Site icon Vistara News

Manipur Video: ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ನೀಚನ ಮನೆಗೆ ಬೆಂಕಿ ಹಚ್ಚಿದ ಹೆಣ್ಣುಮಕ್ಕಳು

House Set On Fire In Manipur

Manipur Video: House of man who paraded women naked set on fire

ಇಂಫಾಲ: ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಇಬ್ಬರು ಹೆಣ್ಣುಮಕ್ಕಳನ್ನು ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿ, ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬೆತ್ತಲೆ ಮೆರವಣಿಗೆ (Manipur Video) ಪ್ರಕರಣದ ಪ್ರಮುಖ ಆರೋಪಿ ಹುಯಿರೆಮ್‌ ಹೆರೋದಾಸ್‌ ಮೈತೆ (Huirem Herodas Meitei) ಮನೆಗೆ ಹೆಣ್ಣುಮಕ್ಕಳು ಬೆಂಕಿ ಹಚ್ಚಿದ್ದಾರೆ. ಘಟನೆಯ ಬಳಿಕ ಆಕ್ರೋಶಗೊಂಡ ಹೆಣ್ಣುಮಕ್ಕಳು, ಆತನ ಮನೆಗೆ ಬೆಂಕಿ ಹಚ್ಚಿದ್ದಾರೆ.

ಬುಡಕಟ್ಟು ಸಮುದಾಯದ ಉಡುಪುಗಳನ್ನ ಧರಿಸಿದ ಹೆಣ್ಣುಮಕ್ಕಳು ಆರೋಪಿಯ ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ ಹಲವು ವಸ್ತುಗಳನ್ನು ಧ್ವಂಸಗೊಳಿಸುವ ಜತೆಗೆ ಆತನ ಮನೆಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಹುಯಿರೆಮ್‌ ಹೆರೋದಾಸ್‌ ಮೈತೆ ಮನೆಗೆ ಬೆಂಕಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬೆಂಕಿ ಹಚ್ಚಿದ ಹೆಣ್ಣುಮಕ್ಕಳು

ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಸಾವಿರಾರು ಜನ ಇಬ್ಬರು ಮಹಿಳೆಯರನ್ನು ಬೆತ್ತೆಗೊಳಿಸಿ ಮೆರವಣಿಗೆ ಮಾಡಿದ್ದಾರೆ. ಇದಾದ ಬಳಿಕ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮಹಿಳೆಯೊಬ್ಬರ ಸಹೋದರನನ್ನು ಕೊಲೆ ಮಾಡಿದ್ದಾರೆ. ನಮ್ಮ ಮೇಲೂ ಹಲ್ಲೆಯಾಗಿದೆ ಎಂದು ಮಹಿಳೆಯರ ಕುಟುಂಬಸ್ಥರು ತಿಳಿಸಿದ್ದಾರೆ. ಮೇ 4ರಂದೇ ಘಟನೆ ನಡೆದಿದ್ದು, ಇದುವರೆಗೆ ಕ್ರಮ ತೆಗೆದುಕೊಳ್ಳದಿರುವ ಕುರಿತು ಆಕ್ರೋಶ ವ್ಯಕ್ತವಾಗಿದೆ. ಆದರೂ, ಪೊಲೀಸರು ನೀಡಿರುವ ಕಾರಣಗಳು ಜನರಿಗೆ ಸಮಾಧಾನ ತಂದಿಲ್ಲ ಎಂದು ತಿಳಿದುಬಂದಿದೆ.

ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೊ ತಡವಾಗಿ ವೈರಲ್ ಆದರೂ ದೇಶಾದ್ಯಂತ ಸಂಚಲನ ಮೂಡಿಸಿದೆ. ಮಣಿಪುರ ಸಿಎಂ ಎನ್.ಬಿರೇನ್‌ ಸಿಂಗ್‌ ರಾಜೀನಾಮೆಗೆ ಒತ್ತಾಯ ಕೇಳಿಬಂದಿವೆ. ಮೋದಿ ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ. ಪ್ರತಿಪಕ್ಷಗಳು ಸಂಸತ್‌ನಲ್ಲಿ ಇದೇ ವಿಚಾರಕ್ಕೆ ಗಲಾಟೆ ನಡೆಸುತ್ತಿವೆ. “ಘಟನೆಯಿಂದ ಮನಸ್ಸಿಗೆ ನೋವಾಗಿದ್ದು, ಅಪರಾಧಿಗಳನ್ನು ಬಿಡುವುದಿಲ್ಲ” ಎಂದು ಮೋದಿ ಈಗಾಗಲೇ ಹೇಳಿದ್ದಾರೆ.

ಇದನ್ನೂ ಓದಿ: Manipur Violence: ಮಹಿಳೆಯರ ಮೇಲೆ ದೌರ್ಜನ್ಯ ನಡೆದು 2 ತಿಂಗಳಾದರೂ ಕ್ರಮ ಏಕಿಲ್ಲ? ಪೊಲೀಸರು ಕೊಟ್ಟ ಕಾರಣ ಇದು

ಪ್ರಕರಣದಲ್ಲಿ ತನಿಖೆ ವಿಳಂಬವಾಗಿರುವ ಕುರಿತು ಹಿರಿಯ ಪೊಲೀಸ್‌ ಅಧಿಕಾರಿಗಳು ಹಲವು ಕಾರಣ ನೀಡಿದ್ದಾರೆ. “ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಬಳಿಕ ಎಲ್ಲ ಆರೋಪಿಗಳು ಪರಾರಿಯಾಗಿದ್ದಾರೆ. 800-1000 ಜನ ಅಮಾನುಷ ಕೃತ್ಯದಲ್ಲಿ ತೊಡಗಿದ್ದರು. ಎಲ್ಲರೂ ಮನೆ ಬಿಟ್ಟು ಓಡಿಹೋಗಿದ್ದರು. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದರೂ ಪೊಲೀಸರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಗಳು ಲಭ್ಯವಾಗಿರಲಿಲ್ಲ. ಅಲ್ಲದೆ, ನೋಂಗ್‌ಪೋಕ್‌ ಸೆಕ್ಮಾಯಿ ಪೊಲೀಸ್‌ ಠಾಣೆಗೆ ಜನ ನುಗ್ಗಿದ್ದರು. ಪೊಲೀಸರು ಠಾಣೆಯಲ್ಲಿ ಕಾವಲು ಕಾಯುತ್ತಿದ್ದರು” ಎಂದು ಕಾಂಗ್‌ಪೊಕ್ಪಿ ಎಸ್‌ಪಿ ಸಚ್ಚಿದಾನಂದ ಮಾಹಿತಿ ನೀಡಿದ್ದಾರೆ.

Exit mobile version