ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಂಗಾವಲು ಪಡೆಯೊಂದಿಗೆ ವಾರಣಾಸಿಯ ರುದ್ರಾಕ್ಷಿ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರದಿಂದ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಭದ್ರತೆಯನ್ನು ಉಲ್ಲಂಘಿಸಲು ದೊಡ್ಡ ಪ್ರಯತ್ನ ನಡೆದಿದೆ ಎಂದು ವರದಿಯಾಗಿದೆ. ವ್ಯಕ್ತಿಯೊಬ್ಬ ಬೆಂಗಾವಲು ಪಡೆಯ ಮುಂದೆ ಜಿಗಿದು ಭದ್ರತಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಆತನನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ವರದಿಯ ಪ್ರಕಾರ, ಗಾಜಿಪುರದ ನಿವಾಸಿ ಪ್ರಧಾನಿ ಮೋದಿಯವರ ಬೆಂಗಾವಲು ಹಾದುಹೋಗುವ ಸಮಯಕ್ಕಿಂತ ಒಂದು ಗಂಟೆ ಮೊದಲಿನಿಂದಲೂ ಕಾಯುತ್ತಿದ್ದ. ಘಟನೆ ನಡೆದಾಗ ವೇಳೆ ಆತ ತನ್ನೊಂದಿಗೆ ಫೈಲ್ ಸಹ ಒಯ್ಯುತ್ತಿದ್ದ. ಆತ ಭಾರತೀಯ ಸೇನೆಗೆ ನೇಮಕಗೊಳ್ಳಲು ಪ್ರಯತ್ನಿಸುತ್ತಿದ್ದ ಎಂದು ಹೇಳಲಾಗಿದೆ. ತಾನು ಸೇನೆಯ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದೇನೆ ಆದರೆ ವೈದ್ಯಕೀಯ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗಲಿಲ್ಲ ಎಂದು ಆ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದಾನೆ.
ತನ್ನ ಸಮಸ್ಯೆ ಹೇಳಿಕೊಳ್ಳುವುದಕ್ಕೆ ಹಲವು ಬಾರಿ ಯತ್ನಿಸಿದ್ದೆ. ಎಲ್ಲವೂ ವ್ಯರ್ಥವಾಯಿತು. ಆದ್ದರಿಂದ ಇಂದು ಅವರು ತನ್ನ ಮನವಿಯನ್ನು ಪ್ರಧಾನಿ ಮೋದಿಯ ಗಮನ ಸೆಳೆಯಲು ಯತ್ನಿಸಿದ್ದ ಎನ್ನಲಾಗಿದೆ.
ವಾರಣಾಸಿಯ ಗಂಜಾರಿಯಲ್ಲಿ ನಿರ್ಮಿಸಲಾಗಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಶಂಕುಸ್ಥಾಪನೆ ನೆರವೇರಿಸಿದ್ದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ಕಪಿಲ್ ದೇವ್, ದಿಲೀಪ್ ವೆಂಗ್ಸರ್ಕಾರ್, ಮದನ್ ಲಾಲ್, ಗುಂಡಪ್ಪ ವಿಶ್ವನಾಥ್, ಗೋಪಾಲ್ ಶರ್ಮಾ ಮತ್ತು ರವಿ ಶಾಸ್ತ್ರಿ ಸೇರಿದಂತೆ ಕ್ರಿಕೆಟ್ ದಿಗ್ಗಜರು ಪೂರ್ವ ಯುಪಿಯ ಮೊದಲ ಕ್ರೀಡಾಂಗಣದ ಅಡಿಪಾಯ ಸಮಾರಂಭದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ : Narendra Modi : ಕಲಾವಿದನ ಕುಂಚ, ಕೃತಕ ಬುದ್ಧಿಮತ್ತೆ ಸೇರಿಕೊಂಡರೆ ಪ್ರಕೃತಿಯಲ್ಲೇ ಕಾಣುತ್ತದೆ ಮೋದಿ ಮುಖ
ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಕಾರ್ಯದರ್ಶಿ ಜಯ್ ಶಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುಮಾರು 1,115 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನಿರ್ಗತಿಕ ಮಕ್ಕಳಿಗಾಗಿ ನಿರ್ಮಿಸಲಾದ 16 ವಸತಿ ಶಾಲೆಗಳನ್ನು ಮೋದಿ ಉದ್ಘಾಟಿಸಿದ್ದಾರೆ.
ಕಟ್ಟಡ ಕಾರ್ಮಿಕರು, ದಿನಗೂಲಿಗಳು ಮತ್ತು ಕೋವಿಡ್ ಅನಾಥರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಮತ್ತು ಅವರ ಸಮಗ್ರ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಸಹಾಯ ಮಾಡಲು ಶಾಲೆಗಳನ್ನು ಪ್ರತ್ಯೇಕವಾಗಿ ಪ್ರಾರಂಭಿಸಲಾಗಿತ್ತು.. ಪ್ರತಿ ಅಟಲ್ ಶಾಲೆಯನ್ನು 10-15 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದೆ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಮೈದಾನ, ಮನರಂಜನಾ ಪ್ರದೇಶ, ಮಿನಿ ಸಭಾಂಗಣ, ಹಾಸ್ಟೆಲ್ ಸಂಕೀರ್ಣ, ಮೆಸ್ ಮತ್ತು ಸಿಬ್ಬಂದಿಗೆ ವಸತಿ ಫ್ಲ್ಯಾಟ್ಗಳನ್ನು ಹೊಂದಿದೆ. ಪ್ರತಿ ಶಾಲೆಯು ಅಂತಿಮವಾಗಿ 1,000 ವಿದ್ಯಾರ್ಥಿಗಳಿಗೆ ಸ್ಥಳಾವಕಾಶ ಕಲ್ಪಿಸಲು ಉದ್ದೇಶಿಸಿದೆ. ಈ ಶಾಲೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವ ಮೊದಲು, ಪ್ರಧಾನಿ ಮೋದಿ ಕೆಲವು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.