಂಡಾಯ ಶಾಸಕರು ಕುಣಿದು ಕುಪ್ಪಳಿಸಿದ್ದಾರೆ.

VISTARANEWS.COM


on

shiva sena
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಆಗಿ ಏಕನಾಥ ಶಿಂಧೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿಯ ನಾಯಕ ದೇವೇಂದ್ರ ಫಡ್ನವಿಸ್‌ ಮುಂಬಯಿಯಲ್ಲಿ ಪ್ರಕಟಿಸುತ್ತಿದ್ದಂತೆಯೇ ಗೋವಾದ ಹೋಟೆಲ್‌ನಲ್ಲಿ ಬೀಡು ಬಿಟ್ಟಿರುವ ಶಿವಸೇನೆಯ ಬಂಡಾಯ ಶಾಸರಕು ಕುಣಿದು ಕುಪ್ಪಳಿಸಿದ್ದಾರೆ.

ಮಹಾರಾಷ್ಟ ರಾಜ್ಯದ ರಾಜಕೀಯ ಬೆಳವಣಿಗೆಗೆ ಫಡ್ನವಿಸ್‌ ಅಚ್ಚರಿಯ ತಿರುವು ನೀಡಿದ್ದು, ಈ ಸುದ್ದಿ ಟಿವಿಯಲ್ಲಿ ಬರುತ್ತಿದ್ದಂತೆಯೇ ಒಂದೆಡೆ ಸೇರಿದ ಶಾಸಕರು ಸಂಭ್ರಮ ಪಟ್ಟರು. ಕೆಲವರು ಕುಣಿದು ಕುಪ್ಪಳಿಸಿದರೆ, ಇನ್ನು ಕೆಲವರು ಮೇಜನ್ನೇರಿ ಡ್ಯಾನ್ಸ್‌ ಮಾಡಿದರು.

ನಂತರ ಹೋಟೆಲ್‌ನಿಂದ ಹೊರ ಬಂದು ಬೀದಿಯಲ್ಲಿ ನಿಂತ ಏಕನಾಥ ಶಿಂದೆ ಪರವಾಗಿ ಘೋಷಣೆ ಕೂಗಿದರು. ಪ್ರಧಾನಿ ಮೋದಿ ಪರವಾಗಿಯೂ ಘೋಷಣೆ ಕೇಳಿಬಂದವು. ತುಂತುರು ಮಳೆಯ ನಡುವೆಯೂ ಅವರ ಸಂಭ್ರಮಾಚರಣೆ ನಡೆಯಿತು.

ಉದ್ಧವ್‌ ಠಾಕ್ರೆ ಮತ್ತು ಮಹಾ ವಿಕಾಸ್‌ ಅಘಾಡಿ ಮೈತ್ರಿ ವಿರುದ್ಧ ಮುನಿಸಿಕೊಂಡು ಕಳೆದ ೧೦ ದಿನಗಳಿಂದಲೂ ರಾಜ್ಯವನ್ನೇ ಬಿಟ್ಟಿದ್ದ ಈ ಶಾಸಕರು ಶಿಂಧೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ. ಶಿಂಧೆ ಇಂದು ರಾತ್ರಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಟಿವಿಯಲ್ಲಿಯೇ ಕಾರ್ಯಕ್ರಮ ನೋಡಲು ಸಿದ್ಧತೆ ಕೂಡ ಮಾಡಿಕೊಂಡಿದ್ದಾರೆ.

ಮುಖ್ಯಮಂತ್ರಿ ಹುದ್ದೆಗೆ ಶಿಂಧೆ ಆಯ್ಕೆ ಅನಿರೀಕ್ಷಿತವಾಗಿದ್ದರೂ, ನಮಗೆ ಇದರಿಂದ ಬಹಳ ಸಂತೋಷವಾಗಿದೆ. ರಾಜ್ಯದ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ನೂತನ ನಾಯಕ ಶಿಂಧೆ ಸಮರ್ಥರಿದ್ದಾರೆ. ಅವರೇ ಮುಖ್ಯಮಂತ್ರಿಯಾಗುತ್ತಿರುವುದರಿಂದ ಆಗುತ್ತಿರುವ ಖುಷಿಯನ್ನು ಪದಗಳಲ್ಲಿ ಹೇಳಲು ಸಾಧ್ಯವಾಗದು ಎಂದು ಶಾಸಕರೊಬ್ಬರು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಗೋವಾದ ತಾಜ್‌ ರೆಸಿಡೆಂಟ್‌ ಹೋಟೆಲ್‌ನಲ್ಲಿ ಈ ಶಾಸಕರು ಉಳಿದುಕೊಂಡಿದ್ದು, ಬುಧವಾರ ರಾತ್ರಿ ಗುವಾಹಟಿಯಿಂದ ಅವರು ಇಲ್ಲಿಗೆ ಆಗಮಿಸಿದ್ದರು.

ಇದನ್ನೂ ಓದಿ| ಗಡಿ ಖ್ಯಾತೆಯ ಶಿಂಧೆ ಈಗ ಮಹಾ ಸಿಎಂ; ರಾಜ್ಯಕ್ಕೆ ಮತ್ತೆ ಕಾಟ ಕೊಡುತ್ತಾರಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Religious Conversion Case: ಹಿಂದೂ ಹುಡುಗಿಯ ಖಾಸಗಿ ಫೋಟೊ ತೆಗೆದು ಬ್ಲ್ಯಾಕ್‌ಮೇಲ್‌; ಮತಾಂತರಕ್ಕೆ ಒತ್ತಡ

Religious Conversion Case: ಮುಸ್ಲಿಂ ಹುಡುಗಿಯೊಬ್ಬಳು ಹಿಂದೂ ಹುಡುಗಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಮತ್ತು ತನ್ನ ಮುಸ್ಲಿಂ ಸ್ನೇಹಿತನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ. ಇದಕ್ಕೆ ನಿರಾಕರಿಸಿದರೆ ಸಂತ್ರಸ್ತೆಗೆ ಆಕೆಯ ಖಾಸಗಿ ಪೋಟೊಗಳನ್ನು ತೋರಿಸಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾಳೆ. ಈ ಕುರಿತು ದೂರು ದಾಖಲಾಗಿದೆ.

VISTARANEWS.COM


on

Religious Conversion Case
Koo

ಡೆಹ್ರಾಡೂನ್‌: ಮತಾಂತರಗೊಳಿಸುವ ಸುದ್ದಿಯನ್ನು ಆಗಾಗ ಕೇಳುತ್ತಿರುತ್ತೇವೆ. ಮುಸ್ಲಿಮರು ಹಿಂದೂಗಳನ್ನು ಇಸ್ಲಾಂಗೆ ಮತಾಂತರ(Religious Conversion Case )ಗೊಳಿಸಲು ಹಲವಾರು ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಲವ್ ಜಿಹಾದ್‌ನ ಮೂಲಕ ಹಿಂದೂ ಹುಡುಗಿಯರನ್ನು ಮುಸ್ಲಿಂ ಯುವಕರು ಬಲೆಗೆ ಬೀಳಿಸಿ ಮತಾಂತರಗೊಳಿಸುತ್ತಿದ್ದರೆ, ಇನ್ನೊಂದು ಕಡೆ ಹಿಂದೂ (Hindu) ಹುಡುಗಿಯರ ಖಾಸಗಿ ಪೋಟೊಗಳನ್ನು ಇಟ್ಟುಕೊಂಡು ಮುಸ್ಲಿಂ ಯುವತಿಯರು ಅವರಿಗೆ ಮತಾಂತರಗೊಳ್ಳುವಂತೆ ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ದೂರುಗಳು ಸಾಕಷ್ಟು ಕೇಳಿ ಬರುತ್ತಿವೆ. ಇದೀಗ ಇಂತಹದೊಂದು ಘಟನೆ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಬೆಳಕಿಗೆ ಬಂದಿದೆ.

ಮುಸ್ಲಿಂ ಹುಡುಗಿಯೊಬ್ಬಳು ಹಿಂದೂ ಹುಡುಗಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಮತ್ತು ತನ್ನ ಮುಸ್ಲಿಂ ಸ್ನೇಹಿತನನ್ನು ಮದುವೆಯಾಗುವಂತೆ ಒತ್ತಾಯ ಮಾಡುತ್ತಿದ್ದಾಳೆ ಎಂಬುದಾಗಿ ತಿಳಿದು ಬಂದಿದೆ. ಮುಬೀನಾ ಯೂಸುಫ್ ಆರೋಪಿ ಹುಡುಗಿಯಾಗಿದ್ದು, ಈಕೆ ಸಂತ್ರಸ್ತೆ ಹಿಂದೂ ಹುಡುಗಿಯ ಸಹಪಾಠಿಯಾಗಿದ್ದಾಳೆ.

ಆರೋಪಿ ಸಂತ್ರಸ್ತೆಗೆ ಮುಸ್ಲಿಂ ಧರ್ಮಕ್ಕೆ ಮಂತಾರಗೊಂಡು ತನ್ನ ಮುಸ್ಲಿಂ ಸ್ನೇಹಿತನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ. ಇದಕ್ಕೆ ನಿರಾಕರಿಸಿದರೆ ಸಂತ್ರಸ್ತೆಗೆ ಆಕೆಯ ಖಾಸಗಿ ಪೋಟೊಗಳನ್ನು ತೋರಿಸಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಹಾಗೂ ಜೈಲಿನಲ್ಲಿರುವ ತನ್ನ ಸಂಬಂಧಿಕರಿಂದ ಹತ್ಯೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾಳೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸಂತ್ರಸ್ತೆ ರಾಜಪುರ ಪೊಲೀಸ್ ಠಾಣೆಯಲ್ಲಿ ತನ್ನ ಸಹಪಾಠಿಯ ವಿರುದ್ಧ ದೂರು ನೀಡಿದ್ದಾಳೆ. ಆಕೆಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಬಾಲಕಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ವರದಿಗಳ ಪ್ರಕಾರ, ಸಂತ್ರಸ್ತ ಹಿಂದೂ ಹುಡುಗಿ ಡೆಹ್ರಾಡೂನ್‌ನ ರಾಜಪುರದಲ್ಲಿ ವಾಸಿಸುತ್ತಿದ್ದಾಳೆ, ಆರೋಪಿ ಬಾಲಕಿ ಜಮ್ಮು ಮತ್ತು ಕಾಶ್ಮೀರದ ನಿವಾಸಿಯಾಗಿದ್ದು, ಡೆಹ್ರಾಡೂನ್‌ನ ಖಾಸಗಿ ಕಾಲೇಜಿನಲ್ಲಿ ಕಾನೂನಿನ ಬಗ್ಗೆ ಅಧ್ಯಯನ ಮಾಡುತ್ತಿದ್ದಾಳೆ. ಆರೋಪಿ ಸಂತ್ರಸ್ತೆಯ ವಿಶ್ವಾಸ ಗಳಿಸಲು ಆಕೆಯ ಮನೆಗೆ ಆಗಾಗ ಬರುತ್ತಿದ್ದಳು. ಹಾಗೇ ಸಂತ್ರಸ್ತೆಯನ್ನು ತನ್ನ ಊರಾದ ಜಮ್ಮು-ಕಾಶ್ಮೀರಕ್ಕೂ ಕರೆದೊಯ್ದು ಅಲ್ಲಿ ತನ್ನ ಮುಸ್ಲಿಂ ಗೆಳೆಯನ ಪರಿಚಯ ಮಾಡಿಸಿ ಆತನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ.

ಇದನ್ನೂ ಓದಿ: JP Nadda: ವೇದಿಕೆ ಮೇಲೆ ಗುಟ್ಕಾ ತಿಂದ ಕೇಂದ್ರ ಆರೋಗ್ಯ ಸಚಿವ ನಡ್ಡಾ? ವಿಡಿಯೊ ನೋಡಿ

ಈ ನಡುವೆ ಆಕೆ ಯಾವಾಗ ಸಂತ್ರಸ್ತೆಯ ಖಾಸಗಿ ಪೋಟೊ ತೆಗೆದಳು ಎಂಬುದು ಸಂತ್ರಸ್ತೆಗೂ ತಿಳಿದಿಲ್ಲ ಎಂಬುದಾಗಿ ತಿಳಿದುಬಂದಿದೆ. ಅಲ್ಲದೇ ಸಂತ್ರಸ್ತೆಗೆ ಆರೋಪಿ ಜೀವ ಬೆದರಿಕೆ ಹಾಕಿದಂತೆ ಹರ್ಯಾಣದ ಗುರುಗ್ರಾಮದ ಜೈಲಿನಲ್ಲಿದ್ದ ಕೆಲವು ದುಷ್ಕರ್ಮಿಗಳಿಂದ ಬೆದರಿಕೆ ಕರೆ ಕೂಡ ಬಂದಿತ್ತು. ಹೀಗಾಗಿ ಸಂತ್ರಸ್ತೆ ಖಿನ್ನತೆಗೆ ಒಳಗಾಗಿದ್ದಳು. ಆಗ ಆಕೆಯ ತಾಯಿ ಆಕೆಯನ್ನು ವಿಚಾರಿಸಿದಾಗ ಈ ವಿಚಾರ ಬಾಯ್ಬಿಟ್ಟಿದ್ದಾಳೆ. ಹಾಗಾಗಿ ಈ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಆರೋಪಿಯ ವಿರುದ್ಧ ಪೊಲೀಸರು ಸುಲಿಗೆ, ಕ್ರಿಮಿನಲ್ ಬೆದರಿಕೆ ಮತ್ತು ಉತ್ತರಾಖಂಡ್ ಮತಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Continue Reading

ವಿದೇಶ

Kuwait Fire: ಕುವೈತ್‌ ಅಗ್ನಿ ದುರಂತ; 45 ಭಾರತೀಯರ ಮೃತದೇಹ ಇಂದು ಸ್ವದೇಶಕ್ಕೆ

Kuwait Fire: ಕುವೈತ್‌ನಲ್ಲಿ ಇತ್ತೀಚೆಗೆ ನಡೆದ ಅಗ್ನಿ ದುರಂತದಲ್ಲಿ ಮಡಿದ 45 ಭಾರತೀಯರ ಮೃತದೇಹವನ್ನು ಇಂದು (ಜೂನ್‌ 14) ದೇಶಕ್ಕೆ ಕರೆ ತರಲಾಗುತ್ತಿದೆ. ಶುಕ್ರವಾರ ಬೆಳಗ್ಗೆ ಕೊಚ್ಚಿಗೆ ಬಂದಿಳಿಯುವ ವಿಶೇಷ ವಿಮಾನ ಬಳಿಕ ನವದೆಹಲಿಗೆ ತೆರಳಲಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Kuwait Fire
Koo

ಕುವೈತ್‌ ಸಿಟಿ: ಕುವೈತ್‌ನ ಮಂಗಾಫ್ ನಗರದಲ್ಲಿನ ಆರು ಮಹಡಿಯ ಬೃಹತ್‌ ಕಟ್ಟಡವೊಂದರಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ (Kuwait Fire) ಮೃತಪಟ್ಟ ಸುಮಾರು 45 ಭಾರತೀಯರ ಮೃತದೇಹವನ್ನು ಇಂದು (ಜೂನ್‌ 14) ದೇಶಕ್ಕೆ ಕರೆ ತರಲಾಗುತ್ತಿದೆ. ಶುಕ್ರವಾರ ಬೆಳಗ್ಗೆ ಕೊಚ್ಚಿಗೆ ಬಂದಿಳಿಯುವ ವಿಶೇಷ ವಿಮಾನ ಬಳಿಕ ನವದೆಹಲಿಗೆ ತೆರಳಲಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಮೃತಪಟ್ಟ ಭಾರತೀಯರಲ್ಲಿ ಬಹುತೇಕ ಮಂದಿ ಕೇರಳದವರು. ದುರಂತದಲ್ಲಿ ಸುಮಾರು 23 ಮಂದಿ ಕೇರಳದವರು ಅಸುನೀಗಿದ್ದು, ತಮಿಳುನಾಡಿನ 7 ಮಂದಿ, ಆಂಧ್ರ ಪ್ರದೇಶ ಮತ್ತು ಉತ್ತರ ಪ್ರದೇಶದ ತಲಾ 3 ಮಂದಿ, ಒಡಿಶಾದ ಇಬ್ಬರು, ಕರ್ನಾಟಕ, ಬಿಹಾರ, ಪಂಜಾಬ್‌, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್‌ ಮತ್ತು ಹರಿಯಾಣದ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಿರ್ದೇಶನದ ಮೇರೆಗೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಗುರುವಾರ ಮುಂಜಾನೆ ಕುವೈತ್ ತಲುಪಿದ್ದು, ಮೃತದೇಹಗಳನ್ನು ಶೀಘ್ರವಾಗಿ ಸ್ವದೇಶಕ್ಕೆ ಕಳುಹಿಸಲು ಮತ್ತು ಅಗ್ನಿ ದುರಂತದಲ್ಲಿ ಗಾಯಗೊಂಡವರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಕುವೈತ್ ಸರ್ಕಾರದೊಂದಿಗೆ ಮಾತುಕತೆ ನಡೆಸಿದರು.

ಮಂಗಾಫ್ ಪ್ರದೇಶದ ಕಾರ್ಮಿಕ ವಸತಿ ನಿಲಯದಲ್ಲಿ ವಾಸವಿದ್ದ ಭಾರತದ ಮೂಲದ 176 ಕಾರ್ಮಿಕರ ಪೈಕಿ ಅಗ್ನಿ ದುರಂತದಲ್ಲಿ 45 ಮಂದಿ ಮೃತಪಟ್ಟಿದ್ದು, 33 ಮಂದಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದವರು ಸುರಕ್ಷಿತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕುವೈತ್‌ ತಲುಪಿದ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಭಾರತೀಯರು ಚಿಕಿತ್ಸೆ ಪಡೆಯುತ್ತಿರುವ ಐದು ಆಸ್ಪತ್ರೆಗಳಿಗೆ (ಅದಾನ್, ಮುಬಾರಕ್ ಅಲ್-ಕಬೀರ್, ಜಬರ್, ಫರ್ವಾನಿಯಾ ಮತ್ತು ಜಹ್ರಾ) ಭೇಟಿ ನೀಡಿ ಅವರೊಂದಿಗೆ ಸಂವಾದ ನಡೆಸಿದರು. ಎಲ್ಲ ರೋಗಿಗಳು ಸುರಕ್ಷಿತರಾಗಿದ್ದಾರೆ ಮತ್ತು ಅವರ ವೈದ್ಯಕೀಯ ಸ್ಥಿತಿಯನ್ನು ಅವಲಂಬಿಸಿ ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೆ ಕೀರ್ತಿ ವರ್ಧನ್ ಸಿಂಗ್ ಅವರು ಉಪ ಪ್ರಧಾನಿ ಶೇಖ್ ಫಹಾದ್ ಯೂಸುಫ್ ಸೌದ್ ಎಐ-ಸಬಾಹ್ ಅವರ ಜತೆಯೂ ಮಾತುಕತೆ ನಡೆಸಿದರು. ಈ ವೇಳೆ ಸರ್ಕಾರ, ಮೃತದೇಹಗಳನ್ನು ಶೀಘ್ರವಾಗಿ ಸ್ವದೇಶಕ್ಕೆ ಕಳುಹಿಸಲು ಮತ್ತು ಆಸ್ಪತ್ರೆಗೆ ದಾಖಲಾದ ಎಲ್ಲರಿಗೂ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡಲು ಸಂಪೂರ್ಣ ಬೆಂಬಲ ಮತ್ತು ಸಹಾಯ ಒದಗಿಸುವುದಾಗಿ ಭರವಸೆ ನೀಡಿದೆ. ಮಾತ್ರವಲ್ಲ ವಿದೇಶಾಂಗ ವ್ಯವಹಾರಗಳ ಸಚಿವ ಅಬ್ದುಲ್ಲಾ ಅಲಿ ಎಐ-ಯಾಹ್ಯಾ ಮತ್ತು ಆರೋಗ್ಯ ಸಚಿವ ಅಹ್ಮದ್ ಅಬ್ದೆಲ್ವಹಾಬ್ ಅಹ್ಮದ್ ಅಲ್-ಅವಾಡಿ ಅವರನ್ನು ಭೇಟಿಯಾಗಿ ಕೀರ್ತಿ ವರ್ಧನ್ ಸಿಂಗ್ ಚರ್ಚೆ ನಡೆಸಿದರು. ಸಂತ್ರಸ್ತರ ಕುಟುಂಬ ಸದಸ್ಯರು ಮತ್ತು ಗಾಯಗೊಂಡವರಿಗಾಗಿ 24×7 ಮೀಸಲಾದ ಸಹಾಯವಾಣಿ +965-65505246 ಕಾರ್ಯ ನಿರ್ವಹಿಸುತ್ತಿದ್ದು, ಅಗತ್ಯವಿದ್ದವರು ಸಂಪರ್ಕಿಸಬಹುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Hassan Ali: ರಿಯಾಸಿ ಉಗ್ರರ ದಾಳಿ ಖಂಡಿಸಿದ ಪಾಕ್‌ ಕ್ರಿಕೆಟಿಗ ಹಸನ್‌ ಅಲಿ; ಆಲ್‌ ಐಸ್‌ ಆನ್‌ ವೈಷ್ಣೋದೇವಿ ಎಂದಿದ್ದೇಕೆ?

ಬುಧವಾರ ಮುಂಜಾನೆ 4.30ಕ್ಕೆ ಕಾರ್ಮಿಕ ಶಿಬಿರದ ಅಡುಗೆಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಇಡೀ ಕಟ್ಟಡವನ್ನು ವ್ಯಾಪಿಸಿ ದುರಂತ ಸಂಭವಿಸಿದೆ.

Continue Reading

ಪ್ರಮುಖ ಸುದ್ದಿ

Narendra Modi: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಯ ಅಪುಲಿಯಾಗೆ ತಲುಪಿದ ಪ್ರಧಾನಿ ಮೋದಿ

Narendra modi:

VISTARANEWS.COM


on

Narendra Modi
Koo

ಬೆಂಗಳೂರು: 50 ನೇ ಆವೃತ್ತಿಯ ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಇಟಲಿಯ ಅಪುಲಿಯಾ ಪ್ರದೇಶದ ಬೃಂಡಿಸಿ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರದ ಮೊದಲ ವಿದೇಶ ಪ್ರವಾಸ ಇದಾಗಿದೆ. ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ಬಂದಿಳಿದಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ವಿಶ್ವ ನಾಯಕರೊಂದಿಗೆ ಉಪಯುಕ್ತ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲು ಎದುರು ನೋಡುತ್ತಿದ್ದೇನೆ. ಒಟ್ಟಾಗಿ, ನಾವು ಜಾಗತಿಕ ಸವಾಲುಗಳನ್ನು ಎದುರಿಸುವ ಮತ್ತು ಉಜ್ವಲ ಭವಿಷ್ಯಕ್ಕಾಗಿ ಅಂತರರಾಷ್ಟ್ರೀಯ ಸಹಕಾರವನ್ನು ವೃದ್ಧಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಶೃಂಗಸಭೆಯ ಸಮಯದಲ್ಲಿ, ಪಿಎಂ ಮೋದಿ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಶೃಂಗಸಭೆಯ ಹೊರತಾಗಿ ಮೋದಿ ಯುಎಸ್ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಈ ಹಿಂದೆಯೇ ಹೇಳಿದ್ದರು.

ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಇಟಲಿ ಭಾರತಕ್ಕೆ ಆಹ್ವಾನ ನೀಡಿತ್ತು. ಇದು ಜಿ 7 ಶೃಂಗಸಭೆಯಲ್ಲಿ ಮೋದಿಯವರ ಸತತ ಐದನೇ ಭಾಗವಹಿಸುವಿಕೆಯಾಗಿದ್ದು, ಭಾರತವು ಹಿಂದಿನ ಹತ್ತು ಶೃಂಗಸಭೆಗಳಲ್ಲಿ ಅವರು ಭಾಗವಹಿಸಿದ್ದರು.

ವಿಷಯಗಳು ಯಾವುವು?

ಶೃಂಗಸಭೆಯ ವಿದೇಶದ ಅಧಿವೇಶನದಲ್ಲಿ ಭಾರತವು ಕೃತಕ ಬುದ್ಧಿಮತ್ತೆ, ಇಂಧನ, ಆಫ್ರಿಕಾ ಮತ್ತು ಮೆಡಿಟರೇನಿಯನ್ ದೇಶಗಳ ಸಹಕಾರದ ಮೇಲೆ ಗಮನ ಹರಿಸಲಿದೆ ಎಂದು ಪ್ರಧಾನಿ ಹೇಳಿದ್ದಾರೆ. ಜಾಗತಿಕವಾಗಿ ನಿರ್ಣಾಯಕ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Amit Shah: ತಮಿಳಿಸೈಗೆ ಅಮಿತ್ ಶಾ ಬೈಗುಳದ ವಿಡಿಯೋ; ವಿವಾದಕ್ಕೆ ತೆರೆ ಎಳೆದ ತಮಿಳುನಾಡು ಬಿಜೆಪಿ ನಾಯಕಿ

ಜಿ 7 ನ ಸಮ್ಮೇಳನದ ನೇತೃತ್ವ ವಹಿಸಿರುವ ಇಟಲಿ, ಯುರೋಪಿಯನ್ ಒಕ್ಕೂಟದ ಜೊತೆಗೆ ಕೆನಡಾ, ಫ್ರಾನ್ಸ್, ಜರ್ಮನಿ, ಜಪಾನ್, ಯುನೈಟೆಡ್ ಕಿಂಗ್ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ಏಳು ಪ್ರಮುಖ ಮುಂದುವರಿದ ಆರ್ಥಿಕತೆಗಳ ಬಣದ ಸಭೆ ಆಯೋಜಿಸುತ್ತಿದೆ.

ಇಟಲಿಯ ಅಪುಲಿಯಾ ಪ್ರದೇಶದ ಬೊರ್ಗೊ ಎಗ್ನಾಜಿಯಾ ರೆಸಾರ್ಟ್​​ನಲ್ಲಿ ಜಿ 7 ಶೃಂಗಸಭೆ ಜೂನ್ 13 ರಿಂದ 15 ರವರೆಗೆ ನಡೆಯಲಿದೆ. ಶೃಂಗಸಭೆಯಲ್ಲಿ ಉಕ್ರೇನ್ ನಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಗಾಝಾದಲ್ಲಿನ ಸಂಘರ್ಷದ ಕುರಿತು ಚರ್ಚಿಸುವ ನಿರೀಕ್ಷೆಯಿದೆ.

Continue Reading

ಪ್ರಮುಖ ಸುದ್ದಿ

Amit Shah: ತಮಿಳಿಸೈಗೆ ಅಮಿತ್ ಶಾ ಬೈಗುಳದ ವಿಡಿಯೋ; ವಿವಾದಕ್ಕೆ ತೆರೆ ಎಳೆದ ತಮಿಳುನಾಡು ಬಿಜೆಪಿ ನಾಯಕಿ

Amith Shah: ಸೌಂದರರಾಜನ್ ಅವರ ಪ್ರಕಾರ, ವೀಡಿಯೊದಲ್ಲಿ ಕಂಡುಬರುವಂತೆ ಅಮಿತ್ ಶಾ ಅವರ ಸೂಚನೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅಲ್ಲಿ ಅಮಿತ್ ಅವರು ತಮಗೆ ರಾಜಕೀಯವನ್ನು ಸಮರ್ಥವಾಗಿ ನಿರ್ವಹಿಸಲು ಸಲಹೆ ನೀಡಿದ್ದಾರೆ ಎಂಬುದಾಗಿ ಅವರು ಹೇಳಿದ್ದಾರೆ.

VISTARANEWS.COM


on

Amith Shah
Koo

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ತಮಿಳುನಾಡು ಬಿಜೆಪಿ ನಾಯಕಿ ತಮಿಳಿಸೈಯನ್ನು ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಗದರಿದ್ದಾರೆ ಎಂಬ ವಿಡಿಯೊ ವೈರಲ್ ಆಗಿದೆ. ಆದರೆ ಸ್ವತಃ ತಮಿಳಿಸೈ ಅವರು ಅದನ್ನು ನಿರಾಕರಿಸಿದ್ದು ಅವರು ತಮ್ಮನ್ನು ಬೈದಿದ್ದಲ್ಲ ಎಂದು ಹೇಳಿದ್ದಾರೆ.

ಸೌಂದರರಾಜನ್ ಅವರ ಪ್ರಕಾರ, ವೀಡಿಯೊದಲ್ಲಿ ಕಂಡುಬರುವಂತೆ ಅಮಿತ್ ಶಾ ಅವರ ಸೂಚನೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅಲ್ಲಿ ಅಮಿತ್ ಅವರು ತಮಗೆ ರಾಜಕೀಯವನ್ನು ಸಮರ್ಥವಾಗಿ ನಿರ್ವಹಿಸಲು ಸಲಹೆ ನೀಡಿದ್ದಾರೆ ಎಂಬುದಾಗಿ ಅವರು ಹೇಳಿದ್ದಾರೆ.

ನಿನ್ನೆ, 2024 ರ ಚುನಾವಣೆಯ ನಂತರ ಮೊದಲ ಬಾರಿಗೆ ಆಂಧ್ರಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದೆ. ಅವರು ನನಗೆ ಚುನಾವಣೆ ನಂತರದ ಸವಾಲುಗಳ ಬಗ್ಗೆ ಕೇಳಿದರು. ನಾನು ವಿವರಿಸುತ್ತಿರುವಂತೆ, ಸಮಯದ ಅಭಾವದಿಂದಾಗಿ ಅವರು ರಾಜಕೀಯ ಮತ್ತು ಕ್ಷೇತ್ರದ ಕೆಲಸಗಳನ್ನು ತೀವ್ರಗತಿಯಲ್ಲಿ ಮಾಡುವಂತೆ ಸಲಹೆ ನೀಡಿದರು. ಹೀಗಾಗಿ ಭರವಸೆ ಮೂಡಿದೆ. ಇದು ಅನಗತ್ಯ ಊಹಾಪೋಹ ಸೃಷ್ಟಿಸಿದೆ ಎಂದು ತಮಿಳಸೈ ಸೌಂದರರಾಜನ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕೆ ಕಾರಣವೇನು?

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಅಮಿತ್ ಶಾ ಅವರು ತೆಲಂಗಾಣದ ಮಾಜಿ ರಾಜ್ಯಪಾಲರನ್ನು ವೇದಿಕೆಯ ಮೇಲೆ ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬ ವೀಡಿಯೊ ವಿವಾದಕ್ಕೆ ಕಾರಣವಾಗಿತ್ತು . ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ರಾಜ್ಯದಲ್ಲಿನ ಚುನಾವಣಾ ಸೋಲಿನ ಬಗ್ಗೆ ಸೌಂದರರಾಜನ್ ಟೀಕಿಸಿದ್ದರು. ಅದೇ ಹೇಳಿಕೆಗಾಗಿ ಅಮಿತ್ ಶಾ ತಮಿಳಿಸೈ ಅವರನ್ನು ಬೈಯುತ್ತಿದ್ದಾರೆ ಎಂದು ಹಲವರು ಊಹಿಸಿದ್ದರು.

ಇದನ್ನೂ ಓದಿ: Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

ಈ ವಿಡಿಯೋದಲ್ಲಿ ಡಿಎಂಕೆ ನಾಯಕರು ಬಿಜೆಪಿಯನ್ನು ಗುರಿಯಾಗಿಸಿಕೊಂಡಿದ್ದು, ಅಮಿತ್ ಶಾ ಅವರ ನಡವಳಿಕೆಯನ್ನು ಪ್ರಶ್ನಿಸಿದ್ದಾರೆ. ಮಾಜಿ ಕೇಂದ್ರ ಸಚಿವ ಮತ್ತು ಡಿಎಂಕೆ ನಾಯಕ ದಯಾನಿಧಿ ಮಾರನ್ ಅವರು ಅಮಿತ್ ಶಾ ಅವರ ಈ ವೀಡಿಯೊದ ಬಗ್ಗೆ ಟೀಕಿಸಿದ್ದು, ಇದು ‘ದುರದೃಷ್ಟಕರ’ ಮತ್ತು ‘ಸ್ವಾಗತಾರ್ಹವಲ್ಲ’ ಎಂದು ಹೇಳಿದ್ದಾರೆ.

ಇದು ತುಂಬಾ ದುರದೃಷ್ಟಕರ. ಅವರು ತೆಲಂಗಾಣ ಮತ್ತು ಪುದುಚೇರಿಯ ರಾಜ್ಯಪಾಲರಾಗಿದ್ದರು. ಗೃಹ ಸಚಿವರು ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅಥವಾ ವಿದೇಶಾಂಗ ಸಚಿವರಾಗಿರುವ ಎಸ್ ಜೈಶಂಕರ್ ಅವರನ್ನು ಅದೇ ರೀತಿ ಬೈಯುತ್ತಾರೆಯೇ? ತಮಿಳಿಸೈ ತಮಿಳುನಾಡಿನವಳು ಎಂಬ ಕಾರಣಕ್ಕಾಗಿ ತರಾಟೆಗೆ ತೆಗೆದುಕೊಂಡರೇ? ಇದು ಅತ್ಯಂತ ಸ್ವಾಗತಾರ್ಹವಲ್ಲ” ಎಂದು ಹೇಳಿದ್ದರು.

ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ ಇದನ್ನು ಅಪದ್ಧ ಎಂದು ಕರೆದಿದ್ದಾರೆ. ಇದು ಯಾವ ರೀತಿಯ ರಾಜಕೀಯ? ತಮಿಳುನಾಡಿನ ಪ್ರಮುಖ ಮಹಿಳಾ ರಾಜಕಾರಣಿಯನ್ನು ಸಾರ್ವಜನಿಕವಾಗಿ ಖಂಡಿಸುವುದು ಸಭ್ಯವೇ? ಇದನ್ನು ಎಲ್ಲರೂ ನೋಡಿದ್ದಾರೆ ಎಂಬುದನ್ನು ಅಮಿತ್ ಶಾ ತಿಳಿದುಕೊಳ್ಳಬೇಕು. ಎಂದು ಅವರು ಎಕ್ಸ್ ನಲ್ಲಿ ಬರೆದಿದ್ದಾರೆ.

Continue Reading
Advertisement
Rape Case
ಪ್ರಮುಖ ಸುದ್ದಿ8 mins ago

Rape Case: 14 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದ ಪ್ರೇಮಿ; 6 ಸ್ನೇಹಿತರಿಂದ ಅತ್ಯಾಚಾರ

Religious Conversion Case
Latest10 mins ago

Religious Conversion Case: ಹಿಂದೂ ಹುಡುಗಿಯ ಖಾಸಗಿ ಫೋಟೊ ತೆಗೆದು ಬ್ಲ್ಯಾಕ್‌ಮೇಲ್‌; ಮತಾಂತರಕ್ಕೆ ಒತ್ತಡ

Kuwait Fire
ವಿದೇಶ11 mins ago

Kuwait Fire: ಕುವೈತ್‌ ಅಗ್ನಿ ದುರಂತ; 45 ಭಾರತೀಯರ ಮೃತದೇಹ ಇಂದು ಸ್ವದೇಶಕ್ಕೆ

Wild Elephant
ಪ್ರಮುಖ ಸುದ್ದಿ20 mins ago

Wild Elephant : ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚರಿಸುವವರಿಗೆ ಎಚ್ಚರಿಕೆ; ಆಗಾಗ ಕಾಣಿಸಿಕೊಳ್ಳುತ್ತಿದೆ ಒಂಟಿ ಸಲಗ

Araku Valley Tour
ಪ್ರವಾಸ39 mins ago

Araku Valley Tour: ಆಂಧ್ರಪ್ರದೇಶದ ಅರಕು ವ್ಯಾಲಿ; ಹಲವು ಅದ್ಭುತಗಳ ಸಂಗಮ

T20 World Cup
ಪ್ರಮುಖ ಸುದ್ದಿ47 mins ago

T20 World Cup : ಒಮನ್ ವಿರುದ್ಧ 8 ವಿಕೆಟ್​ ಜಯ ಗಳಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್​

Junk Food Side Effects
ಆರೋಗ್ಯ1 hour ago

Junk Food Side Effects: ಗೇಮಿಂಗ್‌ ದಾಸರಾದ ಮಕ್ಕಳು ಜಂಕ್‌ ಫುಡ್‌ ವ್ಯಸನಿಗಳಾಗುವ ಸಂಭವ ಹೆಚ್ಚು!

Narendra Modi
ಪ್ರಮುಖ ಸುದ್ದಿ1 hour ago

Narendra Modi: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಯ ಅಪುಲಿಯಾಗೆ ತಲುಪಿದ ಪ್ರಧಾನಿ ಮೋದಿ

karnataka weather Forecast
ಮಳೆ2 hours ago

Karnataka Weather : ಬೆಂಗಳೂರಲ್ಲಿ ಮುಂದುವರಿಯಲಿದೆ ಭರ್ಜರಿ ಮಳೆ; ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Amith Shah
ಪ್ರಮುಖ ಸುದ್ದಿ2 hours ago

Amit Shah: ತಮಿಳಿಸೈಗೆ ಅಮಿತ್ ಶಾ ಬೈಗುಳದ ವಿಡಿಯೋ; ವಿವಾದಕ್ಕೆ ತೆರೆ ಎಳೆದ ತಮಿಳುನಾಡು ಬಿಜೆಪಿ ನಾಯಕಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌