Congress President | ಅಧ್ಯಕ್ಷ ಸ್ಥಾನ ಚುನಾವಣೆಗೆ ಕೊನೇ ಕ್ಷಣದಲ್ಲಿ ಪ್ರವೇಶ ಮಾಡಿದ ಮಲ್ಲಿಕಾರ್ಜುನ್ ಖರ್ಗೆ? - Vistara News

ದೇಶ

Congress President | ಅಧ್ಯಕ್ಷ ಸ್ಥಾನ ಚುನಾವಣೆಗೆ ಕೊನೇ ಕ್ಷಣದಲ್ಲಿ ಪ್ರವೇಶ ಮಾಡಿದ ಮಲ್ಲಿಕಾರ್ಜುನ್ ಖರ್ಗೆ?

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು (ಸೆ.30) ಕೊನೇ ದಿನವಾಗಿರುವ ಬೆನ್ನಲ್ಲೇ, ಮಲ್ಲಿಕಾರ್ಜುನ್ ಖರ್ಗೆ ಸೋನಿಯಾ ಗಾಂಧಿಯನ್ನು ಭೇಟಿಯಾಗಲಿದ್ದಾರೆ.

VISTARANEWS.COM


on

Mallikarjun Kharge
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಅಕ್ಟೋಬರ್​ 17ರಂದು ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ತಿರುವನಂತಪುರಂ ಸಂಸದ ಶಶಿ ತರೂರ್​, ಹಿರಿಯ ನಾಯಕ ದಿಗ್ವಿಜಯ ಸಿಂಗ್​ ಸ್ಪರ್ಧಿಸುವುದು ನಿಶ್ಚಿತವಾಗಿದೆ. ಹಾಗೇ, ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿರುವ, ಕರ್ನಾಟಕ ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಕೂಡ ಸ್ಪರ್ಧಿಸುತ್ತಾರೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ದೃಢಪಟ್ಟಿರಲಿಲ್ಲ. ಇಂದು ನಾಮಪತ್ರ ಸಲ್ಲಿಸಲು ಕೊನೇ ದಿನವಾಗಿದ್ದು, ಮಲ್ಲಿಕಾರ್ಜುನ್​ ಖರ್ಗೆ ಸ್ಪರ್ಧೆಯೂ ಬಹುತೇಕ ಖಚಿತ ಎಂದು ಕಾಂಗ್ರೆಸ್​ ಮೂಲಗಳು ತಿಳಿಸಿವೆ. ಮಲ್ಲಿಕಾರ್ಜುನ್​ ಖರ್ಗೆ ಇಂದು ಸೋನಿಯಾ ಗಾಂಧಿಯವರನ್ನು ಭೇಟಿಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಮಲ್ಲಿಕಾರ್ಜುನ್​ ಖರ್ಗೆ ಕಾಂಗ್ರೆಸ್​​ನ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರು. ಎಂಟು ಬಾರಿ ಶಾಸಕರಾದವರು ಮತ್ತು ಎರಡು ಸಲ ಸಂಸದರಾಗಿ ಹುದ್ದೆ ನಿಭಾಯಿಸಿದವರು. ಪ್ರಸ್ತುತ ರಾಜ್ಯಸಭೆ ಸದಸ್ಯರಾಗಿದ್ದು, ಪ್ರತಿಪಕ್ಷ ನಾಯಕನ ಸ್ಥಾನದಲ್ಲಿದ್ದಾರೆ. ದಲಿತ ಸಮುದಾಯದ ಪ್ರಭಾವಿ ನಾಯಕನಾದ ಇವರು 2005ರಿಂದ 2008ರವರೆಗೆ ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ) ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 1999ರಿಂದ 2004ರವರೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ಎಸ್​.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಗೃಹ ಸಚಿವರಾಗಿ ಕರ್ತವ್ಯ ನಿಭಾಯಿಸಿದ್ದಾರೆ.

ಅಷ್ಟೇ ಅಲ್ಲ, ಕೇಂದ್ರದಲ್ಲಿ ಮನಮೋಹನ್​ ಸಿಂಗ್​ ನೇತೃತ್ವದ ಕಾಂಗ್ರೆಸ್​ ಸರ್ಕಾರವಿದ್ದಾಗ ಮಲ್ಲಿಕಾರ್ಜುನ್​ ಖರ್ಗೆ ಕೇಂದ್ರ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2009ರಿಂದ 2013ರವರೆಗೆ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ಸಚಿವರಾಗಿ, 2013ರಿಂದ 2014ರವರೆಗೆ ರೈಲ್ವೆ ಇಲಾಖೆ ಸಚಿವರಾಗಿದ್ದರು. ಅದಾದ ಮೇಲೆ 2014ರಿಂದ 2019ರವರೆಗೆ ಲೋಕಸಭೆ ಕಾಂಗ್ರೆಸ್​ ನಾಯಕರಾಗಿದ್ದ ಖರ್ಗೆ, ಪ್ರಸ್ತುತ ರಾಜ್ಯಸಭೆಯಲ್ಲಿ ಇದ್ದಾರೆ.

ಶಶಿ ತರೂರ್​ ಮತ್ತು ದಿಗ್ವಿಜಯ ಸಿಂಗ್​ ಅವರು ಇಂದು ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆಯೂ ನಾಮಪತ್ರ ಸಲ್ಲಿಕೆ ಮಾಡುವುದು ಬಹುತೇಕ ಪಕ್ಕಾ ಎಂದೂ ಹೇಳಲಾಗಿದೆ. ಅದರಾಚೆಗೆ ಅಧ್ಯಕ್ಷ ಸ್ಥಾನದ ರೇಸ್​​ನಲ್ಲಿ ಕಾಂಗ್ರೆಸ್​ ನಾಯಕರಾದ ಮುಕುಲ್ ವಾಸ್ನಿಕ್ ಮತ್ತು ಕುಮಾರಿ ಸೆಲ್ಜಾ ಹೆಸರುಗಳೂ ಕೇಳಿಬರುತ್ತಿವೆ. ಇದೆಲ್ಲದರ ಮಧ್ಯೆ ಪ್ರಥ್ವಿರಾಜ್​ ಚೌಹಾಣ್​, ಮನೀಶ್​ ತಿವಾರಿ, ಭೂಪಿಂದರ್​ ಹೂಡಾ ಮತ್ತು ಇತರ ಜಿ 23 ನಾಯಕರು ಸೇರಿ ಆನಂದ್​ ಶರ್ಮಾ ನಿವಾಸದಲ್ಲಿ ಮಹತ್ವದ ಸಭೆಯೊಂದನ್ನು ನಡೆಸಿದ್ದಾರೆ ಎಂದೂ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ನೀಡಲಿ: ರಮೇಶ್‌ ಬಾಬು ಆಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Modi 3.0 Cabinet: ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಯಾರಿಗೆಲ್ಲ ಸಚಿವ ಸ್ಥಾನ? ಇವರೇ ನೋಡಿ ಸಂಭಾವ್ಯ ಮಿನಿಸ್ಟರ್‌ಗಳು

Modi 3.0 Cabinet: ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ನಾಳೆ (ಜೂನ್‌ 9) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಯಾರಿಗೆಲ್ಲ ಸಚಿವ ಸ್ಥಾನ ಭಾಗ್ಯ ಸಿಗಲಿದೆ ಎನ್ನುವ ಬಗ್ಗೆ ಚರ್ಚೆ ಆರಂಭವಾಗಿದೆ. ಸಂಪುಟ ದರ್ಜೆ ಸಚಿವರನ್ನು ತೀರ್ಮಾನಿಸುವ ನಿಟ್ಟಿನಲ್ಲಿ ಇಂದು (ಶನಿವಾರ) ಮತ್ತೆ ಎನ್‌ಡಿಎ ಸಂಸದರ ಸಭೆ ಕರೆದಿದೆ. ಇಲ್ಲಿದೆ ನೋಡಿ ಸಚಿವ ಸ್ಥಾನ ಅಲಂಕರಿಸಲಿರುವ ಸಂಭಾವ್ಯ ನಾಯಕರ ಪಟ್ಟಿ.

VISTARANEWS.COM


on

Modi 3.0 Cabinet
Koo

ನವದೆಹಲಿ: ಬಹುಮತ ಪಡೆದ ಎನ್‌ಡಿಎ (NDA) ಮತ್ತೊಂದು ಅವಧಿಗೆ ಸರ್ಕಾರ ರಚಿಸಲಿದೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ನಾಳೆ (ಜೂನ್‌ 9) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಯಾರಿಗೆಲ್ಲ ಸಚಿವ ಸ್ಥಾನ ಭಾಗ್ಯ ಸಿಗಲಿದೆ ಎನ್ನುವ ಬಗ್ಗೆ ಚರ್ಚೆ ಆರಂಭವಾಗಿದೆ. ಸಂಪುಟ ದರ್ಜೆ ಸಚಿವರನ್ನು ತೀರ್ಮಾನಿಸುವ ನಿಟ್ಟಿನಲ್ಲಿ ಎನ್‌ಡಿಎ ಸಂಸದರ ಸಭೆ ಕರೆದಿದೆ (Modi 3.0 Cabinet).

ದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಪಟ್ಟಾಭಿಷೇಕಕ್ಕೆ ಈಗಾಗಲೇ ಸಿದ್ಧತೆ ನಡೆಸಲಾಗಿದೆ. ಪ್ರಧಾನಿ ಮೋದಿ ಅವರೊಂದಿಗೆ ಹಲವು ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜವಾಹರಲಾಲ್ ನೆಹರೂ ನಂತರ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದು, ಈ ಐತಿಹಾಸಿಕ ಸಮಾರಂಭಕ್ಕೆ ವಿವಿಧ ದೇಶಗಳ ಗಣ್ಯರೂ ಹಾಜರಾಗಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿದೆ. ಇನ್ನು ಚಂದ್ರಬಾಬು ನಾಯ್ಡು ಅವರ ಟಿಡಿಪಿ 16 ಸ್ಥಾನಗಳನ್ನು, ನಿತೀಶ್ ಕುಮಾರ್ ಅವರ ಜೆಡಿಯು (12), ಏಕನಾಥ್ ಶಿಂಧೆ ಅವರ ಶಿವಸೇನೆ (7) ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) (5) ಸ್ಥಾನಗಳನ್ನು ಗೆದ್ದುಕೊಂಡು ಸರ್ಕಾರ ರಚಿಸಲು ಎನ್‌ಡಿಎಗೆ ಬೆಂಬಲ ನೀಡಿವೆ. ಹೀಗಾಗಿ ಇದೀಗ ಮೋದಿ ಸಂಪುಟದಲ್ಲಿ ಯಾರಿಗೆಲ್ಲ ಸಚಿವ ಸ್ಥಾನ ಭಾಗ್ಯ ಲಭಿಸಲಿದೆ ಎನ್ನುವ ಬಗ್ಗೆ ಚರ್ಚೆ ಆರಂಭವಾಗಿದೆ.

ಮೋದಿ ಸಂಪುಟ ಸೇರುವ ಸಂಭ್ಯಾವ ಸಚಿವರು

ಬಿಜೆಪಿ

  • ಅಮಿತ್ ಶಾ (ಗುಜುರಾತ್ )
  • ರಾಜನಾಥ್ ಸಿಂಗ್ (ಉತ್ತರ ಪ್ರದೇಶ)
  • ನಿತಿನ್ ಗಡ್ಕರಿ (ಮಹಾರಾಷ್ಟ್ರ )
  • ನಿರ್ಮಲಾ ಸೀತರಾಮನ್ (ರಾಜ್ಯಸಭೆ )
  • ಜೈ ಶಂಕರ್ (ರಾಜ್ಯಸಭೆ )
  • ಶಿವರಾಜ್ ಸಿಂಗ್ ಚೌಹಾನ್ (ಮಧ್ಯಪ್ರದೇಶ )
  • ಪಿಯೂಷ್‌ ಗೋಯಲ್‌ (ಮಹಾರಾಷ್ಟ್ರ )
  • ಸ್ಮೃತಿ ಇರಾನಿ (ಸೋಲು, ರಾಜ್ಯಸಭೆಗೆ ಆಯ್ಕೆಯಾಗಬಹುದು)
  • ಜ್ಯೋತಿರಾದಿತ್ಯ ಸಿಂಧಿಯಾ (ಮಧ್ಯಪ್ರದೇಶ )
  • ಅರ್ಜುನ್ ಮುಂಡಾ (ಜಾರ್ಖಂಡ್ )
  • ಹರ್ದೀಪ್ ಸಿಂಗ್ ಪುರಿ (ರಾಜ್ಯಸಭೆ )
  • ಅನುರಾಗ್ ಠಾಕೂರ್ (ಹಿಮಾಚಲ ಪ್ರದೇಶ )
  • ಪರಶೋತ್ತಮ್ ರೂಪಲಾ (ರಾಜ್ಯಸಭೆ )
  • ಪ್ರಹ್ಲಾದ್ ಜೋಶಿ (ಕರ್ನಾಟಕ )
  • ಗಿರಿರಾಜ್ ಸಿಂಗ್ (ಬಿಹಾರ)
  • ಬಾನ್ಸೂರಿ ಸ್ವರಾಜ್ (ದೆಹಲಿ)
  • ಗಜೇಂದ್ರ ಸಿಂಗ್ ಶೇಖಾವತ್ (ರಾಜಸ್ಥಾನ)
  • ಭೂಪೇಂದ್ರ ಯಾದವ್ (ರಾಜಸ್ಥಾನ)

ಮೈತ್ರಿ ಪಕ್ಷದ ನಾಯಕರು

  • ಚಿರಾಗ್ ಪಾಸ್ವಾನ್ ( ಎಲ್‌ಜೆಪಿ- ಬಿಹಾರ)
  • ಲಾಲನ್ ಸಿಂಗ್ (ಜೆಡಿಯು- ಬಿಹಾರ)
  • ಎಚ್.ಡಿ.ಕುಮಾರಸ್ವಾಮಿ (ಜೆಡಿಎಸ್- ಕರ್ನಾಟಕ)
  • ಅನುಪ್ರಿಯಾ ಪಟೇಲ್ (ಅಪ್ನಾದಳ್- ಉತ್ತರಪ್ರದೇಶ)
  • ಜಿತನ್ ರಾಮ್ ಮಾಂಝಿ (ಎಚ್‌ಎಎಂ- ಬಿಹಾರ)

ಇದನ್ನೂ ಓದಿ: Narendra Modi: ಭಾನುವಾರ ಸಂಜೆ 7.15ಕ್ಕೆ ಮೋದಿ ಪ್ರಮಾಣವಚನ‌; ಹಲವು ಸಂಸದರಿಗೂ ಮಂತ್ರಿ ಭಾಗ್ಯ!

ಎನ್‌ಡಿಎ ಮೈತ್ರಿಕೂಟದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ (ಜೂನ್‌ 7) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಪಕ್ಷಗಳು ಬೆಂಬಲ ನೀಡಿರುವ ಪತ್ರದೊಂದಿಗೆ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾದ ಅವರು ಹಕ್ಕು ಮಂಡಿಸಿದ್ದಾರೆ. ಇನ್ನು ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿ ಅವರಿಗೆ ದ್ರೌಪದಿ ಮುರ್ಮು ಅವರು ಸಕ್ಕರೆ ಮಿಶ್ರಣ ಆಗಿರುವ ಮೊಸರನ್ನು ತಿನ್ನಿಸಿ, ಶುಭ ಕೋರಿದ್ದಾರೆ.

Continue Reading

ದೇಶ

Rahul Gandhi: ಷೇರುಪೇಟೆಯಲ್ಲಿ ಭಾರಿ ಹಗರಣವಾಗಿದೆ ಎಂದಿದ್ದ ರಾಹುಲ್ ಗಾಂಧಿಗೆ ಐದೇ ದಿನದಲ್ಲಿ 25 ಲಕ್ಷ ರೂ. ಲಾಭ!

Rahul Gandhi:ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಕೇವಲ ಐದೇ ದಿನಗಳಲ್ಲಿ ಷೇರು ಮಾರುಕಟ್ಟೆಯಲ್ಲಿ ಭಾರೀ ಲಾಭ ಗಳಿಸಿದ್ದಾರೆ. ಅಧಿಕೃತ ಮಾಹಿತಿ ಪ್ರಕಾರ ರಾಹುಲ್‌ ಗಾಂಧಿಯವರ ಷೇರಿನ ಮೊತ್ತದಲ್ಲಿ ಶೇ. 5.8 ಅಂದರೆ 25ಲಕ್ಷ ರೂ. ಏರಿಕೆ ಕಂಡಿದ್ದು, ಅವರು ಬಹಳದೊಡ್ಡ ಮೊತ್ತದ ಲಾಭ ಗಳಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಷೇರುಪೇಟೆ ಹಗರಣದ ಆರೋಪ(Stock market Crash) ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi)ಯವರು ಕೇವಲ ಐದೇ ದಿನಗಳಲ್ಲಿ ಷೇರು ಮಾರುಕಟ್ಟೆಯಲ್ಲಿ ಭಾರೀ ಲಾಭ ಗಳಿಸಿದ್ದಾರೆ. ಅಧಿಕೃತ ಮಾಹಿತಿ ಪ್ರಕಾರ ರಾಹುಲ್‌ ಗಾಂಧಿಯವರ ಷೇರಿನ ಮೊತ್ತದಲ್ಲಿ ಶೇ. 5.8 ಅಂದರೆ 25ಲಕ್ಷ ರೂ. ಏರಿಕೆ ಕಂಡಿದ್ದು, ಅವರು ಬಹಳದೊಡ್ಡ ಮೊತ್ತದ ಲಾಭ ಗಳಿಸಿದ್ದಾರೆ ಎನ್ನಲಾಗಿದೆ.

ರಾಹುಲ್‌ ಗಾಂಧಿಯವರು ಒಟ್ಟು 23 ಷೇರುಗಳನ್ನು ಹೊಂದಿದ್ದು, ಮೇ 31ರ ನಂತರ ಆ ಷೇರುಗಳಲ್ಲಿ ಮೊತ್ತ ಶೇ. 5.8ರಷ್ಟು ಏರಿಕೆ ಕಂಡಿದೆ. ನಿಫ್ಟಿ ಶೇ.3.3ರಷ್ಟು ಏರಿಕೆ ಕಂಡಿದೆ.


ರಾಹುಲ್‌ ಆರೋಪ ಏನು?

ಜೂನ್ 4 ರಂದು ಷೇರು ಮಾರುಕಟ್ಟೆ ಏಕಾಏಕಿ ಪತನಗೊಂಡು ಹೂಡಿಕೆದಾರರಿಗೆ 30 ಲಕ್ಷ ಕೋಟಿ ರೂಪಾಯಿ ನಷ್ಟವಾಗಿರುವುದು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಸೇರಿಕೊಂಡು ಮಾಡಿರುವ ಹಗರಣ ಎಂದು ಕಾಂಗ್ರೆಸ್​​ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಗುರುವಾರ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ಅವರು ಈ ಬಗ್ಗೆ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್​, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಚುನಾವಣಾ ಫಲಿತಾಂಶ ಪ್ರಕಟಣೆಗೆ ಕೆಲವೇ ದಿನಗಳ ಮೊದಲು ಷೇರು ಮಾರುಕಟ್ಟೆಯ ಬಗ್ಗೆ ಏಕೆ ಹೇಳಿಕೆ ನೀಡಿದ್ದರು. ಭಾರತೀಯ ಚುನಾವಣಾ ಇತಿಹಾಸದಲ್ಲಿಯೇ ಇದು ಮೊದಲ ಬಾರಿಗೆ ಆಗಿದೆ ಎಂದು ಹೇಳಿದರು.

ಲೋಕ ಚುನಾವಣೆಯ ಸಮಯದಲ್ಲಿ ಪ್ರಧಾನಿ, ಕೇಂದ್ರ ಗೃಹ ಸಚಿವರು ಮತ್ತು ಹಣಕಾಸು ಸಚಿವರು ಷೇರು ಮಾರುಕಟ್ಟೆಯ ಬಗ್ಗೆ ಹೇಳಿಕೆ ನೀಡಿದ್ದು ಇದೇ ಮೊದಲ ಬಾರಿಗೆ. ನಾವು ಈ ಬಗ್ಗೆ ತನಿಖೆ ನಡೆಸಲು ಜಂಟಿ ಸಮಿತಿಯನ್ನು ಒತ್ತಾಯಿಸುತ್ತೇವೆ. ಇದು ಹಗರಣ ಎಂದು ನಮಗೆ ಮನವರಿಕೆಯಾಗಿದೆ. ಭಾರತೀಯ ಚಿಲ್ಲರೆ ಹೂಡಿಕೆದಾರರ ವೆಚ್ಚದಲ್ಲಿ ಯಾರೋ ಸಾವಿರಾರು ಕೋಟಿ ರೂಪಾಯಿಗಳನ್ನು ಗಳಿಸಿದ್ದಾರೆ. ಇದಕ್ಕೆ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ಕುಮ್ಮಕ್ಕು ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮೇ 23 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಷೇರು ಮಾರುಕಟ್ಟೆ ಹೊಸ ಎತ್ತರವನ್ನು ತಲುಪಲಿದೆ ಎಂದು ಹೇಳಿದ್ದರು. ಜೂನ್ 4 ರಂದು, ಬಿಜೆಪಿ ದಾಖಲೆಯ ಮತಗಳೊಂದಿಗೆ ಗೆಲ್ಲುವಾಗ ಷೇರು ಮಾರುಕಟ್ಟೆಯೂ ಹೊಸ ದಾಖಲೆಯ ಗರಿಷ್ಠ ಮಟ್ಟ ತಲುಪುತ್ತದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ” ಎಂದು ಎನ್​ಡಿಟಿವಿ ಸಂದರ್ಶನದಲ್ಲಿ ಹೇಳಿದ್ದರು.

ಮೇ 13 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿ, ನನ್ನ ಅಭಿಪ್ರಾಯದಲ್ಲಿ, ಜೂನ್ 4 ರೊಳಗೆ ಷೇರು ಖರೀದಿಸಿ. ಮಾರುಕಟ್ಟೆಯಲ್ಲಿ ಷೇರು ಮೌಲ್ಯ ಹೆಚ್ಚಾಗಲಿದೆ” ಎಂದು ಎನ್​ಡಿಟಿವಿ ಸಂದರ್ಶನದಲ್ಲೇ ಹೇಳಿದ್ದರು. ಈ ಮಾಧ್ಯಮ ವ್ಯವಹಾರ ಸಂಸ್ಥೆಯೊಂದರ ಒಡೆತನಕ್ಕೆ ಸೇರಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಬೇಕು ಎಂದು ರಾಹುಲ್ ಹೇಳಿದ್ದಾರೆ.

ಕೋಟ್ಯಂತರ ಜನರ ದುಡ್ಡು ನಷ್ಟವಾಗಲು ನೇರವಾಗಿ ಪ್ರಧಾನಿ, ಕೇಂದ್ರ ಗೃಹ ಸಚಿವರೇ ಹೊಣೆ. ಚುನಾವಣಾ ಫಲಿತಾಂಶಗಳ ನೈಜ ಡೇಟಾವನ್ನು ಹೊಂದಿರುವವರು, ಐಬಿ ವರದಿಗಳನ್ನು ಹೊಂದಿರುವವರು, ತಮ್ಮದೇ ಆಂತರಿಕ ಅಂಕಿ ಅಂಶಗಳನ್ನು ಹೊಂದಿರುವವರು, ಚಿಲ್ಲರೆ ಹೂಡಿಕೆದಾರರಿಗೆ ಷೇರುಗಳನ್ನು ಖರೀದಿಸಲು ಸಲಹೆ ನೀಡಿರುವುದು ದೊಡ್ಡ ಹಗರಣ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು; ಡಾ. ಜಿ.ಪರಮೇಶ್ವರ್‌ ಹೇಳಿದ್ದೇನು?

Continue Reading

ದೇಶ

Prashant Kishor: “ಇನ್ನೆಂದೂ ಚುನಾವಣಾ ಭವಿಷ್ಯ ನುಡಿಯಲ್ಲ”; ಫಲಿತಾಂಶದ ಬಳಿಕ ಪ್ರಶಾಂತ್‌ ಕಿಶೋರ್‌ ಫಸ್ಟ್‌ ರಿಯಾಕ್ಷನ್‌

Prashant Kishor:ಚುನಾವಣಾ ಫಲಿತಾಂಶದ ಬಳಿಕ ಮೊದಲ ಮಾಧ್ಯಮ ಸಂದರ್ಶನ ನೀಡಿರುವ ಪ್ರಶಾಂತ್‌ ಕಿಶೋರ್‌, ಹೌದು, ನಾನು ಮತ್ತು ನನ್ನಂತಹ ಸಮೀಕ್ಷೆಗಾರರು ಈ ಬಾರಿ ಚುನಾವಣೆಯನ್ನು ತಪ್ಪಾಗಿ ಗ್ರಹಿಸಿದ್ದೇವೆ. ಈ ಬಗ್ಗೆ ನಮ್ಮಿಂದಾಗಿರುವ ತಪ್ಪು ಲೆಕ್ಕಾಚಾರವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಜೂನ್ 4 ರಂದು ಲೋಕಸಭಾ ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸುವ ಮೊದಲು, ಪ್ರಶಾಂತ್ ಕಿಶೋರ್ ಬಿಜೆಪಿ ತನ್ನ 2019 ರ ಚುನಾವಣಾ ಸಾಧನೆಯನ್ನು ಪುನರಾವರ್ತಿಸುತ್ತದೆ ಮತ್ತು ಸುಮಾರು 300 ಸ್ಥಾನಗಳನ್ನು ಪಡೆಯುತ್ತದೆ ಎಂದು ಭವಿಷ್ಯ ನುಡಿದಿದ್ದರು.

VISTARANEWS.COM


on

Prashant Kishor
Koo

ನವದೆಹಲಿ: ಈ ಬಾರಿ ಲೋಕಸಭಾ ಚುನಾವಣಾ ಫಲಿತಾಂಶ(Election Results 2024) ಎಲ್ಲಾ ಎಕ್ಸಿಟ್‌ ಪೋಲ್‌(Exit poll) ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಈ ಬಾರಿ 370 ಸ್ಥಾನಗಳನ್ನು ಖಚಿತವಾಗಿ ಪಡೆದೇ ಪಡೆಯುತ್ತದೆ ಎಂದು ಭವಿಷ್ಯ ನುಡಿದಿದ್ದ ಅದೆಷ್ಟೋ ರಾಜಕೀಯ ವಿಶ್ಲೇಷಕರ ಮಾತು ಸುಳ್ಳಾಗಿದೆ. ಅದರಲ್ಲಿ ರಾಜಕೀಯ ಚಾಣಕ್ಯ, ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಭವಿಷ್ಯವಾಣಿಯೂ ಈಬಾರಿ ಸುಳ್ಳಾಗಿದೆ. ಫಲಿತಾಂಶ ಪ್ರಕಟಗೊಂಡು ನಾಲ್ಕು ದಿನಗಳ ಕಾಲ ಯಾವ ಪ್ರತಿಕ್ರಿಯೆ ನೀಡದೇ ಸುಮ್ಮನಿದ್ದ ಪ್ರಶಾಂತ್‌ ಕಿಶೋರ್‌(Prashant Kishor) ಇದೀಗ ಈ ಬಗ್ಗೆ ಮೌನ ಮುರಿದಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ನೀಡಿರುವ ಭವಿಷ್ಯವಾಣಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ಚುನಾವಣಾ ಫಲಿತಾಂಶದ ಬಳಿಕ ಮೊದಲ ಮಾಧ್ಯಮ ಸಂದರ್ಶನ ನೀಡಿರುವ ಪ್ರಶಾಂತ್‌ ಕಿಶೋರ್‌, ಹೌದು, ನಾನು ಮತ್ತು ನನ್ನಂತಹ ಸಮೀಕ್ಷೆಗಾರರು ಈ ಬಾರಿ ಚುನಾವಣೆಯನ್ನು ತಪ್ಪಾಗಿ ಗ್ರಹಿಸಿದ್ದೇವೆ. ಈ ಬಗ್ಗೆ ನಮ್ಮಿಂದಾಗಿರುವ ತಪ್ಪು ಲೆಕ್ಕಾಚಾರವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಜೂನ್ 4 ರಂದು ಲೋಕಸಭಾ ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸುವ ಮೊದಲು, ಪ್ರಶಾಂತ್ ಕಿಶೋರ್ ಬಿಜೆಪಿ ತನ್ನ 2019 ರ ಚುನಾವಣಾ ಸಾಧನೆಯನ್ನು ಪುನರಾವರ್ತಿಸುತ್ತದೆ ಮತ್ತು ಸುಮಾರು 300 ಸ್ಥಾನಗಳನ್ನು ಪಡೆಯುತ್ತದೆ ಎಂದು ಭವಿಷ್ಯ ನುಡಿದಿದ್ದರು.

ಆದರೆ ಬಿಜೆಪಿ ಈ ಬಾರಿ ಕೇವಲ 240 ಲೋಕಸಭಾ ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದರಿಂದ ಅವರ ಭವಿಷ್ಯವಾಣಿ ಸುಳ್ಳಾಗಿದೆ. ದೇಶದ ಮುಂದಿನ ಚುನಾವಣೆಗಳಲ್ಲಿ ನೀವು ಅಂಕಿಅಂಶಗಳನ್ನು ಭವಿಷ್ಯ ನುಡಿಯುವುದನ್ನು ಮುಂದುವರಿಸುತ್ತೀರಾ ಎಂದು ಕೇಳಿದಾಗ, ಪ್ರಶಾಂತ್ ಕಿಶೋರ್, “ಇಲ್ಲ, ನಾನು ಇನ್ನು ಮುಂದೆ ಯಾವ ಚುನಾವಣೆಯಲ್ಲೂ ಸ್ಥಾನಗಳ ಲೆಕ್ಕಾಚಾರವಾಗಲೀ ಭವಿಷ್ಯವನ್ನಾಗಲಿ ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ನಾನು ನನ್ನ ಮೌಲ್ಯಮಾಪನವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ ಮತ್ತು ನಾನು ಮಾಡಿದ ಮೌಲ್ಯಮಾಪನವು ಶೇಕಡಾ 20 ರಷ್ಟು ದೊಡ್ಡ ಪ್ರಮಾಣದಲ್ಲಿ ತಪ್ಪಾಗಿದೆ ಎಂದು ನಾನು ಒಪ್ಪಿಕೊಳ್ಳಬೇಕು. ನಾವು ಬಿಜೆಪಿ 300 ರ ಸಮೀಪಕ್ಕೆ ಬರಲಿದೆ ಎಂದು ಹೇಳಿದ್ದೆವು. ಆದರೆ ಅವರಿಗೆ 240 ಸ್ಥಾನಗಳು ಮಾತ್ರ ಸಿಕ್ಕಿತು. ಜನರಿಗೆ ಬಿಜೆಪಿ ಮೇಲೆ ಸ್ವಲ್ಪ ಕೋಪವಿದೆ ಆದರೆ ನರೇಂದ್ರ ಮೋದಿ ವಿರುದ್ಧ ಯಾವುದೇ ವ್ಯಾಪಕ ಅಸಮಾಧಾನವಿಲ್ಲ ಎಂದು ನಾನು ಮೊದಲೇ ಹೇಳಿದ್ದೆ, ಎಂದು ಪ್ರಶಾತ್ ಕಿಶೋರ್ ಹೇಳಿದರು.

ದೇಶದಲ್ಲಿ ಪ್ರತಿಪಕ್ಷಗಳ ಪರ ಜನರ ಒಲವು ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಇಲ್ಲ ಎಂದು ನಾನು ಹೇಳಿದ್ದೆ. ಅದರಂತೆ ಪೂರ್ವ ಮತ್ತು ದಕ್ಷಿಣದಲ್ಲಿ ಅವುಗಳು ಅಷ್ಟೇ ಹಿಂದಿನ ಚುನಾವಣೆಯಷ್ಟೇ ಸ್ಥಾನಗಳನ್ನು ಪಡೆದುಕೊಂಡು ಯಥಾಸ್ಥಿತಿ ಕಾಪಾಡಿಕೊಂಡಿವೆ. ನಿಸ್ಸಂಶಯವಾಗಿ, ನಾವು ತಪ್ಪು ಎಂದು ಸಾಬೀತಾಗಿದೆ. ಆದರೆ ನಂಬರ್‌ ಅನ್ನು ಹೊರತುಪಡಿಸಿ ಗಮನಿಸಿದಾಗ ನಾನು ಹೇಳಿರುವ ಎಲ್ಲಾ ಅಂಶಗಳು ನಿಜವಾಗಿದೆ. ಒಬ್ಬ ರಾಜಕೀಯ ವಿಶ್ಲೇಷಕನಾಗಿ, ತಂತ್ರಗಾರನಾಗಿ ಚುನಾವಣಾ ಭವಿಷ್ಯ ನುಡಿಯುವುದು ತಪ್ಪು. ಮುಂದೆಂದೂ ಅಂತಹ ತಪ್ಪಿ ಮಾಡುವುದಿಲ್ಲ.

ಪ್ರಶಾಂತ್‌ ಕಿಶೋರ್‌ ಏನು ಹೇಳಿದ್ದರು?

ಕಿಶೋರ್, ಸಂದರ್ಶನವೊಂದರಲ್ಲಿ, ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾವುದೇ ಗಮನಾರ್ಹ ಅತೃಪ್ತಿ ಇಲ್ಲದ ಕಾರಣ ಬಿಜೆಪಿ ಆರಾಮವಾಗಿ ಬಹುಮತದ ಅಂಕವನ್ನು ದಾಟುತ್ತದೆ ಎಂದು ಹೇಳಿದ್ದರು. “ನಿರಾಶೆಗಳು, ಈಡೇರದ ಆಕಾಂಕ್ಷೆಗಳು ಇರಬಹುದು. ಆದರೆ ವ್ಯಾಪಕ ಕೋಪದ ಬಗ್ಗೆ ಯಾವುದೇ ಸುಳಿವು ಇಲ್ಲ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದರು. “ಬಿಜೆಪಿ ತನ್ನ ಮಹತ್ವಾಕಾಂಕ್ಷೆಯ 370 ಸ್ಥಾನ ಗುರಿಯನ್ನು ಸಾಧಿಸಲು ಸಾಧ್ಯವಾಗದಿರಬಹುದು” ಎಂದು ಸುಳಿವು ನೀಡಿದ್ದರು.

ಇದನ್ನೂ ಓದಿ:CWC Meeting: ಇಂದು ದೆಹಲಿಯಲ್ಲಿ CWC ಸಭೆ; ಇಂದೇ ನಿರ್ಧಾರ ಆಗುತ್ತಾ ವಿಪಕ್ಷ ನಾಯಕ ಸ್ಥಾನ?

Continue Reading

ದೇಶ

CWC Meeting: ಇಂದು ದೆಹಲಿಯಲ್ಲಿ CWC ಸಭೆ; ಇಂದೇ ನಿರ್ಧಾರ ಆಗುತ್ತಾ ವಿಪಕ್ಷ ನಾಯಕ ಸ್ಥಾನ?

CWC Meeting:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ CWC ಸದಸ್ಯರು ಭಾಗಿಯಾಗಲಿದ್ದಾರೆ. ಇನ್ನು ಈ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಿಕ್ಕ ಜಯ ಹಾಗೂ ಕೆಲ ರಾಜ್ಯದಲ್ಲಿ ಕಾಂಗ್ರೆಸ್ ಗೆ ಆದ ನಷ್ಟದ ಬಗ್ಗೆ ಅವಲೋಕನ ನಡೆಯಲಿದೆ. ಇಂಡಿಯಾ ಮೈತ್ರಿಕೂಟವನ್ನ ರಾಜ್ಯಗಳಲ್ಲಿ ಹೇಗೆ ಬಳಸಿಕೊಳ್ಳಬೇಕು. ರಾಜ್ಯವಾರು ಚುನಾವಣೆಗಳಲ್ಲಿ ಏನೆಲ್ಲಾ ಬದಲಾವಣೆ ಆಗಬೇಕು ಹಾಗೂ ರಾಜ್ಯವಾರು ಬಂದಿರುವ ಚುನಾವಣೆ ಫಲಿತಾಂಶದ ಬಗ್ಗೆಯೂ ಚರ್ಚೆ ಇಂದು ನಡೆಯಲಿದೆ.

VISTARANEWS.COM


on

CWC Meeting
Koo

ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ(Election Results 2024) ಹೊರಬಿದ್ದ ನಂತರ ಕೇಂದ್ರದಲ್ಲಿ ಸರ್ಕಾರ ರಚಿಸುವ ಕಾಂಗ್ರೆಸ್‌ ಕನಸು ಮತ್ತೊಮ್ಮೆ ಭಗ್ನವಾಗಿದೆ. ಸರ್ಕಾರ ರಚಿಸುವ ಕನಸು ಸ್ವಲ್ಪದರಲ್ಲೇ ಮಿಸ್‌ ಆಗಿರುವುದರಿಂದ ಕಾಂಗ್ರೆಸ್(Congress) ಇದೀಗ ಫಲಿತಾಂಶ ಪರಾಮರ್ಶೆಗೆ ಮುಂದಾಗಿದೆ. ಹೀಗಾಗಿ ಇಂದು ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆ(CWC Meeting) ನಡೆಯಲಿದೆ. ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಬಗ್ಗೆ ಕಾಂಗ್ರೆಸ್‌ ಮುಖಂಡ ಜೈರಾಮ್‌ ರಮೇಶ್‌ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ 11:00 ಗಂಟೆಗೆ ನಡೆಯಬೇಕಿದ್ದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯನ್ನು ಸಂಜೆ 5:30ಕ್ಕೆ ಮುಂದೂಡಲಾಗಿದೆ. ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಸಬೆ ನಡೆಯಲಿದ್ದು, ಬಳಿಕ ಅಶೋಕ ಹೊಟೇಲ್‌ನಲ್ಲಿ ಸಂಜೆ 7ಗಂಟೆಗೆ ರಾತ್ರಿ ಡಿನ್ನರ್‌ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ CWC ಸದಸ್ಯರು ಭಾಗಿಯಾಗಲಿದ್ದಾರೆ. ಇನ್ನು ಈ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಿಕ್ಕ ಜಯ ಹಾಗೂ ಕೆಲ ರಾಜ್ಯದಲ್ಲಿ ಕಾಂಗ್ರೆಸ್ ಗೆ ಆದ ನಷ್ಟದ ಬಗ್ಗೆ ಅವಲೋಕನ ನಡೆಯಲಿದೆ. ಇಂಡಿಯಾ ಮೈತ್ರಿಕೂಟವನ್ನ ರಾಜ್ಯಗಳಲ್ಲಿ ಹೇಗೆ ಬಳಸಿಕೊಳ್ಳಬೇಕು. ರಾಜ್ಯವಾರು ಚುನಾವಣೆಗಳಲ್ಲಿ ಏನೆಲ್ಲಾ ಬದಲಾವಣೆ ಆಗಬೇಕು ಹಾಗೂ ರಾಜ್ಯವಾರು ಬಂದಿರುವ ಚುನಾವಣೆ ಫಲಿತಾಂಶದ ಬಗ್ಗೆಯೂ ಚರ್ಚೆ ಇಂದು ನಡೆಯಲಿದೆ.

ಇನ್ನು ರಾಜ್ಯದಿಂದ ಈ ಸಭೆಯಲ್ಲಿ ಕರ್ನಾಟಕ ದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ರಾಜ್ಯ ಸಚಿವರ ಜೊತೆಗೆ ಪ್ರತ್ಯೇಕ ಸಭೆಯನ್ನು ನಡೆಸಿದ್ದರು. ಯಾವ ಕ್ಷೇತ್ರದಲ್ಲಿ ಯಾವ ರೀತಿಯಲ್ಲಿ ಮತದಾನ ಆಗಿದೆ. ಈ ಎಲ್ಲಾ ಮಾಹಿತಿ ಸಂಗ್ರಹಿಸಿದ್ದಾರೆ. ಸಚಿವರ ಕ್ಷೇತ್ರದಲ್ಲಿ ಲೀಡ್ ಕಡಿಮೆ ಬಂದಿರುವ ಬಗ್ಗೆಯೂ ಚರ್ಚೆ ನಡೆಸುತ್ತೇವೆ. ರಾಹುಲ್ ಗಾಂಧಿ ಈ ಬಗ್ಗೆ ವರದಿ ಕೇಳಿದ್ದಾರೆ. ಕ್ಷೇತ್ರವಾರು ವರದಿಯನ್ನು ನೀಡುತ್ತೇವೆ ಎಂದರು.

ಚನ್ನಪಟ್ಟಣದಲ್ಲಿ ಡಿಕೆ ಸುರೇಶ್ ಸ್ಪರ್ಧೆಗೆ ನಾವು ಆತುರದಲ್ಲಿ ಇಲ್ಲ. ಈ ಬಗ್ಗೆ ಇನ್ನೂ ಯೋಚನೆ ಮಾಡಲು ಹೋಗಿಲ್ಲ. ಸೋಲಿನ ದುಖಃದಿಂದ ಈಚೆಗೆ ಬಂದಿಲ್ಲ ಎಂದರು. ಚುನಾವಣೆ ಸೋಲಿಗೆ ಸಚಿವರನ್ನು ಕೈಬಿಡುವ ಬಗ್ಗೆ ಸದ್ಯಕ್ಕೆ ಚರ್ಚೆಯಾಗಿಲ್ಲ. ಮುಂದಿನ ದಿನಗಳಲ್ಲಿ ಹೈಕಮಾಂಡ ನಿರ್ಧಾರ ಮಾಡಿಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ:Niveditha Gowda : ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ ಗೌಡ, ಅವರ ಇನ್​ಸ್ಟಾಗ್ರಾಮ್ ಸಂದೇಶ ಇಲ್ಲಿದೆ

Continue Reading
Advertisement
Chandan Shetty Dhruva Sarja Talk With Niveditha Gowda
ಸ್ಯಾಂಡಲ್ ವುಡ್13 mins ago

Chandan Shetty: ಚಂದನ್-ನಿವೇದಿತಾ ಸಂಬಂಧ ಸರಿ ಮಾಡ್ತಾರಾ ಧ್ರುವ ಸರ್ಜಾ? ಪ್ರಥಮ್ ಕೊಟ್ಟಿದ್ದಾರೆ ಕ್ಲೂ!

Electric shock
ಬೆಂಗಳೂರು14 mins ago

Electric shock : ಫ್ಯಾನ್‌ ಸ್ವಿಚ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌; ವಿದ್ಯುತ್‌ ಕಂಬದಲ್ಲಿ ನೇತಾಡಿದ ಲೈನ್‌ಮ್ಯಾನ್‌ ಡೆಡ್‌ ಬಾಡಿ

Modi 3.0 Cabinet
Lok Sabha Election 202422 mins ago

Modi 3.0 Cabinet: ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಯಾರಿಗೆಲ್ಲ ಸಚಿವ ಸ್ಥಾನ? ಇವರೇ ನೋಡಿ ಸಂಭಾವ್ಯ ಮಿನಿಸ್ಟರ್‌ಗಳು

Kannada New Movie Ramesh Suresh Movie June 21st release
ಸ್ಯಾಂಡಲ್ ವುಡ್50 mins ago

Kannada New Movie: ʻರಮೇಶ್ ಸುರೇಶ್‌ʼ ಸಿನಿಮಾದಲ್ಲಿ ಇಬ್ಬರು ನಿರ್ದೇಶಕರು, ಇಬ್ಬರು ನಾಯಕರು ; ಜೂನ್ 21ರಂದು ತೆರೆಗೆ!

Road Accident in shivamogga
ಕ್ರೈಂ56 mins ago

Road Accident : ಮುಖಾಮುಖಿಯಾಗಿ ಬಂದ ಕಾರುಗಳು ಪೀಸ್‌ ಪೀಸ್‌; ಚಾಲಕ ಸ್ಪಾಟ್‌ ಡೆತ್‌

Rahul Gandhi
ದೇಶ59 mins ago

Rahul Gandhi: ಷೇರುಪೇಟೆಯಲ್ಲಿ ಭಾರಿ ಹಗರಣವಾಗಿದೆ ಎಂದಿದ್ದ ರಾಹುಲ್ ಗಾಂಧಿಗೆ ಐದೇ ದಿನದಲ್ಲಿ 25 ಲಕ್ಷ ರೂ. ಲಾಭ!

Raja Rani Show started Today onwards
ಕಿರುತೆರೆ1 hour ago

Raja Rani Show: ಇಂದಿನಿಂದ ʻರಾಜ ರಾಣಿ ರೀಲೋಡೆಡ್ʼ ರಿಯಾಲಿಟಿ ಶೋ ಶುರು!

Valmiki Corporation Scam
ಕರ್ನಾಟಕ1 hour ago

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು; ಡಾ. ಜಿ.ಪರಮೇಶ್ವರ್‌ ಹೇಳಿದ್ದೇನು?

World Brain Tumor Day
ಆರೋಗ್ಯ2 hours ago

World Brain Tumor Day: ಇಂದು ವಿಶ್ವ ಬ್ರೇನ್‌ ಟ್ಯೂಮರ್‌ ದಿನ; ಮೊದಲೇ ಎಚ್ಚೆತ್ತುಕೊಂಡರೆ ಈ ಕಾಯಿಲೆಯಿಂದ ಪಾರಾಗಬಹುದು

love Torture Man uploads private photo of young woman on social media
ಕೊಡಗು2 hours ago

Love‌ Torture : ಪ್ರೀತ್ಸೆ ಅಂತ ಪ್ರಾಣ ತಿಂದ; ಒಪ್ಪದೇ ಇದ್ದಾಗ ಯುವತಿಯ ಖಾಸಗಿ ಫೋಟೋ ಹರಿಬಿಟ್ಟ ಪಾಗಲ್‌ ಪ್ರೇಮಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ18 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ19 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌