Dawood Ibrahim : ದೆಹಲಿ ವಕೀಲ ದಾವೂದ್​ ಆಸ್ತಿ ಖರೀದಿಸಿದ್ದು ಈ ವಿಶೇಷ ಕಾರಣಕ್ಕಾಗಿ - Vistara News

ದೇಶ

Dawood Ibrahim : ದೆಹಲಿ ವಕೀಲ ದಾವೂದ್​ ಆಸ್ತಿ ಖರೀದಿಸಿದ್ದು ಈ ವಿಶೇಷ ಕಾರಣಕ್ಕಾಗಿ

Dawood Ibrahim : ದಾವೂದ್ ಆಸ್ತಿ ಖರೀದಿ ಮಾಡುವ ಮೂಲಕ ಭಯೋತ್ಪಾದನೆ ವಿರುದ್ಧ ಹೋರಾಟ ಮಾಡುತ್ತಿದ್ದೇನೆ ಎಂದು ವಕೀಲ
ಅಜಯ್​ ಶ್ರೀವಾಸ್ತವ್​ ಹೇಳಿಕೊಂಡಿದ್ದಾರೆ.

VISTARANEWS.COM


on

Dawood Ibrahim
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಇದು ಭಯೋತ್ಪಾದನೆಯ ವಿರುದ್ಧದ ಹೋರಾಟ. ಆತನ ವಿರುದ್ಧ ಹೋರಾಡಲು ಒಂದು ವಿಶಿಷ್ಟ ಮಾರ್ಗವನ್ನು ರೂಪಿಸಿಕೊಂಡಿದ್ದೇನೆ. ನಾನು ದಾವೂದ್ ನನ್ನು ಸೋಲಿಸಲು ಬಯಸುತ್ತೇನೆ. ಹೀಗೆಂದು ಹೇಳಿರುವುದು ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ಆಸ್ತಿಯನ್ನು ಹಲವು ಪಟ್ಟು ಹೆಚ್ಚು ಬೆಲೆಗೆ ಖರೀದಿಸಿದ ದೆಹಲಿ ಮೂಲದ ವಕೀಲ ಅಜಯ್​ ಶ್ರೀವಾಸ್ತವ. ಎಲ್ಲರೂ ದಾವೂದ್​ ಆಸ್ತಿಯ ಸಮೀಪಕ್ಕೆ ಹೋಗಲು ಹೆದರುತ್ತಿರುವ ನಡುವೆ ಅಜಯ್​ ಮುಲಾಜಿಲ್ಲದ ಹಲವು ಪಟ್ಟು ಹೆಚ್ಚು ಬೆಲೆ ಕೊಟ್ಟು ಅದನ್ನು ತಮ್ಮದಾಗಿಸಿಕೊಂಡಿದ್ದಾರೆ. ತಮ್ಮ ಸಾಹಸದ ಬಗ್ಗೆ ಮಾತನಾಡಿರುವ ಅವರು ಇದು ದೇಶ ಭಕ್ತಿ ಹಾಗೂ ಹಿಂದೂ ಸಮಾಜದ ಏಳಿಗೆಯ ಯೋಜನೆ ಎಂದು ಹೇಳಿದ್ದಾರೆ.

ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ಒಡೆತನದ ನಾಲ್ಕು ಆಸ್ತಿಗಳನ್ನು ಇತ್ತೀಚೆಗೆ ಹರಾಜು ಮೂಲಕ ಪಡೆದುಕೊಂಡ ಬಳಿಕ ಶ್ರೀವಾಸ್ತವ ಅವರು ಎಲ್ಲ ಗಮನ ಸೆಳೆದಿದ್ದಾರೆ. ಕೇವಲ 15,000 ರೂಪಾಯಿ ಮೀಸಲು ಬೆಲೆಯನ್ನು ಹೊಂದಿದ್ದ ಅತ್ಯಂತ ಚಿಕ್ಕ ಭೂಮಿಯನ್ನು ಅವರು 2 ಕೋಟಿ ರೂಪಾಯಿಗೆ ಖರೀದಿಸಿದ್ದಾರೆ ಎಬುದು ಇನ್ನೂ ಅಚ್ಚರಿಯ ಸಂಗತಿ. ನಾನು ದಾವೂದ್​ಗೆ ಸೇರಿದ್ದ ಸುತ್ತಮುತ್ತಲಿನ ಎಲ್ಲಾ ಭೂಮಿಯನ್ನು ಖರೀದಿಸಿದ್ದೇನೆ. ಈ ಸಣ್ಣ ತುಂಡು ಭೂಮಿ ಮಾತ್ರ ಉಳಿದಿತ್ತು. ಆದ್ದರಿಂದ ಎಲ್ಲರಿಗಿಂತ ಹೆಚ್ಚು ಅದನ್ನು ಬಿಡ್ ಮಾಡಬೇಕಾಯಿತು” ಎಂದು ಶ್ರೀವಾಸ್ತವ ವಿಶೇಷ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಇದೇ ಮೊದಲಲ್ಲ

ಅಂದ ಹಾಗೆ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಆಸ್ತಿಯನ್ನು ಅವರು ಖರೀದಿಸುತ್ತಿರುವುದು ಇದೇ ಮೊದಲಲ್ಲ. ಅವರು ಇದನ್ನು ವರ್ಷಗಳಿಂದ ಮಾಡುತ್ತಿದ್ದಾರೆ. ಕರಾಚಿಯಲ್ಲಿ ಅಡಗಿದ್ದಾನೆಂದು ನಂಬಲಾದ ಭೂಗತ ಪಾತಕಿಯ ಎರಡು ಆಸ್ತಿಗಳನ್ನು 2001 ರಲ್ಲಿ ಮೊದಲ ಬಾರಿಗೆ ಖರೀದಿ ಮಾಡಿದ್ದರು. 2001ರಲ್ಲಿ ದಾವೂದ್​ನ ಭೂಮಿಯನ್ನು ಆದಾಯ ತೆರಿಗೆ ಇಲಾಖೆ ಹರಾಜು ಹಾಕುತ್ತಿದೆ ಎಂದು ನಾನು ಪತ್ರಿಕೆಯಲ್ಲಿ ಓದಿದೆ. ಆದರೆ ಜನರು ಬಿಡ್ ಮಾಡಲು ಮುಂದೆ ಬರಲಿಲ್ಲ. ಅವರೆಲ್ಲರೂ ಭಯಭೀತರಾಗಿದ್ದಾರೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಹೀಗಾಗಿ ಆತನನ್ನು ಸೋಲಿಸುವ ಉದ್ದೇಶದಿಂದ ಹರಾಜು ಮಾಡಿ ಪಡೆದೆ ಎಂಬುದಾಗಿ ಅವರು ಹೇಳಿದ್ದಾರೆ.

ಮುಂಬೈನ ನಾಗಪಾಡಾದಲ್ಲಿ ಭಯೋತ್ಪಾದಕನ ಒಡೆತನದ ಎರಡು ಅಂಗಡಿಗಳನ್ನು ವಕೀಲರು ಖರೀದಿಸಿದ್ದರು. ಆಗ ಅವರು ಒಬ್ಬರೇ ಬಿಡ್​ದಾರರಾಗಿದ್ದರು. 2011ರಲ್ಲಿ ರಲ್ಲಿ ಮುಂಬೈ ನ್ಯಾಯಾಲಯವು ಅಜಯ್​ ಪರವಾಗಿ ತೀರ್ಪು ನೀಡಿದ್ದರೂ ಅವರು ಅಂಗಡಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಇನ್ನೂ ಹೋರಾಡುತ್ತಿದ್ದಾರೆ. ಈ ಆದೇಶವನ್ನು ಬಾಂಬೆ ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ. ದಾವೂದ್ ಸಹೋದರಿ ಹಸೀನಾ ಪಾರ್ಕರ್ ಅವರ ಮಕ್ಕಳು ಈ ಪ್ರಕರಣದ ವಿರುದ್ಧ ಹೋರಾಡುತ್ತಿದ್ದಾರೆ.

ನಾನು ಭಯೋತ್ಪಾದಕರ ವಿರುದ್ಧ ಹೋರಾಡಬೇಕು ಎಂದು ಬಯಸಿದೆ. ಅದರಲ್ಲಿ ಯಶಸ್ವಿಯಾದೆ. ಒಂದು ಬಾರಿ ನಾನು ಮುಂದೆ ಬಂದ ಬಳಿಕ ಈಗ ಹೆಚ್ಚಿನ ಜನರು ಬರಲು ಆರಂಭಿಸಿದ್ದಾರೆ ಎಂದು ಅಜಯ್​ ಹೇಳಿದ್ದಾರೆ.

ಬೆದರಿಕೆ ಎದುರಿಸಿದ್ದ ಅಜಯ್​​

ಆಸ್ತಿಯನ್ನು ಖರೀದಿಸಿದ ನಂತರ ತಮಗೆ ಬೆದರಿಕೆಗಳು ಬಂದಿವೆ ಎಂದು ಅಜಯ್​ ಹೇಳಿದ್ದಾರೆ. ಅದರ ನಂತರ, ನನಗೆ 11 ವರ್ಷಗಳ ಕಾಲ ಝಡ್ + ಭದ್ರತೆ ಸಿಕ್ಕಿತು ಎಂದು ವಕೀಲರು ಹೇಳಿಕೊಂಡಿದ್ದಾರೆ.

ದಾವೂದ್ ನನ್ನು ಸೋಲಿಸುವ ನನ್ನ ಉತ್ಸಾಹ ದೊಡ್ಡದು. ಭೂಗತ ಪಾತಕಿಯ ವಕೀಲರು ಕರೆ ಮಾಡಿದರೂ ನನ್ನನ್ನು ತಡೆಯಲು ಯಾರಿಗೂ ಆಗಲಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ದಾವೂದ್‌ ಇಬ್ರಾಹಿಂ ಆಸ್ತಿ 2 ಕೋಟಿ ರೂ.ಗೆ ಹರಾಜು; ಖರೀದಿಸಿದ ಧೈರ್ಯವಂತ ಯಾರು?

ಮೂರ್ನಾಲ್ಕು ವರ್ಷಗಳ ಹಿಂದೆ ದಾವೂದ್ ಕುಟುಂಬ ತನ್ನ ವಕೀಲರ ಮೂಲಕ ನನ್ನನ್ನು ಸಂಪರ್ಕಿಸಿ, ‘ನೀವು ಈ ಆಸ್ತಿಯನ್ನು ನನಗೆ ಮಾರಾಟ ಮಾಡಿ ನಿಮಗೆ ಎಷ್ಟು ಹಣ ಬೇಕು ಎಂದು ಕೇಳಿದ್ದರು. ಆದರೆ ನಾನು ಮಾರಲು ನಿರಾಕರಿಸಿದೆ ನನ್ನ ಗುರಿ ಹಣ ಸಂಪಾದಿಸುವುದು ಅಲ್ಲ” ಎಂದು ಅವರು ಹೇಳಿಕೊಂಡಿದ್ದಾರೆ.

ಬಂಗಲೆ ಖರೀದಿ ಮಾಡಿದ್ದ ಅಜಯ್​

2020ರಲ್ಲಿ ದಾವೂದ್​ನ ಪೂರ್ವಜರ ಬಂಗಲೆಯನ್ನು ಸಹ ಖರೀದಿಸಿದ್ದಾರೆ ಅಜಯ್​. ದಾವೂದ್ ಹುಟ್ಟಿದ್ದು ಅಲ್ಲಿಯೇ. ಮದರಸಾಗಳು ಹೇಗೆ ಕಾರ್ಯನಿರ್ವಹಿಸುತ್ತವೆಯೋ ಹಾಗೆಯೇ ಅಲ್ಲಿ ಹಿಂದೂ ಶಾಲೆಯನ್ನು ನಿರ್ಮಿಸಲು ನಾನು ಬಯಸುತ್ತೇನೆ. ಈ ಉದ್ದೇಶಕ್ಕಾಗಿ ನಾನು ಸನಾತನ ಧರ್ಮ ಪಾಠಶಾಲಾ ಟ್ರಸ್ಟ್ ಅನ್ನು ಸ್ಥಾಪಿಸಿದ್ದೇನೆ ಎಂದು ಶ್ರೀವಾಸ್ತವ ಹೇಳಿಕೊಂಡಿದ್ದಾರೆ.

ವಕೀಲರು ಇನ್ನೂ ಬಂಗಲೆಯ ಸ್ವಾಧೀನ ಪಡೆದಿಲ್ಲ. ಈ ವರ್ಷ ಮಂಜೂರು ಆಗಬಹುದು ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ನಾನು ನಿನ್ನೆ ಖರೀದಿಸಿದ ಭೂಮಿ ಅವರ ಬಂಗಲೆಗೆ ಹತ್ತಿರದಲ್ಲಿದೆ. ನಾನು ಸುತ್ತಮುತ್ತಲಿನ ಎಲ್ಲಾ ಭೂಮಿಯನ್ನು ಖರೀದಿಸಿದ್ದೇನೆ. ಈ ತುಂಡು ಮಾತ್ರ ಉಳಿದಿತ್ತು. ಈ ಭೂಮಿ ಬೇರೊಬ್ಬರಿಗೆ ಹೋಗಿದ್ದರೆ ಸುತ್ತಮುತ್ತಲಿನ ಪ್ರದೇಶಗಳು ತಮ್ಮ ಮೌಲ್ಯವನ್ನು ಕಳೆದುಕೊಳ್ಳುತ್ತಿದ್ದವು” ಎಂದು ಅವರು ಹೇಳಿದರು. “ನಾನು ಇದನ್ನು ದೇಶಭಕ್ತಿ ಎಂದು ಪರಿಗಣಿಸುತ್ತೇನೆ” ಎಂದು ಅವರು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

Lok Sabha Election 2024: ಮಚೇರ್ಲಾ ವಿಧಾನಸಭಾ ಕ್ಷೇತ್ರದ ಶಾಸಕ, ವೈಎಸ್‌ಆರ್‌ಸಿಪಿ(YSRCP) ನಾಯಕರೂ ಆಗಿರುವ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಈ ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಏಕಾಏಕಿ ನಾಲ್ಕೈದು ಜನರೊಂದಿಗೆ ಮತಗಟ್ಟೆಯೊಳಗೆ ಬಂದ ರಾಮಕೃಷ್ಣ ರೆಡ್ಡಿಯವರನ್ನು ಕಂಡು ಚುನಾವಣಾಧಿಕಾರಿಗಳು ಎದ್ದು ನಿಲ್ಲುತ್ತಾರೆ. ಅಲ್ಲಿಂದ ನೇರವಾಗಿ ವಿವಿಪ್ಯಾಟ್‌ ಬಳಿ ಹೋದ ಶಾಸಕ ವಿವಿಪ್ಯಾಟ್‌ ಯಂತ್ರವನ್ನು ಎತ್ತಿ ನೆಲಕ್ಕೆ ಬಡಿದು ಧ್ವಂಸಗೊಳಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಹೈದರಾಬಾದ್‌: ಒಂದೆಡೆ ಲೋಕಸಭೆ ಚುನಾವಣೆ(Lok Sabha Election 2024)ಯ ಕಾವು ಹೆಚ್ಚಾಗ್ತಿದೆ. ಮತ್ತೊಂದೆಡೆ ನಾಯಕರು ಮಾಡುತ್ತಿರುವ ಎಡವಟ್ಟುಗಳೂ ದಿನಕ್ಕೊಂದು ಘಟನೆಯಂತೆ ಕಣ್ಣಮುಂದೆ ಬರುತ್ತಿರುತ್ತವೆ. ಇತ್ತೀಚೆಗಷ್ಟೇ ಆಂಧ್ರಪ್ರದೇಶ(Andra Pradesh)ದಲ್ಲಿ ಮತದಾನಕ್ಕಾಗಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನೋರ್ವ ಕಪಾಳಮೋಕ್ಷ(Slapped) ಮಾಡಿದ ವಿಚಾರ ಬಹಳ ಸುದ್ದಿಯಾಗಿತ್ತು. ಇದೀಗ ಮತ್ತೋರ್ವ ಶಾಸಕ ವಿವಿಪ್ಯಾಟ್‌(VVPAT) ಅನ್ನೇ ಎತ್ತಿ ನೆಲಕ್ಕೆ ಬಡಿಯುವ ಮೂಲಕ ಎಲ್ಲರನ್ನು ಆಘಾತಕ್ಕೊಳಪಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral video) ಆಗುತ್ತಿದೆ

ಘಟನೆ ವಿವರ:

ಆಂಧ್ರಪ್ರದೇಶದ ಪಲ್ವೈ ಗೇಟ್‌ ಮತಗಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಮಚೇರ್ಲಾ ವಿಧಾನಸಭಾ ಕ್ಷೇತ್ರದ ಶಾಸಕ, ವೈಎಸ್‌ಆರ್‌ಸಿಪಿ(YSRCP) ನಾಯಕರೂ ಆಗಿರುವ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಈ ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಏಕಾಏಕಿ ನಾಲ್ಕೈದು ಜನರೊಂದಿಗೆ ಮತಗಟ್ಟೆಯೊಳಗೆ ಬಂದ ರಾಮಕೃಷ್ಣ ರೆಡ್ಡಿಯವರನ್ನು ಕಂಡು ಚುನಾವಣಾಧಿಕಾರಿಗಳು ಎದ್ದು ನಿಲ್ಲುತ್ತಾರೆ. ಅಲ್ಲಿಂದ ನೇರವಾಗಿ ವಿವಿಪ್ಯಾಟ್‌ ಬಳಿ ಹೋದ ಶಾಸಕ ವಿವಿಪ್ಯಾಟ್‌ ಯಂತ್ರವನ್ನು ಎತ್ತಿ ನೆಲಕ್ಕೆ ಬಡಿದು ಧ್ವಂಸಗೊಳಿಸಿದ್ದಾರೆ.

ಮೇ 13ರಂದು ಆಂಧ್ರಪ್ರದೇಶದ ಎಲ್ಲಾ 25 ಕ್ಷೇತ್ರಗಳಿಗೆ ನಡೆದ ಮತದಾನದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಂದು ಎಲ್ಲಾ 175 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆದಿದ್ದು, ಅನೇಕ ಕಡೆಗಳಲ್ಲಿ ಹಿಂಸಾಚಾರ, ಅನುಚಿತ ಘಟನೆಗಳು ವರದಿಯಾಗಿದ್ದವು.

ಟಡಿಎಂ ಖಂಡನೆ:

ಇನ್ನು ವಿಡಿಯೋ ವೈರಲ್‌ ಆಗುತ್ತಿದ್ದಂತೆ ತೆಲುಗು ದೇಶಂ ಪಕ್ಷದ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಸೋಲು ಖಚಿತ ಎಂಬುದು ಮನವರಿಕೆ ಅಗುತ್ತಿದ್ದಂತೆ YSRCP ಮುಖಂಡರು ಈ ರೀತಿ ದಾಂದಲೆ ಎಬ್ಬಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಉತ್ರ ನಾರಾ ಲೋಕೇಶ್‌ ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದು, YSRCP ಶಾಸಕ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಮತಯಂತ್ರವನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು. ಸೋಲಿನ ಭಯದಿಂದ ಹೀಗೆಲ್ಲ ವರ್ತಿಸುತ್ತಿದ್ದಾರೆ. ಜೂ.4ರಂದು ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ:ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

ಒಂದಲ್ಲ.. ಎರಡಲ್ಲಾ.. ಬರೋಬ್ಬರಿ 7ಮತಯಂತ್ರ ಧ್ವಂಸ

ಇನ್ನು ಈ ಬಗ್ಗೆ ಚುನಾವಣಾ ಆಯೋಗ ಪ್ರತಿಕ್ರಿಯಿಸಿದ್ದು, ಶಾಸಕ ರೆಡ್ಡಿ ಬರೋಬ್ಬರಿ 7 ಮತಗಟ್ಟೆಗಳಲ್ಲಿ ಮತಯಂತ್ರಗಳನ್ನು ಧ್ವಂಸಗೊಳಿಸುರುವ ವಿಡಿಯೋ ನಮಗೆ ಸಿಕ್ಕಿದೆ. ಎಲ್ಲಾ ಮತಗಟ್ಟೆಗಳ ವಿಡಿಯೋಗಳನ್ನು ಜಿಲ್ಲಾ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಖೇಶ್‌ ಕುಮಾರ್‌ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದೆ.

Continue Reading

ಅಂಕಣ

ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

ರಾಜಮಾರ್ಗ ಅಂಕಣ: ರನ್ ವೇಯಲ್ಲಿ ಓಡಲು ತೊಡಗಿದ ವಿಮಾನ ನಿಯಂತ್ರಣಕ್ಕೆ ಬರಲಿಲ್ಲ. ರನ್ ವೇ ಪೂರ್ತಿ ಓಡಿದ ನಂತರವೂ ವೇಗ ಕಡಿಮೆ ಆಗಲಿಲ್ಲ. ಅಪಾಯದ ಗೆರೆ ದಾಟಿ ಓಡಿದ ವಿಮಾನ ಮುಂದೆ ಇರುವ ಕೆಂಜಾರು ಎಂಬ ಜಾಗದ ಕಂದಕದಲ್ಲಿ ಉರುಳಿ ಬಿದ್ದು ಎರಡು ಭಾಗವಾಯಿತು. ಕ್ಷಣ ಮಾತ್ರದಲ್ಲಿ ಇಂಜಿನ್ ಟ್ಯಾಂಕ್ ಬೆಂಕಿ ಹಿಡಿದು ವಿಮಾನ ಹೊತ್ತಿ ಉರಿಯಲು ಆರಂಭವಾಯಿತು.

VISTARANEWS.COM


on

rajamarga column mangalore flight crash 1
Koo
Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮಂಗಳೂರಿನ ಬಜಪೆ ವಿಮಾನ ನಿಲ್ದಾಣದಲ್ಲಿ (Mangalore Airport) 14 ವರ್ಷಗಳ ಹಿಂದೆ ಇದೇ ದಿನ (2010 ಮೇ 22) ನಡೆದ ಆ ಒಂದು ದುರ್ಘಟನೆಯು (Mangalore flight crash) ದೇಶದಾದ್ಯಂತ ಉಂಟುಮಾಡಿದ ನೋವಿನ ಅಲೆಗಳನ್ನು ಈಗ ಕಲ್ಪನೆ ಮಾಡಲೂ ಭಯವಾಗುತ್ತದೆ! ದಕ್ಷಿಣ ಭಾರತದ ಅತೀ ದೊಡ್ಡ ವಿಮಾನ ದುರಂತವದು.

ಅಂದು ಮೇ 22, 2010 ಮಧ್ಯರಾತ್ರಿ…

ದುಬೈಯಿಂದ ಹೊರಟ ಭಾರತದ ವೈಭವದ ಬೋಯಿಂಗ್ 737-800 ವಿಮಾನದಲ್ಲಿ 166 ಪ್ರಯಾಣಿಕರಿದ್ದರು. ಅದರಲ್ಲಿ ಎಲ್ಲ ಪ್ರಾಯದವರೂ ಇದ್ದರು. ಹೆಚ್ಚಿನವರು ಕರ್ನಾಟಕ ಮತ್ತು ಕೇರಳದವರು. ನೂರಾರು ಕನಸುಗಳನ್ನು ಹೊತ್ತು ತಮ್ಮ ತಾಯ್ನೆಲಕ್ಕೆ ಹೊರಟವರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮುಂಜಾನೆ ಸೂರ್ಯೋದಯಕ್ಕೆ ಮೊದಲು ಅವರು ಮಂಗಳೂರು ತಲುಪಿ ತಮ್ಮ ತಮ್ಮ ಊರಿಗೆ ಟ್ಯಾಕ್ಸಿ ಏರಬೇಕಾಗಿತ್ತು. ಆದರೆ ವಿಧಿಯ ಆಟ ಬೇರೆಯೇ ಇತ್ತು.

ಟೇಬಲ್ ಟಾಪ್ ರನ್ ವೇ…

ಮುಂಜಾನೆ ಆರು ಘಂಟೆಯ ಹೊತ್ತಿಗೆ ಜನರು ಕಣ್ಣುಜ್ಜಿ ಹೊರಗೆ ನೋಡಲು ತೊಡಗಿದಾಗ ವಿಮಾನ ಬಜಪೆ ವಿಮಾನ ನಿಲ್ದಾಣದ ರನ್ ವೇ ಸ್ಪರ್ಶ ಮಾಡಿ ಓಡತೊಡಗಿತ್ತು. ಅದು ಟೇಬಲ್ ಟಾಪ್ ರನ್ ವೇ. ಅಂದರೆ ಎತ್ತರದ ಪರ್ವತದ ಮೇಲೆ ಸಮತಟ್ಟು ಮಾಡಿ ನಿರ್ಮಿಸಿದ್ದ ರನ್ ವೇ. ವಿಮಾನದ ಕ್ಯಾಪ್ಟನ್ ಗ್ಲುಸಿಕಾ (Glusica) ಮತ್ತು ಫಸ್ಟ್ ಆಫೀಸರ್ ಹರಿಂದರ್ ಸಿಂಘ್ ಅಹ್ಲುವಾಲಿಯಾ ಇಬ್ಬರೂ ಅನುಭವಿಗಳು. ಅದರಲ್ಲಿ ಕ್ಯಾಪ್ಟನ್ ಗ್ಲುಸಿಕಾ ಅದೇ ರನ್ ವೇ ಮೇಲೆ ಹಿಂದೆ 16 ಬಾರಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ದಾಖಲೆ ಹೊಂದಿದ್ದರು. 2448 ಮೀಟರ್ ಉದ್ದವಾದ ರನ್ ವೇಯಲ್ಲಿ ವಿಮಾನವನ್ನು ನಿಯಂತ್ರಣಕ್ಕೆ ತಂದು ನಿಲ್ಲಿಸುವುದು ಕಷ್ಟ ಆಗಿರಲಿಲ್ಲ. ವಾತಾವರಣವೂ ಪೂರಕವಾಗಿತ್ತು. ಬಜಪೇ ವಿಮಾನ ನಿಲ್ದಾಣದಿಂದ ಪೂರಕ ಸಂಕೇತಗಳು ದೊರೆಯುತ್ತಿದ್ದವು.

ಕಣ್ಣು ಮುಚ್ಚಿ ತೆರೆಯುವ ಒಳಗೆ..

ಈ ಬಾರಿ ರನ್ ವೇಯಲ್ಲಿ ಓಡಲು ತೊಡಗಿದ ವಿಮಾನ ನಿಯಂತ್ರಣಕ್ಕೆ ಬರಲಿಲ್ಲ. ರನ್ ವೇ ಪೂರ್ತಿ ಓಡಿದ ನಂತರವೂ ವೇಗ ಕಡಿಮೆ ಆಗಲಿಲ್ಲ. ಅಪಾಯದ ಗೆರೆ ದಾಟಿ ಓಡಿದ ವಿಮಾನ ಮುಂದೆ ಇರುವ ಕೆಂಜಾರು ಎಂಬ ಜಾಗದ ಕಂದಕದಲ್ಲಿ ಉರುಳಿ ಬಿದ್ದು ಎರಡು ಭಾಗವಾಯಿತು. ಕ್ಷಣ ಮಾತ್ರದಲ್ಲಿ ಇಂಜಿನ್ ಟ್ಯಾಂಕ್ ಬೆಂಕಿ ಹಿಡಿದು ವಿಮಾನ ಹೊತ್ತಿ ಉರಿಯಲು ಆರಂಭವಾಯಿತು. ಆಕಾಶದ ಎತ್ತರಕ್ಕೆ ಬೆಂಕಿ ಮತ್ತು ಹೊಗೆ ಏರುತ್ತಾ ಹೋದಂತೆ ಒಳಗಿದ್ದ ಪ್ರಯಾಣಿಕರಿಗೆ ಏನಾಗ್ತಾ ಇದೆ ಎಂದು ಅರಿವಾಗುವ ಮೊದಲೇ ಇಡೀ ವಿಮಾನ ಸುಟ್ಟು ಹೋಯಿತು. ಸಣ್ಣಗೆ ಮಳೆ ಸುರಿಯುತ್ತಿದ್ದರೂ ವಿಮಾನದ ಬೆಂಕಿ ಆರಲಿಲ್ಲ.

ರೆಸ್ಕ್ಯೂ ಆಪರೇಶನ್ ಆರಂಭ.

ಸುದ್ದಿ ಕಾಳ್ಗಿಚ್ಚಿನಂತೆ ಹರಡಿ ಮಂಗಳೂರಿನಿಂದ ಅಗ್ನಿ ಶಾಮಕ ವಾಹನಗಳು, ಆಂಬ್ಯುಲೆನ್ಸಗಳು ಸ್ಥಳಕ್ಕೆ ಧಾವಿಸಿ ಬಂದವು. ದೊಡ್ಡ ಸಂಖ್ಯೆಯಲ್ಲಿ ಸಾರ್ವಜನಿಕರು ಜೀವದ ಹಂಗು ತೊರೆದು ಸ್ಥಳಕ್ಕೆ ಧಾವಿಸಿದರು. ಬೆಂಕಿ ಆರಿಸುವ ಪ್ರಯತ್ನವು ಹಲವು ಘಂಟೆ ನಡೆಯಿತು. ವಿಮಾನದಿಂದ ಸುಟ್ಟು ಕರಕಲಾದ ಶವಗಳನ್ನು ಹೊರಗೆ ತೆಗೆಯುವುದೇ ಕಷ್ಟ ಆಯಿತು. ತಮ್ಮವರನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿತ್ತು.

ಅಂದು ಸುಟ್ಟು ಹೋದವರ ಸಂಖ್ಯೆಯೇ 158!

ವಿಮಾನದಲ್ಲಿ ಇದ್ದ ಪ್ರಯಾಣಿಕರ ಸಂಖ್ಯೆ 166. ಆರು ಜನ ಕ್ರೂ (Crew) ಸದಸ್ಯರು ಬೇರೆ ಇದ್ದರು. ಅಂದು ಬದುಕಿ ಉಳಿದವರ ಸಂಖ್ಯೆ 8 ಮಾತ್ರ. ತೀವ್ರವಾಗಿ ಗಾಯಗೊಂಡವರ ಸಂಖ್ಯೆ 8. ಅಂದರೆ 158 ಜನರು ಸುಟ್ಟು ಕರಕಲಾಗಿ ಹೋಗಿದ್ದರು! ಕ್ರೂ (Crew) ಸದಸ್ಯರೂ ಬೂದಿ ಆಗಿದ್ದರು. ಶವಗಳನ್ನು ಗುರುತು ಹಿಡಿಯುವುದು ತುಂಬಾನೇ ಕಷ್ಟ ಆಯಿತು. ಒಂದೊಂದು ಶವವನ್ನು ಎತ್ತಿ ಆಂಬುಲೆನ್ಸಗೆ ಸಾಗಿಸುವಾಗ ಜನರ ಆಕ್ರಂದನ ಹೃದಯ ವಿದ್ರಾವಕ ಆಗಿತ್ತು.

ಆಸ್ಪತ್ರೆಗೆ ಧಾವಿಸಿ ತಮ್ಮವರನ್ನು ಶವಗಳ ರಾಶಿಯಲ್ಲಿ ಹುಡುಕುತ್ತಾ ಅಳುವವರ ದೃಶ್ಯವು ನಿಜಕ್ಕೂ ಕರುಣಾಜನಕ ಆಗಿತ್ತು. ಅದರಲ್ಲಿಯೂ 12 ಶವಗಳ ಗುರುತು ಹಿಡಿಯುವುದೇ ಕಷ್ಟವಾಗಿ ಅವುಗಳನ್ನು ಮುಂದೆ ಕೂಳೂರಿನ ಫಲ್ಗುಣಿ ನದಿ ತೀರದಲ್ಲಿ ಸಾಮೂಹಿಕವಾಗಿ ಸಂಸ್ಕಾರ ಮಾಡಲಾಯಿತು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

ಪೈಲಟ್ ನಿದ್ದೆ ರೆಕಾರ್ಡ್ ಆಗಿತ್ತು!

ಇಂತಹ ಅಪಘಾತಗಳು ನಡೆದಾಗ ಗಂಭೀರವಾದ ವಿಚಾರಣೆಗಳು ನಡೆಯುತ್ತವೆ. ಕಾಕ್‌ಪಿಟ್ ರೆಕಾರ್ಡರ್‌ನಲ್ಲಿ ಪೈಲಟ್ ಕ್ಯಾಪ್ಟನ್ ಗ್ಲುಸಿಕಾ ಅವರ ನಿದ್ದೆ ರೆಕಾರ್ಡ್ ಆಗಿತ್ತು. ಅಂದರೆ 55 ವರ್ಷ ಪ್ರಾಯದ ಆತನು ಸುಮಾರು ಹೊತ್ತು ವಿಮಾನದ ಹಾರಾಟದ ಅವಧಿಯಲ್ಲಿ ಮಲಗಿದ್ದು ನಿಚ್ಚಳವಾಯಿತು! ಇದೇ ಅಪಘಾತಕ್ಕೆ ಕಾರಣ ಎಂದು ಧೃಡವಾಗಿತ್ತು.

ಮುಂದೆ ಏನಾಯಿತು?

ರಾಜ್ಯ ಮತ್ತು ಕೇಂದ್ರ ಸರಕಾರಗಳು ಮೃತರಾದವರಿಗೆ ಪರಿಹಾರ ಕೊಟ್ಟವು. ವಿಮಾನ ಯಾನ ಸಂಸ್ಥೆ ಮತ್ತು ಖಾಸಗಿ ವಿಮಾ ಕಂಪೆನಿಗಳು ಪರಿಹಾರಗಳನ್ನು ನೀಡಿದವು. ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ದುರಂತದ ಸ್ಮಾರಕವನ್ನು ನಿರ್ಮಾಣ ಮಾಡಿ ಮೃತರಾದವರಿಗೆ ಶ್ರದ್ಧಾಂಜಲಿ ಕೊಟ್ಟಿತ್ತು. ಆದರೆ ತಮ್ಮವರನ್ನು ಕಳೆದುಕೊಂಡು ಇಂದಿಗೂ ರೋಧಿಸುತ್ತಿರುವ, ನೋವು ಪಡುತ್ತಿರುವ ಮಂದಿಗೆ ಈ ದುರಂತವು ಮರೆತು ಹೋಗುವುದು ಹೇಗೆ? ಅಂದು ಮಡಿದ ನೂರಾರು ಮಂದಿಗೆ ಒಂದು ಹನಿ ಕಣ್ಣೀರು ಸುರಿಸಿ ಶ್ರದ್ಧಾಂಜಲಿ ಕೊಡೋಣ ಅಲ್ಲವೇ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ಅವರ ನೆನಪೇ ನ್ಯಾಚುರಲ್‌ ಐಸ್‌ಕ್ರೀಂನ ತಾಜಾ ಹಣ್ಣಿನ ರುಚಿ, ಪರಿಮಳದಂತೆ!

Continue Reading

ದೇಶ

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

ರಾಜಸ್ಥಾನದ ಜೈಪುರದಲ್ಲಿ ಮಹಿಳೆಯೊಬ್ಬರು ತಮ್ಮ 22 ವರ್ಷದ ಮಗಳನ್ನೇ ಕೊಂದಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಓದುವುದು ಬಿಟ್ಟು, ಮೂರು ಹೊತ್ತೂ ಮೊಬೈಲ್‌ನಲ್ಲಿಯೇ ಮುಳುಗಿರುತ್ತಿದ್ದ ಮಗಳ ಗೀಳನ್ನು ಸಹಿಸದೆ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ರಾಡ್‌ನಿಂದ ಬಿದ್ದ ಪೆಟ್ಟಿನಿಂದಾಗಿ ಯುವತಿಯು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

VISTARANEWS.COM


on

Mobile
Koo

ಜೈಪುರ: ಮಕ್ಕಳಿಂದ ಹಿಡಿದು ಹಿರಿಯರವರೆಗೆ, ಅಕ್ಷರಸ್ಥರಿಂದ ಹಿಡಿದು, ಅನಕ್ಷರಸ್ಥರವರೆಗೆ ಬಹುತೇಕ ಮಂದಿ ದಿನದ ಹೆಚ್ಚಿನ ಸಮಯವನ್ನು ಮೊಬೈಲ್‌ನಲ್ಲಿಯೇ (Mobile Addiction) ಕಳೆಯುತ್ತಾರೆ. ಅದರಲ್ಲೂ, ಶಾಲೆ-ಕಾಲೇಜುಗಳಿಗೆ ತೆರಳುವ ಮಕ್ಕಳು ಮೂರು ಹೊತ್ತೂ ಮೊಬೈಲ್‌ನಲ್ಲಿಯೇ ಮುಳುಗಿರುವುದನ್ನು ಕಂಡು ಪೋಷಕರು ಅಸಮಾಧಾನ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಇಷ್ಟಾದರೂ ಮಕ್ಕಳು ಮೊಬೈಲ್‌ನಲ್ಲೇ ತಲ್ಲೀನರಾಗಿರುತ್ತಾರೆ. ಹೀಗೆ, ರಾಜಸ್ಥಾನದಲ್ಲಿ (Rajasthan) ಮೂರು ಹೊತ್ತೂ ಮೊಬೈಲ್‌ ಹಿಡಿದುಕೊಂಡೇ ಕೂತಿರುತ್ತಿದ್ದನ್ನು ಸಹಿಸದ ಮಹಿಳೆಯೊಬ್ಬರು ತಮ್ಮ 22 ವರ್ಷದ ಮಗಳನ್ನೇ ಕೊಂದು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ರಾಜಸ್ಥಾನದ ಜೈಪುರದಲ್ಲಿ ಸೀತಾ ದೇವಿ ಎಂಬ ಮಹಿಳೆಯು ತಮ್ಮ ಮಗಳನ್ನೇ ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ನಿಕಿತಾ (22) ಮೃತ ಯುವತಿ. ನಿಕಿತಾ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಳು. ಪರೀಕ್ಷೆಗೆ ಓದು, ಮೊಬೈಲ್‌ ನೋಡುವುದು ಬಿಡು. ಮೂರು ಹೊತ್ತೂ ಮೊಬೈಲ್‌ ಹಿಡಿದರೆ ಪರೀಕ್ಷೆಯಲ್ಲಿ ಹೇಗೆ ತೇರ್ಗಡೆಯಾಗ್ತೀಯಾ ಎಂಬುದಾಗಿ ಸೀತಾ ದೇವಿ ಗದರಿದ್ದಾರೆ. ಇದರಿಂದ ಕುಪಿತಗೊಂಡ ನಿಕಿತಾ, ತಾಯಿಗೆ ಎದುರು ಉತ್ತರ ಕೊಟ್ಟಿದ್ದಾಳೆ. ಆಗ ಇಬ್ಬರ ಮಧ್ಯೆ ಜಗಳ ನಡೆದಿದೆ ಎನ್ನಲಾಗಿದೆ.

Mobile

ರಾಡ್‌ನಿಂದ ಹೊಡೆದಾಡಿಕೊಂಡರು

ಮೂರು ಹೊತ್ತೂ ಮೊಬೈಲ್‌ ನೋಡಬೇಡ ಎಂದಿದ್ದಕ್ಕೆ ನಿಕಿತಾ ರೇಗಿದ್ದಾಳೆ. ಇದರಿಂದ ಸೀತಾ ದೇವಿ ಅವರಿಗೆ ಸಿಟ್ಟು ಬಂದಿದೆ. ಪಕ್ಕದಲ್ಲಿದ್ದ ರಾಡ್‌ ತೆಗೆದುಕೊಂಡು ಮಗಳಿಗೆ ಹೊಡೆದಿದ್ದಾರೆ. ತಾಯಿ ಎಂಬುದನ್ನೂ ಲೆಕ್ಕಿಸದ ಮಗಳು ಕೂಡ ರಾಡ್‌ನಿಂದ ತಾಯಿ ಮೇಲೆ ಹಲ್ಲೆ ನಡೆಸಿದ್ದಾಳೆ. ಇಬ್ಬರೂ ರಾಡ್‌ಗಳಿಂದ ಬಡಿದಾಡಿಕೊಂಡಿದ್ದಾರೆ. ಜೈಪುರದ ಮುಂಡಿಯಾರಮ್ಸಾರ್‌ ಎಂಬ ಗ್ರಾಮದಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಇಬ್ಬರೂ ಗಾಯಗೊಂಡ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೇ ನಿಕಿತಾ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ. ಸೀತಾ ದೇವಿ ವಿರುದ್ಧ ಕೊಲೆ ಕೇಸ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಧುನಿಕ ಕಾಲಘಟ್ಟದಲ್ಲಿ ಮೊಬೈಲ್‌ ಎಲ್ಲರಿಗೂ ಅವಿಭಾಜ್ಯ ಅಂಗವೇ ಆಗಿದೆ. ಅದರಲ್ಲೂ, ವಿದ್ಯಾರ್ಥಿಗಳಿಗೆ ಮೊಬೈಲ್‌ ಅಚ್ಚುಮೆಚ್ಚಾಗಿದೆ. ಹಾಗೆಯೇ, ಇದು ಶಿಕ್ಷಣಕ್ಕೂ ಅನುಕೂಲ ಕಲ್ಪಿಸಿದೆ. ಆದರೆ, ಮಕ್ಕಳು ಯಾವಾಗಲೂ ಮೊಬೈಲ್‌ ಬಳಸುತ್ತಿದ್ದರೆ, ಅದು ಗೀಳಾಗಿ ಬದಲಾಗಿದ್ದರೆ, ಪೋಷಕರು ಅದರ ಕುರಿತು ಮಕ್ಕಳೊಂದಿಗೆ ಸಮಾಧಾನದಿಂದ ಜಾಗೃತಿ ಮೂಡಿಸಬೇಕು. ಅತಿಯಾಗಿ ಮೊಬೈಲ್‌ ಬಳಸುವುದರಿಂದ ಶಿಕ್ಷಣದ ಮೇಲೆ ಬೀರುವ ಪರಿಣಾಮದ ಮೇಲೆ ತಿಳಿಹೇಳಬೇಕು. ಸಮಾಧಾನದಿಂದ ತಿಳಿಹೇಳದೆ, ಬೈಯುವುದು, ಹೊಡೆಯುವುದು ಮಾಡಿದರೆ ಹಿಂಸೆ, ದುಃಖಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಜೈಪುರದ ಪ್ರಕರಣವೇ ಸಾಕ್ಷಿಯಾಗಿದೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

ಎಲ್ಲಿಯವರೆಗೆ ದುರ್ಬಲರು ನ್ಯಾಯ ಪಡೆಯದೆ, ಸಬಲರು ನ್ಯಾಯಾಂಗದ ಎಲ್ಲ ಲಾಭವನ್ನೂ ಪಡೆಯುತ್ತಾರೋ ಅಲ್ಲಿಯವರೆಗೂ ನ್ಯಾಯಾಂಗಕ್ಕೂ ಪೊಲೀಸ್‌ ವ್ಯವಸ್ಥೆಗೂ ಅಂಟಿದ ಸಬಲ ಪಕ್ಷಪಾತಿ ಎಂಬ ಕಳಂಕ ತಪ್ಪುವುದಿಲ್ಲ. ಅಪರಾಧದ ಗಂಭೀರತೆ ಪರಿಗಣಿಸಿ ಶೀಘ್ರ ಶಿಕ್ಷೆ, ತ್ವರಿತ ನ್ಯಾಯದಾನ ಸಾಧ್ಯವಾಗಬೇಕು.

VISTARANEWS.COM


on

Porsche
Koo

ಪುಣೆಯಲ್ಲಿ ಒಬ್ಬಾತ ಅಪ್ರಾಪ್ತ ವಯಸ್ಕ ಸ್ಪೋರ್ಟ್ಸ್‌ ಕಾರು ಅತಿ ವೇಗದಲ್ಲಿ ಯದ್ವಾತದ್ವಾ ಓಡಿಸಿ ಇಬ್ಬರ ಸಾವಿನ ಕಾರಣನಾಗಿದ್ದಾನೆ. ವಿಶೇಷ ಎಂದರೆ, ಇವನಿಗೆ ಬಂಧನವಾದ 15 ಗಂಟೆಯೊಳಗೇ ಜಾಮೀನು ದೊರೆತಿದೆ. 17 ವರ್ಷದ ಈತ ಶನಿವಾರ ಪುಣೆಯಲ್ಲಿ ಚಲಾಯಿಸುತ್ತಿದ್ದ ಪೋರ್ಷೆ ಕಾರು ಕೋರೆಗಾಂವ್ ಪಾರ್ಕ್‌ ಸಮೀಪ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪುರುಷ ಮತ್ತು ಮಹಿಳೆ ಮೃತಪಟ್ಟಿದ್ದರು. ಇವರಿಬ್ಬರೂ ಐಟಿ ಎಂಜಿನಿಯರ್ ಗಳಾಗಿದ್ದರು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು. ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಆತನಿಗೆ ಜಾಮೀನು ನೀಡಿದ್ದಲ್ಲದೆ, ಕೆಲವು ಸರಳ ಶಿಕ್ಷೆಗಳನ್ನು ಆತನಿಗೆ ವಿಧಿಸಿದೆ. ಯೆರವಾಡಾದ ಸಂಚಾರ ಪೊಲೀಸರೊಂದಿಗೆ 15 ದಿನಗಳ ಕಾಲ ಕೆಲಸ ಮಾಡಬೇಕು, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಬೇಕು, ಕುಡಿತದ ಅಭ್ಯಾಸಕ್ಕೆ ಚಿಕಿತ್ಸೆ ಪಡೆಯಬೇಕು ಮತ್ತು ಮನೋವೈದ್ಯಕೀಯ ಮೌಲ್ಯಮಾಪನ ಹಾಗೂ ಚಿಕಿತ್ಸೆಗೆ ಒಳಗಾಗಬೇಕು ಎಂಬುದು ಷರತ್ತು. ಈತ ಪುಣೆಯ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿಯ ಮಗ ಹಾಗೂ ಪ್ರಭಾವಿ. ಪಬ್‌ನಲ್ಲಿ ಪಾರ್ಟಿ ಮಾಡಿ ಪಾನಮತ್ತನಾಗಿ ಹಿಂದಿರುಗುತ್ತಿದ್ದ. ಸಮಾಧಾನದ ವಿಷಯ ಎಂದರೆ ಪುಣೆ ಪೊಲೀಸರು ಜಾಮೀನು ಆದೇಶದ ವಿರುದ್ಧ ಮೇಲಿನ ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಈ ಪ್ರಕರಣದ ಬಗ್ಗೆ ಜನಾಕ್ರೋಶ ಭುಗಿಲೆದ್ದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಬಾಲಕನ ತಂದೆ ಮತ್ತು ಆತನಿಗೆ ಮದ್ಯ ಪೂರೈಸಿದ ಬಾರ್ ಮಾಲೀಕನನ್ನು ಬಂಧಿಸಿದ್ದಾರೆ. ಇವರು ಕೂಡ ಬೇಗನೆ ಜಾಮೀನಿನ ಮೇಲೆ ಬಿಡುಗಡೆಯಾದರೆ ಆಶ್ಚರ್ಯವಿಲ್ಲ.

ಇದು ನಮ್ಮ ಕಾನೂನು ಹಾಗೂ ನ್ಯಾಯಾಂಗ ವ್ಯವಸ್ಥೆಯ ಛಿದ್ರಗಳು ಎಲ್ಲಿವೆ ಎಂಬುದನ್ನು ಬೆಟ್ಟು ಮಾಡಿ ತೋರಿಸುವಂತಿದೆ. ಕರ್ನಾಟಕದಲ್ಲಿಯೂ ಹೀಗೇ ಆಗಿದೆ; ಲೈಂಗಿಕ ದೌರ್ಜನ್ಯ ಹಾಗೂ ಕಿಡ್‌ನ್ಯಾಪ್‌ ಪ್ರಕರಣದಲ್ಲಿ ಬಂಧಿತರಾದ ಮಾಜಿ ಸಚಿವರು ಆರು ದಿನಗಳಲ್ಲಿ ಜಾಮೀನು ಪಡೆಯುತ್ತಾರೆ. ವಿಶೇಷ ತನಿಖಾ ದಳದ ವಕೀಲರು ಎಷ್ಟು ಪ್ರಯತ್ನಿಸಿದರೂ ಜಾಮೀನು ತಪ್ಪಿಸಲು ಆಗುವುದಿಲ್ಲ. ಪ್ರಕರಣದ ಪ್ರಮುಖ ಆರೋಪಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಆತನನ್ನು ಕರೆದು ತರುವಲ್ಲಿ ಇಲ್ಲಿನ ಕಾನೂನು ಹಾಗೂ ನ್ಯಾಯಾಂಗ ವ್ಯವಸ್ಥೆಗಳು ಸದ್ಯಕ್ಕೆ ಅಸಹಾಯಕವಾಗಿವೆ. ಇದು ಈ ಪ್ರಕರಣದ ಒಂದು ಮುಖ.

ಪ್ರಭಾವಿಗಳು ಏನು ಮಾಡಿದರೂ ಕಾನೂನಿನ ಕೈಗಳಿಂದ ತಪ್ಪಿಸಿಕೊಳ್ಳುತ್ತಾರೆ ಎಂಬ ಪರಿಸ್ಥಿತಿ ಸೃಷ್ಟಿಯಾಗಿರುವಂತಿದೆ. ನಗರಗಳಲ್ಲಿ ಇತ್ತೀಚೆಗೆ ನಡೆಯುವ ಅಪರಾಧ ಸ್ವರೂಪಗಳನ್ನು ನೋಡುವುದಾದರೆ, ಕುಬೇರರು ಬಡವರ ಮೇಲೆ ಕೈ ಮಾಡುವುದು, ಹಲ್ಲೆ ನಡೆಸಿಯೂ ಪಾರಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿದೆ. ಯಮಕನಮರಡಿಯಲ್ಲಿ ಇತ್ತೀಚೆಗೆ ನಡೆದ ಒಂದು ಅಪರಾಧ ನೋಡಿದರೆ, ಸಾಲ ಪಾವತಿ ಮಾಡಲಿಲ್ಲ ಎಂದು ರೈತನ ಪತ್ನಿ- ಮಗನನ್ನು ಒಬ್ಬಾಕೆ ಗೃಹಬಂಧನದಲ್ಲಿಟ್ಟಿದ್ದಾಳೆ. ಇದರಿಂದ ನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಿಗ ಮಹಿಳೆಯ ಮೇಲೆ ಪೊಲೀಸ್‌ ಕ್ರಮ ಕೈಗೊಂಡಂತಿಲ್ಲ. ಶ್ರೀಮಂತರು ಸಾಕಿದ ನಾಯಿಗಳು ಬೀದಿಯಲ್ಲಿ ಬಡವರ ಮಕ್ಕಳನ್ನು ಕಚ್ಚಿ ತಿನ್ನುತ್ತಿವೆ. ನಿರ್ಲಕ್ಷ್ಯದಿಂದ ಮಕ್ಕಳ ಜೀವಕ್ಕೆ ಎರವಾದವರಿಗೂ ಶಿಕ್ಷೆಯಾದ ಹಾಗಿಲ್ಲ.

ಇನ್ನು ಟ್ರಾಫಿಕ್‌ ಅಪರಾಧಗಳ ಕತೆಯೂ ಇದೇ ಮಾದರಿಯಲ್ಲಿದೆ. ಹಿಟ್‌ ಆಂಡ್‌ ರನ್‌ಗಳು ಹೆಚ್ಚುತ್ತಿವೆ. ದೊಡ್ಡ ವಾಹನಗಳನ್ನು ಯದ್ವಾತದ್ವಾ ಓಡಿಸಿ, ದ್ವಿಚಕ್ರ ವಾಹನ ಸವಾರರ ಜೀವ ತೆಗೆಯುವವರ ಸಂಖ್ಯೆ ಹೆಚ್ಚಿದೆ. ರೋಡ್‌ ರೇಜ್‌ ಪ್ರಕರಣಗಳಲ್ಲಿ ಸಬಲರು ದುರ್ಬಲರ ಮೇಲೆ ವಿನಾಕಾರಣ ಹಲ್ಲೆ ಮಾಡುತ್ತಿದ್ದಾರೆ. ಇವರ್ಯಾರಿಗೂ ಶೀಘ್ರವಾಗಿ ಶಿಕ್ಷೆಯಾಗುತ್ತಿಲ್ಲ. ಸುಲಭವಾಗಿ ಜಾಮೀನೂ ದೊರೆಯುತ್ತಿದೆ. ದುರ್ಬಲ ಸೆಕ್ಷನ್‌ಗಳು, ದುರ್ಬಲ ಸಾಕ್ಷಿಗಳು, ವಿಲಂಬಿತ ನ್ಯಾಯಾಂಗ ಪ್ರಕ್ರಿಯೆ ಇವುಗಳಿಂದಾಗಿ ಸಂತ್ರಸ್ತರು ಮತ್ತಷ್ಟು ಸಂತ್ರಸ್ತರೇ ಆಗುತ್ತಿದ್ದಾರೆ. ನ್ಯಾಯದಾನ ವಿಳಂಬವಾದಷ್ಟೂ ಸಾಕ್ಷಿಗಳು, ಕಕ್ಷಿದಾರರು ಕೇಸ್‌ನಲ್ಲಿ ಆಸಕ್ತಿ ಕಳೆದುಕೊಳ್ಳುತ್ತಾರೆ. ಕೆಲವು ದಾಖಲೆ ಪತ್ರಗಳು ನಾಶವಾಗಬಹುದು, ಸಾಕ್ಷಿಗಳು ಇಲ್ಲವಾಗಬಹುದು. ಕಾಲದ ಹೊಡೆತಕ್ಕೆ ಸಿಲುಕಿ, ಪ್ರತಿ ತಿಂಗಳೂ ಕೋರ್ಟಿಗೆ ಅಲೆದು ಹೈರಾಣಾಗುವ ಪರಿಸ್ಥಿತಿಯಿಂದ ರೋಸಿಹೋಗಿ ರಾಜಿ ಮಾಡಿಕೊಂಡ ಎಷ್ಟೋ ಪ್ರಕರಣಗಳು ಇವೆ. ಇದು ನ್ಯಾಯ ಬೇಡವೆಂದಲ್ಲ, ಶಿಕ್ಷೆಗಿಂತಲೂ ನಿಷ್ಕರುಣಿಯಾಗಿರುವ ಕಟಕಟೆಯ ಸಹವಾಸ ಬೇಡವೆಂದು.

ಎಲ್ಲಿಯವರೆಗೆ ದುರ್ಬಲರು ನ್ಯಾಯ ಪಡೆಯದೆ, ಸಬಲರು ನ್ಯಾಯಾಂಗದ ಎಲ್ಲ ಲಾಭವನ್ನೂ ಪಡೆಯುತ್ತಾರೋ ಅಲ್ಲಿಯವರೆಗೂ ನ್ಯಾಯಾಂಗಕ್ಕೂ ಪೊಲೀಸ್‌ ವ್ಯವಸ್ಥೆಗೂ ಅಂಟಿದ ಸಬಲ ಪಕ್ಷಪಾತಿ ಎಂಬ ಕಳಂಕ ತಪ್ಪುವುದಿಲ್ಲ. ಅಪರಾಧದ ಗಂಭೀರತೆ ಪರಿಗಣಿಸಿ ಶೀಘ್ರ ಶಿಕ್ಷೆ, ತ್ವರಿತ ನ್ಯಾಯದಾನ ಸಾಧ್ಯವಾಗಬೇಕು.

ಇದನ್ನೂ ಓದಿ: Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

Continue Reading
Advertisement
Hampi Monument falls
ಪ್ರಮುಖ ಸುದ್ದಿ39 seconds ago

Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

Lok Sabha Election 2024
ದೇಶ27 mins ago

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

rajamarga column mangalore flight crash 1
ಅಂಕಣ30 mins ago

ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

food poisoning savadatthi
ಬೆಳಗಾವಿ51 mins ago

Food Poisoning: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ, ಐವರು ಗಂಭೀರ

nanna desha nanna dani column ambedkar jinnah
ಅಂಕಣ1 hour ago

ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

Health Tips Kannada
ಆರೋಗ್ಯ2 hours ago

Health Tips Kannada: ಸನ್‌ಸ್ಕ್ರೀನ್‌ ಕುರಿತು ನಿಮಗೆಷ್ಟು ಗೊತ್ತು?

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Sweat Problem
ಆರೋಗ್ಯ3 hours ago

Sweat Problem: ದುರ್ಗಂಧದ ಬೆವರಿನ ಸಮಸ್ಯೆಗೆ ಇಲ್ಲಿವೆ ನೈಸರ್ಗಿಕ ಪರಿಹಾರಗಳು!

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ

Mobile
ದೇಶ8 hours ago

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ14 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು19 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು21 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌