ಮುಂಬಯಿ: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನಿರ್ಧಾರ ಪ್ರಕಟಿಸುತ್ತಿದ್ದಂತೆಯೇ ವಿಪಕ್ಷ ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಇಲ್ಲಿಯ ತಾಜ್ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಬೀಡು ಬಿಟ್ಟಿದ್ದ ಬಿಜೆಪಿ ಶಾಸಕರು ಸಿಹಿ ಹಂಚಿ ಸಂಭ್ರಮಿಸಿದರು.
ಮುಖ್ಯಮಂತ್ರಿಯ ರಾಜೀನಾಮೆಯೊಂದಿಗೆ ಮಹಾವಿಕಾಸ ಅಘಾಡಿ ಸರಕಾರ ಪತನಗೊಂಡಂತಾಗಿದ್ದು, ಬಿಜೆಪಿ ಸದ್ಯವೇ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದೆ.
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತೆ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ಈ ಕುರಿತು ಅವರು ಗುರುವಾರ ಬೆಳಗ್ಗೆ ರಾಜ್ಯಪಾಲರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ಮುಂದೇನು ಎಂಬುದರ ಕುರಿತು ಬಿಜೆಪಿ ನಾಯಕರು ಚರ್ಚೆ ನಡೆಸುತ್ತಿದ್ದಾರೆ.