Manipur Violence: ಮಣಿಪುರದಲ್ಲಿ ಇನ್ನೊಂದು ಬೀಭತ್ಸ ಕೃತ್ಯ; ರಾಜಧಾನಿಯಲ್ಲೇ ಇಬ್ಬರು ಕುಕೀ ಯುವತಿಯರ ರೇಪ್‌, ಕೊಲೆ - Vistara News

ದೇಶ

Manipur Violence: ಮಣಿಪುರದಲ್ಲಿ ಇನ್ನೊಂದು ಬೀಭತ್ಸ ಕೃತ್ಯ; ರಾಜಧಾನಿಯಲ್ಲೇ ಇಬ್ಬರು ಕುಕೀ ಯುವತಿಯರ ರೇಪ್‌, ಕೊಲೆ

ಸಂತ್ರಸ್ತರ ತಂದೆ ನೀಡಿರುವ ದೂರಿನ ಪ್ರಕಾರ ಇವರಿಬ್ಬರೂ ಅಕ್ಕತಂಗಿಯರಾಗಿದ್ದು, ಕಾರ್‌ವಾಶ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. 21 ಹಾಗೂ 24 ವರ್ಷದವರಾದ ಇವರ ರೂಮಿಗೆ ಅಕ್ರಮವಾಗಿ ನುಗ್ಗಿ ಎಳೆದೊಯ್ದ ಮೈತೈ ದುಷ್ಟರ ಗುಂಪು, ಸಾಮೂಹಿಕವಾಗಿ ರೇಪ್‌ ಮಾಡಿ ಕೊಂದುಹಾಕಿದೆ.

VISTARANEWS.COM


on

manipur violence
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಫಾಲ್:‌ ಗಲಭೆಗ್ರಸ್ತ ಮಣಿಪುರದಲ್ಲಿ (Manipur Violence) ನಡೆದ ಬುಡಕಟ್ಟು ಕುಕೀ (kuki tribe) ಮಹಿಳೆಯರಿಬ್ಬರ ಅಮಾನುಷ ಬೆತ್ತಲೆ ಮರವಣಿಗೆ ಹಾಗೂ ಸಾಮೂಹಿಕ ಅತ್ಯಾಚಾರ ಕೃತ್ಯ ದೇಶಾದ್ಯಂತ ಆಕ್ರೋಶ ಭುಗಿಲೆಬ್ಬಿಸಿರುವ ನಡುವೆಯೇ, ಅಷ್ಟೇ ಬೀಭತ್ಸಕರವಾದ ಇನ್ನೊಂದು ಪ್ರಕರಣ ನಡೆದಿರುವುದು ವರದಿಯಾಗಿದೆ. ಈ ಘಟನೆ ಹಿಂದಿನ ಘಟನೆ ನಡೆದ ಅದೇ ದಿನ (ಮೇ 4) ನಡೆದಿದ್ದು, ರಾಜ್ಯದ ರಾಜಧಾನಿಯಲ್ಲೇ ನಡೆದಿದೆ.

ರಾಜಧಾನಿ ಇಂಫಾಲದಲ್ಲಿ ಇಬ್ಬರು ಕುಕೀ ಯುವತಿಯರನ್ನು ಸಾಮೂಹಿಕವಾಗಿ ಅತ್ಯಾಚಾರ (sexual assault) ನಡೆಸಿ ಕೊಲೆ (murder case) ಮಾಡಲಾಗಿದೆ. ಎರಡೂ ಪ್ರಕರಣಗಳಲ್ಲೂ ಸಂತ್ರಸ್ತರು ಬುಡಕಟ್ಟು ಕುಕೀ ಸಮುದಾಯದವರಾಗಿದ್ದು, ಕೊಲೆಪಾತಕಿಗಳು ಬಲಿಷ್ಠ ಮೈತೈ ಸಮುದಾಯಕ್ಕೆ (Meitei tribe) ಸೇರಿದ್ದಾರೆ. ಹಿಂದಿನ ಪ್ರಕರಣ ಬಿ ಫೈನಂ ಎಂಬ ಗ್ರಾಮದಲ್ಲಿ ನಡೆದಿದ್ದರೆ, ಇದು ರಾಜಧಾನಿಯಲ್ಲಿ ನಡೆದಿದೆ. ಮೊದಲ ಪ್ರಕರಣ ಘಟಿಸಿದ ಒಂದು ಗಂಟೆಯ ನಂತರ ಎರಡನೇ ಪ್ರಕರಣ ನಡೆದಿದೆ. ಮೊದಲ ಪ್ರಕರಣದಲ್ಲಿ ವಿಡಿಯೋ ವೈರಲ್‌ ಆದ ಬಳಿಕ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿಗಳನ್ನು ಬಂಧಿಸಿದ್ದರೆ, ಇಂಫಾಲದ ಪ್ರಕರಣದಲ್ಲಿ ಇನ್ನೂ ಯಾವುದೇ ಬಂಧನ ಆಗಿಲ್ಲ.

ಸಂತ್ರಸ್ತರ ತಂದೆ ನೀಡಿರುವ ದೂರಿನ ಪ್ರಕಾರ ಇವರಿಬ್ಬರೂ ಅಕ್ಕತಂಗಿಯರಾಗಿದ್ದು, ಕಾರ್‌ವಾಶ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. 21 ಹಾಗೂ 24 ವರ್ಷದವರಾದ ಇವರ ರೂಮಿಗೆ ಅಕ್ರಮವಾಗಿ ನುಗ್ಗಿ ಎಳೆದೊಯ್ದ ಮೈತೈ ದುಷ್ಟರ ಗುಂಪು, ಸಾಮೂಹಿಕವಾಗಿ ರೇಪ್‌ ಮಾಡಿ ಕೊಂದುಹಾಕಿದೆ.

ʼʼನಾವು ಕುಕೀ ಸಮುದಾಯದವರು. ನನ್ನ ಮಕ್ಕಳ ಸ್ನೇಹಿತೆ ಮೈತೈ ಸಮುದಾಯದವಳಾಗಿದ್ದು, ಅವಳು ನೀಡಿದ ಮಾಹಿತಿಯಂತೆ, ಮೈತೈ ಸಮುದಾಯದ ಯುವಕರ ಒಂದು ಗುಂಪು ಮನೆಗೆ ನುಗ್ಗಿ ಅವರನ್ನು ಕೊಂದುಹಾಕಿದೆ. ನನ್ನ ಮಕ್ಕಳನ್ನು ರೇಪ್‌ ಮಾಡಿ ಕೊಲ್ಲಲಾಗಿದೆ ಎಂದು ಶವಪರೀಕ್ಷೆ ಮಾಡಿದ ವೈದ್ಯರು ತಿಳಿಸಿದ್ದಾರೆ. ನಾನು ಪೊಲೀಸರಿಗೆ ದೂರು ನೀಡಿದ್ದೇನೆ. ತಾವು ಯಾಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೊಲೀಸರು ತಿಳಿಸಿಲ್ಲʼʼ ಎಂದು ಹತ್ಯೆಗೀಡಾದ ಸೋದರಿಯರ ತಂದೆ ಹೇಳಿದ್ದಾರೆ.

ಇಂಫಾಲದಲ್ಲಿ ಮೈತೈ ಸಮುದಾಯದವರು ಹೆಚ್ಚಾಗಿರುವ ಕೊನುಗ್‌ ಮನಂಗ್‌ ಪ್ರಾಂತ್ಯದಲ್ಲಿರುವ ಈ ಸೋದರಿಯರ ಮನೆಯಲ್ಲಿ ಈ ಘಟನೆ ನಡೆದಿದೆ. ಮೇ 3ರಂದು ಇಲ್ಲಿ ಗಲಭೆ ಸ್ಫೋಟಿಸಿತ್ತು. ಸುಮಾರು 150 ಜನರನ್ನು ಇಲ್ಲಿ ಕೊಲ್ಲಲಾಗಿದೆ. ಮೈತೈ ಯುವ ಸಂಘಟನೆಗಳಿಗೆ ಸೇರಿದ ನೂರಾರು ಯುವಕರು ಇಲ್ಲಿ ಗಲಭೆಗಳಲ್ಲಿ ಪಾಲ್ಗೊಂಡು ಕುಕೀಗಳ ಮೇಲೆ ಹಲ್ಲೆ ನಡೆಸಿರುವುದು ದಾಖಲಾಗಿದೆ.

ಈ ಪ್ರಕರಣದ ಬಗ್ಗೆ ಉತ್ತರ ಅಮೆರಿಕನ್‌ ಮಣಿಪುರ ಬುಡಕಟ್ಟು ಸಂಘಟನೆಯು ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗಕ್ಕೆ ಜೂನ್‌ 12ರಂದು ದೂರು ನೀಡಿತ್ತು. ಆಯೋಗ ಉತ್ತರ ನೀಡಿಲ್ಲ. ಕೊಲೆಯಾದ ಮಹಿಳೆಯರ ಶವವನ್ನು ಇಂಫಾಲದ ಜವಾಹರಲಾಲ್‌ ವೈದ್ಯಕೀಯ ಸಂಸ್ಥೆಯ ಶವಾಗಾರದಲ್ಲಿಡಲಾಗಿದ್ದು, ವಿಸ್ತೃತ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ʼʼಬಿ ಫೈನಂ ಗ್ರಾಮದಲ್ಲಿ ನಡೆದ ಬೆತ್ತಲೆ ಮೆರವಣಿಗೆಯ ವಿಡಿಯೋ ಎಲ್ಲೆಡೆ ಹರಿದಾಡಿದ್ದರಿಂದ ಕ್ರಮ ತೆಗೆದುಕೊಳ್ಳುವ ಒತ್ತಡಕ್ಕೆ ಪೊಲೀಸರು ಒಳಗಾಗಿದ್ದಾರೆ. ಆದರೆ ಇಂಥ ಹಲವಾರು ಘಟನೆಗಳು ನಡೆದಿದ್ದು, ವಿಡಿಯೋಗಳು ಲಭ್ಯವಿಲ್ಲ. ಹೀಗಾಗಿ ಅವು ತೆರೆಮರೆಯಲ್ಲೇ ಉಳಿದಿವೆʼʼ ಎಂದು ಈ ಬಗ್ಗೆ ಎಚ್ಚರ ಮೂಡಿಸುತ್ತಿರುವ ಕುಕೀ ಸಮುದಾಯದ ಸಂಸದರು ಹೇಳಿದ್ದಾರೆ. ಯಥಾಪ್ರಕಾರ ಬೀರೆನ್‌ ಸಿಂಗ್‌ ಸರ್ಕಾರ ಮೌನ ಕಾಪಾಡಿಕೊಂಡಿದೆ.

ಇದನ್ನೂ ಓದಿ: Manipur Video: ಮಣಿಪುರ ದೌರ್ಜನ್ಯ; 5ನೇ ಆರೋಪಿ ಬಂಧನ, ಧ್ವನಿ ಎತ್ತಲು ಮಹಿಳಾ ಆಯೋಗವೂ ನಿರ್ಲಕ್ಷ್ಯ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Reliance Industries: ಟೈಮ್ ಮ್ಯಾಗಜೀನ್‌ನ ಜಗತ್ತಿನ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌

Reliance Industries: ಅಮೆರಿಕದ ಜನಪ್ರಿಯ ನಿಯತಕಾಲಿಕ ಟೈಮ್‌ ಬಿಡುಗಡೆ ಮಾಡಿರುವ ಜಗತ್ತಿನ ಪ್ರಮುಖ 100 ಪ್ರಭಾವಿ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌, ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಮತ್ತು ಟಾಟಾ ಸಮೂಹವು ಸ್ಥಾನ ಪಡೆದುಕೊಂಡಿವೆ. ಟೈಮ್‌ ನಿಯತಕಾಲಿಕವು ರಿಲಯನ್ಸ್‌ ಇಂಡಸ್ಟ್ರೀಸ್‌ಗೆ ʼಭಾರತದ ಶಕ್ತಿʼ ಎನ್ನುವ ಉಪನಾಮವನ್ನು ನೀಡಿದೆ.

VISTARANEWS.COM


on

3 Indian companies have featured in Time magazines list of 100 most influential companies in the world
ರಿಲಯನ್ಸ್ ಇಂಡಸ್ಟ್ರೀಸ್‌.
Koo

ನವದೆಹಲಿ: ಅಮೆರಿಕದ ಜನಪ್ರಿಯ ನಿಯತಕಾಲಿಕ ಟೈಮ್‌ (Time magazine) ಬಿಡುಗಡೆ ಮಾಡಿರುವ ಜಗತ್ತಿನ ಪ್ರಮುಖ 100 ಪ್ರಭಾವಿ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ (Reliance Industries) ಸೇರಿದಂತೆ ಭಾರತದ ಮೂರು ಕಂಪನಿಗಳು ಸ್ಥಾನ ಪಡೆದುಕೊಂಡಿವೆ.

ರಿಲಯನ್ಸ್‌ ಇಂಡಸ್ಟ್ರೀಸ್‌, ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಮತ್ತು ಟಾಟಾ ಸಮೂಹವು ʼಟೈಮ್‌ʼ ಬಿಡುಗಡೆ ಮಾಡಿರುವ 100 ಕಂಪನಿಗಳಲ್ಲಿ ಸ್ಥಾನ ಪಡೆದುಕೊಂಡಿವೆ.

ಇದನ್ನೂ ಓದಿ: Modi Meditation: ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಧ್ಯಾನ ಆರಂಭಿಸಿದ ಮೋದಿ; ಹಗಲು-ರಾತ್ರಿ ಪ್ರಧಾನಿ ಮೆಡಿಟೇಷನ್

ಈ ಪಟ್ಟಿಯನ್ನು 5 ವಿಭಾಗಗಳಾಗಿ ವರ್ಗೀಕರಿಸಲಾಗಿದ್ದು, ನಾಯಕ, ಆವಿಷ್ಕಾರ, ನಾವೀನ್ಯ, ಟೈಟಾನ್‌ (ಶಕ್ತಿಶಾಲಿ) ಮತ್ತು ಪ್ರವರ್ತಕ ಎಂದು ವರ್ಗೀಕರಿಸಲಾಗಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಟಾಟಾ ಸಮೂಹವು ಟೈಟಾನ್‌ (ಶಕ್ತಿಶಾಲಿ) ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿವೆ. ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಪ್ರವರ್ತಕರ ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿದೆ.

ಟೈಮ್‌ ನಿಯತಕಾಲಿಕವು ರಿಲಯನ್ಸ್‌ ಇಂಡಸ್ಟ್ರೀಸ್‌ಗೆ ʼಭಾರತದ ಶಕ್ತಿʼ ಎನ್ನುವ ಉಪನಾಮವನ್ನು ನೀಡಿದೆ. ಜವಳಿ ಮತ್ತು ಪಾಲಿಸ್ಟರ್‌ ಉದ್ದಿಮೆಯಾಗಿ ಆರಂಭವಾದ ರಿಲಯನ್ಸ್‌ ಕಂಪನಿಯು ಇಂದು ಅತಿದೊಡ್ಡ ಮತ್ತು ಶಕ್ತಿಶಾಲಿ ಉದ್ಯಮ ಸಮೂಹವಾಗಿ ಹೊರಹೊಮ್ಮಿದೆ. ಮಾತ್ರವಲ್ಲ ದೇಶದ ಅತ್ಯಂತ ಮೌಲ್ಯಯುತ ಕಂಪನಿ ಕೂಡಾ ಆಗಿದೆ ಎಂದು ಟೈಮ್‌ ನಿಯತಕಾಲಿಕವು ರಿಲಯನ್ಸ್‌ ಇಂಡಸ್ಟ್ರೀಸ್‌ ಬಗ್ಗೆ ಬರೆದಿದೆ. ಮುಕೇಶ್‌ ಅಂಬಾನಿ ಅವರ ನಾಯಕತ್ವದಲ್ಲಿ ಕಂಪನಿಯು ಇಂಧನ, ರಿಟೇಲ್‌ ಮತ್ತು ದೂರಸಂಪರ್ಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತನ್ನ ವಹಿವಾಟನ್ನು ವಿಸ್ತರಿಸಿಕೊಂಡಿದೆ.

ಇದನ್ನೂ ಓದಿ: Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

ಭಾರತದ ಅತಿದೊಡ್ಡ ಡಿಜಿಟಲ್‌ ಸೇವಾ ಪೂರೈಕೆದಾರ ಮತ್ತು ದೂರಸಂಪರ್ಕ ಕಂಪನಿ ಜಿಯೊ ಪ್ಲಾಟ್‌ಫಾರಂ 2021ರಲ್ಲಿ ಈ ಪಟ್ಟಿಗೆ ಸೇರಿಕೊಂಡಿತು. ರಿಲಯನ್ಸ್‌ ಮತ್ತು ಡಿಸ್ನಿ ನಡುವಿನ 8.5 ಬಿಲಿಯನ್‌ ಡಾಲರ್‌ ಒಪ್ಪಂದದ ಬಗ್ಗೆಯೂ ಟೈಮ್‌ ನಿಯತಕಾಲಿಕ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

Continue Reading

ಪ್ರಮುಖ ಸುದ್ದಿ

Murder News : ಬಾಯ್​ಫ್ರೆಂಡ್​ ಜತೆ ಸೇರಿ ಅಪ್ಪ, ತಮ್ಮನನ್ನು ಕೊಂದು ಕತ್ತರಿಸಿ ಫ್ರಿಜ್​ನಲ್ಲಿಟ್ಟಿದ್ದ 16ರ ಬಾಲಕಿ

Murder News: ಬಾಲಕಿಯನ್ನು ಪಟ್ಟಣದಲ್ಲಿ ಪತ್ತೆ ಹಚ್ಚಿದ ಬಳಿಕ ಮಂಗಳವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಂದ್ರ ದೋಭಾಲ್ ತಿಳಿಸಿದ್ದಾರೆ. ತಾನು ತನ್ನ ಗೆಳೆಯನೊಂದಿಗೆ ಹರಿದ್ವಾರಕ್ಕೆ ಬಂದಿದ್ದೇನೆ ಎಂದು ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಿದ್ದಾಳೆ

VISTARANEWS.COM


on

Murder News
Koo

ಡೆಹ್ರಾಡೂನ್: ತನ್ನ ಪ್ರೀತಿಗೆ ವಿರೋಧ ಮಾಡಿದ್ದ ತಂದೆ ಹಾಗೂ ತಮ್ಮನನ್ನು ಕೊಲೆ ಮಾಡಿ ತುಂಡಾಗಿ ಕತ್ತರಿಸಿ ಫ್ರಿಜ್​ನಲ್ಲಿಟ್ಟಿದ್ದ 16ರ ಬಾಲಕಿಯೊಬ್ಬಳನ್ನು (Murder News) ಹರಿದ್ವಾರ ಪೊಲೀಸರು ಬಂಧಿಸಿದ್ದಾರೆ. ಆಕೆ 19 ವರ್ಷದ ಬಾಯ್​ಫ್ರೆಂಡ್​ ಜತೆ ಸೇರಿಕೊಂಡು ಇಬ್ಬರನ್ನು ಕತ್ತರಿಸಿ ಫ್ರಿಜ್​ನಲ್ಲಿಟ್ಟು ಪರಾರಿಯಾಗಿದ್ದಳು. ಒಂದು ತಿಂಗಳ ಬಳಿಕ ಘಟನೆ ಬೆಳಕಿಗೆ ಬಂದಿದ್ದು ಬಳಿಕ ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಾರ್ಚ್ 15 ರಂದು ಮಧ್ಯಪ್ರದೇಶದ ಜಬಲ್ಪುರದಲ್ಲಿ ಈ ಕೊಲೆ ನಡೆದಿದ್ದು, ಅಂದಿನಿಂದ ಬಾಲಕಿ ಪರಾರಿಯಾಗಿದ್ದಳು. ಆಕೆಯ 19 ವರ್ಷದ ಗೆಳೆಯ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಪಟ್ಟಣದಲ್ಲಿ ಪತ್ತೆ ಹಚ್ಚಿದ ಬಳಿಕ ಮಂಗಳವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಂದ್ರ ದೋಭಾಲ್ ತಿಳಿಸಿದ್ದಾರೆ. ತಾನು ತನ್ನ ಗೆಳೆಯನೊಂದಿಗೆ ಹರಿದ್ವಾರಕ್ಕೆ ಬಂದಿದ್ದೇನೆ ಎಂದು ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

19 ವರ್ಷದ ಯುವಕನೊಂದಿಗಿನ ಸಂಬಂಧವನ್ನು ಅಪ್ಪ ವಿರೋಧಿಸಿದ ಕಾರಣ ಅವರನ್ನು ಮೊದಲು ಕೊಂದಿದ್ದಳು. ಅದನ್ನು ನೋಡಿದ ಸಹೋದರನನ್ನೂ ಅಪರಾಧಕ್ಕೆ ಸಾಕ್ಷಿಯಾಗುತ್ತಾನೆ ಹೆದರಿ ಕೊಂದಿದ್ದಾರೆ ಎಂದು ದೋಭಾಲ್ ಹೇಳಿದ್ದಾರೆ. ಅವರು ಶವಗಳನ್ನು ತುಂಡುಗಳಾಗಿ ಕತ್ತರಿಸಿ ಫ್ರಿಜ್​ನಲ್ಲಿಟ್ಟು ತುಂಬಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಪ್ರಕಾರ ಆಕೆಯ ಗೆಳೆಯ ಕೊಗೆ ಸಂಚು ರೂಪಿಸಿದ್ದ. ಬಾಲಕಿಯನ್ನು ಮಧ್ಯಪ್ರದೇಶ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಆಕೆಯ ಪ್ರಿಯಕರನಿಗಾಗಿ ಶೋಧ ನಡೆಯುತ್ತಿದೆ ಎಂದು ದೋಭಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಪ್ರಜ್ಞೆ ಕಳೆದುಕೊಂಡು ಬಿದ್ದ ಕೋತಿಗೆ ಮರುಜೀವ ನೀಡಿದ ಪೊಲೀಸ್ ಅಧಿಕಾರಿ; ಮನ ಮಿಡಿಯೋ ವಿಡಿಯೊ ಇಲ್ಲಿದೆ

ಸಿಸಿಬಿ ತೆಕ್ಕೆಗೆ ವಕೀಲೆ ಚೈತ್ರಾ ಡೆತ್ ಕೇಸ್; 15 ದಿನಗಳ ಸಿಸಿಟಿವಿ ಪರಿಶೀಲನೆ

ಬೆಂಗಳೂರು: ವಕೀಲೆ ಚೈತ್ರಾ ಅವರ (Advocate Chaitra Gowda Case) ಸಾವು ಅವರ ಆಪ್ತರಿಗೆ ಇನ್ನೂ ಕೂಡ ನಿಗೂಢವಾಗಿಯೇ ಇದೆ. ಪೊಲೀಸರ ವರದಿಯಲ್ಲಿ ಇದೊಂದು ಆತ್ಮಹತ್ಯೆ ಎಂದರೂ ಕೂಡ ಅದನ್ನು ಚೈತ್ರಾ ಆಪ್ತರು ಒಪ್ಪುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಈ ಪ್ರಕರಣವನ್ನು ಸಿಸಿಬಿ ತೆಕ್ಕೆಗೆ (Suspicious Death) ವಹಿಸಲಾಗಿದೆ.

ಇದೇ ತಿಂಗಳ ಮೇ 11ರಂದು ಚೈತ್ರಾ ಗೌಡ ಅವರ ಮೃತದೇಹ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದೊಂದದು ಆತ್ಮಹತ್ಯೆ ಎಂದು ಹೇಳಲಾಗಿತ್ತು. ಪೋಸ್ಟ್‌ ಮಾರ್ಟಮ್‌ ರಿಪೋರ್ಟ್‌ನಲ್ಲಿ ಚೈತ್ರಾ ಸಾವು ಆತ್ಮಹತ್ಯೆಯಿಂದಲೇ (Self Harming) ಆಗಿದೆ ಎಂಬುದು ದೃಢಪಟ್ಟಿತ್ತು. ಆದರೆ ಅವರ ಆಪ್ತ ವಲಯ ಚೈತ್ರಾಗೌಡ ಅವರ ಸಾವು ಸಹಜವಲ್ಲ ಎಂದು ಇಂದಿಗೂ ಕೂಡ ವಾದಿಸುತ್ತಲೆ ಇದೆ. ಹೀಗಾಗಿ ವಕೀಲರ ಸಂಘದವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಈ ಸಾವಿನ ಬಗ್ಗೆ ತನಿಖೆ ನಡೆಸಿ ಎಂದಿದ್ದರು. ಇದರ ಫಲವಾಗಿ ಪ್ರಕರಣದ ಹೆಚ್ಚಿನ ತನಿಖೆಗೆ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ ಪೊಲೀಸರು ಮೊದಲು ಆಕೆಯ ಸಾವಿನ 15 ದಿನಗಳ ಹಿಂದಿನ ಸಿಸಿಟಿವಿಗಳನ್ನು ಕಲೆ ಹಾಕುವ ಕೆಲಸ ಶುರು ಮಾಡಿದೆ. ಜತೆಗೆ ಚೈತ್ರಾರ ಮೊಬೈಲ್‌ಗೆ ಬಂದ ಕರೆಗಳ ಸಿಡಿಆರ್‌ಗಳನ್ನು ಸಂಗ್ರಹಿಸಿದೆ. ಚೈತ್ರಾರಿಗೆ ಯಾರಾದರೂ ತೊಂದರೆ ಕೊಟ್ಟಿರುವುದು ಅಥವಾ ಬೆದರಿಕೆ ಹಾಕಿದ್ದರಾ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹೀಗಾಗಿ ಚೈತ್ರ ಗೌಡ ಅವರ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.

Continue Reading

ದೇಶ

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Reserve Bank of India : ಸಹಕಾರಿ ಬ್ಯಾಂಕುಗಳು ಸೇರಿದಂತೆ ಬ್ಯಾಂಕುಗಳು ತಮ್ಮ ಖಾತೆಗಳಲ್ಲಿ 10 ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳವರೆಗೆ ಯಾರೂ ಕ್ಲೇಮ್ ಮಾಡದೇ ಇರುವ ಖಾತೆಯಲ್ಲಿನ ದುಡ್ಡನ್ನು ಆರ್​ಬಿಯ ಠೇವಣಿ ಶಿಕ್ಷಣ ಮತ್ತು ಜಾಗೃತಿ (ಡಿಇಎ) ನಿಧಿಗೆ ವರ್ಗಾಯಿಸುತ್ತವೆ.

VISTARANEWS.COM


on

Reserve Bank of India
Koo

ನವದೆಹಲಿ: ಬ್ಯಾಂಕುಗಳಲ್ಲಿ ಯಾರೂ ಕ್ಲೈಮ್ ಮಾಡದ (ವಾಪಸ್ ಪಡೆಯದ) ಠೇವಣಿಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26ರಷ್ಟು ಏರಿಕೆ ಕಂಡು 2024 ರ ಮಾರ್ಚ್ ಅಂತ್ಯದ ವೇಳೆಗೆ 78,213 ಕೋಟಿ ರೂ.ಗೆ ತಲುಪಿದೆ ಎಂದು ರಿಸರ್ವ್​ ಬ್ಯಾಂಕ್​ ಆಫ್ ಇಂಡಿಯಾ (Reserve Bank of India) ವಾರ್ಷಿಕ ವರದಿ ತಿಳಿಸಿದೆ. ಅದೇ ರೀತಿ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿಯು ಮಾರ್ಚ್ 2023 ರ ಅಂತ್ಯದ ವೇಳೆಗೆ 62,225 ಕೋಟಿ ರೂಪಾಯಿಗೆ ಏರಿದೆ ಎಂದು ಅದು ಹೇಳಿದೆ.

ಸಹಕಾರಿ ಬ್ಯಾಂಕುಗಳು ಸೇರಿದಂತೆ ಬ್ಯಾಂಕುಗಳು ತಮ್ಮ ಖಾತೆಗಳಲ್ಲಿ 10 ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳವರೆಗೆ ಯಾರೂ ಕ್ಲೇಮ್ ಮಾಡದೇ ಇರುವ ಖಾತೆಯಲ್ಲಿನ ದುಡ್ಡನ್ನು ಆರ್​ಬಿಯ ಠೇವಣಿ ಶಿಕ್ಷಣ ಮತ್ತು ಜಾಗೃತಿ (ಡಿಇಎ) ನಿಧಿಗೆ ವರ್ಗಾಯಿಸುತ್ತವೆ.

ಖಾತೆದಾರರಿಗೆ ಸಹಾಯ ಮಾಡುವ ಕ್ರಮವಾಗಿ ಮತ್ತು ನಿಷ್ಕ್ರಿಯ ಖಾತೆಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಈ ವರ್ಷದ ಆರಂಭದಲ್ಲಿ ಖಾತೆಗಳು ಮತ್ತು ಠೇವಣಿಗಳನ್ನು ನಿಷ್ಕ್ರಿಯ ಖಾತೆಗಳು ಮತ್ತು ಕ್ಲೈಮ್ ಮಾಡದ ಠೇವಣಿಗಳು ಎಂದು ವರ್ಗೀಕರಿಸಲು ಬ್ಯಾಂಕುಗಳು ಜಾರಿಗೆ ತರಬೇಕಾದ ಕ್ರಮಗಳ ಬಗ್ಗೆ ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದನ್ನು ಸಂದರ್ಭಕ್ಕೆ ತಕ್ಕಂತೆ ಅನುಸರಿಬಹುದಾಗಿದೆ.

ಇದನ್ನೂ ಓದಿ: Radhika Merchant : ಅನಂತ್​​ ಅಂಬಾನಿ- ರಾಧಿಕಾ ಮರ್ಚೆಂಟ್​ ವಿವಾಹದ ಸ್ಥಳ ಬಹಿರಂಗ; ಇಲ್ಲಿದೆ ವಿವರ

ಖಾತೆಗಳ ನಿಯಮಿತ ಪರಿಶೀಲನೆ, ಅಂಥ ಖಾತೆಗಳ ಮೂಲಕ ವಂಚನೆ ತಡೆಗಟ್ಟುವ ಕ್ರಮಗಳು, ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಕುಂದುಕೊರತೆ ಪರಿಹಾರ ಕಾರ್ಯವಿಧಾನ, ಖಾತೆಗಳನ್ನು ಮರು ಸಕ್ರಿಯಗೊಳಿಸಲು ಅವರ ನಾಮನಿರ್ದೇಶಿತರು ಅಥವಾ ಕಾನೂನುಬದ್ಧ ವಾರಸುದಾರರು ಸೇರಿದಂತೆ ನಿಷ್ಕ್ರಿಯ ಖಾತೆಗಳು ಅಥವಾ ಕ್ಲೈಮ್ ಮಾಡದ ಠೇವಣಿಗಳ ಗ್ರಾಹಕರನ್ನು ಪತ್ತೆಹಚ್ಚಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಸೂಚಿಸಲಾಗಿತ್ತು. ಕ್ಲೇಮ್​ಗಳ ಇತ್ಯರ್ಥ ಅಥವಾ ಖಾತೆ ಮುಚ್ಚಲು ಅನುಸರಿಸಬೇಕಾದ ಪ್ರಕ್ರಿಯೆಗಳಿಗೆ ಆರ್​ಸಿಬಿ ಬ್ಯಾಂಕುಗಳಿಗೆ ಸಲಹೆ ನೀಡಿದೆ.

ಈ ಸೂಚನೆಗಳು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಕ್ಲೈಮ್ ಮಾಡದ ಠೇವಣಿಗಳ ಪ್ರಮಾಣವನ್ನು ಕಡಿಮೆ ಮಾಡಲು ಮತ್ತು ಅಂತಹ ಠೇವಣಿಗಳನ್ನು ಅವುಗಳ ನಿಜವಾದ ಮಾಲೀಕರು / ಹಕ್ಕುದಾರರಿಗೆ ಹಿಂದಿರುಗಿಸಲು ಬ್ಯಾಂಕುಗಳು ಮತ್ತು ರಿಸರ್ವ್ ಬ್ಯಾಂಕ್ ಕೈಗೊಂಡ ಪ್ರಯತ್ನಗಳು ಮತ್ತು ಉಪಕ್ರಮಗಳಿಗೆ ಪೂರಕವಾಗಿತ್ತು. ಪರಿಷ್ಕೃತ ಸೂಚನೆಗಳು ಎಲ್ಲಾ ವಾಣಿಜ್ಯ ಬ್ಯಾಂಕುಗಳು (ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಸೇರಿದಂತೆ) ಮತ್ತು ಎಲ್ಲಾ ಸಹಕಾರಿ ಬ್ಯಾಂಕುಗಳಿಗೆ ಅನ್ವಯಿಸುತ್ತವೆ ಮತ್ತು ಏಪ್ರಿಲ್ 1, 2024 ರಿಂದ ಜಾರಿಗೆ ಬಂದಿವೆ.

Continue Reading

ದೇಶ

Modi Meditation: ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸಲ್ಲ ಮೋದಿ; 2 ದಿನ ಪಾನೀಯವೇ ಆಹಾರ!

Modi Meditation: ನರೇಂದ್ರ ಮೋದಿ ಅವರು ಕೇರಳ ರಾಜಧಾನಿ ತಿರುವನಂತಪುರಂನಿಂದ ಕನ್ಯಾಕುಮಾರಿಗೆ ಆಗಮಿಸಿದರು. ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು. ಸುಮಾರು 45 ಗಂಟೆಗಳವರೆಗೆ ಮೋದಿ ಧ್ಯಾನ ಮಾಡಲಿದ್ದಾರೆ. ಇದೇ ವೇಳೆ ಅವರು ಎರಡು ದಿನವೂ ಆಹಾರ ಸೇವಿಸುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

VISTARANEWS.COM


on

Modi Meditation
Koo

ಕನ್ಯಾಕುಮಾರಿ: ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತ ತಲುಪಿದ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲೆ ಸ್ಮಾರಕದಲ್ಲಿ (Vivekananda Rock Memorial) 45 ಗಂಟೆಗಳ ಧ್ಯಾನ ಕೈಗೊಳ್ಳುತ್ತಿದ್ದಾರೆ. ಸುಮಾರು 131 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಧ್ಯಾನ ಮಂಟಪದಲ್ಲಿ ಮೋದಿ ಧ್ಯಾನದಲ್ಲಿ (Modi Meditation) ತೊಡಗಿಕೊಂಡಿದ್ದಾರೆ. ಇನ್ನು ಮೋದಿ ಅವರು ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸುವುದಿಲ್ಲ ಎಂದು ತಿಳಿದುಬಂದಿದೆ.

ಹೌದು, ನರೇಂದ್ರ ಮೋದಿ ಅವರು ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸುವುದಿಲ್ಲ. ಹಣ್ಣುಗಳನ್ನು ಕೂಡ ಅವರು ಸೇವಿಸುವುದಿಲ್ಲ. ಎರಡು ದಿನವೂ ಅವರು ಪಾನೀಯ ಮಾತ್ರ ಸೇವಿಸಲಿದ್ದಾರೆ. ಜ್ಯೂಸ್‌, ಹಾಲಿನಲ್ಲಿಯೇ ಎರಡು ದಿನ ಕಳೆಯಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಜನವರಿಯಲ್ಲಿ ರಾಮಮಂದಿರದ ಲೋಕಾರ್ಪಣೆ ಹಿನ್ನೆಲೆಯಲ್ಲಿಯೂ ನರೇಂದ್ರ ಮೋದಿ ಅವರು 11 ದಿನಗಳ ಉಪವಾಸ ಕೈಗೊಂಡಿದ್ದರು. ಹಾಸಿಗೆಯ ಮೇಲೆ ಮಲಗುವುದನ್ನು ನಿಲ್ಲಿಸಿದ್ದರು. ನೆಲದ ಮೇಲೆ ಬಟ್ಟೆ ಹಾಸಿಕೊಂಡು ನಿದ್ದೆ ಮಾಡಿದ್ದರು. ಈ ಅವಧಿಯಲ್ಲಿ ಅವರು ಕಟ್ಟುನಿಟ್ಟಾದ ಉಪವಾಸವನ್ನು ಆಚರಿಸಿದ್ದರು. ಹಣ್ಣುಗಳನ್ನು ಮಾತ್ರ ಸೇವಿಸಿದ್ದರು.

ಭಗವತಿ ಅಮ್ಮನ್‌ ದೇವಾಲಯಕ್ಕೆ ಭೇಟಿ

ನರೇಂದ್ರ ಮೋದಿ ಅವರು ಕೇರಳ ರಾಜಧಾನಿ ತಿರುವನಂತಪುರಂನಿಂದ ಕನ್ಯಾಕುಮಾರಿಗೆ ಆಗಮಿಸಿದರು. ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು. ಮೋದಿ ಅವರು ಎರಡು ದಿನ ಧ್ಯಾನ ಮಾಡುವ ಹಿನ್ನೆಲೆಯಲ್ಲಿ ಸ್ಮಾರಕದ ಸುತ್ತಲೂ 2 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮೋದಿ ಈ ಸ್ಥಳ ಆಯ್ಕೆ ಮಾಡಿದ್ದು ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ. ಕಳೆದ ವರ್ಷ ರಾಮಕೃಷ್ಣ ಮಿಷನ್‌ನ 125 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮೋದಿ, ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿರುವ ಕನಸನ್ನು ನನಸು ಮಾಡಲು ಭಾರತವು ಕೆಲಸ ಮಾಡುವುದನ್ನು ಅವರು ಹೆಮ್ಮೆಯಿಂದ ನೋಡುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದರು. ಇದೇ ಕಾರಣಕ್ಕಾಗಿ ವಿವೇಕಾನಂದ ರಾಕ್‌ ಮೆಮೋರಿಯಲ್‌ನಲ್ಲಿ ಮೋದಿ ಅವರು ಧ್ಯಾನ ಮಾಡಲು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Mumbai Satta Bazar: ಮೋದಿ ಹ್ಯಾಟ್ರಿಕ್‌ ಗ್ಯಾರಂಟಿ ಎಂದ ಮುಂಬೈ ಸಟ್ಟಾ ಬಜಾರ್;‌ ಕಾಂಗ್ರೆಸ್‌ಗೆ ಎಷ್ಟು ಕ್ಷೇತ್ರ?

Continue Reading
Advertisement
Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಮುಂದೇನಾಗುತ್ತದೆ? ಏನಿದೆ ಪ್ರಕ್ರಿಯೆ?

Prajwal Revanna Case
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್ ರೇವಣ್ಣ ಬಂಧನ ಆಗಿದ್ದು ಹೇಗೆ? ಏರ್​ಪೋರ್ಟ್​​ನಲ್ಲಿ ನಡೆದ ಪ್ರಕ್ರಿಯೆಗಳೇನು?

Prajwal Revanna Case
ಕರ್ನಾಟಕ1 hour ago

Prajwal Revanna Case: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

3 Indian companies have featured in Time magazines list of 100 most influential companies in the world
ದೇಶ3 hours ago

Reliance Industries: ಟೈಮ್ ಮ್ಯಾಗಜೀನ್‌ನ ಜಗತ್ತಿನ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌

Murder News
ಪ್ರಮುಖ ಸುದ್ದಿ4 hours ago

Murder News : ಬಾಯ್​ಫ್ರೆಂಡ್​ ಜತೆ ಸೇರಿ ಅಪ್ಪ, ತಮ್ಮನನ್ನು ಕೊಂದು ಕತ್ತರಿಸಿ ಫ್ರಿಜ್​ನಲ್ಲಿಟ್ಟಿದ್ದ 16ರ ಬಾಲಕಿ

Reserve Bank of India
ದೇಶ4 hours ago

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Modi Meditation
ದೇಶ4 hours ago

Modi Meditation: ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸಲ್ಲ ಮೋದಿ; 2 ದಿನ ಪಾನೀಯವೇ ಆಹಾರ!

Virat kohli
ಕ್ರಿಕೆಟ್5 hours ago

Virat Kohli : ವಿರಾಟ್​ ಕೊಹ್ಲಿ ಟೀಕಿಸಿದ ನ್ಯೂಜಿಲ್ಯಾಂಡ್​ ಮಾಜಿ ಆಟಗಾರನಿಗೆ ಕೊಲೆ ಬೆದರಿಕೆ!

Hindu Janajagruthi Samithi demands declaration of Zakir Naik as international terrorist
ಬೆಂಗಳೂರು5 hours ago

Zakir Naik: ಜಾಕೀರ್ ನಾಯಕ್‌ನನ್ನು ಭಯೋತ್ಪಾದಕನೆಂದು ಘೋಷಿಸಿ; ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Necessary Preparation for North East Graduate Constituency Election Voting says DC M S Diwakar
ವಿಜಯನಗರ6 hours ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ13 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌