ಮುಂಬೈ: ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ (Rahul Gandhi) ಅವರು ಹಿಂದುಗಳ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೂಡ ಸಂಸತ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ, ಹಿಂದುಗಳ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಖಂಡಿಸಿ ಮಹಾರಾಷ್ಟ್ರದ ದೇಗುಲದ (Maharashtra Temple) ಡೋರ್ ಮ್ಯಾಟ್‌ಗೆ ರಾಹುಲ್ ಗಾಂಧಿ ಅವರ ಫೋಟೊವನ್ನು ಅಳವಡಿಸಲಾಗಿದೆ. ಈ ವಿಡಿಯೊ (Viral Video) ಈಗ ವೈರಲ್ ಆಗಿದೆ.
ಹಿಂದುಗಳ ಕುರಿತು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿ ದೇವಾಲಯದ ಆಡಳಿತ ಮಂಡಳಿಯು ಡೋರ್‌ಮ್ಯಾಟ್‌ಗೆ ರಾಹುಲ್ ಗಾಂಧಿ ಅವರ ಫೋಟೊವನ್ನು ಅಳವಡಿಸಿದೆ. ದೇಗುಲಕ್ಕೆ ತೆರಳುವ ಭಕ್ತರು ರಾಹುಲ್ ಗಾಂಧಿ ಅವರ ಫೋಟೊ ಇರುವ ಡೋರ್‌ಮ್ಯಾಟ್‌ಅನ್ನು ತುಳಿದುಕೊಂಡು ಹೋಗುತ್ತಿರುವ ವಿಡಿಯೊ ಲಭ್ಯವಾಗಿದೆ. ಅಷ್ಟೇ ಅಲ್ಲ, ಡೋರ್ ಮ್ಯಾಟ್ ಮೇಲೆ, “ಹಿಂದುಗಳನ್ನು ಹಿಂಸಾವಾದಿಗಳು ಎಂಬುದಾಗಿ ಕರೆಯಲು ನಿಮಗೆ ಎಷ್ಟು ಧೈರ್ಯ” ಎಂದು ಕೂಡ ಬರೆಯಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗುತ್ತಲೇ ಪರ-ವಿರೋಧ ಚರ್ಚೆಯಾಗುತ್ತಿದೆ.
As a mark of protest against Rahul Gandhi's anti-Hindu statements, a temple management in Maharashtra used Rahul Gandhi's picture as a doormat.
— Mr Sinha (@MrSinha_) July 8, 2024
The text on doormat says, "How dare you call Hindus violent and eve teasers?
Innovative idea!!!pic.twitter.com/rNPoNdSM0M
ರಾಹುಲ್ ಗಾಂಧಿ ಹೇಳಿದ್ದೇನು?
“ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್ ಕ್ರೈಸ್ಟ್ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಗಂಟೆ ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ” ಎಂದು ರಾಹುಲ್ ಗಾಂಧಿ ಸಂಸತ್‌ನಲ್ಲಿ ಜುಲೈ 1ರಂದು ಹೇಳಿದ್ದರು.
ಮೋದಿ ತಿರುಗೇಟು ಕೊಟ್ಟಿದ್ದರು
ರಾಹುಲ್ ಗಾಂಧಿ ಹೇಳಿಕೆಗೆ ನರೇಂದ್ರ ಮೋದಿ ಅವರು ಸಂಸತ್‌ನಲ್ಲಿಯೇ ತಿರುಗೇಟು ಕೊಟ್ಟಿದ್ದರು. “ಸ್ವಾಮಿ ವಿವೇಕಾನಂದರು ಯಾವ ಧರ್ಮದ ಕುರಿತು ಅಭಿಮಾನದಿಂದ ಹೇಳಿದ್ದರೋ, ಯಾವ ಧರ್ಮದ ಮಹತ್ವ, ಸಹಿಷ್ಣುತೆಯನ್ನು ಜಗತ್ತಿಗೇ ತಿಳಿಸಿದ್ದರೋ, ಅದೇ ಧರ್ಮದವರು ನಾವು. ಹಿಂದು ಧರ್ಮವು ಎಂದಿಗೂ ದ್ವೇಷ, ಹಿಂಸೆಯನ್ನು ಪ್ರಚೋದಿಸಿಲ್ಲ. ಬಿಜೆಪಿಯು ಇಂತಹ ಧರ್ಮದಲ್ಲಿ ನಂಬಿಕೆ ಇರಿಸಿದ್ದು, ರಾಜಕೀಯ ಕಾರಣಕ್ಕಾಗಿ ಕಾಂಗ್ರೆಸ್ ಹಿಂದುಗಳನ್ನು ಅವಮಾನಿಸುತ್ತಿದೆ. ಹಿಂದುಗಳು ಕಾಂಗ್ರೆಸ್‌ನ ಈ ಷಡ್ಯಂತ್ರವನ್ನು ತಿಳಿಯಬೇಕು. ದೇಶದಲ್ಲಿ ಹಿಂದುಗಳು ಕಾಂಗ್ರೆಸ್ ಬಗ್ಗೆ ಎಚ್ಚರದಿಂದ ಇರಬೇಕು” ಎಂದು ಹೇಳಿದ್ದರು.
“ಹಿಂದುಗಳ ಕುರಿತು ರಾಹುಲ್ ಗಾಂಧಿ ಅವರು ಸುಳ್ಳುಗಳನ್ನು ಹರಡಿಸುತ್ತಿದ್ದಾರೆ. ಹಿಂದುಗಳು ಹಿಂಸಾವಾದಿಗಳು ಎಂದು ಹೇಳುವ ಮೂಲಕ ಪ್ರಚೋದನೆ ನೀಡುತ್ತಿದೆ. ಇದು ಕಾಂಗ್ರೆಸ್ ಹಾಗೂ ಕಾಂಗ್ರೆಸ್ ನಾಯಕನ ಸಂಸ್ಕೃತಿ, ಇದು ನಿಮ್ಮ ವ್ಯಕ್ತಿತ್ವ, ಇವು ನಿಮ್ಮ ಕೆಟ್ಟ ವಿಚಾರಗಳು, ಹಿಂದುಗಳ ಮೇಲೆ ನೀವು ಹೊಂದಿರುವ ದ್ವೇಷ, ನಿಮ್ಮ ಚಟುವಟಿಕೆಗಳು ಹಿಂದುಗಳ ವಿರೋಧಿಯಾಗಿವೆ. ಇದನ್ನು ಹಿಂದುಗಳು ಗಮನಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದರು.
ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?