ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ(Democracy), ಸಂವಿಧಾನಕ್ಕೆ (Constitution) ಅಡಿಪಾಯ ಹಾಕಿದ್ದೇ ಕಾಂಗ್ರೆಸ್(Congress Party). ಅಲ್ಲದೇ, ಅವುಗಳ ರಕ್ಷಣೆಯ ಹೊಣೆಯೂ ಕಾಂಗ್ರೆಸ್ ಪಕ್ಷವೇ ಹೊರಬೇಕಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Congress President Mallikarjun Kharge) ಅವರು ಹೇಳಿದರು. ಹೈದ್ರಾಬಾದ್‌ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿ ಅವರು, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ನಾವೆಲ್ಲ ಹೋರಾಡಬೇಕಿದೆ ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ತಿಳಿಸಿದರು. ಮಹಾತ್ಮ ಗಾಂಧಿ (Mahatma Gandhi) ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಕ್ಕೆ 2024ರಲ್ಲಿ ನೂರು ವರ್ಷವಾಗಲಿದೆ. ಹಾಗಾಗಿ, ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವುದೇ ಮಹಾತ್ಮ ಗಾಂಧಿ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಹೇಳಿದರು.
ಕಾಂಗ್ರೆಸ್ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಡಿಪಾಯವನ್ನು ಹಾಕಿದೆ. ಆದ್ದರಿಂದ ಅವನ್ನು ರಕ್ಷಿಸುವ ಹೊಣೆಗಾರಿಕೆಯೂ ಕಾಂಗ್ರೆಸ್ ಮೇಲಿದೆ. ಇದಕ್ಕಾಗಿ ಕೊನೆಯ ಉಸಿರು ಇರುವವರೆಗೂ ಹೋರಾಟ ನಡೆಸಬೇಕಾಗಿದೆ. ಮಹಾತ್ಮ ಗಾಂಧಿ ಅವರು 1924ರಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. 2024ರಲ್ಲಿ ನೂರು ವರ್ಷಗಳಾಗಲಿವೆ. ಹಾಗಾಗಿ, ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ಮಹಾತ್ಮ ಗಾಂಧಿ ಅವರಿಗೆ ಸಲ್ಲಿಸುವ ನೈಜ ಶೃದ್ಧಾಂಜಲಿಯಾಗಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವು ಇದುವರೆಗೆ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗೆದ್ದಿದೆ. ಬಿಜೆಪಿ ಸರ್ಕಾರದ ಕೊರತೆಗಳು ಮತ್ತು ಜನ ವಿರೋಧಿ ನೀತಿಗಳನ್ನು ಬಯಲಿಗೆಳೆಯರಿ. ನಿರಂತರವಾಗಿ ಮೂಲ ಸಮಸ್ಯೆಗಳನ್ನು ಎತ್ತಿ ತೋರಿಸಿ ಎಂದು ಪಕ್ಷದ ನಾಯಕರಿಗೆ ತಿಳಿಸಿದರು.
ಕಾಂಗ್ರೆಸ್ ಅಧ್ಯಕ್ಷರಾಗಿ ಮಹಾತ್ಮ ಗಾಂಧಿ ಸೇವೆ ಸಲ್ಲಿಸಿದ್ದಕ್ಕೆ 2024ರಲ್ಲಿ ನೂರು ವರ್ಷಗಳು ಪೂರೈಸಲಿವೆ. 2023 ಕಾಂಗ್ರೆಸ್‌ನ ಸೇವಾದಳ ಶತಮಾನೋತ್ಸವವಾಗಿದೆ. 2024ರಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದೇ ಮಹಾತ್ಮ ಗಾಂಧಿ ಅವರಿಗೆ ಸಲ್ಲಿಸುವ ನೈಜ ಶೃದ್ಧಾಂಜಲಿಯಾಗಲಿದೆ. ಆದ್ದರಿಂದ ನಾವು ಮೂಲ ಸಮಸ್ಯೆಗಳ ವಿರುದ್ಧ ನಿರಂತರವಾಗಿ ದನಿ ಎತ್ತಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.
ಈ ಸುದ್ದಿಯನ್ನೂ ಓದಿ: CWC Meet: ಗೆಲ್ಲಬೇಕಿದ್ದರೆ ಅನಗತ್ಯವಾಗಿ ಮಾಧ್ಯಮಗಳ ಮುಂದೆ ಹೋಗಬೇಡಿ; ಪಕ್ಷದ ನಾಯಕರಿಗೆ ಸೋನಿಯಾ ಕಿವಿಮಾತು
ಭಾನುವಾರಕ್ಕೆ ವಿಸ್ತರಣೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳು, ರಾಜ್ಯ ಘಟಕಗಳ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು. ಈ ವೇಳೆ, ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗಳು ಹಾಗೂ ಲೋಕಸಭೆ ಚುನಾವಣೆಗಳ ಕುರಿತು ವ್ಯಾಪಕವಾಗಿ ಚರ್ಚೆ ನಡೆಸಲಾಯಿತು.