Site icon Vistara News

IndiGo Flight: ಗಾಂಜಾ ಮತ್ತಿನಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಕಿಡಿಗೇಡಿ; ಮುಂದೇನಾಯ್ತು?

Indigo Flight

Man Tries To Open IndiGo Flight's Door Mid-Air, Here's What Happened Next

ಹೈದರಾಬಾದ್:‌ ಹಾರುತ್ತಿರುವ ವಿಮಾನದಲ್ಲಿ ಸಹ ಪ್ರಯಾಣಿಕರಿಗೆ ತೊಂದರೆ ಕೊಡುವುದು, ಗಗನಸಖಿಯರ ಜತೆ ಅನುಚಿತವಾಗಿ ವರ್ತಿಸುವುದು, ಪ್ರೇಮಿಗಳಿಬ್ಬರು ರೊಮ್ಯಾನ್ಸ್‌ ಮಾಡುವುದು, ಎಮರ್ಜೆನ್ಸಿ ಬಾಗಿಲು ತೆರೆಯುವುದು ಸೇರಿ ಪ್ರಯಾಣಿಕರು ಹಲವು ರೀತಿಯ ದುರ್ವರ್ತನೆ ತೋರುವ ಪ್ರಕರಣಗಳು ಇತ್ತೀಚೆಗೆ ಜಾಸ್ತಿಯಾಗುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಹೈದರಾಬಾದ್‌ನಲ್ಲಿ (Hyderabad) ಹಾರುತ್ತಿದ್ದ ಇಂಡಿಗೋ ವಿಮಾನದ (IndiGo Flight) ಬಾಗಿಲು ತೆರೆಯಲು ಪ್ರಯಾಣಿಕನೊಬ್ಬ (Flight Passenger) ಯತ್ನಿಸಿದ್ದು, ಇದರಿಂದ ಕೆಲ ಕಾಲ ಆತಂಕವಾದ ವಾತಾವರ್ಣ ನಿರ್ಮಾಣವಾಗಿತ್ತು ಎಂದು ತಿಳಿದುಬಂದಿದೆ.

ಹೌದು, ಗಾಂಜಾ ಸೇದಿದ ಮತ್ತಿನಲ್ಲಿ ಪ್ರಯಾಣಿಕನು ಹುಚ್ಚಾಟ ಮಾಡಿದ್ದಾನೆ. ಹೈದರಾಬಾದ್‌ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನವು ಇನ್ನೇನು ಲ್ಯಾಂಡ್‌ ಆಗಬೇಕು ಎನ್ನುವಷ್ಟರಲ್ಲಿ 29 ವರ್ಷದ ವ್ಯಕ್ತಿಯು ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಮೇ 21ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂದೋರ್‌ಗೆ ಯಾತ್ರೆಗೆಂದು ತೆರಳಿದ್ದ ವ್ಯಕ್ತಿಯು ಹೈದರಾಬಾದ್‌ಗೆ ಹೊರಟಿದ್ದ. ಇದೇ ವೇಳೆ ಆತನು ಗಾಂಜಾದ ಮತ್ತಿನಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ವಿಮಾನವು ರಾಜೀವ್‌ ಗಾಂಧಿ ಇಂಟರ್‌ನ್ಯಾಷನ್‌ ಏರ್‌ಪೋರ್ಟ್‌ಗೆ ಆಗಮಿಸುತ್ತಲೇ ಆರೋಪಿಯನ್ನು ಬಂಧಿಸಲಾಗಿದೆ.

ಏರ್‌ಪೋರ್ಟ್‌ನಲ್ಲಿ ವಿಮಾನವನ್ನು ಲ್ಯಾಂಡ್‌ ಮಾಡಲು ಪೈಲಟ್‌ಗಳು ತೀರ್ಮಾನಿಸಿದ್ದರು. ಎಲ್ಲರೂ ಸೀಟ್‌ಬೆಲ್ಟ್‌ ಧರಿಸಿ, ಎದ್ದು ತಿರುಗಾಡಬೇಡಿ ಎಂಬುದಾಗಿ ಸಿಬ್ಬಂದಿಯು ಸೂಚಿಸಿದ್ದರು. ಹೀಗಿದ್ದರೂ ವ್ಯಕ್ತಿಯು ಗಾಂಜಾದ ಮತ್ತಿನಲ್ಲಿ ಎದ್ದು ಹೋಗಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಆಗ ವಿಮಾನದ ಸಿಬ್ಬಂದಿಯು ಎಷ್ಟು ಎಚ್ಚರಿಸಿದರೂ ಕೇಳಿದರೂ ಬಾಗಿಲು ಬಳಿ ತೆರಳಿದ್ದಾನೆ. ಕೂಡಲೇ ವಿಮಾನದ ಸಿಬ್ಬಂದಿಯು ಆತನನ್ನು ಬೇರೊಂದು ಆಸನದಲ್ಲಿ ಕೂರಿಸಿದ್ದಾರೆ. ಇದಾದ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ವಿಮಾನದಲ್ಲಿ ಸಿಬ್ಬಂದಿ ಜತೆ ಪ್ರಯಾಣಿಕರು ಅನುಚಿತವಾಗಿ ವರ್ತಿಸುವ, ಜಗಳವಾಡುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ಕೆಲ ತಿಂಗಳ ಹಿಂದಷ್ಟೇ, ಲಂಡನ್‌ನಿಂದ ಮುಂಬೈ ಏರ್ ಇಂಡಿಯಾ ವಿಮಾನದ ಪ್ರಯಾಣಿಕರೊಬ್ಬರು ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದರು. ಅವರ ಈ ಅಶಿಸ್ತಿನ ವರ್ತನೆಗಾಗಿ ಪ್ರಕರಣ ದಾಖಲಾಗಿತ್ತು. ಇನ್ನು 2022ರ ನವೆಂಬರ್‌ನಲ್ಲಿ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಪ್ರಕರಣದಲ್ಲಿ ನಿಯಮಗಳನ್ನು ಅನುಸರಿಸಲು ವಿಫಲವಾದ ಕಾರಣ ಏರ್ ಇಂಡಿಯಾಗೆ ಸಂಸ್ಥೆಗೆ 30 ಲಕ್ಷ ರೂ. ದಂಡ ವಿಧಿಸಲಾಯಿತು. ನವೆಂಬರ್ 26 ರಂದು ನ್ಯೂಯಾರ್ಕ್-ದಿಲ್ಲಿ ವಿಮಾನದಲ್ಲಿ ಶಂಕರ್ ಮಿಶ್ರಾ ಎಂಬ ಪ್ರಯಾಣಿಕರು ಕುಡಿದ ಅಮಲಿನಲ್ಲಿ ವಯಸ್ಸಾದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು. ಈ ಪ್ರಕರಣ ಭಾರಿ ಸುದ್ದಿ ಮಾಡಿತ್ತು.

ಇದನ್ನೂ ಓದಿ: Flight Turbulence: ನೀವಿದ್ದ ವಿಮಾನ ಪ್ರಕ್ಷುಬ್ಧತೆಗೊಳಗಾದರೆ ಏನು ಮಾಡುತ್ತೀರಿ? ಇಲ್ಲಿದೆ ಪೈಲಟ್‌ಗಳ ಸಲಹೆ

Exit mobile version